ನ್ಯಾಯಾಲಯದ ನಿರ್ದೇಶನ ಪಾಲಿಸಲು ನಿರ್ಲಕ್ಷ್ಯ: ರಾಜ್ಯ ಸರ್ಕಾರದ 41 ಇಲಾಖೆಗಳಿಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ನ್ಯಾಯಾಲಯದ ಆದೇಶ ಹಾಗೂ ನಿರ್ದೇಶಗಳನ್ನು ಪಾಲಿಸಲು ರಾಜ್ಯ ಸರ್ಕಾರವು ಎಲ್ಲಾ ಇಲಾಖೆಗಳು ಮತ್ತದರ ಪ್ರಾಧಿಕಾರಗಳಲ್ಲಿ ಆಂತರಿಕ ಮೇಲ್ವಿಚಾರಣಾ ವ್ಯವಸ್ಥೆ ಆರಂಭಿಸುವ ವಿಚಾರದ ಕುರಿತಾಗಿ ರಾಜ್ಯ ಸರ್ಕಾರದ ಮುಖ್ಯ ಕಾಯದರ್ಶಿ ಮತ್ತು ಸರ್ಕಾರದ 41 ಇಲಾಖೆಗಳಿಗೆ ಮಂಗಳವಾರ ಕರ್ನಾಟಕ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ನ್ಯಾಯಾಲಯಗಳ ಆದೇಶ ಪಾಲಿಸಲು ಸರ್ಕಾರ ಮತ್ತದರ ಪ್ರಾಧಿಕಾರಗಳು ನಿರ್ಲಕ್ಷ್ಯ ಹಾಗೂ … Continued

ನಿಯಮ ಉಲ್ಲಂಘನೆ ಆರೋಪ: ಬಸನಗೌಡ ಪಾಟೀಲ ಯತ್ನಾಳ ಒಡೆತನದ ಸಕ್ಕರೆ ಕಾರ್ಖಾನೆ ಮುಚ್ಚುವಂತೆ ನೋಟಿಸ್‌

ಬೆಂಗಳೂರು: ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒಡೆತನದ ಕಾರ್ಖಾನೆ ಮುಚ್ಚುವಂತೆ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ನೋಟಿಸ್ ಜಾರಿಗೊಳಿಸಿದೆ. ಕಲಬುರಗಿ ಜಿಲ್ಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಯತ್ನಾಳ ಒಡೆತನದ ಸಿದ್ಧಶ್ರೀ ಸೌಹಾರ್ದ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಎಥೆನಾಲ್‌ ಉತ್ಪಾದಿಸುವ ಘಟಕವೂ ಇದೆ. … Continued

ದೇವಾಲಯದ ಆದಾಯ ಕಡಿಮೆ ; ಹಿರೇಮಗಳೂರು ಕಣ್ಣನ್‌ 10 ವರ್ಷದ ಸಂಬಳ ವಾಪಸ್‌ ಕೇಳಿ ನೋಟಿಸ್‌ ನೀಡಿದ ಸರ್ಕಾರ

ಚಿಕ್ಕಮಗಳೂರು : ವಾರ್ಷಿಕ ಆದಾಯಕ್ಕಿಂತ ವಾರ್ಷಿಕ ವೆಚ್ಚವೇ ಹೆಚ್ಚುವರಿಯಾಗಿದೆ ಎಂದು ಹಿರಿಯ ಸಾಹಿತಿ, ವಾಗ್ಮಿ ಮತ್ತು ಕನ್ನಡಲ್ಲಿಯೇ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಚಿಕ್ಕಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ (Hiremagaluru Kannan) ಅವರ ವೇತನ ವಾಪಸ್ ಕೇಳಿ ಸರ್ಕಾರ ನೋಟಿಸ್‌ ನೀಡಿದೆ ಎಂದು ವರದಿಯಾಗಿದೆ. 4500 ರೂಪಾಯಿಯಂತೆ 10 ವರ್ಷದ 4,74,000 ರೂ. ಹಣವನ್ನು … Continued

ರಾಹುಲ್‌ ಗಾಂಧಿ ಸೇರಿದಂತೆ ಯಾವ ಕಾಂಗ್ರೆಸ್‌ ನಾಯಕರೂ ಮೋದಿಗೆ ಸರಿಸಾಟಿಯಲ್ಲ’ ಎಂದ ಸಂಸದ ಕಾರ್ತಿ ಚಿದಂಬರಂ : ಕಾಂಗ್ರೆಸ್ ನಿಂದ ನೋಟಿಸ್

ಚೆನ್ನೈ: ರಾಹುಲ್ ಗಾಂಧಿ ಸೇರಿದಂತೆ ಯಾವುದೇ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿಯವರ ಪ್ರಚಾರದ ತಂತ್ರಕ್ಕೆ ಸರಿಸಾಟಿಯಾಗುವುದಿಲ್ಲ ಎಂಬ ಹೇಳಿಕೆ ನೀಡಿದ್ದಕ್ಕಾಗಿ ಹಿರಿಯ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಅವರ ಪುತ್ರ, ಸಂಸದ ಕಾರ್ತಿ ಚಿದಂಬರಂ ಅವರಿಗೆ ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಶೋಕಾಸ್ ನೋಟಿಸ್ ನೀಡಿದೆ. ಈ ಕ್ರಮವು ಪಕ್ಷದ ನಾಯಕತ್ವದ ಟೀಕೆ ಮತ್ತು … Continued

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಪ್ರಕರಣ: ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೋಟಿಸ್

ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ) ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಈ ಘಟನೆ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ), ತನಿಖೆಯ ಪ್ರಗತಿ, ಬಂಧನ, ಪರಿಹಾರ ನೀಡಿದ … Continued

ಪ್ರಧಾನಿ ಮೋದಿ ವಿರುದ್ಧ ʼಅಪಶಕುನʼ ಟೀಕೆ : ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ‘ಪನೌತಿ’ (ಅಪಶಕುನ) ಮತ್ತು ʼಜೇಬುಗಳ್ಳʼ ಟೀಕೆಗಳ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ಗುರುವಾರ ನೋಟಿಸ್ ನೀಡಿದೆ. ವಯನಾಡ್ ಸಂಸದ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಚುನಾವಣಾ ಸಂಸ್ಥೆಗೆ ದೂರು ನೀಡಿದ ಒಂದು ದಿನದ ನಂತರ ಚುನಾವಣಾ ಆಯೋಗ ನೋಟಿಸ್‌ ನೀಡಿದೆ. ಚುನಾವಣಾ ಆಯೋಗವು … Continued

ಪ್ರಿಯಾಂಕಾ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್

ನವದೆಹಲಿ : ಚುನಾವಣಾ ಪ್ರಚಾರದ ವೇಳೆ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವರಿಗೆ ರಾಷ್ಟ್ರೀಯ ಚುನಾವಣಾ ಆಯೋಗ ಶೋಕಾಸ್​ ನೋಟಿಸ್​ ಕಳುಹಿಸಿದೆ. ಬಿಜೆಪಿ ಬುಧವಾರ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡಿದ ನಂತರ ಈ ಕ್ರಮ ಬಂದಿದೆ. ತನ್ನ ಚುನಾವಣಾ ಪ್ರಚಾರದ ಸಮಯದಲ್ಲಿ ಸುಳ್ಳು ಆರೋಪ ಮಾಡುವ … Continued

ಶಾಸಕ ರಮೇಶ ಜಾರಕಿಹೊಳಿಗೆ ಎಸ್‌ಐಟಿ ನೊಟೀಸ್‌

ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿಗೆ ಸಂಬಂಧಿಸಿದ್ದೆನ್ನಲಾದ ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್ಐಟಿ) ಅಧಿಕಾರಿಗಳು ಎಪ್ರಿಲ್‌ ೨೦ರಂದು ಸಂಜೆ ೪:೦೦ ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ರಮೇಶ ಜಾರಕಿಹೊಳಿ ಅವರಿಗೆ ನೊಟೀಸ್‌ ನೀಡಿದ್ದಾರೆ. ಎಸ್‌ಐಟಿಯ ಇಬ್ಬರು ಅಧಿಕಾರಿಗಳು ಶುಕ್ರವಾರ ಬೆಳಗಾವಿಗೆ ಭೇಟಿ ನೀಡಿ ಖುದ್ದಾಗಿ ನೊಟೀಸ್‌ ನೀಡಲು ಬಂದಿದ್ದರು. ಆದರೆ ಅಧಿಕಾರಿಗಳಿಗೆ ಶಾಸಕರು … Continued

ರಮೇಶ ಜಾರಕಿಹೊಳಿ ರಾಸಲೀಲೆ ಸಿಡಿ: ದೂರು ನೀಡಿದ ದಿನೇಶ್‌ ಕಲ್ಹಳ್ಳಿಗೆ ಇಂದು ನೋಟಿಸ್‌?

ಬೆಂಗಳೂರು: ರಮೇಶ್‌ ಜಾರಕಿಹೊಳಿ ಸೆಕ್ಸ್‌ ಸಿಡಿ ಬಯಲು ಮಾಡಿದ, ದೂರುದಾರ ದಿನೇಶ್‌ ಕಲ್ಲಹಳ್ಳಿಗೆ ಬುಧವಾರ ಸಂಜೆಯೊಳಗೆ ಕಬ್ಬನ್‌ ಪಾರ್ಕ್‌ ಪೊಲೀಸರು ನೋಟಿಸ್‌ ನೀಡಲಿದ್ದಾರೆ. ಸಂತ್ರಸ್ತೆ ಬಗ್ಗೆ ದೂರುದಾರ ದಿನೇಶ್‌ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕಬ್ಬನ್‌ ಪಾರ್ಕ್‌ ಪೊಲೀಸರು ನೋಟಿಸ್‌ ನೀಡಲಿದ್ದು, ಸಿಡಿ, ಸಂತ್ರಸ್ತೆ ಬಗ್ಗೆ ಮತ್ತಷ್ಟು ಮಾಹಿತಿ ನೀಡುವ ಕುರಿತು ಗುರುವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ನಲ್ಲಿ … Continued

ಹೊಸ ಡಿಜಿಟಲ್‌ ಮೀಡಿಯಾ ಕಾಯ್ದೆ ಅಡಿ ಮಣಿಪುರದಲ್ಲಿ ಪತ್ರಕರ್ತನಿಗೆ ಮೊದಲ ನೋಟಿಸ್‌

ಮಣಿಪುರ ಮೂಲದ ಪೋಜೆಲ್ ಚೌಬಾ ಎಂಬ ಪತ್ರಕರ್ತ ಸೋಮವಾರ ಹೊಸದಾಗಿ ಅಧಿಸೂಚನೆಗೊಂಡ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು, 2021 ರ ಅಡಿಯಲ್ಲಿ ರಾಜ್ಯ ಸರ್ಕಾರದಿಂದ ನೋಟಿಸ್ ಸ್ವೀಕರಿಸಿದ್ದಾರೆ. ಇವರ ಸಂಸ್ಥೆ, ದಿ ಫ್ರಾಂಟಿಯರ್ ಮಣಿಪುರ (ಟಿಎಫ್‌ಎಂ) ಆಗಿದ್ದು, ಇದು ಬಹುಶಃ ಹೊಸ ನಿಯಮಗಳ ಅಡಿಯಲ್ಲಿ ಮಾಧ್ಯಮವೊಂದಕ್ಕೆ ಕಳುಹಿಸಿದ ಮೊದಲ … Continued