ಬಿಹಾರ ಚುನಾವಣೆ | 2 ರಾಜ್ಯಗಳಲ್ಲಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ : ಪ್ರಶಾಂತ ಕಿಶೋರಗೆ ಚುನಾವಣಾ ಆಯೋಗ ನೋಟಿಸ್‌

ನವದೆಹಲಿ: ಬಿಹಾರ ಮತ್ತು ಪಶ್ಚಿಮ ಬಂಗಾಳ ಎರಡರಲ್ಲೂ ಮತದಾರರ ಗುರುತಿನ ಕಾರ್ಡ್‌ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಜನ ಸುರಾಜ್ ಪಕ್ಷದ ಸಂಸ್ಥಾಪಕ ಪ್ರಶಾಂತ ಕಿಶೋರ ಅವರಿಗೆ ನೋಟಿಸ್ ಜಾರಿ ಮಾಡಿದೆ. ಪಶ್ಚಿಮ ಬಂಗಾಳ ಮತ್ತು ಬಿಹಾರದ ಮತದಾರರ ಪಟ್ಟಿಯಲ್ಲಿ ಪ್ರಶಾಂತ ಕಿಶೋರ ಅವರ ಹೆಸರು ಕಾಣಿಸಿಕೊಂಡಿದೆ. ಬಿಹಾರ ವಿಧಾನಸಭಾ … Continued

ಕಾಂಗ್ರೆಸ್‌ ಶಾಸಕ ಶಿವಗಂಗಾ ಬಸವರಾಜುಗೆ ಶೋಕಾಸ್ ನೋಟಿಸ್

ಬೆಂಗಳೂರು: ಪದೇ ಪದೇ ಮುಖ್ಯಮಂತ್ರಿ ಬದಲಾವಣೆಯ ಹೇಳಿಕೆ ನೀಡಿ ಪಕ್ಷಕ್ಕೆ ಮುಜುಗರ ಉಂಟುಮಾಡಿದ ಕಾರಣಕ್ಕೆ ಶಾಸಕ ಬಸವರಾಜು ಶಿವಗಂಗಾ (Basavaraj Shivaganga) ಅವರಿಗೆ ಕಾರಣ ಕೇಳಿ ಕೆಪಿಸಿಸಿ ಶಿಸ್ತು ಸಮಿತಿ ನೋಟಿಸ್ (KPCC) ನೀಡಿದೆ. ಇವರು ಚನ್ನಗಿರಿಯ ಕಾಂಗ್ರೆಸ್ ಶಾಸಕರಾಗಿದ್ದು, ಡಿಕೆ ಶಿವಕುಮಾರ ಅವರ ಆಪ್ತಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾ ಅವರಿಗೆ … Continued

ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆಂಬ ಆರೋಪ ; ದಾಖಲೆ ನೀಡುವಂತೆ ರಾಹುಲ್​ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್

ಬೆಂಗಳೂರು : ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂದು ಆರೋಪಿಸಿರುವ ದಾಖಲೆಗಳನ್ನು ಸಲ್ಲಿಸುವಂತೆ ಕೋರಿದ್ದಾರೆ. ಈ ದಾಖಲೆಗಳು ವಿವರವಾದ ತನಿಖೆ ನಡೆಸಲು ಸಹಾಯ ಮಾಡುತ್ತದೆ ಎಂದು ರಾಹುಲ್‌ ಗಾಂಧಿಗೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ. ದೆಹಲಿಯಲ್ಲಿ ನಡೆದ … Continued

ನಕಲಿ ಮತದಾರರ ಗುರುತಿನ ಚೀಟಿಗಳ ಬಗ್ಗೆ ವಿವರ ನೀಡುವಂತೆ ಚುನಾವಣಾ ಆಯೋಗದಿಂದ ತೇಜಸ್ವಿ ಯಾದವಗೆ ನೋಟಿಸ್

ನವದೆಹಲಿ: ಬಿಹಾರದ ಮತದಾರರ ಪಟ್ಟಿಯಿಂದ ತಮ್ಮ ಹೆಸರನ್ನು ತೆಗೆದುಹಾಕಲಾಗಿದೆ ಎಂಬ ಹೇಳಿಕೆಯನ್ನು ಸಾಬೀತುಪಡಿಸುವಂತೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅವರಿಗೆ ಚುನಾವಣಾ ಆಯೋಗ ಸೂಚಿಸಿದೆ. ಹಾಗೂ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಉಲ್ಲೇಖಿಸಿದ ಎಪಿಕ್ ಕಾರ್ಡ್ ಸಂಖ್ಯೆಯನ್ನೂ ನೀಡುವಂತೆ ಕೋರಿದೆ. ತೇಜಸ್ವಿ ಯಾದವ್‌ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಇಲ್ಲ ಎಂದು ಶನಿವಾರ … Continued

ಸಿಎಂ ಬದಲಾವಣೆ ಕುರಿತು ಹೇಳಿಕೆ ; ಕಾಂಗ್ರೆಸ್‌ ಶಾಸಕ ಇಕ್ಬಾಲ್ ಹುಸೇನಗೆ ಕೆಪಿಸಿಸಿಯಿಂದ ಶೋಕಾಸ್ ನೋಟಿಸ್

ಬೆಂಗಳೂರು: ಡಿಕೆ ಶಿವಕುಮಾರ (DK Shivakumar) ಮುಖ್ಯಮಂತ್ರಿ ಆಗುವ ಕಾಲ ಹತ್ತಿರ ಇದೆ. ರಾಜ್ಯದಲ್ಲಿ ಮುಂದೆ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರಬೇಕು ಎಂದರೆ ಮುಖ್ಯಮಂತ್ರಿ ಬದಲಾಗಬೇಕು ಎಂದು ಹೇಳಿಕೆ ನೀಡಿದ್ದ ರಾಮನಗರದ ಶಾಸಕ ಇಕ್ಬಾಲ್‌ ಹುಸೇನ್‌ ಅವರಿಗೆ ಕೆಪಿಸಿಸಿಯಿಂದ ನೋಟಿಸ್‌ ಜಾರಿ ಮಾಡಲಾಗಿದೆ. ಮುಖ್ಯಮಂತ್ರಿಗಳ ಬದಲಾವಣೆ ವಿಚಾರವಾಗಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟುಮಾಡುವಂತಹ ಹೇಳಿಕೆ … Continued

ಪಕ್ಷದ ಶಿಸ್ತು ಉಲ್ಲಂಘನೆ ; ಶಿವರಾಮ ಹೆಬ್ಬಾರ, ಸೋಮಶೇಖರ ಸೇರಿ ರಾಜ್ಯದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್‌ ನೋಟಿಸ್‌

ನವದೆಹಲಿ: ಪಕ್ಷದ ಶಿಸ್ತು ಉಲ್ಲಂಘನೆ, ಪಕ್ಷದ ಇಮೇಜಿಗೆ ಧಕ್ಕೆ ಆಗುವಂತೆ ಬಹಿರಂಗವಾಗಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕದ ಐವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ನೋಟಿಸ್ ಜಾರಿ ಮಾಡಿದೆ. ಬಿಜೆಪಿಯ ಕೇಂದ್ರ ಶಿಸ್ತು ಸಮಿತಿಯು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ, ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖ‌ರ ಸೇರಿದಂತೆ ಐವರಿಗೆ ಕಾರಣ ಕೇಳಿ ನೋಟಿಸ್ ನೀಡಿದೆ. ಸಾರ್ವಜನಿಕ ವೇದಿಕೆಗಳಲ್ಲಿ … Continued

ಬಿಜೆಪಿ ಕೇಂದ್ರ ಶಿಸ್ತು ಸಮಿತಿಯಿಂದ ಬಸನಗೌಡ ಪಾಟೀಲ ಯತ್ನಾಳಗೆ ಶೋಕಾಸ್‌ ನೋಟಿಸ್…!

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗ ಸಮರ ಸಾರಿರುವ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಸೋಮವಾರ ಶೋಕಾಸ್‌ ನೋಟಿಸ್ ನೀಡಿದೆ. ಈ ಹಿಂದೆಯೂ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್‌ ನೀಡಿತ್ತು. ಅವರು ಅದಕ್ಕೆ ಅವರು ಉತ್ತರ ನೀಡಿದ್ದರು. … Continued

ವಿವಾದಾತ್ಮಕ ಹೇಳಿಕೆ: ವಿಚಾರಣೆಗೆ ಹಾಜರಾಗಲು ಚಂದ್ರಶೇಖರನಾಥ ಸ್ವಾಮೀಜಿಗೆ ನೋಟಿಸ್

ಬೆಂಗಳೂರು : ಮುಸ್ಲಿಮರಿಗೆ ಮತದಾನದ ಹಕ್ಕು ನಿರಾಕರಣೆ ಮಾಡುವ ಕಾನೂನು ತರಬೇಕು ಎಂದು ಹೇಳಿದ್ದ ವಿಶ್ವ ಒಕ್ಕಲಿಗ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಈಗ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಲಾಗಿದೆ ಎಂದು ವರದಿಯಾಗಿದೆ. ಡಿ.2ರಂದು ಬೆಳಗ್ಗೆ 11ಕ್ಕೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರಿಂದ ನೋಟಿಸ್ ಜಾರಿ … Continued

ಪಶ್ಚಿಮ ಘಟ್ಟದಲ್ಲಿ 2015ರ ನಂತರದ ಅರಣ್ಯ ಒತ್ತುವರಿ, ಅನಧಿಕೃತ ಹೋಮ್ ಸ್ಟೇ‌-ರೆಸಾರ್ಟ್ ತೆರವಿಗೆ ಅರಣ್ಯ ಸಚಿವರ ಸೂಚನೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರು ಹಾಗೂ ಕೇರಳದ ವಯನಾಡು ಭೂಕುಸಿತ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಪಶ್ಚಿಮ ಘಟ್ಟದ ಅರಣ್ಯ ಪ್ರದೇಶದಲ್ಲಿರುವ ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳನ್ನು ತೆರವುಗೊಳಿಸಲು ಮುಂದಾಗಿದೆ. ಪಶ್ಚಿಮ ಘಟ್ಟದಲ್ಲಿ (Western Ghats) 2015ರ ನಂತರ ಆಗಿರುವ ಎಲ್ಲ ಅರಣ್ಯ ಒತ್ತುವರಿ ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಕಟ್ಟುನಿಟ್ಟಿನ … Continued

ಪುಣೆ ಸ್ಫೋಟ ಪ್ರಕರಣ : ಭಟ್ಕಳದ ಯುವಕನ ಮನೆಗೆ ನೋಟಿಸ್ ಅಂಟಿಸಿದ ಮಹಾರಾಷ್ಟ್ರ ಎಟಿಎಸ್

ಭಟ್ಕಳ: ಮಹಾರಾಷ್ಟ್ರದ ಪುಣೆಯಲ್ಲಿ ನಡೆಸಿರುವ ಉಗ್ರ ಚಟುವಟಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿ ಭಟ್ಕಳ ನವಾಯತ ಕಾಲೋನಿಯ ಯುವಕನಿಗೆ ವಿಚಾರಣೆಗೆ ಹಾಜರಾಗುವಂತೆ ಮುಂಬೈ ಎಟಿಎಸ್ ತಂಡ ಮನೆಗೆ ನೋಟೀಸ್‌ ಅಂಟಿಸಿದೆ ಎಂದು ವರದಿಯಾಗಿದೆ. ಮೂಲತಃ ಭಟ್ಕಳ ನವಾಯತ್ ಕಾಲೋನಿ ಹಾಜಿ ಮಂಜಿಲ್ ನಿವಾಸಿಯಾಗಿರುವ ಅಬ್ದುಲ್ ಕಾದಿರ್ ಸುಲ್ತಾನ್‌ ಅಲಿಯಾಸ್ ಮೌಲಾನಾ ಸುಲ್ತಾನ ಎಂಬ ಶಂಕಿನ ಮೇಲೆ ಪುಣೆಯಲ್ಲಿ … Continued