ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಬೆಂಗಳೂರು: ಬಡಗು ತಿಟ್ಟು ಯಕ್ಷಗಾನದ ಖ್ಯಾತ ಭಾಗವತ, ಅಪಾರ ಅಭಿಮಾನಿಗಳನ್ನು ಹೊಂದಿರುವ ಸುಬ್ರಹ್ಮಣ್ಯ ಧಾರೇಶ್ವರ 67ನೇ ವಯಸ್ಸಿನಲ್ಲಿ ಬೆಂಗಳೂರಿನಲ್ಲಿ ಗುರುವಾರ (ಏ.25) ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ ತಮ್ಮ ಪುತ್ರನ ಮನೆಯಲ್ಲಿದ್ದ ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಬೆಳಗ್ಗೆ 4:30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ. … Continued

ನಟ, ಮಾಜಿ ಐಎಎಸ್ ಅಧಿಕಾರಿ ಕೆ ಶಿವರಾಮ ನಿಧನ

ಬೆಂಗಳೂರು : ಕನ್ನಡದ ಹಿರಿಯ ನಟ ಮಾಜಿ ಐಎಎಸ್ ಅಧಿಕಾರಿ ಕೆ ಶಿವರಾಮ (71 ವರ್ಷ) ನಿಧನರಾಗಿದ್ದಾರೆ. ಫೆ.3ರಂದು ಅನಾರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕೆ ಶಿವರಾಮ ಅವರು ದಾಖಲಾಗಿದ್ದರು. ಅವರಿಗೆ ಬಿಪಿ ಸಮಸ್ಯೆ ಇತ್ತು. ಆದರೆ 5-6 ದಿನಗಳ ಹಿಂದೆ ಅವರ ಆರೋಗ್ಯದಲ್ಲಿ ವಿಪರೀತ ಏರುಪೇರು ಕಂಡುಬಂದಿತ್ತು. ನಂತರ ಹೃದಯಾಘಾತವಾಗಿತ್ತು. ಅವರು ಚಿಕಿತ್ಸೆಗೆ … Continued

ಖ್ಯಾತ ಕನ್ನಡ-ತುಳು ಸಾಹಿತಿ, ಜಾನಪದ-ಯಕ್ಷಗಾನ ವಿದ್ವಾಂಸ ಪ್ರೊ. ‌ಅಮೃತ ಸೋಮೇಶ್ವರ ಇನ್ನಿಲ್ಲ

ಮಂಗಳೂರು : ಕನ್ನಡದ ಖ್ಯಾತ ಸಾಹಿತಿ, ಜಾನಪದ ವಿದ್ವಾಂಸ ಹಾಗೂ ಯಕ್ಷಗಾನ ಪ್ರಸಂಗ ಕರ್ತೃ ಪ್ರೊ.ಅಮೃತ ಸೋಮೇಶ್ವರ (89) ಅವರು ಶನಿವಾರ (ಜನವರಿ 6) ಬೆಳಿಗ್ಗೆ ನಿಧನರಾದರು. ಅವರು ವಯೋಸಹಜವಾಗಿ ಶನಿವಾರ ಬೆಳಿಗ್ಗೆ ತಮ್ಮ ಸ್ವಗೃಹ ಸೋಮೇಶ್ವರದ ‘ಒಲುಮೆ’ಯಲ್ಲಿ ನಿಧನರಾದರು. ಅಮೃತ ಸೋಮೇಶ್ವರ ಅವರಿಗೆ ಪತ್ನಿ ನರ್ಮದಾ, ಮಕ್ಕಳಾದ ಚೇತನ ಸೋಮೇಶ್ವರ, ಜೀವನ ಸೋಮೇಶ್ವರ ಇದ್ದಾರೆ. … Continued

ಸಹಾರಾ ಗ್ರೂಪ್ ಸಂಸ್ಥಾಪಕ ಸುಬ್ರತಾ ರಾಯ್ ನಿಧನ

ಮುಂಬೈ : ಸಹಾರಾ ಸಮೂಹದ ಸಂಸ್ಥಾಪಕ ಸುಬ್ರತಾ ರಾಯ್ ಅವರು ದೀರ್ಘಕಾಲದ ಅನಾರೋಗ್ಯದ ಕಾರಣದಿಂದ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಆರೋಗ್ಯದಲ್ಲಿ ಕ್ಷೀಣಿಸಿದ ಹಿನ್ನೆಲೆಯಲ್ಲಿ ಭಾನುವಾರ ಅವರನ್ನು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಸಂಸ್ಥೆಗೆ (ಕೆಡಿಎಎಚ್) ದಾಖಲಿಸಲಾಗಿತ್ತು. ಸಹಾರಾ ಇಂಡಿಯಾ ಪರಿವಾರ್ ನಿಧನದ ಸುದ್ದಿಯನ್ನು ಖಚಿತಪಡಿಸಿದೆ. “ನಮ್ಮ ಗೌರವಾನ್ವಿತ … Continued

ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆ.ಸಿ ರಘು ವಿಧಿವಶ

ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆ.ಸಿ ರಘು ಭಾನುವಾರ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ. ಆಹಾರ ಆರೋಗ್ಯದ ವಿಚಾರದಲ್ಲಿ ಅತ್ಯದ್ಭುತ ಜ್ಞಾನ ಹೊಂದಿದ್ದರು, ಆದರೆ ರಘು ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ‘ಶ್ವಾಸಕೋಶದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ನನ್ನ ಪತಿ ಕೆ.ಸಿ.ರಘು ಅವರು ಭಾನುವಾರ ಬೆಳಿಗ್ಗೆ 7:30 ಕ್ಕೆ ನಿಧನರಾಗಿದ್ದಾರೆ. ಎಂದು ಅವರ ಪತ್ನಿ … Continued