ಹಿಂದೂಗಳನ್ನು ಅಧಿಕಾರಕ್ಕೆ ತನ್ನಿ ಎಂಬ ರಾಹುಲ್‌ ಗಾಂಧಿ ಹೇಳಿಕೆಗೆ ಕಾಂಗ್ರೆಸ್ಸಿನ ಜಾತ್ಯತೀತತೆ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದ ಓವೈಸಿ

ನವದೆಹಲಿ: ಭಾನುವಾರ ರಾಜಸ್ಥಾನದ ಜೈಪುರದಲ್ಲಿ ಕಾಂಗ್ರೆಸ್‌ನ ‘ಹಣದುಬ್ಬರ ತೊಲಗಿಸಿ ರ‍್ಯಾಲಿ’ಯಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಹಿಂದುತ್ವವಾದಿಗಳನ್ನು ಅಧಿಕಾರದಿಂದ ತೆಗೆದುಹಾಕಿ ಹಿಂದೂಗಳನ್ನು ಮರಳಿ ಕರೆತರುವಂತೆ ವೇದಿಕೆಯಲ್ಲಿ ಮನವಿ ಮಾಡಿದ್ದಾರೆ. ರಾಹುಲ್‌ ಗಾಂಧಿಯವರ ಈ ಮನವಿಗೆ ಟೀಕಿಸಿರುವ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಮುಖಂಡ ಅಸಾದುದ್ದೀನ್ ಓವೈಸಿ ಭಾರತ ಕೇವಲ ಹಿಂದೂಗಳಿಗೆ ಮಾತ್ರವಲ್ಲ, ಪ್ರತಿಯೊಬ್ಬ ಭಾರತೀಯನಿಗೂ ಸೇರಿದೆ … Continued