ಸಾರಿಗೆ ಸಂಸ್ಥೆ ಬಸ್‌ ಟಿಕೆಟ್‌ ದರ ಹೆಚ್ಚಳ ? : ಸಿಎಂ ಡಿಕೆ ಶಿವಕುಮಾರ ಹೇಳಿದ್ದೇನು ?

ಬೆಂಗಳೂರು : ಡೀಸೆಲ್‌ ದರ ಏರಿಕೆ ಹಿನ್ನೆಲೆಯಲ್ಲಿ ಬಸ್‌ ಪ್ರಯಾಣ ದರ ಹೆಚ್ಚಳ ಮಾಡಲು ಸಾರಿಗೆ ನಿಗಮಗಳು ಪ್ರಸ್ತಾವನೆ ಸಲ್ಲಿಸಿದ್ದು, ಸಾರ್ವಜನಿಕರ ಹಿತದೃಷ್ಟಿ ಮತ್ತು ಸಾರಿಗೆ ನಿಗಮಗಳು ಉಳಿಯಬೇಕು. ಇವೆರಡನ್ನೂ ಪರಿಗಣಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ ಮಂಗಳವಾರ ಸಿಹಿ ಸುದ್ದಿ ನೀಡಿದ್ದು, ಕೆಎಸ್‌ಆರ್‌ಟಿಸಿ ಸೇರಿ ನಾಲ್ಕು ರಸ್ತೆ ಸಾರಿಗೆ ಸಂಸ್ಥೆಗಳ ನೌಕರರು, ಅಧಿಕಾರಿಗಳ ವೇತನ ಶೇಕಡಾ 12.5 ರಷ್ಟು ಪರಿಷ್ಕರಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ … Continued

ಗಣೇಶ ಹಬ್ಬ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ ಹೆಚ್ಚುವರಿ ಬಸ್

ಹುಬ್ಬಳ್ಳಿ: 2025 ನೇ ಸಾಲಿನ ಗಣೇಶ ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳುವುದರಿಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯಾಪ್ತಿಯ ಹುಬ್ಬಳ್ಳಿ, ಧಾರವಾಡ, ಗದಗ, ಬೆಳಗಾವಿ, ಉತ್ತರ ಕನ್ನಡ, ಹಾವೇರಿ, ಚಿಕ್ಕೋಡಿ ಮತ್ತು ಬಾಗಲಕೋಟೆ ವಿಭಾಗಗಳಿಂದ ಸುಮಾರು 265 ಹೆಚ್ಚುವರಿ ವಿಶೇಷ ಸಾರಿಗೆಗಳನ್ನು ಓಡಿಸಲಾಗುತ್ತಿದೆ. ಆಗಸ್ಟ್‌ 22ರಂದು ಶುಕ್ರವಾರ, 23ರಂದು ಬೆನಕನ … Continued

ವೀಡಿಯೊಗಳು…| ಎಸ್ಮಾ ಜಾರಿ, ವೇತನ ಕಡಿತ ಬೆದರಿಕೆಗೂ ಬಗ್ಗದ ಸಾರಿಗೆ ನೌಕರರು : ಮುಷ್ಕರ ಆರಂಭ

ಬೆಂಗಳೂರು: ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸಾರಿಗೆ ಸಂಸ್ಥೆಗಳ ನೌಕರರು ಮುಷ್ಕರವನ್ನು ಮಂಗಳವಾರ ಬೆಳಗ್ಗೆಯಿಂದ ಆರಂಭಿಸಿದ್ದಾರೆ. ಸಾರಿಗೆ ನೌಕರರ ಮುಷ್ಕರದ ಪರಿಣಾಮ ರಾಜ್ಯಾದ್ಯಂತ ಬಸ್ಸುಗಳು ರಸ್ತೆಗೆ ಇಳಿಯದ ಕಾರಣ ಬಸ್‌ ಸೇವೆ ವ್ಯತ್ಯಯವಾಗಿದ್ದು, ಹಲವಾರು ಪ್ರಯಾಣಿಕರು ಪರದಾಡುವಂತಾಗಿದೆ. ಮುಷ್ಕರವನ್ನು ಒಂದು ದಿನ ತಡೆ ಹಿಡಿಯುವಂತೆ ಹೈಕೋರ್ಟ್ … Continued

ಬಸ್‌ನಲ್ಲಿ ನಮಾಜ್‌ ಮಾಡಿದ ಚಾಲಕ ಅಮಾನತು ; ಕಾರ್ಮಿಕ ದಿನಾಚರಣೆಯಂದೇ ಸಸ್ಪೆಂಡ್‌

ಹುಬ್ಬಳ್ಳಿ : ಮಾರ್ಗ ಮಧ್ಯೆಯೇ ಬಸ್‌ ನಿಲ್ಲಿಸಿ ನಮಾಜ್‌ ಮಾಡಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಾಲಕನನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. (ಮೇ 1), ಕಾರ್ಮಿಕರ ದಿನಾಚರಣೆಯಂದೇ ಚಾಲಕ ಅಮಾನತುಗೊಂಡಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರೊಬ್ಬರು ಮಾರ್ಗ ಮಧ್ಯದಲ್ಲಿ ಬಸ್ ನಿಲ್ಲಿಸಿ ನಮಾಜ್ ಮಾಡಿದ ಘಟನೆ ಚರ್ಚೆಗೆ ಗ್ರಾಸವಾಗಿತ್ತು. ಹಾನಗಲ್ (Hangal) … Continued

ವೀಡಿಯೊ | ಮಾರ್ಗ ಮಧ್ಯೆ ಪ್ರಯಾಣಿಕರಿದ್ದ ವಾಯವ್ಯ ಸಾರಿಗೆ ಸಂಸ್ಥೆ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ ; ತನಿಖೆಗೆ ಆದೇಶ

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದರ ಚಾಲಕನೊಬ್ಬ ರಸ್ತೆಬದಿಯಲ್ಲಿ ಪ್ರಯಾಣಿಕರಿದ್ದ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದು, ಆತ ಬಸ್‌ ನಿಲ್ಲಿಸಿ ನಮಾಜ್‌ ಮಾಡಿದ ವಿಡಿಯೋ ವೈರಲ್‌ ಆದ ನಂತರ ತನಿಖೆಗೆ ಆದೇಶಿಸಲಾಗಿದೆ. ವೀಡಿಯೊದಲ್ಲಿ, ಬಸ್‌ ಚಾಲಕ ಆಸನದ ಮೇಲೆ ಕುಳಿತು ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು, ಬಸ್ ರಸ್ತೆಯ ಪಕ್ಕದಲ್ಲಿ ನಿಂತಿರುವಾಗ ಸಂಚಾರ ದಟ್ಟಣೆಯಿಂದ ಕೂಡಿರುವುದನ್ನು ಹಾಗೂ ಬಸ್ಸಿನಲ್ಲಿದ್ದ … Continued

ಬಸ್ ಟಿಕೆಟ್ ದರ ಹೆಚ್ಚಳ ; ಇಂದಿನಿಂದಲೇ (ಜನವರಿ 5) ಜಾರಿ

ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನಿಗಮಗಳ ಟಿಕೆಟ್‌ ದರದಲ್ಲಿ ಶೇ. 15ರಷ್ಟು ಏರಿಕೆ ಮಾಡಿದ್ದು, ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾಲ್ಕು ರಸ್ತೆ ಸಾರಿಗೆ ನಿಗಮಗಳಿಗೆ ಇಂದು (ಜನವರಿ 5) ಮಧ್ಯರಾತ್ರಿಯಿಂದ ಶೇ 15ರಷ್ಟು ಏರಿಕೆಯ ಪರಿಷ್ಕೃತ ದರ ಅನ್ವಯವಾಗಲಿದೆ. ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), … Continued

ಎನ್‌ ಡಬ್ಲ್ಯು ಕೆ ಆರ್‌ ಟಿ ಸಿಯಿಂದ ಜೋಗ ಜಲಪಾತ, ಗೋಕಾಕ ಫಾಲ್ಸ್​, ದಾಂಡೇಲಿಗೆ ವಿಶೇಷ ʼಪ್ಯಾಕೇಜ್‌ ಟೂರ್ʼ

ಹುಬ್ಬಳ್ಳಿ : ಪ್ರಸ್ತುತ ಮಳೆಗಾಲದ ದಿನಗಳು ಪ್ರಾರಂಭವಾಗಿರುವುದರಿಂದ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಹಿನ್ನೆಲೆಯಲ್ಲಿ ಐತಿಹಾಸಿಕ ಪ್ರಸಿದ್ಧ ಸ್ಥಳಗಳಿಗೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳ ವಿವಿಧ ಘಟಕಗಳಿಂದ ಭಾನುವಾರ ಮತ್ತು ರಜಾ ದಿನಗಳಂದು ವಿಶೇಷ “ಪ್ಯಾಕೇಜ ಟೂರ್” ಸಾರಿಗೆ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ. ಈ ವಿಶೇಷ ಸಾರಿಗೆಗಳಲ್ಲಿ ಮಹಿಳಾ … Continued

ಎನ್‌ಡಬ್ಲ್ಯು ಕೆಆರ್‌ಟಿಸಿಯಲ್ಲಿ ಟಿಕೆಟಿಗೆ ಹಣ ಪಾವತಿಸಲು ಯುಪಿಐ ವ್ಯವಸ್ಥೆ…!

ಹುಬ್ಬಳ್ಳಿ : ಸಾರಿಗೆ ಇಲಾಖೆಯು ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಸಾರಿಗೆ ಇಲಾಖೆಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (NWKRTC) ಇನ್ನುಮುಂದೆ ಬಸ್‌ಗಳಲ್ಲಿ ಟಿಕೆಟ್‌ ಖರೀದಿಸಲು UPI ಮೂಲಕ ಹಣ ಪಾವತಿ ಮಾಡುವ ವ್ಯವಸ್ಥೆಯನ್ನು ಪ್ರಾರಂಭ ಮಾಡಿದೆ. ಈ ಕುರಿತು ಟ್ವೀಟ್‌ ಮಾಡಿರುವ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು , ವಾಯುವ್ಯ ಕರ್ನಾಟಕ ರಸ್ತೆ … Continued

ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

ಹುಬ್ಬಳ್ಳಿ : ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಮಾರ್ಚ್ 31ರಿಂದ ಏಪ್ರಿಲ್ 15ರ ವರೆಗೆ ನಡೆಯಲಿದೆ. ಹಲವಾರು ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಬದಲಾಗಿ ಬೇರೆ ವಿದ್ಯಾಕೆಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ನಿಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ … Continued