ಕೆಆರ್‌ಎಸ್ ಅಣೆಕಟ್ಟು ಸುತ್ತಮುತ್ತ ಅಕ್ರಮ ಗಣಿಗಾರಿಕೆ ದಾಖಲೆ ನೀಡಿದರೆ ಸಮಗ್ರ ತನಿಖೆ:ಸಚಿವ ನಿರಾಣಿ

posted in: ರಾಜ್ಯ | 0

ಕಲಬುರಗಿ:ಮಂಡ್ಯ ಜಿಲ್ಲೆ ಬೇಬಿಬೆಟ್ಟದ ಸುತ್ತಮುತ್ತಲೂ ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದರ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಅವರ ಬಳಿ ದಾಖಲೆಗಳಿದ್ದರೆ ಸರ್ಕಾರಕ್ಕೆ ನೀಡಿದರೆ ನಾವು ಸಮಗ್ರ ತನಿಖೆಗೆ ಆದೇಶ ಮಾಡುತ್ತೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ್ ನಿರಾಣಿ ಹೇಳಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗಿರುವ ಮಾಹಿತಿಯಂತೆ ಕಳೆದ ನಾಲ್ಕು ತಿಂಗಳಿನಿಂದ ಕೆಆರ್‍ಎಸ್ … Continued

ಹಟ್ಟಿ ಚಿನ್ನದ ಗಣಿ ಖಾಸಗೀಕರಣ ಇಲ್ಲ: ಸಚಿವ ನಿರಾಣಿ ಸ್ಪಷ್ಟನೆ

posted in: ರಾಜ್ಯ | 0

ಬೆಂಗಳೂರು:- ಯಾವುದೇ ಕಾರಣಕ್ಕೂ ಹಟ್ಡಿ ಚಿನ್ನದ ಗಣಿ ಖಾಸಗೀಕರಣ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಸ್ಪಷ್ಟಪಡಿಸಿದ್ದಾರೆ. ಪ್ರಸ್ತುತ ಹಟ್ಟಿ ಚಿನ್ನದ ಗಣಿಯಲ್ಲಿ ವಾರ್ಷಿಕವಾಗಿ 1800 ಕೆಜಿ ಚಿನ್ನ ಉತ್ಪಾದನೆ ಮಾಡಲಾಗುತ್ತದೆ, 5000 ಕೆಜಿ ಉತ್ಪಾದನೆ ಮಾಡುವ ಗುರಿ ಹಾಕಿಕೊಂಡಿದ್ದೇವೆಯೇ ಹೊರತು ಖಾಸಗೀಕರಣ ಮಾಡುವ ಅಲೋಚನೆ … Continued

ಗಣಿಗಾರಿಕೆ ಲೈಸೆನ್ಸ್ ನೀಡಲು ಆನ್‍ಲೈನ್-ಆಫ್‍ಲೈನ್‌ ವ್ಯವಸ್ಥೆ ಜಾರಿ:ನಿರಾಣಿ

posted in: ರಾಜ್ಯ | 0

ಧಾರವಾಡ: ಗಣಿಗಾರಿಕೆ ನಡೆಸುವ ಉದ್ಯಮಿಗಳಿಗೆ ಶೀಘ್ರದಲ್ಲಿ ಲೈಸೆನ್ಸ್(ಪರಾವನಗಿ) ನೀಡಲು ಅನುಕೂಲವಾಗುವಂತೆ ಆನ್‍ಲೈನ್ ಮತ್ತು ಆಫ್‍ಲೈನ್ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಗಣಿ ಮತ್ತು  ಭೂ ವಿಜ್ಞಾನ ಸಚಿವ  ಮುರುಗೇಶ್ ನಿರಾಣಿ ಶುಕ್ರವಾರ ಪ್ರಕಟಿಸಿದ್ದಾರೆ. ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರಿಗಳ ಜೊತೆ  ಪ್ರಗತಿ ಪರಿಶೀಲನಾ ಸಭೆ  ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಫ್‍ಲೈನ್, ಆನ್‍ಲೈನ್ ಜಾರಿ … Continued

ಸ್ಫೋಟಕ ವಸ್ತುಗಳ ಬಳಕೆ ಪರವಾನಿಗೆ ಪಡೆಯಲು ಇನ್ನಷ್ಟು ಕಾಲಾವಕಾಶ ಕೊಡಿ

posted in: ರಾಜ್ಯ | 0

ಬೆಂಗಳೂರು; ಕಲ್ಲು ಕ್ವಾರಿಯಲ್ಲಿ ಕಾರ್ಯಾಚರಣೆ ನಡೆಸುವ ವೇಳೆ ಸ್ಫೋಟಕ ವಸ್ತುಗಳ ಪರವಾನಿಗೆ ಪಡೆಯಲು ಗಣಿ ಸುರಕ್ಷತಾ ಮಹಾ ನಿದೇರ್ಶಕರು( ಡಿಜಿಎಂಎಸ್) ನೀಡಿರುವ ಸಮಯಾವಕಾಶವನ್ನು  ಇನ್ನಷ್ಟು ‌ ವಿಸ್ತರಣೆ ಮಾಡುವಂತೆ ಕೋರಿ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್ ಮನವಿ ಮಾಡಿದೆ. ಬುಧವಾರ ಫೆಡರೇಷನ್ ಆಫ್ ಕರ್ನಾಟಕ ಕ್ವಾರಿ ಮತ್ತು ಸ್ಟೋನ್ … Continued

ಮೂರು ದಿನದೊಳಗೆ ಸ್ಪೋಟಕ ಹಿಂತಿರುಗಿಸಿ; ಸಚಿವ ನಿರಾಣಿ ಸೂಚನೆ 

posted in: ರಾಜ್ಯ | 0

ಕೊಪ್ಪಳ: ಕಲ್ಲು ಕ್ವಾರಿ ಹಾಗೂ  ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಸ್ಪೋಟಕ ವಸ್ತುಗಳನ್ನು ಮೂರು ದಿನದೊಳಗೆ ಸಂಬಂಧಪಟ್ಟ ಅಧಿಕಾರಿಗಳಿಗೆ  ಹಿಂದಿತಿರುಗಿಸಬೇಕೆಂದು ಎಂದು ರಾಜ್ಯ ಗಣಿ ಸಚಿವ ಮುರುಗೇಶ ನಿರಾಣಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇಲ್ಲು ಶನಿವಾರ ಸಭೆ ನಡೆಸಿ ಮಾತನಾಡಿದ ಅವರು, ಯಾರ್ಯಾರು  ತಮ್ಮ ತಮ್ಮ ಕಲ್ಲು ಕ್ವಾರಿ ಹಾಗೂ ಗಣಿಗಾರಿಕೆ ನಡೆಯುವ ಸ್ಥಳಗಳಲ್ಲಿ ಸ್ಫೋಟಕ್ಕಾಗಿ … Continued

ವಿಜಯಾನಂದ ಕಾಶಪ್ಪನವರಷ್ಟು ದೊಡ್ಡ ನಾಯಕ ನಾನಲ್ಲ:ನಿರಾಣಿ ವ್ಯಂಗ್ಯ

posted in: ರಾಜ್ಯ | 0

ಕೊಪ್ಪಳ: ಪಂಚಮಸಾಲಿ ಹೋರಾಟದಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ.  ಮಾಜಿ ಶಾಸಕ ವಿಜಯ ಕಾಶಪ್ಪನವರಷ್ಟು ದೊಡ್ಡ  ನಾಯಕ ನಾನಲ್ಲ. ಅವರು ರಾಷ್ಟ್ರೀಯ ಅಧ್ಯಕ್ಷರು. ಅವರೇ ನಾಯಕತ್ವ ತೆಗೆದುಕೊಂಡು ಹೋರಾಟ ಮಾಡಲಿ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದರು. ಶನಿವಾರ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಭೇಟಿಯಾಗಿ ಅವರ ಸಮಸ್ಯೆಗಳನ್ನು ಆಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು … Continued

 ನಾಲ್ಕು ವಾರದಲ್ಲಿ  ಸ್ಫೋಟಕ ವಸ್ತು ಹಿಂತಿರುಗಿಸದಿದ್ದರೆ ಲೈಸೆನ್ಸ್ ರದ್ದು 

ರಾಯಚೂರು, ( ಹಟ್ಟಿ ಚಿನ್ನದ ಗಣಿ): ಕಲ್ಲುಕ್ವಾರಿ ಮತ್ತು ಗಣಿಗಾರಿಕೆ ಪ್ರದೇಶಗಳಲ್ಲಿ ಯಾರಾದರೂ ಕಾನೂನು ಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದರೆ, ನಾಲ್ಕು ವಾರದೊಳಗೆ ಹಿಂತಿರಿಗಿಸಬೇಕು.ಇಲ್ಲದಿದ್ದರೆ ಅಂತಹವರ ಲೈಸೆನ್ಸ್ ( ಪರವನಾಗಿ)ಯನ್ನು ರದ್ದುಪಡಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್. ನಿರಾಣಿ ಎಚ್ಚರಿಕೆ ನೀಡಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸೂರು ತಾಲ್ಲೂಕಿನ ಹಟ್ಟಿ ಚಿನ್ನದ ಗಣಿ ಪ್ರದೇಶಕ್ಕೆ ಇಂದು … Continued

ಹೊಸ ತಂತ್ರಜ್ಞಾನದ ಮೂಲಕ ಖನಿಜ ಸಂಪತ್ತು ಸಮೀಕ್ಷೆ :ನಿರಾಣಿ

posted in: ರಾಜ್ಯ | 0

ಮಂಗಳೂರು: ಹೊಸ ತಂತ್ರಜ್ಞಾನದ ಮೂಲಕ ರಾಜ್ಯದಲ್ಲಿರುವ ಖನಿಜ ಸಂಪತ್ತನ್ನು ಸಮೀಕ್ಷೆ ನಡೆಸಿ ಸಂರಕ್ಷಣೆ ಮಾಡುವ  ಚಿಂತನೆಯಿದೆ ಎಂದು ಗಣಿ ಮತ್ತು  ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ. ಬುಧವಾರ ಇಲ್ಲಿನ ಪ್ರವಾಸ ಮಂದಿರದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿರುವ ಖನಿಜ ಸಂಪತ್ತನ್ನು … Continued

ಅನಧಿಕೃತ ಸ್ಫೋಟಕಗಳ ಪತ್ತೆಗೆ ಅಧಿಕಾರಿಗಳಿಗೆ ಸಚಿವ ನಿರಾಣಿ ಕಟ್ಟುನಿಟ್ಟಿನ ಸೂಚನೆ

posted in: ರಾಜ್ಯ | 0

ಚಿಕ್ಕಬಳ್ಳಾಪುರ ( ಗುಡಿಬಂಡೆ)- ಕಲ್ಲುಕ್ವಾರಿ ಹಾಗೂ ಗಣಿಗಾರಿಕೆ ಪ್ರದೇಶಗಳಲ್ಲಿ ಕಾನೂನು ಬಾಹಿರವಾಗಿ ಸ್ಫೋಟಕ ವಸ್ತುಗಳನ್ನು ಯಾರಾದರೂ ಸಂಗ್ರಹಿಸಿಟ್ಟಿದ್ದರೆ, ತಕ್ಷಣವೇ ಪತ್ತೆ ಹಚ್ಚಬೇಕೆಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್.ನಿರಾಣಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಿರೇನಾಗವಲ್ಲಿಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು.ಈ ವೇಳೆ … Continued

ರಾಜ್ಯಕ್ಕೆ ಬಂದ ನಂತರ ಸಚಿವ ನಿರಾಣಿ ಟೀಕೆಗೆ ಸೂಕ್ತ ಉತ್ತರ ಕೊಡುವೆ: ಯತ್ನಾಳ

posted in: ರಾಜ್ಯ | 0

ನವದೆಹಲಿ: ನಾನು ಕರ್ನಾಟಕಕ್ಕೆ ಹಿಂದಿರುಗಿದ ನಂತರ ಸಚಿವ ಮುರಗೇಶ ನಿರಾಣಿಗೆ ಸೂಕ್ತ ಉತ್ತರ ನೀಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ಬಸನಗೌಡ ಪಾಟೀಲ ಯತ್ನಾಳ ಕಾಂಗ್ರೆಸ್‌ “ಬಿʼ ಟೀಮ್‌ ಇದ್ದಂತೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರಗೇಶ ನಿರಾಣಿ ಆರೋಪಕ್ಕೆ ಪ್ರತಿಕ್ರಿಯಿಸಿದ  ಯತ್ನಾಳ,  ರಾಜ್ಯದ ಕೆಲ ಸಚಿವರು ನನ್ನ ಹಾಗೂ ನನ್ನ … Continued