ರಾಜ್ಯಸಭಾ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಾಮಪತ್ರ ರದ್ದು ; ಕೈ ನಾಯಕರ ಪ್ರತಿಭಟನೆ

ಭೋಪಾಲ ; ಮಧ್ಯಪ್ರದೇಶದ ರಾಜ್ಯಸಭಾ ಚುನಾವಣಾ ಕಣದಲ್ಲಿ ಭಾರಿ ರಾಜಕೀಯ ಹೈಡ್ರಾಮಾ ನಡೆದಿದೆ. ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡಿದ್ದು, ಇದು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆಯಾಗಿ ಪರಿಣಮಿಸಿದೆ. ಅವರು ತಮ್ಮ ಚುನಾವಣಾ ಪ್ರಮಾಣಪತ್ರದಲ್ಲಿ (ಅಫಿಡವಿಟ್) ಪ್ರಕರಣವೊಂದರ ಮಾಹಿತಿಯನ್ನು ಮರೆಮಾಚಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಭಾರತೀಯ ಜನತಾ ಪಾರ್ಟಿ … Continued

ರಾಜ್ಯಸಭೆ ಚುನಾವಣೆಗೆ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ (Rajya Sabha elections) ಕಾಂಗ್ರೆಸ್ ಅಭ್ಯರ್ಥಿಯಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿಧಾನಸೌಧದಲ್ಲಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಕರ್ನಾಟಕ ವಿಧಾನಸಭೆಯಿಂದ ಆಯ್ಕೆಯಾಗಬೇಕಾದ ರಾಜ್ಯಸಭೆಯ 3 ಸ್ಥಾನಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್‌ ವಕ್ತಾರ ಪವನ್ ಖೇರಾ, ಮನ್ಸೂರ್ ಅಲಿಖಾನ್ ಅವರನ್ನು ಅಭ್ಯರ್ಥಿಗಳಾಗಿ ಕಾಂಗ್ರೆಸ್ ಹೆಸರಿಸಿದೆ. ಖರ್ಗೆಯವರು ರಾಜ್ಯಸಭೆಯ ವಿರೋಧ ಪಕ್ಷದ … Continued

ದಾವಣಗೆರೆ ದಕ್ಷಿಣ ಕ್ಷೇತ್ರ ; ಕಾಂಗ್ರೆಸ್‌ ಟಿಕೆಟ್‌ ಘೋಷಣೆಗೂ ಮೊದಲೇ ನಾಮಪತ್ರ ಸಲ್ಲಿಸಿದ ಶಾಮನೂರು ಮೊಮ್ಮಗ…!

ದಾವಣಗೆರೆ: ಕರ್ನಾಟಕದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಸ್ಪರ್ಧಿಸಲು ಆಡಳಿತ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ಪೈಪೋಟಿ ಎದುರಾಗಿದೆ. ಹಲವಾರು ಆಕಾಂಕ್ಷಿಗಳು ಟಿಕೆಟಿಗಾಗಿ ಲಾಬಿ ನಡೆಸಿದ್ದು, ಕಾಂಗ್ರೆಸ್ಸಿಗೆ ಟಿಕೆಟ್‌ ನೀಡುವುದೇ ತಲೆನೋವಾಗಿ ಪರಿಣಮಿಸಿದೆ. ಈ ನಡುವೆ ಕಾಂಗ್ರೆಸ್‌ ಸರ್ಕಾರದಲ್ಲಿ ಸಚಿವರಾಗಿರುವ ಎಸ್.ಎಸ್. ಮಲ್ಲಿಕಾರ್ಜುನ ಮತ್ತು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ದಂಪತಿಯ ಪುತ್ರ … Continued

ಬಿಹಾರ ರಾಜಕೀಯದಲ್ಲಿ ಮಹತ್ವದ ಬದಲಾವಣೆ : ರಾಜ್ಯಸಭೆಗೆ ನಾಮಪತ್ರ ಸಲ್ಲಿಸಿದ ಸಿಎಂ ನಿತೀಶಕುಮಾರ…!

ಪಾಟ್ನಾ: ಬಿಹಾರದಲ್ಲಿ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಿರುವ ಜೆಡಿಯು (JD-U) ಅಧ್ಯಕ್ಷ ನಿತೀಶಕುಮಾರ ಅವರು ಗುರುವಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಸುಮಾರು ಎರಡು ದಶಕಗಳ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಂತರ, ಅವರು ಇಂದು, ಗುರುವಾರ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಆ ಮೂಲಕ ಸಕ್ರಿಯ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣದತ್ತ ಮುಖ ಮಾಡಿದ್ದಾರೆ. ಅವರು ರಾಜ್ಯಸಭೆಗೆ … Continued

ವಯನಾಡು ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ವಯನಾಡು : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡು ಲೋಕಸಭೆ ಕ್ಷೇತ್ರಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಮೂಲಕ ಅವರು ಇದೇ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಇಳಿದಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, … Continued

ಲೋಕಸಭೆ ಚುನಾವಣೆ : ವಾರಣಾಸಿಯಿಂದ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ವಾರಾಣಸಿ: 2024ರ ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ, ಮೂರನೇ ಅವಧಿಗೆ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಪ್ರಧಾನಿ ಮೋದಿಯವರು ಪ್ರತಿನಿಧಿಸುತ್ತಿರುವ ವಾರಾಣಸಿ ಕ್ಷೇತ್ರದಲ್ಲಿ ಜೂನ್ 1 ರಂದು ಲೋಕಸಭೆ ಚುನಾವಣೆಯ ಏಳನೇ ಮತ್ತು ಕೊನೆಯ ಹಂತದಲ್ಲಿ ಮತದಾನ ನಡೆಯಲಿದೆ. ಸತತ ಮೂರನೇ ಬಾರಿಗೆ ತಮ್ಮ … Continued

ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ

ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಗೇರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಅವರು ಒಟ್ಟು ಮೂರು ನಾಮಪತ್ರ ಸಲ್ಲಿಕೆ ಮಾಡಿದರು. ಪತ್ನಿ, ಪುತ್ರಿ ಹಾಗೂ … Continued

ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ಚುನಾವಣಾಧಿಕಾರಿಯೂ ಆಗಿರುವ ಗುರುದತ್ತ ಹೆಗಡೆಗೆ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಕೆ ವೇಳೆ ಪತ್ನಿ ಜಯಲಕ್ಷ್ಮಿ, ಮಾಜಿ ಸಚಿವ ಗೂಳಿಹಟ್ಟಿ ಶೇಖರ, ಮಾಜಿ ಪಾಲಿಕೆ ಸದಸ್ಯ ವಿಶ್ವಾದ … Continued

ಕರ್ನಾಟಕದ 14 ಕ್ಷೇತ್ರಗಳ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು : ಇಂದಿನಿಂದ (ಏಪ್ರಿಲ್‌ 12) ರಾಜ್ಯದಲ್ಲಿ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಆರಂಭವಾಗಿದೆ. ಈ ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಏಪ್ರಿಲ್ 19 ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ, ಏಪ್ರಿಲ್ 22 ನಾಮಪತ್ರ ಹಿಂಪಡೆಯಲು ಅವಕಾಶವಿದೆ. ರಾಜ್ಯದ ಒಟ್ಟು … Continued

ಮಂಡ್ಯದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ : ಅವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತಾ?

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಗುರುವಾರ (ಏಪ್ರಿಲ್ 04) ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮಂಡ್ಯದಲ್ಲಿ ಬೃಹತ್​ ರೋಡ್​ಶೋ ನಡೆಸಿದ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್, ಮೈಸೂರು-ಕೊಡಗು ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ … Continued