ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣ : ಎಲ್‌ಇಟಿ ಉಗ್ರ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್

ನವದೆಹಲಿ: ಜಮ್ಮುವಿನ ಎನ್‌ಐಎ ವಿಶೇಷ ನ್ಯಾಯಾಲಯವು ಪಹಲ್ಗಾಮ್ ಭಯೋತ್ಪಾದಕ ದಾಳಿ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ವಿರುದ್ಧ ಜಾಮೀನು ರಹಿತ ವಾರಂಟ್ (ಎನ್‌ಬಿಡಬ್ಲ್ಯು) ಹೊರಡಿಸಿದೆ. ಪಹಲ್ಗಾಮ್ ಉಗ್ರ ದಾಳಿಯ ತನಿಖೆಗೆ ಸಂಬಂಧಿಸಿದ ಪೂರಕ ಆರೋಪಪಟ್ಟಿಯಲ್ಲಿ (Supplementary Chargesheet) ಹಫೀಜ್ ಸಯೀದ್ ನನ್ನು ಎನ್‌ಐಎ ಹೆಸರಿಸಿದ್ದು, … Continued

ಉದ್ಯಮಿ ವಿಜಯ ಮಲ್ಯ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಮುಂಬೈ: ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ಗೆ (ಐಒಬಿ) ಸಂಬಂಧಿಸಿ ₹ 180 ಕೋಟಿ ಸಾಲ ಮರುಪಾವತಿ ಮಾಡದೆ ಪರಾರಿಯಾಗಿರುವ ಉದ್ಯಮಿ ವಿಜಯ ಮಲ್ಯ ವಿರುದ್ಧ ಮುಂಬೈನ ವಿಶೇಷ ನ್ಯಾಯಾಲಯ ಜಾಮೀನು ರಹಿತ ವಾರಂಟ್ (ಎನ್‌ಬಿಡಬ್ಲ್ಯು) ಜಾರಿ ಮಾಡಿದೆ. ವಿಶೇಷ ಸಿಬಿಐ ನ್ಯಾಯಾಲಯದ ನ್ಯಾಯಾಧೀಶ ಎಸ್‌.ಪಿ. ನಾಯಕ ನಿಂಬಾಳ್ಕರ್ ಅವರು ಜೂನ್ 29 ರಂದು ಮಲ್ಯ ವಿರುದ್ಧ ಎನ್‌ಬಿಡಬ್ಲ್ಯೂ … Continued

ಪೋಕ್ಸೋ ಪ್ರಕರಣ ; ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಜಾಮೀನು ರಹಿತ ವಾರಂಟ್ ಹೊರಡಿಸಲು ಆದೇಶ; ಬಂಧನ ಸಾಧ್ಯತೆ

 ಬೆಂಗಳೂರು: ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಲು ಆದೇಶಿಸಿದೆ. ನ್ಯಾಯಾಲಯದ ಆದೇಶದಿಂದ ಮಾಜಿ ಮುಖ್ಯಮಂತ್ರಿಗೆ ಬಂಧನ ಭೀತಿ ಎದುರಾಗಿದೆ. ಪ್ರಕರಣದ ವಿಚಾರಣೆಗೆ ಯಡಿಯೂರಪ್ಪ ಹಾಜರಾಗದ ಕಾರಣ ಬಂಧನ ವಾರೆಂಟ್ ಹೊರಡಿಸುವಂತೆ ಕೋರಿ ಸಿಐಡಿ ಸಲ್ಲಿಸಿದ್ದ ಮನವಿ ಆಲಿಸಿದ ಬೆಂಗಳೂರು ನಗರದ 1ನೇ ತ್ವರಿತಗತಿಯ ನ್ಯಾಯಾಲಯ … Continued

ನಟಿ-ಮಾಜಿ ಸಂಸದೆ ಜಯಪ್ರದಾ ಬಂಧನಕ್ಕೆ ರಾಂಪುರ ನ್ಯಾಯಾಲಯ ಆದೇಶ

ನವದೆಹಲಿ: ಉತ್ತರ ಪ್ರದೇಶದ ರಾಂಪುರದಲ್ಲಿರುವ ಸಂಸದ/ಶಾಸಕರ ನ್ಯಾಯಾಲಯವು ರಾಜ್ಯಸಭಾ ಮಾಜಿ ಸಂಸದೆ ಮತ್ತು ನಟಿ ಜಯಪ್ರದಾ ಅವರು ಅನೇಕ ಬಾರಿ ನ್ಯಾಯಾಲಯಕ್ಕೆ ಹಾಜರಾಗದ ನಂತರ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದೆ. ಜಯಪ್ರದಾ ವಿರುದ್ಧ ಹೊರಡಿಸಲಾದ ಏಳನೇ ವಾರಂಟ್ ಇದಾಗಿದ್ದು, ಆಕೆಯನ್ನು ಬಂಧಿಸುವಂತೆ ರಾಂಪುರ ಪೊಲೀಸ್ ವರಿಷ್ಠಾಧಿಕಾರಿಗೆ ನ್ಯಾಯಾಲಯ ಸೂಚಿಸಿದೆ. 2019ರ ಲೋಕಸಭಾ ಚುನಾವಣೆ … Continued

ಸಚಿವ ರಾಮಲಿಂಗಾರೆಡ್ಡಿಗೆ ಜಾಮೀನು ರಹಿತ ವಾರೆಂಟ್ ಜಾರಿ

ಬೆಂಗಳೂರು : ಮೇಕೆದಾಟು ಪಾದಯತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ನ್ಯಾಯಾಲಯ ಆದೇಶ ಹೊರಡಿಸಿದೆ ಎಂದು ವರದಿಯಾಗಿದೆ. ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಹಿನ್ನೆಲೆ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗದ ಸಾರಿಗೆ … Continued

2ನೇ ಪೋಕ್ಸೋ ಪ್ರಕರಣ: ಮುರುಘಾ ಶರಣದ ಬಂಧನದ ಆದೇಶಕ್ಕೆ ಹೈಕೋರ್ಟ್ ತಡೆ, ಬಂಧನವಾದ ಕೆಲ ಗಂಟೆಗಳಲ್ಲೇ ಬಿಡುಗಡೆಗೆ ಆದೇಶ

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್‌ ಹೊರಡಿಸಿದ್ದ ವಿಶೇಷ ನ್ಯಾಯಾಲಯದ ಆದೇಶಕ್ಕೆ ಸೋಮವಾರ ಸಂಜೆ ಕರ್ನಾಟಕ ಹೈಕೋರ್ಟ್‌ ಸಂಜೆ ತಡೆ ನೀಡಿದ್ದು, ಆರೋಪಿ ಶರಣರನ್ನು ಬಿಡುಗಡೆ ಮಾಡುವಂತೆ ಚಿತ್ರದುರ್ಗ ಜಿಲ್ಲಾ ಅಧೀಕ್ಷಕರಿಗೆ ನಿರ್ದೇಶಿಸಿದೆ. ವಿಶೇಷ ನ್ಯಾಯಾಲಯದ ಆದೇಶದಂತೆ ಬಂಧಿಸಿ … Continued

ಮುನಿರತ್ನರಿಂದ ಕ್ರಿಮಿನಲ್‌ ಮಾನಹಾನಿ ಮೊಕದ್ದಮೆ : ಕೆಂಪಣ್ಣ ಸೇರಿ 19 ಮಂದಿಗೆ ಜಾಮೀನುರಹಿತ ವಾರೆಂಟ್‌

ಬೆಂಗಳೂರು: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ತೋಟಗಾರಿಕೆ ಮತ್ತು ಯೋಜನಾ ಸಚಿವ ವಿ.ಮುನಿರತ್ನ ಅವರು ಹೂಡಿರುವ ಕ್ರಿಮಿನಲ್‌ ಮಾನಹಾನಿ ಮೊಕದ್ದಮೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಸೇರಿದಂತೆ 19 ಮಂದಿ ವಿರುದ್ಧ ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯವು ಜಾಮೀನುರಹಿತ ವಾರೆಂಟ್‌ ಹೊರಡಿಸಿದೆ. ವಕೀಲ ವಿವೇಕ ಸುಬ್ಬಾರೆಡ್ಡಿ ಅವರ ಮೂಲಕ ಸಲ್ಲಿಸಿರುವ ಕ್ರಿಮಿನಲ್‌ ಮಾನಹಾನಿ … Continued