ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ; ಕಾನೂನು ತಜ್ಞರೊಂದಿಗೆ ಚರ್ಚಿಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ ಕಾನೂನು ಹಾಗೂ ಸಂವಿಧಾನ ತಜ್ಞರೊಂದಿಗೆ ಸಭೆ ಕರೆದು ಸಂವಿಧಾನಾತ್ಮಕ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಪಂಚಮಸಾಲಿ ಸಮುದಾಯವನ್ನು 2ಎ ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸಲು ಜಯ ಮೃತ್ಯುಂಜಯ … Continued

ಪಂಚಮಸಾಲಿ ಮೀಸಲಾತಿ ವಿಚಾರ; ಯಥಾಸ್ಥಿತಿ ಆದೇಶ ತೆರವುಗೊಳಿಸಿದ ಹೈಕೋರ್ಟ್

ಬೆಂಗಳೂರು: ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಕಲ್ಪಿಸುವ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ಗುರುವಾರ ತೆರವುಗೊಳಿಸಿದ್ದು, ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಮೀಸಲು ಕಲ್ಪಿಸುವ ಸಂಬಂಧ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಇತ್ತೀಚೆಗೆ ಸಲ್ಲಿಸಿರುವ ಮಧ್ಯಂತರ ವರದಿಯನ್ನು … Continued

ಪಂಚಮಸಾಲಿ ಮೀಸಲಾತಿ ಪ್ರಕರಣ: ನ್ಯಾ. ಸುಭಾಷ್‌ ಆಡಿ ನೇತೃತ್ವದ ಸಮಿತಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ವೀರಶೈವ-ಲಿಂಗಾಯತ ಪಂಚಮಸಾಲಿ ಉಪ ಪಂಗಡವನ್ನು 3ಎ ಪ್ರವರ್ಗದಿಂದ 2ಎಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿ ವರದಿ ಸಲ್ಲಿಸಲು ರಾಜ್ಯ ಸರ್ಕಾರ ರಚಿಸಿರುವ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಆಕ್ಷೇಪಣೆ ಸಲ್ಲಿಸಲು ಬುಧವಾರ ನೋಟಿಸ್‌ ಜಾರಿ ಮಾಡಿರುವ ಕರ್ನಾಟಕ ಹೈಕೋರ್ಟ್‌, ವಿಚಾರಣೆಯನ್ನು ಒಂದು ವಾರ ಕಾಲ ಮುಂದೂಡಿದೆ ಎಂದು ಬಾರ್‌ … Continued

ಪಂಚಮಸಾಲಿ ಮೀಸಲು ಹೋರಾಟ ತಾತ್ಕಾಲಿಕ ಸ್ಥಗಿತ: ಸರ್ಕಾರ ಮಾತು ತಪ್ಪಿದರೆ ಮತ್ತೆ ಹೋರಾಟ

ಬೆಂಗಳೂರು: ರಾಜ್ಯ ಸರ್ಕಾರದ ಭರವಸೆ ಮೇಲೆ ಪಂಚಮಸಾಲಿ ಮೀಸಲಾತಿ ಹೋರಾಟವನ್ನು ಆರು ತಿಂಗಳ ಅವಧಿ ವರೆಗೆ ತಾತ್ಕಾಲಿಕವಾಗಿ ಹಿಂಪಡೆಯಲಾಗಿದೆ. ಸರ್ಕಾರ  ಕ್ರಮ ಕೈಗೊಳ್ಳದಿದ್ದರೆ ಮತ್ತೆ ಹೋರಾಟ ಆರಂಭವಾಗಲಿದೆ ಎಂದು ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ. ಬುಧವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಬೇಡಿಕೆಗೆ “ಸರ್ಕಾರ ಆರು ತಿಂಗಳ … Continued

ಪಂಚಮಸಾಲಿಗಳಿಗೆ ೨ಎ ಮೀಸಲು: ಫ್ರೀಡಂಪಾರ್ಕಿನಲ್ಲಿ ಸತ್ಯಾಗ್ರಹ

ಬೆಂಗಳೂರು: ಪಂಚಮಸಾಲಿ ಸಮಾಜವು 2ಎ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮಾರ್ಚ್ 4ರೊಳಗೆ 2ಎ ಮೀಸಲಾತಿ ನೀಡದಿದ್ದರೆ ಅಮರಣಾಂತ ಉಪವಾಸ ಕೈಗೊಳ್ಳುವುದಾಗಿ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ಎಚ್ಚರಿಕೆ ನೀಡಿದ್ದಾರೆ. ಸೋಮವಾರದಿಂದ ಫ್ರೀಡಂಪಾರ್ಕ್‍ನಲ್ಲಿ ಸತ್ಯಾಗ್ರಹ ಆರಂಭಗೊಂಡಿದ್ದು, ಮಾ.4ರೊಳಗೆ 2ಎ ಮೀಸಲಾತಿ ದೊರೆಯದ್ದಿರೆ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ಹೇಳಿದ್ದಾರೆ. ಕೂಡಲಸಂಗಮದಿಂದ ಬೆಂಗಳೂರು ವರೆಗೆ ನಡೆಸಿ … Continued

ಪಂಚಮಸಾಲಿ ಮೀಸಲಾತಿಗೆ ನನ್ನ ಸಂಪೂರ್ಣ ಬೆಂಬಲ

ಬೆಂಗಳೂರು: ಮೀಸಲಾತಿ ನೀಡಬೇಕೆನ್ನುವುದರಲ್ಲಿ ನನ್ನ ಸಂಪೂರ್ಣ ಬೆಂಬಲ ಇದೆ. ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದಿರುವ, ಕಡುಬಡವರಾಗಿರುವ ವೀರಶೈವ-ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗಲೇಬೇಕು ಎಂದು ಸಚಿವ ಮುರುಗೇಶ್‍ ನಿರಾಣಿ ಹೇಳಿದರು. ಇದಕ್ಕೆ ನಮ್ಮ ಅಭ್ಯಂತರ ಇಲ್ಲವೇ ಇಲ್ಲ. ಹಿಂದೆ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದಾಗಲೇ , ಮೀಸಲಾತಿ ಕುರಿತಂತೆ ಸಮಿತಿ ರಚಿಸಿದ್ದರು. ಆಗ ವರದಿ ಬರುವ ಮುಂಚೆಯೇ … Continued