ಯಾವುದೇ ವಿಶೇಷ ಪ್ರೋತ್ಸಾಹದಾಯಕ ಯೋಜನೆಗಳಿಲ್ಲದ ಅತ್ಯಂತ ನಿರಾಶದಾಯಕ ಬಜೆಟ್ : ವಸಂತ ಲದವಾ

ಹುಬ್ಬಳ್ಳಿ : ಕೇಂದ್ರ ಸರ್ಕಾರ ಇಂದು, ಗುರುವಾರ ಮಂಡಿಸಿದ ಕೇಂದ್ರ ಮುಂಗಡಪತ್ರ ಯಾವುದೇ ವಿಶೇಷ ಅಭಿವೃದ್ಧಿ ಉದ್ಯೋಗ ಸೃಷ್ಟಿ, ಉತ್ಪಾದನಾ ಕ್ಷೇತ್ರ, ರ‍ಆರ್ಥಿಕ ಹಾಗೂ ಕೃಷಿ ವಲಯಗಳಿಗೆ ಉತ್ತೇಜನ ಮತ್ತು ಪ್ರೋತ್ಸಾಹವಿಲ್ಲದೆ ನಿರಾಶದಾಯ ಬಜೆಟ್ ಆಗಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ವಸಂತ ಲದವಾ ಪ್ರತಿಕ್ರಯಿಸಿದ್ದಾರೆ. ೨೦೧೪ ರಲ್ಲಿದ್ದ ೫೬ ಲಕ್ಷ ಕೋಟಿ … Continued

ಕೇಂದ್ರ ಬಜೆಟ್ 2024 : ಗರ್ಭಕಂಠ ಕ್ಯಾನ್ಸರ್​ ತಡೆಗೆ 9-14 ವರ್ಷದ ಬಾಲಕಿಯರಿಗೆ ಉಚಿತ (HPV) ಲಸಿಕೆ ಘೋಷಣೆ

ನವದೆಹಲಿ : ಭವಿಷ್ಯದಲ್ಲಿ ಕಾಣಿಸಿಕೊಳ್ಳಬಹುದಾದ ಗರ್ಭಕಂಠದ ಕ್ಯಾನ್ಸರ್‌ ತಡೆಗಟ್ಟುವ ನಿಟ್ಟಿನಲ್ಲಿ 9ರಿಂದ 14 ವರ್ಷ ವಯಸ್ಸಿನ ಹದಿಹರೆಯದ ಹುಡುಗಿಯರಿಗೆ ಕೇಂದ್ರ ಸರ್ಕಾರವು ಉಚಿವಾಗಿ HPV ಲಸಿಕೆ ನೀಡುವ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡಿದೆ. ಗುರುವಾರ ಬಜೆಟ್‌ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈ ಮಹತ್ವದ ಘೋಷಣೆ ಮಾಡಿದ್ದಾರೆ. ಪ್ರಪಂಚದಮೂರನೇ ಅತಿ ಸಾಮಾನ್ಯ ಎನಿಸಿರುವ … Continued

ಕೇಂದ್ರ ಮಧ್ಯಂತರ ಬಜೆಟ್‌ 2024 : ಜನಸಂಖ್ಯೆ ನಿಯಂತ್ರಣಕ್ಕೆ ಸಮಿತಿ ರಚನೆಯ ಪ್ರಸ್ತಾಪ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಗುರುವಾರ (ಫೆಬ್ರವರಿ 1) ಮಧ್ಯಂತರ ಬಜೆಟ್ ಮಂಡಿಸಿದ್ದು, ಜನಸಂಖ್ಯೆ ನಿಯಂತ್ರಣದ ಕುರಿತು ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದ್ದಾರೆ. ಜನಸಂಖ್ಯೆಯ ವೇಗದ ಬೆಳವಣಿಗೆ ಮತ್ತು ಅದರಿಂದ ಉದ್ಭವಿಸಿರುವ ಸವಾಲುಗಳನ್ನು ಸಮಗ್ರವಾಗಿ ಪರಿಶೀಲಿಸಲು ಸರ್ಕಾರವು ಉನ್ನತ ಅಧಿಕಾರದ ಸಮಿತಿಯನ್ನು ರಚಿಸಲಿದೆ ಎಂದು ಬಜೆಟ್​ ಭಾಷಣದ ವೇಳೆ ನಿರ್ಮಲಾ … Continued

ಕೇಂದ್ರ ಮಧ್ಯಂತರ ಬಜೆಟ್ 2024: ತೆರಿಗೆಯಲ್ಲಿ ಯಾವುದೇ ಬದಲಾವಣೆಗಳಿಲ್ಲ, ಆದ್ರೂ ಸುಮಾರು 1 ಕೋಟಿ ತೆರಿಗೆದಾರರಿಗೆ ರಿಲೀಫ್‌…

ನವದೆಹಲಿ: 2024-25ರ ಮಧ್ಯಂತರ ಬಜೆಟ್‌ನಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆದಾಯ ತೆರಿಗೆ ಪದ್ಧತಿಯಲ್ಲಿ ಯಾವುದೇ ಬದಲಾವಣೆಗಳನ್ನು ಘೋಷಿಸಿಲ್ಲ, ಆದರೂ ಸುಮಾರು ಒಂದು ಕೋಟಿ ತೆರಿಗೆದಾರರು ಪ್ರಯೋಜನ ಪಡೆಯುವ ಸಾಧ್ಯತೆಯಿದೆ. ಏಕೆಂದರೆ 2009-10ನೇ ಹಣಕಾಸು ವರ್ಷದವರೆಗೆ 25,000 ರೂ.ವರೆಗಿನ ಹಳೆಯ ಮತ್ತು ವಿವಾದಿತ ನೇರ ತೆರಿಗೆಗಳ ವಸೂಲಾತಿಯನ್ನು ಸರ್ಕಾರ ಮುಂದುವರಿಸುವುದಿಲ್ಲ ಎಂದು ನಿರ್ಮಲಾ ಸೀತಾರಾಮನ್ … Continued

ಕೇಂದ್ರದ ಮಧ್ಯಂತರ ಬಜೆಟ್‌ 2024-25 : ತೆರಿಗೆ ದರಗಳಲ್ಲಿ ಯಥಾಸ್ಥಿತಿ -7 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ

ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024-25ರ ಮಧ್ಯಂತರ ಬಜೆಟ್ ಅನ್ನು ಗುರುವಾರ ಸಂಸತ್ತಿನಲ್ಲಿ ಮಂಡಿಸಿದ್ದಾರೆ. ರೈತರು, ಮಹಿಳೆಯರು, ಯುವಕರು ಮತ್ತು ಬಡ ಜನಸಂಖ್ಯೆಯ ಸಬಲೀಕರಣದ ಮೇಲೆ ಪ್ರಮುಖ ಗಮನ ಹರಿಸಿದ್ದಾರೆ. ಬಡವರು, ಮಹಿಳೆಯರು, ಯುವಕರು ಮತ್ತು ಅನ್ನದಾತರು ಎಂಬ ದೇಶದ 4 ಪ್ರಮುಖ ಆಧಾರಸ್ತಂಭಗಳ ಮೇಲೆ ನಾವು ಗಮನಹರಿಸಬೇಕಾಗಿದೆ ಎಂದು ಹಣಕಾಸು … Continued

7 ವರ್ಷದಲ್ಲಿ ಮೂಲ ಸೌಕರ್ಯ, ಸಾಮಾಜಿಕ ಯೋಜನೆಗಳಿಗೆ ಎನ್‌ಡಿಎ ಸರ್ಕಾರ ಖರ್ಚು ಮಾಡಿದ್ದು 91 ಲಕ್ಷ ಕೋಟಿ , 10 ವರ್ಷದ ಯುಪಿಎ ಅವಧಿಯಲ್ಲಿ ಖರ್ಚಾಗಿದ್ದು 49.2 ಲಕ್ಷ ಕೋಟಿ ರೂ.: ಚಿದಂಬರಂ ಟೀಕೆಗೆ ನಿರ್ಮಲಾ ಉತ್ತರ

ನವದೆಹಲಿ: ಕಳೆದ ಎಂಟು ವರ್ಷಗಳಲ್ಲಿ ಸಾಮಾಜಿಕ ಕ್ಷೇತ್ರದ ಕಾರ್ಯಕ್ರಮಗಳು ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಮೋದಿ ಸರ್ಕಾರ 91 ಲಕ್ಷ ಕೋಟಿ ರೂಪಾಯಿಗಳನ್ನು ಖರ್ಚು ಮಾಡಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ವರದಿಯನ್ನು ಉಲ್ಲೇಖಿಸಿ ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ. 2014-15 ರಿಂದ 2021-22 ರ ಅವಧಿಯಲ್ಲಿ ಕೇಂದ್ರವು ಕೈಗೊಂಡ ಒಟ್ಟಾರೆ … Continued

ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಆರ್ಥಿಕ ನೆರವು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ:ಬೊಮ್ಮಾಯಿ

ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ತನ್ನ ಪಾಲಿನ ಹಣ ಬಿಡುಗಡೆ ಮಾಡಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರಿನಲ್ಲಿ ಇಂದು (ಶುಕ್ರವಾರ) ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಸಂದರ್ಭದಲ್ಲಿ … Continued

ಪೆಟ್ರೋಲ್, ಡೀಸೆಲ್‌ ಬೆಲೆ ಹೆಚ್ಚಳ: ನಿರ್ಮಲಾ ಬೇಸರ

ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಬೇಸರದ ಸಂಗತಿ ಎಂದು ಹೇಳಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌, ಮುಂದಿನ ದಿನಗಳಲ್ಲಿ ಇಂಧನ ಬೆಲೆ ಇಳಿಸುವುದೇ ಇದಕ್ಕೆ ಉತ್ತರವಾಗಲಿದೆ ಎಂದು ಅಭಿಪ್ರಾಪಟ್ಟಿದ್ದಾರೆ. ಗ್ರಾಹಕರಿಗೆ ಇಂಧನವನ್ನು ಯೋಗ್ಯ ಬೆಲೆಗೆ ಒದಗಿಸುವ ದಿಸೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಚರ್ಚೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ. ಮುಂಬೈನಲ್ಲಿ ಪೆಟ್ರೋಲ್‌ … Continued