ಆಘಾತಕಾರಿ ಘಟನೆ | ಮನೆಬಿಟ್ಟು ಹೋದ ಪತ್ನಿಯನ್ನು ಮರಳಿ ಕರೆತರಲು 5 ವರ್ಷದ ಸಂಬಂಧಿಯನ್ನೇ ‘ಬಲಿ’ ಕೊಟ್ಟ ವ್ಯಕ್ತಿ…!

ಜೈಪುರ : ರಾಜಸ್ಥಾನದ ಖೈರ್ತಾಲ್ ಜಿಲ್ಲೆಯಲ್ಲಿ ಬೆಚ್ಚಿಬೀಳುವ ಘಟನೆ ನಡೆದಿದ್ದು, ಜಿಲ್ಲೆಯ ಮುಂಡಾವರ್ ಪೊಲೀಸ್ ಠಾಣಾ ವ್ಯಾಪ್ತಿಯ ಸರೈ ಗ್ರಾಮದಲ್ಲಿ ಮೂರು ದಿನಗಳ ಹಿಂದೆ ಕೊಲೆಯಾಗಿದ್ದ ಐದು ವರ್ಷದ ಮಗುವನ್ನು ಮಾಟಮಂತ್ರಕ್ಕಾಗಿ “ಬಲಿ” ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಐದು ವರ್ಷದ ಬಾಲಕನ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಮಗುವನ್ನು ಆತನ ಮಾವ ಮನೋಜ ಪ್ರಜಾಪತ್‌ … Continued

ಪುನಃ ಸೋದರಳಿಯನನ್ನೇ ತಮ್ಮ ಉತ್ತರಾಧಿಕಾರಿಯಾಗಿ ಮರುನೇಮಕ ಮಾಡಿದ ಮಾಯಾವತಿ

ನವದೆಹಲಿ : ಬಹುಜನ ಸಮಾಜವಾದಿ ಪಕ್ಷ (ಬಿಎಸ್‌ಪಿ)ದ ಮುಖ್ಯಸ್ಥೆ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ ಆನಂದ ಅವರನ್ನು ಮತ್ತೆ ಪಕ್ಷದಲ್ಲಿ ತಮ್ಮ ಉತ್ತರಾಧಿಕಾರಿಯನ್ನಾಗಿ ನೇಮಕ ಮಾಡಿದ್ದಾರೆ. ಲೋಕಸಭೆ ಚುನಾವಣೆಯ ಸಮಯದಲ್ಲೇ ಮಾಯಾವತಿ ಅವರು ತಮ್ಮ ಸೋದರಳಿಯ ಆಕಾಶ ಆನಂದ (28) ಅವರನ್ನು ಪಕ್ಷದ ರಾಷ್ಟ್ರೀಯ ಸಂಯೋಜಕ ಹುದ್ದೆಯಿಂದ ಮತ್ತು ತಮ್ಮ ಉತ್ತರಾಧಿಕಾರಿ ಸ್ಥಾನದಿಂದ ತೆಗೆದುಹಾಕಿದ್ದರು. … Continued