ವಿಧಾನ ಪರಿಷತ್ ಚುನಾವಣೆ: ನಿತೀಶ ಪುತ್ರ ನಿಶಾಂತಕುಮಾರಗೆ ಟಿಕೆಟ್‌ ನೀಡಿದ ಜೆಡಿಯು

ಪಾಟ್ನಾ: ಬಿಹಾರದ ಆಡಳಿತಾರೂಢ  ಅಂಗಪಕ್ಷವಾದ ಜನತಾ ದಳ (ಯುನೈಟೆಡ್) ಪಕ್ಷವು 2026ರ ಬಿಹಾರ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ ಹಾಗೂ ಒಂದು ಸ್ಥಾನದ ಉಪಚುನಾವಣೆಗೆ ತನ್ನ ಅಧಿಕೃತ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ. ಜೆಡಿಯು ಬಿಹಾರ ರಾಜ್ಯ ಘಟಕದ ಅಧ್ಯಕ್ಷ ಉಮೇಶ ಸಿಂಗ್ ಕುಶ್ವಾಹಾ ಅವರ ಸಹಿ ಇರುವ ಅಧಿಕೃತ ಅಧಿಸೂಚನೆಯ ಮೂಲಕ ಅಭ್ಯರ್ಥಿಗಳ ಹೆಸರನ್ನು … Continued

ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ : ಜೆಡಿಯು ಸೇರಲಿರುವ ನಿತೀಶ ಪುತ್ರ ನಿಶಾಂತ; ಮುಂದಿನ ಡಿಸಿಎಂ ?

ಪಾಟ್ನಾ: ಬಿಹಾರದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮುಖ್ಯಮಂತ್ರಿ ನಿತೀಶಕುಮಾರ ಅವರ ಪುತ್ರ ನಿಶಾಂತಕುಮಾರ ಅವರು ಶನಿವಾರ ಅಧಿಕೃತವಾಗಿ ಜನತಾ ದಳ (ಯುನೈಟೆಡ್) ಪಕ್ಷವನ್ನು ಸೇರ್ಪಡೆಯಾಗಲಿದ್ದಾರೆ. ಅಷ್ಟೇ ಅಲ್ಲದೆ, ಅವರು ಬಿಹಾರದ ಮುಂದಿನ ಉಪಮುಖ್ಯಮಂತ್ರಿಯಾಗುವ ಸಾಧ್ಯತೆಯಿದೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಸಂಜಯ ಕುಮಾರ ಝಾ ಶುಕ್ರವಾರ ನಡೆದ ಪ್ರಮುಖ ಸಭೆಯಲ್ಲಿ ಸುಳಿವು ನೀಡಿದ್ದಾರೆ. ನಿತೀಶಕುಮಾರ ಅವರು … Continued

ಬಿಹಾರ ರಾಜಕೀಯದಲ್ಲಿ ಮಹತ್ವದ ಬದಲಾವಣೆ : ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಸಿಎಂ ನಿತೀಶಕುಮಾರ…!

ಪಾಟ್ನಾ: ಬಿಹಾರದಲ್ಲಿ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಿರುವ ಜೆಡಿಯು (JD-U) ಅಧ್ಯಕ್ಷ ನಿತೀಶಕುಮಾರ ಅವರು ಗುರುವಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸುಮಾರು ಎರಡು ದಶಕಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಂತರ, ಅವರು ಇಂದು, ಗುರುವಾರ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಆ ಮೂಲಕ ಸಕ್ರಿಯ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣದತ್ತ ಮುಖ ಮಾಡಿದ್ದಾರೆ. ಅವರು ರಾಜ್ಯಸಭೆಗೆ … Continued

ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ ರಾಜೀನಾಮೆ ಸಾಧ್ಯತೆ : ಪುತ್ರನ ರಾಜಕೀಯ ಪ್ರವೇಶಕ್ಕೆ ತಯಾರಿ, ನಿಶಾಂತಗೆ ಉಪಮುಖ್ಯಮಂತ್ರಿ ಪಟ್ಟ ?

ನವದೆಹಲಿ: ಕಳೆದ ವರ್ಷ ಹತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಿತೀಶಕುಮಾರ್ ತಮ್ಮ ಹುದ್ದೆಯಿಂದ ಕೆಳಗಿಳಿಯುತ್ತಿದ್ದಾರೆ ಎಂದು ವರದಿಯಾಗಿದೆ. ನಿತೀಶ ಅವರು ತಮ್ಮ ಮಗ ನಿಶಾಂತ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ನಡೆಯ ಭಾಗ ಇದು ಎಂದು ಹೇಳಲಾಗುತ್ತಿದೆ. ನಿತೀಶ ಅವರು ಮುಖ್ಯಮಂತ್ರಿ ಹುದ್ದೆಯನ್ನು ಬಿಜೆಪಿಗೆ ಹಸ್ತಾಂತರಿಸಿ ರಾಜ್ಯಸಭೆಗೆ ಪ್ರವೇಶಿಸಲಿದ್ದಾರೆ ಎಂದು ವರದಿಯಾಗಿದೆ. ನಿಶಾಂತ ಅವರ … Continued

ಎನ್‌ ಡಿಎ ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶಕುಮಾರ ಆಯ್ಕೆ

ನವದೆಹಲಿ: ಬುಧವಾರ ಜೆಡಿಯು ಮುಖ್ಯಸ್ಥ ನಿತೀಶಕುಮಾರ ಅವರನ್ನು ಎನ್‌ಡಿಎ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಮತ್ತು ಅವರು ದಾಖಲೆಯ ಹತ್ತನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುರುವಾರ (ನವೆಂಬರ್‌ 20)ಬೆಳಿಗ್ಗೆ 11:30 ಕ್ಕೆ ಪಾಟ್ನಾದ ಗಾಂಧಿ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಎಲ್ಲಾ … Continued

ಬಿಹಾರದಲ್ಲಿ ಮತ್ತೊಮ್ಮೆ ಎನ್​ಡಿಎ ಅಧಿಕಾರಕ್ಕೆ ; ಭವಿಷ್ಯ ನುಡಿದ 8 ಎಕ್ಸಿಟ್ ಪೋಲ್‌ ಗಳು

ಬಿಹಾರದಲ್ಲಿ ಮತದಾನ ಮುಗಿದಿದ್ದು, ಇದರ ಬೆನ್ನಿಗೇ ಮತತಗಟ್ಟೆ ಸಮೀಕ್ಷೆಗಳು ರಾಜಕೀಯ ಪಕ್ಷಗಳ ಭವಿಷ್ಯ ಏನಾಗಲಿದೆ ಎಂದು ಭವಿಷ್ಯ ನುಡಿದಿವೆ. ಈ ಬಾರಿಯೂ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಎಂಟು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ದೈನಿಕ್ ಭಾಸ್ಕರ್ ಎಕ್ಸಿಟ್ ಪೋಲ್ ಎನ್‌ಡಿಎ 145 ರಿಂದ 160 … Continued

ಬಿಹಾರ ಚುನಾವಣೆಗೂ ಮುನ್ನ 125 ಯೂನಿಟ್ ಫ್ರೀ ವಿದ್ಯುತ್ ಘೋಷಿಸಿದ ಸಿಎಂ ನಿತೀಶಕುಮಾರ

ಪಾಟ್ನಾ: ಬಿಹಾರ ಚುನಾವಣೆಗೂ ಮುನ್ನ ಗುರುವಾರ (ಜುಲೈ 17) ಮುಖ್ಯಮಂತ್ರಿ ನಿತೀಶಕುಮಾರ ಅರ್ಹ ಮನೆಗಳಿಗೆ 125 ಯೂನಿಟ್ ವಿದ್ಯುತ್ ಅನ್ನು ಉಚಿತ(free)ವಾಗಿ ನೀಡುವುದಾಗಿ ಘೋಷಿಸಿದ್ದಾರೆ. ಈ ಯೋಜನೆಯು ರಾಜ್ಯಾದ್ಯಂತ ಸುಮಾರು 1.67 ಕೋಟಿ ಕುಟುಂಬಗಳಿಗೆ ಅನುಕೂಲ ನೀಡುವ ನಿರೀಕ್ಷೆಯಿದೆ. ಆಗಸ್ಟ್ 1ರಿಂದ ರಾಜ್ಯದ ಗೃಹಬಳಕೆದಾರರು 125 ಯೂನಿಟ್‌ಗಳವರೆಗೆ ಉಚಿತವಾಗಿ ವಿದ್ಯುತ್ ಪಡೆಯಲಿದ್ದಾರೆ. ಪ್ರಸ್ತುತ ಕುಟೀರ ಜ್ಯೋತಿ … Continued

ರಾಜ್ಯ ಸರ್ಕಾರದ ಎಲ್ಲ ಉದ್ಯೋಗಗಳಲ್ಲಿ ಮಹಿಳೆಯರಿಗೆ 35%ರಷ್ಟು ಮೀಸಲಾತಿ : ಚುನಾವಣೆ ಸನಿಹದಲ್ಲಿ ಬಿಹಾರದ ನಿತೀಶ್‌ ಸರ್ಕಾರದ ಮಹತ್ವದ ನಿರ್ಧಾರ

ಪಾಟ್ನಾ : ಮಹತ್ವದ ಕ್ರಮದಲ್ಲಿ ಮುಖ್ಯಮಂತ್ರಿ ನಿತೀಶಕುಮಾರ ನೇತೃತ್ವದ ಬಿಹಾರ ಸರ್ಕಾರ ಮಂಗಳವಾರ ಬಿಹಾರದ ಕಾಯಂ ನಿವಾಸಿ ಮಹಿಳೆಯರಿಗೆ ರಾಜ್ಯ ಸರ್ಕಾರದ ಎಲ್ಲ ಉದ್ಯೋಗಗಳಲ್ಲಿ ಶೇಕಡಾ 35 ರಷ್ಟು ಮೀಸಲಾತಿ ನೀಡಲು ಒಪ್ಪಿಗೆ ನೀಡಿದೆ. ಬಿಹಾರ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಮುಖ್ಯಮಂತ್ರಿ ನಿತೀಶಕುಮಾರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ … Continued

ವೀಡಿಯೊ..| ಸಮಾರಂಭದಲ್ಲಿ ಪ್ರಧಾನಿ ಮೋದಿ ಪಾದ ಮುಟ್ಟಿ ನಮಸ್ಕರಿಸಲು ಮುಂದಾದ ಬಿಹಾರ ಸಿಎಂ ನಿತೀಶಕುಮಾರ : ಮೋದಿ ಏನು ಮಾಡಿದ್ರು ನೋಡಿ

ದರ್ಭಾಂಗ : ಬಿಹಾರದ ದರ್ಭಾಂಗದಲ್ಲಿ ಬುಧವಾರ ನಡೆದ ಕಾರ್ಯಕ್ರಮವೊಂದರಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ ಅವರು ಪ್ರಧಾನಿ ನರೇಂದ್ರ ಮೋದಿಯವರ ಪಾದಗಳನ್ನು ಮುಟ್ಟಿ ನಮಸ್ಕರಿಸಲು ಮುಂದಾಗಿರುವುದು ಕಂಡುಬಂದಿದೆ. ಬಿಹಾರ ಮುಖ್ಯಮಂತ್ರಿ ಪ್ರಧಾನಿ ಬಳಿಗೆ ಬರುತ್ತಿದ್ದಂತೆ ಅವರ ಪಾದ ಮುಟ್ಟಿ ಮುಂದಾಗುತ್ತಾರೆ. ಆದಾಗ್ಯೂ, ಪ್ರಧಾನಿ ಮೋದಿ ಅವರನ್ನು ನಡುವೆ ತಡೆಯುತ್ತಾರೆ, ನಂತರ ಅವರು ಅವರೊಂದಿಗೆ ಹಸ್ತಲಾಘವ ಮಾಡುತ್ತಾರೆ.ಈ ಕ್ಷಣದ … Continued

ʼಅಗ್ನಿವೀರʼ ಯೋಜನೆ ಮರುಪರಿಶೀಲಿಸುವಂತೆ ಎನ್‌ಡಿಎ ಸರ್ಕಾರ ರಚನೆಗೆ ಮೊದಲೇ ಜೆಡಿಯು ಒತ್ತಾಯ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ಮೂರನೇ ಅವಧಿಯು ಮೊದಲ ಎರಡಕ್ಕಿಂತ ಭಿನ್ನವಾಗಿರಬಹುದು ಎಂಬ ಮೊದಲ ಸಂಕೇತವಾಗಿ, ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರದ ಅಗ್ನಿಪಥ ಯೋಜನೆಯನ್ನು ಮರುಪರಿಶೀಲಿಸಲು ಪಕ್ಷವು ಬಯಸುತ್ತದೆ ಎಂದು ಜೆಡಿಯು ನಾಯಕರೊಬ್ಬರು ಹೇಳಿದ್ದಾರೆ. ಬಿಜೆಪಿ ಮಿತ್ರ ಪಕ್ಷ ಜೆಡಿಯುನ ಮುಖ್ಯ ವಕ್ತಾರ ಕೆ.ಸಿ. ತ್ಯಾಗಿ, ಹಲವಾರು ರಾಜ್ಯಗಳಲ್ಲಿ ಯೋಜನೆಯ ವಿರುದ್ಧ ಅಸಮಾಧಾನವಿದೆ ಎಂದು ಹೇಳಿದ್ದಾರೆ. … Continued