ಸರ್ಕಾರ vs ವಿಪಕ್ಷಗಳು | ಲೋಕಸಭೆ ಸ್ಪೀಕರ್ ಆಯ್ಕೆಗೆ ಮೂಡದ ಒಮ್ಮತ; ದಶಕದಲ್ಲೇ ಮೊದಲ ಬಾರಿಗೆ ನಾಳೆ ಚುನಾವಣೆ

ನವದೆಹಲಿ : ದಶಕದಲ್ಲೇ ಮೊದಲ ಬಾರಿಗೆ ಲೋಕಸಭೆಯ ಸ್ಪೀಕರ್ ಹುದ್ದೆಗೆ ಚುನಾವಣೆ ನಡೆಯಲಿದೆ. ಸಾಮಾನ್ಯವಾಗಿ ಲೋಕಸಭಾ ಚುನಾವಣೆ ನಂತರ ಸ್ಪೀಕರ್ ಹುದ್ದೆಗೆ ಅವಿರೋಧವಾಗಿ ಆಯ್ಕೆ ಮಾಡುವ ಸಂಪ್ರದಾಯ ನಡೆದುಕೊಂಡು ಬಂದಿತ್ತು. ಆದರೆ ಇದೇ ಮೊದಲ ಬಾರಿಗೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಮಾತುಕತೆ ವಿಫಲವಾಗಿದ್ದರಿಂದ ಚುನಾವಣೆಗೆ ವೇದಿಕೆ ಸಿದ್ಧವಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿಯಾಗಿ ಮೋದಿ … Continued

ಉಪ ಸಭಾಪತಿ ಹುದ್ದೆ ನೀಡದಿದ್ರೆ ಸ್ಪೀಕರ್ ಸ್ಥಾನಕ್ಕೆ ವಿಪಕ್ಷಗಳಿಂದ ಸ್ಪರ್ಧೆ..?

ನವದೆಹಲಿ : ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ನೂತನ ಎನ್‌ಡಿಎ ಸರ್ಕಾರ ರಚನೆಯಾಗಿ ಸಚಿವ ಸಂಪುಟದ ರಚನೆಯೂ ಆಗಿದೆ. ಎನ್‌ಡಿಎ ಒಕ್ಕೂಟದ ಮುಂದೆ ಈಗ ಲೋಕಸಭೆ ಸ್ಪೀಕರ್ ಆಯ್ಕೆಯ ಸವಾಲಿದೆ. ಸರ್ಕಾರ ರಚನೆಯಾಗುವ ಮುನ್ನ ಜೆಡಿಯು ಮತ್ತು ಟಿಡಿಪಿ ಪಕ್ಷಗಳು ಸ್ಪೀಕರ್ ಹುದ್ದೆಗ ಪಟ್ಟು ಹಿಡಿದಿದೆ ಎಂದು ವರದಿಯಾಗಿತ್ತು. ಆ ವಿಷಯ ಸದ್ಯಕ್ಕೆ ತಣ್ಣಗಾಗಿದ್ದು ಎನ್‌ಡಿಎಯಿಂದ … Continued

ಇಂದಿರಾ ಗಾಂಧಿಯನ್ನು ‘ಭಾರತ ಮಾತೆ’, ಮಾರ್ಕ್ಸ್‌ವಾದಿ ನಾಯಕನನ್ನು ತಮ್ಮ ʼರಾಜಕೀಯ ಗುರುʼ ಎಂದು ಬಣ್ಣಿಸಿದ ಕೇಂದ್ರದ ಬಿಜೆಪಿ ಸಚಿವ..!

ತ್ರಿಶೂರ್ : ಕೇಂದ್ರ ಸಚಿವ ಮತ್ತು ತ್ರಿಶೂರ್ ಸಂಸದ ಹಾಗೂ ನಟ ಸುರೇಶ ಗೋಪಿ ಅವರು ಶನಿವಾರ ಮಾಜಿ ಪ್ರಧಾನಿ ಇಂದಿರಾ ಗಾಂಧಿ “ಭಾರತದ ಮಾತೆ”‌ ಇದ್ದಂತೆ ಮತ್ತು ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ದಿವಂಗತ ಕೆ. ಕರುಣಾಕರನ್ “ಧೈರ್ಯಶಾಲಿ ಆಡಳಿತಗಾರ” ಎಂದು ಬಣ್ಣಿಸಿದ್ದಾರೆ. ಕೇರಳದ  ಮಾರ್ಕ್ಸ್‌ವಾದಿ ಹಿರಿಯ ಇ.ಕೆ. ನಾಯನಾರ್ ತಮ್ಮ “ರಾಜಕೀಯ ಗುರುಗಳು” ಎಂದು … Continued

ಅತ್ಯಂತ ಕಿರಿಯ ವಯಸ್ಸಿಗೆ ಕೇಂದ್ರ ಸಚಿವ : ದಾಖಲೆ ಬರೆದ ಟಿಡಿಪಿಯ ರಾಮಮೋಹನ ನಾಯ್ಡು…!

ಅಮರಾವತಿ : ನರೇಂದ್ರ ಮೋದಿ ನೇತೃತ್ವದ ಸಂಪುಟದ ಸದಸ್ಯರಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ ನಂತರ ತೆಲುಗು ದೇಶಂ ಪಕ್ಷದ ಸಂಸದ ಕಿಂಜರಾಪು ರಾಮಮೋಹನ ನಾಯ್ಡು ಅವರು ಅತ್ಯಂತ ಕಿರಿಯ ವಯಸ್ಸಿನ ಕೇಂದ್ರದ ಕ್ಯಾಬಿನೆಟ್‌ ಸಚಿವರೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 36 ವರ್ಷದ ರಾಮಮೋಹನ ನಾಯ್ಡು ಅವರು ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಅವಧಿಗೆ … Continued

ಸಭೆಗೆ ಆಹ್ವಾನಿಸದೇ ಇರುವುದಕ್ಕೆ ಹನುಮಾನ್ ಬೇನಿವಾಲ್ ತೀವ್ರ ಅಸಮಾಧಾನ : ಇಂಡಿಯಾ ಮೈತ್ರಿಕೂಟದ ಆಂತರಿಕ ಬಿರುಕು ಬಹಿರಂಗ…

ನವದೆಹಲಿ : ಲೋಕಸಭೆ ಚುನಾವಣೆಯಲ್ಲಿ ರಾಜಸ್ಥಾನದ ನಾಗೌರ್ ಕ್ಷೇತ್ರವನ್ನು ಗೆದ್ದ ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ (RLP) ನಾಯಕ ಹನುಮಾನ ಬೇನಿವಾಲ್, ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ನೇತೃತ್ವದ ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಸಭೆಗೆ ತಮ್ಮನ್ನು ಆಹ್ವಾನಿಸದೇ ಇರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 2024 ರ ಲೋಕಸಭಾ ಚುನಾವಣೆಯಲ್ಲಿ ನಿರೀಕ್ಷೆಗಿಂತ ಉತ್ತಮ ಪ್ರದರ್ಶನದ ನಂತರ ಇಂಡಿಯಾ ಮೈತ್ರಿಕೂಟ ತನ್ನ … Continued

ಈ ಸಲದ ಚುನಾವಣೆಯಲ್ಲಿ ಬಿಜೆಪಿ ಗೆದ್ದಷ್ಟು ಸ್ಥಾನಗಳನ್ನು ಮೂರು ಚುನಾವಣೆ ಸೇರಿಸಿದ್ರೂ ಕಾಂಗ್ರೆಸ್ಸಿಗೆ ಗೆಲ್ಲಲು ಸಾಧ್ಯವಾಗಿಲ್ಲ : ಮೋದಿ ಲೇವಡಿ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಸ್ಥಾನಗಳಷ್ಟನ್ನು ಕಾಂಗ್ರೆಸ್‌ ಮೂರು ಚುನಾವಣೆಗಳನ್ನು ಸೇರಿಸಿದರೂ ಅದಕ್ಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಮತ್ತೊಮ್ಮೆ 100 ಸ್ಥಾನಗಳ ಗಡಿ ದಾಟಲು ವಿಫಲವಾಗಿದ್ದು, ಕಳೆದ ಮೂರು ಚುನಾವಣೆಗಳಲ್ಲಿ ಗೆದ್ದಿದ್ದನ್ನು ಸೇರಿಸಿದರೂ ಅದು ಬಿಜೆಪಿ ಒಂದು ಚುನಾವಣೆಯಲ್ಲಿ ಗೆದ್ದಷ್ಟು ಸ್ಥಾನಗಳಷ್ಟು ಆಗುವುದಿಲ್ಲ ಎಂದು … Continued

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಮೋದಿ

ನವದೆಹಲಿ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರನ್ನು ಶುಕ್ರವಾರ ಭೇಟಿಯಾದ ಪ್ರಧಾನಿ ನರೇಂದ್ರ ಮೋದಿ ಅವರು ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿಗೆ ಮೂರನೇ ಬಾರಿಗೆ ಸರ್ಕಾರ ರಚಿಸಲು ರಾಷ್ಟ್ರಪತಿಗಳು ಆಹ್ವಾನ ನೀಡಿದ್ದಾರೆ. ನಂತರ ಮಾತನಾಡಿದ ಮೋದಿ, ”ರಾಷ್ಟ್ರಪತಿಗಳು ನನಗೆ ನಿಯೋಜಿತ ಪ್ರಧಾನಿಯಾಗಿ ಕಾರ್ಯ ನಿರ್ವಹಿಸಲು ತಿಳಿಸಿದ್ದಾರೆ. ಜೂನ್​ 9ರಂದು ಸಂಜೆ … Continued

ಎನ್‌ ಡಿ ಎ ನಾಯಕನಾಗಿ ಮೋದಿ ಆಯ್ಕೆ : ಸತತ 3ನೇ ಅವಧಿಗೆ ಪ್ರಧಾನಿಯಾಗಿ ಪ್ರಧಾನಿಯಾಗಿ ಜೂನ್‌ 9ರಂದು ಪದಗ್ರಹಣ

ನವದೆಹಲಿ: ಹೊಸದಾಗಿ ಚುನಾಯಿತರಾದ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಸಂಸದರು ಶುಕ್ರವಾರ ನರೇಂದ್ರ ಮೋದಿಯವರನ್ನು ಸಂಸದೀಯ ಪಕ್ಷದ ನಾಯಕರನ್ನಾಗಿ ಮಾಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದರು. ಮತ್ತು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಅವರನ್ನು ಪ್ರಧಾನಿಗೆ ಹುದ್ದೆಗೆ ಸರ್ವಾನುಮತದಿಂದ ಅನುಮೋದಿಸಿದರು. ನರೇಂದ್ರ ಮೋದಿ ಅವರನ್ನು ಎನ್‌ಡಿಎ ಸಂಸದರ ನಾಯಕರನ್ನಾಗಿ   ಅಧಿಕೃತವಾಗಿ … Continued

ʼಅಗ್ನಿವೀರʼ ಯೋಜನೆ ಮರುಪರಿಶೀಲಿಸುವಂತೆ ಎನ್‌ಡಿಎ ಸರ್ಕಾರ ರಚನೆಗೆ ಮೊದಲೇ ಜೆಡಿಯು ಒತ್ತಾಯ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯು ಮೊದಲ ಎರಡಕ್ಕಿಂತ ಭಿನ್ನವಾಗಿರಬಹುದು ಎಂಬ ಮೊದಲ ಸಂಕೇತವಾಗಿ, ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರದ ಅಗ್ನಿಪಥ ಯೋಜನೆಯನ್ನು ಮರುಪರಿಶೀಲಿಸಲು ಪಕ್ಷವು ಬಯಸುತ್ತದೆ ಎಂದು ಜೆಡಿಯು ನಾಯಕರೊಬ್ಬರು ಹೇಳಿದ್ದಾರೆ. ಬಿಜೆಪಿ ಮಿತ್ರ ಪಕ್ಷ ಜೆಡಿಯುನ ಮುಖ್ಯ ವಕ್ತಾರ ಕೆ.ಸಿ. ತ್ಯಾಗಿ, ಹಲವಾರು ರಾಜ್ಯಗಳಲ್ಲಿ ಯೋಜನೆಯ ವಿರುದ್ಧ ಅಸಮಾಧಾನವಿದೆ ಎಂದು ಹೇಳಿದ್ದಾರೆ. … Continued

ಎನ್​ ಡಿ ಎ ನಾಯಕರಾಗಿ ಪ್ರಧಾನಿ ಮೋದಿ ಸರ್ವಾನುಮತದಿಂದ ಆಯ್ಕೆ : ನಾಯ್ಡು, ನಿತೀಶ ಸೇರಿ ಎನ್‌ಡಿಎ ಪಕ್ಷಗಳ ನಾಯಕರಿಂದ ಲಿಖಿತ ಬೆಂಬಲ ಪತ್ರ

ನವದೆಹಲಿ: ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪ್ರಮುಖ ಪಕ್ಷಗಳಾದ ಟಿಡಿಪಿ, ಜೆಡಿಯು ಸೇರಿದಂತೆ ಮಿತ್ರಪಕ್ಷಗಳು ಅವರ ನಾಯಕತ್ವಕ್ಕೆ ತಮ್ಮ ಲಿಖಿತ ಬೆಂಬಲದ ಪತ್ರ ನೀಡಿವೆ. ಹೊಸ ಸರ್ಕಾರ ರಚನೆಗೆ ಜೂನ್​ 7ರಂದು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಹಕ್ಕು ಮಂಡಿಸಲಿದೆ. ಶನಿವಾರ (ಜೂನ್​ 8ರಂದು) ಹೊಸ ಸರ್ಕಾರ ರಚನೆಯಾಗಿ ನರೇಂದ್ರ … Continued