ಲಡಾಕಿನ ಲೇಹದಲ್ಲಿ ಜಗತ್ತಿನ ಅತಿ ದೊಡ್ಡ ಖಾದಿ ರಾಷ್ಟ್ರಧ್ವಜದ ಅನಾವರಣ

ನವದೆಹಲಿ: ಖಾದಿ ಬಟ್ಟೆಯಲ್ಲಿ ರಚಿಸಲಾದ ಜಗತ್ತಿನ ಅತಿ ದೊಡ್ಡ ರಾಷ್ಟ್ರಧ್ವಜವನ್ನು ಮಹಾತ್ಮ ಗಾಂಧೀಜಿಯವರ 152ನೇ ಜನ್ಮದಿನವಾದ ಅಕ್ಟೋಬರ್‌ 2ರಂದು ಲಡಾಕಿನ ಲೇಹದಲ್ಲಿ ಅನಾವರಣಗೊಳಿಸಲಾಯಿತು. ಲಡಾಕ್ ನ ಲೆಫ್ಟಿನೆಂಟ್ ಗವರ್ನರ್ ಆರ್.ಕೆ. ಮಾಥುರ್ ನೂತನ ರಾಷ್ಟಧ್ವಜವನ್ನು ಅರಳಿಸಿದರು. 225 ಅಡಿ ಉದ್ದ ಹಾಗೂ 150 ಅಡಿ ಅಗಲದ ಈ ತ್ರಿವರ್ಣ ಧ್ವಜವು 1 ಸಾವಿರ ಕೆ.ಜಿ. ಭಾರವಿದೆ. … Continued