ಮೂಡ್ ಆಫ್ ದಿ ನೇಷನ್ ಸರ್ವೆ : ಈಗ ಲೋಕಸಭಾ ಚುನಾವಣೆ ನಡೆದ್ರೆ ಇಂಡಿಯಾ ಬಣಕ್ಕೆ 208 ಸ್ಥಾನಗಳು ; ಮೋದಿ ನೇತೃತ್ವದ ಎನ್‌ಡಿಎಗೆ ಎಷ್ಟು ಸ್ಥಾನ ಸಿಗಲಿದೆ ಗೊತ್ತೆ ?

ಮೂರು ಪ್ರಮುಖ ವಿಧಾನಸಭಾ ಚುನಾವಣೆಗಳಲ್ಲಿ ಸತತ ಗೆಲುವು ಸಾಧಿಸಿದ ನಂತರ, ಈಗ ಲೋಕಸಭಾ ಚುನಾವಣೆ ನಡೆದರೆ ಎನ್‌ಡಿಎ ಪ್ರಬಲ ಪ್ರದರ್ಶನ ನೀಡಲಿದೆ ಮತ್ತು 324 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಸಿವೋಟರ್ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಲ್ಲಿ ಕಂಡುಬಂದಿದೆ. ಮತ್ತೊಂದೆಡೆ, 2024 ರಲ್ಲಿ 234 ಸ್ಥಾನಗಳನ್ನು ಗೆದ್ದ ಕಾಂಗ್ರೆಸ್ ನೇತೃತ್ವದ ವಿಪಕ್ಷಗಳ ಇಂಡಿಯಾ … Continued

ಗಂಭೀರ ಕ್ರಿಮಿನಲ್ ಕೇಸಲ್ಲಿ ಪ್ರಧಾನಿ, ಸಿಎಂ, ಸಚಿವರ ಬಂಧನವಾದ್ರೆ ಹುದ್ದೆಯಿಂದ ವಜಾ : ಲೋಕಸಭೆಯಲ್ಲಿ ಇಂದು 3 ಮಸೂದೆಗಳ ಮಂಡನೆ; ಏನಿದು ಮಸೂದೆ..?

ನವದೆಹಲಿ: ಪ್ರಧಾನಿ, ರಾಜ್ಯಗಳ ಮುಖ್ಯಮಂತ್ರಿಗಳು ಅಥವಾ ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಕೇಂದ್ರಾಡಳಿತ ಪ್ರದೇಶಗಳ ಸಚಿವರು ಗಂಭೀರ ಕ್ರಿಮಿನಲ್ ಆರೋಪಗಳ ಮೇಲೆ ಬಂಧಿಸಲ್ಪಟ್ಟರೆ ಅಥವಾ ಬಂಧನಕ್ಕೊಳಗಾಗಿದ್ದರೆ ಅವರನ್ನು ಹುದ್ದೆಯಿಂದ ಪದಚ್ಯುತಗೊಳಿಸುವ ಅವರನ್ನು ಪದಚ್ಯುತಗೊಳಿಸುವ ಮಸೂದೆಯನ್ನು ಬುಧವಾರ ಮಂಡಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಸ್ತಾವಿತ ನಿಬಂಧನೆಗಳ ಅಡಿಯಲ್ಲಿ, ಗಂಭೀರ ಅಪರಾಧದ (ಐದು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ … Continued

ಉಪರಾಷ್ಟ್ರಪತಿ ಚುನಾವಣೆ ; ಇದು ಸಿ.ಪಿ. ರಾಧಾಕೃಷ್ಣನ್ vs ಸುದರ್ಶನ ರೆಡ್ಡಿ

ನವದೆಹಲಿ: ಮುಂಬರುವ ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಮೈತ್ರಿಕೂಟವು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ ರೆಡ್ಡಿ ಅವರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ. ಸರ್ವಾನುಮತದ ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳನ್ನು ಒಗ್ಗೂಡಿಸುವ ಸರ್ಕಾರದ ಪ್ರಯತ್ನಗಳು ವಿಫಲವಾಗಿವೆ. ಈಗ ಉಪರಾಷ್ಟ್ರಪತಿ ಚುನಾವಣೆಗೆ ವೇದಿಕೆ ಸಜ್ಜಾಗಿದ್ದು, ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎಯ ಸಿಪಿ ರಾಧಾಕೃಷ್ಣನ್ ಮತ್ತು ವಿಪಕ್ಷಗಳ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ … Continued

ಎನ್‌ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಹೆಸರು ಘೋಷಣೆ

ನವದೆಹಲಿ : ಉಪರಾಷ್ಟ್ರಪತಿ ಹುದ್ದೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರದ ರಾಜ್ಯಪಾಲ ಮತ್ತು ತಮಿಳುನಾಡಿನ ಬಿಜೆಪಿಯ ಉನ್ನತ ನಾಯಕರಲ್ಲಿ ಒಬ್ಬರಾಗಿದ್ದ ಸಿ.ಪಿ. ರಾಧಾಕೃಷ್ಣನ್ ಅವರ ಹೆಸರನ್ನು ಭಾನುವಾರ ಘೋಷಿಸಲಾಗಿದೆ. ಉಪರಾಷ್ಟ್ರಪತಿ ಚುನಾವಣೆಗೆ ಪಕ್ಷದ ಆಯ್ಕೆಯನ್ನು ಅಂತಿಮಗೊಳಿಸಲು ಕರೆಯಲಾಗಿದ್ದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಚಂದ್ರಾಪುರಂ ಪೊನ್ನುಸ್ವಾಮಿ ರಾಧಾಕೃಷ್ಣನ್ ಅವರು ಅಕ್ಟೋಬರ್ 20, 1957 … Continued

ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ: ಇವರೇ ಬಿಜೆಪಿಯ ಸಂಭಾವ್ಯ ಅಭ್ಯರ್ಥಿಗಳು…

ನವದೆಹಲಿ: ಉಪರಾಷ್ಟ್ರಪತಿ ಚುನಾವಣೆಗೆ ಒಂದು ತಿಂಗಳಿಗಿಂತ ಕಡಿಮೆ ಸಮಯ ಇರುವಾಗ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಿದೆ. ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಮತ್ತು ಬಿಹಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್, ಕರ್ನಾಟಕ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸೇರಿದಂತೆ ಸಂಭಾವ್ಯ ಆಯ್ಕೆಗಳ ಕುರಿತು ಚರ್ಚೆಗಳು ಆರಂಭವಾಗಿದೆ. ಮೂಲಗಳ ಪ್ರಕಾರ, ಗುಜರಾತ್ ರಾಜ್ಯಪಾಲ ಆಚಾರ್ಯ … Continued

ಸ್ಟಾಲಿನ್ ಜೊತೆ ಬೆಳಗಿನ ವಾಕಿಂಗ್‌ ನಂತರ ಎನ್‌ ಡಿಎ ಜೊತೆ ಮೈತ್ರಿ ಕೊನೆಗೊಳಿಸಿದ ತಮಿಳುನಾಡು ಮಾಜಿ ಸಿಎಂ ಪನ್ನೀರಸೆಲ್ವಂ

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಮತ್ತು ಎಐಎಡಿಎಂಕೆಯಿಂದ ಹೊರಹಾಕಲ್ಪಟ್ಟ ನಾಯಕ ಓ ಪನ್ನೀರಸೆಲ್ವಂ (ಒಪಿಎಸ್) ಅವರು ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆಗಿನ ಸಂಬಂಧ ಕಡಿದುಕೊಳ್ಳುವ ತಮ್ಮ ಬಣದ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಬೆಳಗಿನ ವಾಕಿಂಗ್‌ ಸಮಯದಲ್ಲಿ ಭೇಟಿಯಾದ ಸ್ವಲ್ಪ ಸಮಯದ ನಂತರ ಅವರಿಂದ ಈ ನಿರ್ಧಾರ ಹೊರಬಿದ್ದಿದೆ. … Continued

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಸಂಖ್ಯೆಗಳ ಲೆಕ್ಕಾಚಾರ ಎನ್‌ಡಿಎಗೆ ಹೇಗೆ ಅನುಕೂಲಕರ..?

ನವದೆಹಲಿ: ಸೋಮವಾರ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ಅವರ ಅನಿರೀಕ್ಷಿತ ರಾಜೀನಾಮೆಯಿಂದ ಅನಿವಾರ್ಯವಾದ ಮುಂದಿನ ಉಪರಾಷ್ಟ್ರಪತಿಗಳ ಹುದ್ದೆಗೆ ನಡೆವ ಚುನಾವಣೆಯಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟವು ಸಂಖ್ಯಾಬಲವನ್ನು ಹೊಂದಿದೆ. ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಉಪರಾಷ್ಟ್ರಪತಿಗಳನ್ನು ಆಯ್ಕೆ ಮಾಡುತ್ತಾರೆ. ಅಲ್ಲಿ ಮೇಲ್ಮನೆಯ ನಾಮನಿರ್ದೇಶಿತ ಸದಸ್ಯರು ಸಹ ತಮ್ಮ ಮತ ಚಲಾಯಿಸಲು ಅರ್ಹರಾಗಿರುತ್ತಾರೆ. 543 ಸದಸ್ಯರ ಲೋಕಸಭೆಯಲ್ಲಿ ಒಂದು … Continued

ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ ಧನಕರ ಅನಿರೀಕ್ಷಿತ ರಾಜೀನಾಮೆ ನಂತರದ ವದಂತಿಗಳು

ನವದೆಹಲಿ : ಸೋಮವಾರದ ಅಚ್ಚರಿಯ ನಡೆಯಲ್ಲಿ, 74 ವರ್ಷ ವಯಸ್ಸಿನ ಉಪರಾಷ್ಟ್ರಪತಿ ಜಗದೀಪ ಧನಕರ ಆರೋಗ್ಯದ ಕಾಳಜಿಯನ್ನು ಉಲ್ಲೇಖಿಸಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆದರೆ, ಅವರು ನೀಡಿದ ಈ ಕಾರಣವನ್ನು ಒಪ್ಪುವವರು ಕಡಿಮೆ. ಇದರ ಹಿಂದೆ ಇದಕ್ಕೂ ಮಿಗಿಲಾದ ಕಾರಣಗಳಿವೆ ಎಂದು ಅನೇಕರು ಭಾವಿಸುತ್ತಾರೆ. ಧನಕರ ಅವರ ಅಧಿಕಾರಾವಧಿಯಲ್ಲಿ ಆಗಾಗ್ಗೆ ಅವರ ಜೊತೆ ಘರ್ಷಣೆ … Continued

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ; ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ ಘೋಷಣೆ ; ಬದಲಾಗಲಿದೆಯೇ ಬಿಹಾರ ರಾಜಕೀಯ ಚಿತ್ರಣ..?

ನವದೆಹಲಿ: ಲೋಕ ಜನಶಕ್ತಿ ಪಕ್ಷದ (ರಾಮ ವಿಲಾಸ್) ಮುಖ್ಯಸ್ಥ ಮತ್ತು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಭಾನುವಾರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ “ಜನರು ತಮಗಾಗಿ ನಿರ್ಧರಿಸುವ” ಸ್ಥಾನದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದು ಅವರು ರಾಜ್ಯ ರಾಜಕೀಯಕ್ಕೆ ಮರಳುವ ಬಗ್ಗೆ ವಾರಗಳ ಊಹಾಪೋಹಗಳಿಗೆ ಕೊನೆ ಹಾಡಿದೆ. “ನಾನು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆಯೇ ಎಂದು ಎಲ್ಲರೂ ತಿಳಿದುಕೊಳ್ಳಲು ಬಯಸುತ್ತಾರೆ. … Continued

ವಕ್ಫ್ ತಿದ್ದುಪಡಿ ಕಾಯ್ದೆ ಏಪ್ರಿಲ್ 8ರಿಂದ ಜಾರಿಗೆ

ನವದೆಹಲಿ : ಕಳೆದ ವಾರ ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಕಾಯ್ದೆ ಏಪ್ರಿಲ್ 8ರಿಂದ ಜಾರಿಗೆ ಬಂದಿದೆ ಎಂದು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಅಧಿಸೂಚನೆಯಲ್ಲಿ, “ವಕ್ಫ್ (ತಿದ್ದುಪಡಿ) ಕಾಯ್ದೆ-2025 (2025 ರ 14) ರ ಸೆಕ್ಷನ್ 1 ರ ಉಪವಿಭಾಗ (2) ರಿಂದ ನೀಡಲಾದ ಅಧಿಕಾರವನ್ನು ಚಲಾಯಿಸಿ, ಕೇಂದ್ರ ಸರ್ಕಾರವು ಈ … Continued