ವಿಡಿಯೊ | 26 ದಿನಗಳ ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್ಚುಕ್ ; ಕೇಂದ್ರದ ಭರವಸೆ ಬಳಿಕ ಸೂಪ್ ಸೇವನೆ

ನವದೆಹಲಿ: 26 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಿದ್ದ ಹವಾಮಾನ ಕಾರ್ಯಕರ್ತ ಸೋನಂ ವಾಂಗ್ಚುಕ್ ಅವರು ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ. ಗುರುಗ್ರಾಮದ ಮೆದಾಂತ ಆಸ್ಪತ್ರೆಯಲ್ಲಿ ಕೇಂದ್ರ ಸಚಿವರು, ಬೆಂಬಲಿಗರು, ವೈದ್ಯರು ಹಾಗೂ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅವರು ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಕೇಂದ್ರ ಸರ್ಕಾರದ ಭರವಸೆಗಳ ಬಳಿಕ … Continued

ನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತು

ನವದೆಹಲಿ: ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿ ಹೆಚ್ಚು ಪಾರದರ್ಶಕತೆ ಹಾಗೂ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳುವುದಿಲ್ಲ ಎಂಬ ಸ್ಪಷ್ಟ ಭರವಸೆಯನ್ನು ಕೇಂದ್ರ ಸರ್ಕಾರ ನೀಡಿದರೆ ತಾವು ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಲು ಸಿದ್ಧ ಎಂದು ಸಾಮಾಜಿಕ ಹೋರಾಟಗಾರ ಸೋನಂ … Continued

ಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿ

ನವದೆಹಲಿ: ನೀಟ್-ಯುಜಿ (NEET-UG) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಾವರು ರಾಜೀನಾಮೆ ನೀಡಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟುಕೊಂಡು ಕಾಕ್ರೋಚ್‌ ಜನತಾ ಪಾರ್ಟಿ (CJP) ಬ್ಯಾನರ್ ಅಡಿಯಲ್ಲಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ತೆರೆ ಎಳೆಯುವಂತೆ ಕೇಂದ್ರ ಸರ್ಕಾರ ಮನವಿ ಮಾಡಿದೆ. ಈ ಸಂಬಂಧ ಕೇಂದ್ರ ಸಚಿವ ಜೆ.ಪಿ. ನಡ್ಡಾ … Continued

ಸಿಜೆಪಿ ‘ಚಲೋ ಸಂಸತ್’ ಮೆರವಣಿಗೆಗೆ ತಡೆ: ಪ್ರತಿಭಟನಾಕಾರರ ಮೇಲೆ ಅಶ್ರುವಾಯು ಪ್ರಯೋಗ, ಲಾಠಿ ಚಾರ್ಜ್‌

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, ಪೊಲೀಸ್ ಅನುಮತಿ ನಿರಾಕರಿಸಿದ್ದರೂ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಬೆಂಬಲಿಗರು ‘ಚಲೋ ಸಂಸತ್’ ಪ್ರತಿಭಟನೆಗಾಗಿ ದೆಹಲಿಯಲ್ಲಿ ಸೇರಿದ್ದರಿಂದ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಪ್ರತಿಭಟನಾಕಾರರನ್ನು ಚದುರಿಸಲು ಭದ್ರತಾ ಪಡೆಗಳು ಟಿಯರ್‌ ಗ್ಯಾಸ್‌ ಶೆಲ್‌ಗಳನ್ನು ಸಿಡಿಸಿದ್ದು, ಲಾಠಿ ಪ್ರಹಾರವನ್ನೂ ನಡೆಸಿದರು. ಮುಖ್ಯವಾಗಿ ಯುವಕರೇ ಹೆಚ್ಚಿನ ಸಂಖ್ಯೆಯಲ್ಲಿ ಜಂತರ್ ಮಂತರ್ … Continued

ಸೋನಂ ವಾಂಗ್ಚುಕ್ ಉಪವಾಸ ಅಂತ್ಯಗೊಳಿಸಲು ಸಿದ್ಧ ಎಂದ ಪತ್ನಿ ; ಆದರೆ ಅದಕ್ಕೆ ಎರಡು ಷರತ್ತುಗಳು…

ನವದೆಹಲಿ: ಶಿಕ್ಷಣ ಕ್ಷೇತ್ರದಲ್ಲಿ ಪಾರದರ್ಶಕತೆಗೆ ಒತ್ತಾಯಿಸಿ ಹಾಗೂ ಇತ್ತೀಚಿನ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಕಳೆದ ಮೂರು ವಾರಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹವಾಮಾನ ಹೋರಾಟಗಾರ ಹಾಗೂ ಶಿಕ್ಷಣ ತಜ್ಞ ಸೋನಮ್‌ ವಾಂಗ್ಚುಕ್‌ (Sonam Wangchuk) ಅವರು ತಮ್ಮ ಉಪವಾಸವನ್ನು ಸೋಮವಾರ ಅಂತ್ಯಗೊಳಿಸುವ ಸಾಧ್ಯತೆ ಇದೆ ಎಂದು ಅವರ … Continued

ಕಲಬುರಗಿ : ನೀಟ್ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಕಲಬುರಗಿ : ಇತ್ತೀಚೆಗಷ್ಟೇ ನಡೆದಿದ್ದ ನೀಟ್ (NEET)  ಪರೀಕ್ಷೆ ಬರೆದಿದ್ದ ವಿದ್ಯಾರ್ಥನಿ ಆತ್ಮಹತ್ಯೆ ಮಾಡಿಕೊಂಡ ಧೃತಿಗೆಡಿಸುವ ಘಟನೆ ಕಲಬುರಗಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇತ್ತೀಚೆಗಷ್ಟೇ ನೀಟ್ ಪರೀಕ್ಷೆ ಬರೆದಿದ್ದ 18 ವರ್ಷದ ವಿದ್ಯಾರ್ಥಿನಿ ಭಾಗ್ಯಶ್ರೀ ಕಲಬುರಗಿಯ ಕೋರ್ಟ್ ವೃತ್ತದ ಬಳಿಯ ಅಪಾರ್ಟ್‌ಮೆಂಟ್‌ನಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಭಾಗ್ಯಶ್ರೀ ಇತ್ತೀಚೆಗೆ ಪ್ರಕಟವಾದ … Continued

ನೀಟ್‌ ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣ: ಪುಣೆಯ ಮತ್ತೊಬ್ಬ ಕಿಂಗ್‌ಪಿನ್‌ ಶಿಕ್ಷಕಿ ಸಿಬಿಐ ವಶಕ್ಕೆ

ನವದೆಹಲಿ: ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ನೀಟ್‌ ಯುಜಿ (NEET-UG) 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮತ್ತೊಂದು ಪ್ರಮುಖ ಯಶಸ್ಸು ಸಾಧಿಸಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ತಜ್ಞೆಯಾಗಿ ಭಾಗಿಯಾಗಿದ್ದ ಪುಣೆಯ ಸಸ್ಯಶಾಸ್ತ್ರ (Botany) ಶಿಕ್ಷಕಿಯನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಇದರೊಂದಿಗೆ ಈ ಹಗರಣದಲ್ಲಿ ಬಂಧಿತರಾದ ಶಂಕಿತರ ಒಟ್ಟು ಸಂಖ್ಯೆ … Continued

ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರ ನೀಟ್ ಪರೀಕ್ಷೆ ರದ್ದು : ಸಿಬಿಐ ತನಿಖೆಗೆ ಆದೇಶ

ನವದೆಹಲಿ: ದೇಶಾದ್ಯಂತ ವೈದ್ಯಕೀಯ ಶಿಕ್ಷಣ ಪ್ರವೇಶಾತಿಗಾಗಿ ಮೇ 3 ರಂದು ನಡೆದಿದ್ದ ‘ನೀಟ್-ಯುಜಿ 2026’ (NEET-UG) ಪರೀಕ್ಷೆಯನ್ನು ಪೇಪರ್ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಮಂಗಳವಾರ ಅಧಿಕೃತವಾಗಿ ರದ್ದುಗೊಳಿಸಿದೆ. ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆ ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡುವ ದೃಷ್ಟಿಯಿಂದ ಈ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೇ ಹೊಸ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸುವುದಾಗಿ … Continued

ನೀಟ್ ಅಣಕು ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ 17 ವರ್ಷದ ಮಗಳನ್ನು ಹೊಡೆದು ಕೊಂದ ಶಿಕ್ಷಕ…!

ಸಾಂಗ್ಲಿ : ವಿದ್ಯಾರ್ಥಿನಿ ತನ್ನ 10 ನೇ ತರಗತಿಯ ಬೋರ್ಡ್ ಪರೀಕ್ಷೆಯಲ್ಲಿ ಶೇ. 92.60 ಅಂಕಗಳನ್ನು ಗಳಿಸಿದ್ದಾಳೆ. ಆದರೆ ಒಂದು ವರ್ಷದ ನಂತರ,  ಅಣಕು ಪರೀಕ್ಷೆ(mock test)ಯಲ್ಲಿ ಕಡಿಮೆ ಅಂಕಗಳನ್ನು ಗಳಿಸಿದ ಕಾರಣಕ್ಕೆ ಅವಳ ತಂದೆ ಅವಳನ್ನು ಹೊಡೆದು ಕೊಂದ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ವರದಿಯಾಗಿದೆ. ಮಹಾರಾಷ್ಟ್ರದ ಸಾಂಗ್ಲಿಯ ಸಾಧನಾ ಭೋಂಸ್ಲೆ – ಪೂರ್ವ ವೈದ್ಯಕೀಯ … Continued

ನೀಟ್‌ (NEET) ಆಕಾಂಕ್ಷಿ ವಿದ್ಯಾರ್ಥಿನಿ ಅಪಹರಿಸಿ, ಇಬ್ಬರು ಕೋಚಿಂಗ್ ಶಿಕ್ಷಕರಿಂದ 6 ತಿಂಗಳ ಕಾಲ ಅತ್ಯಾಚಾರ, ಬ್ಲ್ಯಾಕ್‌ ಮೇಲ್

ಕಾನ್ಪುರ : ಪ್ರಮುಖ ಕೋಚಿಂಗ್ ಸಂಸ್ಥೆಯಲ್ಲಿ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ ತಯಾರಿಗೆ ತರಬೇತಿ ಪಡೆಯಲು ಬಂದಿದ್ದ ಫತೇಪುರದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಆರು ತಿಂಗಳ ಕಾಲ ಒತ್ತೆಯಾಳಾಗಿ ಇರಿಸಿಕೊಂಡು ಇಬ್ಬರು ಶಿಕ್ಷಕರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಕಲ್ಯಾಣಪುರ ಪೊಲೀಸ್ ಠಾಣೆಯನ್ನು ಆಕೆ ಸಂಪರ್ಕಿಸಿದ ನಂತರ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ ಎಂದು … Continued