ನೀಟ್‌ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ : ಇಬ್ಬರ ಬಂಧನ

ನವದೆಹಲಿ : ನೀಟ್‌ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರಿಯ ತನಿಖಾ ದಳ (CBI) ಬಿಹಾರದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಪಾಟ್ನಾದ ಮನೀಶಕುಮಾರ ಮತ್ತು ಅಶುತೋಷ ಬಂಧಿತ ಆರೋಪಿಗಳು. ಸಿಬಿಐ ಮೂಲಗಳ ಪ್ರಕಾರ, ಮನೀಶಕುಮಾರ ತನ್ನ ಕಾರಿನಲ್ಲಿ ವಿದ್ಯಾರ್ಥಿಗಳನ್ನು ಸಾಗಿಸಲು ಅನುಕೂಲ ಮಾಡಿಕೊಟ್ಟಿದ್ದಾನೆ ಮತ್ತು ಕನಿಷ್ಠ 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರಶ್ನೆಪತ್ರಿಕೆಯನ್ನು ನೀಡಿದ್ದಾನೆ. … Continued

ನೀಟ್‌-ಯುಜಿ ಪರೀಕ್ಷೆ ಅಕ್ರಮ ಆರೋಪ: : ಸಿಬಿಐ ತನಿಖೆಗೆ ಸರ್ಕಾರದ ಆದೇಶ

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್‌-ಯುಜಿ (NEET-UG) ಪರೀಕ್ಷೆಯಲ್ಲಿ ಅವ್ಯವಹಾರ ಮತ್ತು ಪೇಪರ್ ಸೋರಿಕೆ ಆರೋಪಗಳ ಕುರಿತು ಕೇಂದ್ರ ಸರ್ಕಾರವು ಶನಿವಾರ (ಜೂನ್ 22) ಸಿಬಿಐ ತನಿಖೆಗೆ ಆದೇಶಿಸಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದವು ಭುಗಿಲೆದ್ದ ಒಂದು ವಾರದ ನಂತರ ಸರ್ಕಾರದ ಈ ಕ್ರಮವು ಬಂದಿದೆ. “ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) 2024 ರ … Continued

ರಾಷ್ಟ್ರೀಯ ಪರೀಕ್ಷಾ ಪ್ರಕ್ರಿಯೆ ಸುಧಾರಣೆ : ಇಸ್ರೋ ಮಾಜಿ ಮುಖ್ಯಸ್ಥ ರಾಧಾಕೃಷ್ಣನ್‌ ನೇತೃತ್ವದಲ್ಲಿ 7 ಮಂದಿ ಸಮಿತಿ ರಚನೆ

ನವದೆಹಲಿ: ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಪಾರದರ್ಶಕವಾಗಿ ಮತ್ತು ನ್ಯಾಯೋಚಿತವಾಗಿ ನಡೆಸಲು ಹಾಗೂ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಕಾರ್ಯವಿಧಾನವನ್ನು ಸಮಗ್ರವಾಗಿ ರೂಪಿಸಲು ಕೇಂದ್ರ ಸರ್ಕಾರವು ಇಸ್ರೊ ಮಾಜಿ ಮುಖ್ಯಸ್ಥ ಕೆ. ರಾಧಾಕೃಷ್ಣನ್‌ ನೇತೃತ್ವದಲ್ಲಿ ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಿದೆ. ದೆಹಲಿಯ ಏಮ್ಸ್‌ ಮಾಜಿ ನಿರ್ದೇಶಕ ರಣದೀಪ ಗುಲೇರಿಯಾ, ಹೈದರಾಬಾದ್‌ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಬಿ.ಜೆ.ರಾವ್‌, ಐಐಟಿ … Continued

ಪತ್ರಿಕೆ ಸೋರಿಕೆ ವಿವಾದದ ನಡುವೆಯೇ ಎನ್‌ಟಿಎ ಮಹಾನಿರ್ದೇಶಕ ಸ್ಥಾನದಿಂದ ಸುಬೋಧಕುಮಾರ ವಜಾ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ವಿವಾದದ ನಡುವೆ ಪ್ರಮುಖ ಕ್ರಮದಲ್ಲಿ ಕೇಂದ್ರ ಸರ್ಕಾರವು ಪರೀಕ್ಷಾ ಸಂಸ್ಥೆ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ (ಎನ್‌ಟಿಎ) ಮಹಾನಿರ್ದೇಶಕ ಸ್ಥಾನದಿಂದ ಸುಬೋಧಕುಮಾರ ಸಿಂಗ್ ಅವರನ್ನು ವಜಾಗೊಳಿಸಿದೆ. ಮತ್ತು ಅವರ ಸ್ಥಾನಕ್ಕೆ ಐಎಎಸ್ ಅಧಿಕಾರಿ ಪ್ರದೀಪ ಸಿಂಗ್ ಖರೋಲಾ ಅವರನ್ನು ಶನಿವಾರ (ಜೂನ್ 22) ನೇಮಿಸಿದೆ. ಖರೋಲಾ ಅವರು ಇಂಡಿಯಾ ಟ್ರೇಡ್ ಪ್ರಮೋಷನ್ … Continued