ನ್ಯೂಸ್‌ಕ್ಲಿಕ್, ಪ್ರಬೀರ್ ಪುರಕಾಯಸ್ಥಗೆ 184 ಕೋಟಿ ರೂ. ದಂಡ ವಿಧಿಸಿದ ಇಡಿ

ನವದೆಹಲಿ: ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ (FEMA) ಉಲ್ಲಂಘನೆಗಾಗಿ ಸುದ್ದಿ ಜಾಲತಾಣ ‘ನ್ಯೂಸ್‌ಕ್ಲಿಕ್’ (NewsClick) ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ಅವರಿಗೆ ಜಾರಿ ನಿರ್ದೇಶನಾಲಯ (ED) ಸೋಮವಾರ 184 ಕೋಟಿ ರೂಪಾಯಿ ದಂಡ ವಿಧಿಸಿದೆ. ತನಿಖಾ ಸಂಸ್ಥೆಯ ಆದೇಶದ ಪ್ರಕಾರ, ಪೋರ್ಟಲ್‌ನ ಮಾಲೀಕತ್ವ ಹೊಂದಿರುವ ‘ಪಿಪಿಕೆ ನ್ಯೂಸ್‌ಕ್ಲಿಕ್ ಸ್ಟುಡಿಯೋ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಗೆ … Continued

“ಬಂಧನ ಅನೂರ್ಜಿತ” : ನ್ಯೂಸ್‌ಕ್ಲಿಕ್ ಸಂಸ್ಥಾಪಕ ಪುರಕಾಯಸ್ಥ ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ : ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ (ಯುಎಪಿಎ) ಅಡಿ ನ್ಯೂಸ್‌ಕ್ಲಿಕ್‌ ಸುದ್ದಿ ಜಾಲತಾಣದ ಪ್ರಧಾನ ಸಂಪಾದಕ ಪ್ರಬೀರ ಪುರಕಾಯಸ್ಥ ಅವರ ಬಂಧನವನ್ನು ಸುಪ್ರೀಂಕೋರ್ಟ್‌ ಬುಧವಾರ ರದ್ದುಗೊಳಿಸಿದೆ. ಪುರಕಾಯಸ್ಥ ಅವರಿಂದ ಶ್ಯೂರಿಟಿ ಮತ್ತು ಜಾಮೀನು ಬಾಂಡ್ ಪಡೆದು ಬಿಡುಗಡೆ ಮಾಡುವಂತೆ ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಸಂದೀಪ ಮೆಹ್ತಾ ಅವರಿದ್ದ ಪೀಠ ಆದೇಶಿಸಿದೆ. ರಿಮಾಂಡ್ ಅರ್ಜಿಯ … Continued

ದೇಶದ ಉತ್ತರದ ಗಡಿ ತಿರುಚಲು ಯತ್ನ : ಎಫ್‌ಐಆರ್‌ನಲ್ಲಿ ನ್ಯೂಸ್‌ಕ್ಲಿಕ್‌ ಸಂಸ್ಥಾಪಕರ ವಿರುದ್ಧ ಆರೋಪ

ನವದೆಹಲಿ: ನ್ಯೂಸ್‌ಕ್ಲಿಕ್‌ ಸಂಸ್ಥಾಪಕ ಪ್ರಬೀರ್‌ ಪುರಕಾಯಸ್ಥ ಮತ್ತು ಪೋರ್ಟಲ್‌ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್‌ ಚಕ್ರವರ್ತಿ ಅವರು ವಿದೇಶಿ ನಿಧಿಯ ಮೂಲಕ ಕೋಟ್ಯಂತರ ರೂಪಾಯಿ ಸ್ವೀಕರಿಸಿದ್ದಾರೆ. ಹಾಗೂ ಅದನ್ನು ಭಾರತದ ಸಮಗ್ರತೆ ಮತ್ತು ಭದ್ರತೆಗೆ ಹಾನಿ ಮಾಡಲು ಬಳಕೆ ಮಾಡಿದ್ದಾರೆ ಎಂದು ದೆಹಲಿ ಪೊಲೀಸ್‌ ವಿಶೇಷ ಘಟಕ ಎಫ್‌ಐಆರ್‌ನಲ್ಲಿ ಉಲ್ಲೇಖಿಸಿದೆ. ಎಫ್‌ಐಆರ್‌ನಲ್ಲಿ ಪ್ರಬೀರ್‌, ಚಕ್ರವರ್ತಿ … Continued

ನ್ಯೂಸ್‌ಕ್ಲಿಕ್‌ ಸುದ್ದಿ ಪೋರ್ಟಲ್‌ ವಿರುದ್ಧ ಇಡಿ ತನಿಖೆ ಆರಂಭ

ಅದಾನಿ ಸಮೂಹ ಸಂಸ್ಥೆಯಿಂದ ೧೦೦ ಕೋಟಿ ರೂ. ಮಾನಹಾನಿ ಮೊಕದ್ದಮೆ ಎದುರಿಸುತ್ತಿರುವ ನ್ಯೂಸ್‌ಕ್ಲಿಕ್‌ ಸುದ್ದಿ ಪೋರ್ಟಲ್‌  ಕಚೇರಿ ಮೇಲೆ ಕುರಿತು ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ. ಅದಾನಿ ಸಂಸ್ಥೆ ಕಳೆದ ವರ್ಷ ಪೋರ್ಟಲ್‌ನಲ್ಲಿ ಪ್ರಕಟಗೊಂಡ ಎರಡು ವರದಿಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಸುದ್ದಿ ಪೋರ್ಟಲ್‌  ವಿವಾದಾತ್ಮಕ ಕೃಷಿ ಕಾನೂನುಗಳ ಜಾರಿಯಿಂದ ಅದಾನಿ ಸಂಸ್ಥೆಗೆ ಲಾಭವಾಗಲಿದೆ … Continued