ಮೀಸಲಾತಿ ಘೋಷಣೆ: ಹಿಂದುಳಿದ ವರ್ಗಗಳ ಆಯೋಗದ ಅಂತಿಮ ವರದಿಯಿಂದ ಎಲ್ಲದಕ್ಕೂ ಸ್ಪಷ್ಟತೆ ಸಿಗಲಿದೆ-ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ತೊಡಕಿಲ್ಲ, ಹಿಂದುಳಿದ ವರ್ಗಗಳ ಆಯೋಗದ ಅಂತಿಮ ವರದಿ ನಂತರ ಎಲ್ಲ ಸ್ಪಷ್ಟತೆಯೂ ಸಿಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಪಂಚಮಸಾಲಿ, ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ನೀಡಲು ಸಂವಿಧಾನಾತ್ಮಕವಾಗಿ ತೊಡಕಿಲ್ಲ. ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಮಧ್ಯಂತರ ವರದಿ ನೀಡಿದೆ. ಆಯೋಗವು … Continued

ಸದನದಲ್ಲಿ ಸಿಎಂ ಭರವಸೆ: ಪಂಚಮಸಾಲಿ ಮೀಸಲು ಹೋರಾಟ ತಾತ್ಕಾಲಿಕ ಕೈಬಿಟ್ಟ ಸ್ವಾಮೀಜಿ

ಬೆಂಗಳೂರು: ಸರ್ಕಾರ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೋರಿ ಕೂಡಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ತಾತ್ಕಾಲಿಕ ವಿರಾಮ ಬಿದ್ದಿದೆ. ಇದನ್ನು ಖಚಿತ ಪಡಿಸಿರುವ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಸರ್ಕಾರ ಈ ನಿಟ್ಟಿನಲ್ಲಿ ಪ್ರಯತ್ನಿಸುವ ಸ್ಪಷ್ಟ ಭರವಸೆ ನೀಡಿದ ಹಿನ್ನೆಲೆಯಲ್ಲಿ ‘ಪಂಚಮಸಾಲಿ ಮೀಸಲಾತಿ ಹೋರಾಟವನ್ನ ತಾತ್ಕಾಲಿಕವಾಗಿ ಕೈಬಿಡುತ್ತಿದ್ದೇವೆ ಎಂದರು. ವಿಜಯಪುರ … Continued

 ಪಂಚಮಸಾಲಿ ೨ಎಗೆ ಸೇರ್ಪಡೆ: ಮಾ.೨೨ರಂದು ಸಾಕ್ಷ್ಯಾಧಾರ ಸಲ್ಲಿಸಲು ಕೂಡಲಸಂಗಮ ಶ್ರೀ -ವಚನಾನಂದ ಶ್ರೀಗಳಿಗೆ ಆಯೋಗದಿಂದ ಪತ್ರ

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ೨ಎಗೆ ಸೇರ್ಪಡೆ ಮಾಡುವ ಕುರಿತು ಶ್ರೀ ಜಯ ಬಸವ ಮೃತ್ಯುಂಜಯ ಸ್ವಾಮಿಗಳು ಹಾಗೂ   ವಚನಾನಂದ ಶ್ರೀಗಳಿಗೆ ದಾಖಲೆಗಳನ್ನು ನೀಡುವಂತೆ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಪತ್ರ ಬರೆದಿದೆ. ಮಾಚ್೯ ೨೨ ರಂದು ( ಸೋಮವಾರ) ಸೂಕ್ತ ಸಾಕ್ಷ್ಯಾಧಾರಗಳನ್ನು ಆಯೋಗಕ್ಕೆ ನೀಡಬೇಕೆಂದು ಕೂಡಲಸಂಗಮದ ಜಯ ಬಸವ ಮೃತ್ಯುಂಜಯ ಶ್ರೀಗಳು ಹಾಗೂ … Continued

ಆರೋಪ-ಪ್ರತ್ಯಾರೋಪ ಬಿಟ್ಟು ಪಂಚಮಸಾಲಿ ಸಮಾಜ ೨ಎ ಸೇರ್ಪಡೆಗೆ ಒಂದಾಗಿ

ಬೆಂಗಳೂರು:ಪರಸ್ಪರ ಆರೋಪ-ಪ್ರತ್ಯಾರೋಪಗಳನ್ನು ಬಿಟ್ಟು ಸಮುದಾಯದ ಹಿತಕ್ಕಾಗಿ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲು ಪಕ್ಷಾತೀತವಾಗಿ ಹೋರಾಡಬೇಕೆಂದು ಕರ್ನಾಟಕ ರಾಜ್ಯ ವೀರಶೈವ ಪಂಚಮಸಾಲಿ ಸಂಘ ಒತ್ತಾಯಿಸಿದೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ನಿಕಟಪೂರ್ವ ಅಧ್ಯಕ್ಷ ಬಸವರಾಜ್ ದಿಂಡೂರು, ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲು ನಮ್ಮಲ್ಲಿ ಒಡಕು ಮೂಡುವುದು ಸರಿಯಲ್ಲ. ಸಮುದಾಯದ ಹಿತಕ್ಕಾಗಿ ಎಲ್ಲರೂ ಕೈ ಜೋಡಿಸಬೇಕು … Continued

ಪಂಚಮಸಾಲಿ ಸಮಾಜ ೨ಎಗೆ ಸೇರ್ಪಡೆ: ಇಂದು ಸಂಜೆ ಮಹತ್ವದ ಸಭೆ

ಬೆಂಗಳೂರು: ಲಿಂಗಾಯಿತ ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲೇಬೇಕೆಂಬ ಹಿನ್ನೆಲೆಯಲ್ಲಿ ಮುಂದೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಇಂದು (ಫೆ.೨೫ರಂದು) ಸಂಜೆ ಮಹತ್ವದ ಸಭೆ ಇಲ್ಲಿ ನಡೆಯಲಿದೆ. ಈ ಸಭೆಗೆ ಸಚಿವರು, ಶಾಸಕರು, ಸಮಾಜದ ಮುಖಂಡರು ಸೇರಿದಂತೆ ಅನೇಕರನ್ನು ಕೂಡಲಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿಗಳು ಆಹ್ವಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ … Continued

ಪಂಚಮಸಾಲಿ ಸಮುದಾಯ 2ಎ ಸೇರ್ಪಡೆಗೆ ವಿರೋಧವಿಲ್ಲ: ಸಚಿವ ಶೆಟ್ಟರ

ಬೆಂಗಳೂರು: ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗಿರುವಂತೆ ಪಂಚಮಸಾಲಿ ಸಮುದಾಯವನ್ನು 2ಎ ಗೆ ಸೇರಿಸುವ ವಿಷಯದಲ್ಲಿ ತಾವು ವಿರೋಧ ವ್ಯಕ್ತಪಡಿಸಿಲ್ಲ. ಅಲ್ಲದೆ, ಪಂಚಮಸಾಲಿ ಸಮುದಾಯ 2ಎ ಗೆ ಸೇರಬೇಕು ಎನ್ನುವ ನಿಲುವು ನನ್ನದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಸಚಿವ ಸಂಪುಟ … Continued

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ: ವರದಿ ನೀಡಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ

ಬೆಂಗಳೂರು: ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದಿಂದ ಹೋರಾಟ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಮಗ್ರ ಅಧ್ಯಯನ ಮಾಡಿ ವರದಿ ಸಲ್ಲಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಆಯೋಗಕ್ಕೆ ಸೂಚನೆ ನೀಡಿದೆ. ಕರ್ನಾಟಕ ರಾಜ್ಯದ ಲಿಂಗಾಯತ ಪಂಚಮಸಾಲಿ ಜನಾಂಗದಿಂದ ತಮ್ಮ ಜನಾಂಗವನ್ನು ಪ್ರವರ್ಗ 2ಎ ಗೆ ಸೇರಿಸುವಂತೆ ಕೋರಿ ಮನವಿಗಳು ಸರ್ಕಾರಕ್ಕೆ ಸಲ್ಲಿಕೆಯಾಗಿವೆ. ರಾಜ್ಯದ ಪಂಚಮಸಾಲಿ ಜನಾಂಗದವರು … Continued

ಫೆ.೨೧ರಂದು ಬೆಂಗಳೂರು ಅರಮನೆ ಮೈದಾನದಲ್ಲಿ ಪಂಚಸಾಲಿಗಳ ಬೃಹತ್‌ ಸಮಾವೇಶ

ತುಮಕೂರು: ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ೨ಎ ಮೀಸಲಾತಿಗಾಗಿ ಆಗ್ರಹಿಸಿ ಪಾದಯಾತ್ರೆ ಕೈಗೊಂಡಿದ್ದು, ಫೆ. ೨೧ ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸುವ ತೀರ್ಮಾನವನ್ನು ಕೈಗೊಂಡಿದೆ. ನಗರದ ಸಿದ್ದಗಂಗಾ ಮಠದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದ ಪಾದಯಾತ್ರಿಗಳುಶುಕ್ರವಾರ ಬೆಳಿಗ್ಗೆ ಶ್ರೀ ಬಸವ ಮೃತ್ಯುಂಜಯ ಸ್ವಾಮೀಜಿ, ವಚನಾನಂದ ಸ್ವಾಮೀಜಿ ಹಾಗೂ ವಿಜಯಾನಂದ ಕಾಶಪ್ಪನವರ್ ನೇತೃತ್ವದಲ್ಲಿ ಸಭೆ ನಡೆಸಿ … Continued

ಪಂಚಮಸಾಲಿಗೆ 2ಎ ಮೀಸಲು: ವರದಿ ಬಂದ ನಂತರ ಕ್ರಮ

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಿಂದುಳಿದ ವರ್ಗಗಳ ಆಯೋಗಕ್ಕೆ ಪ್ರಸ್ತಾವನೆ ಕಳುಹಿಸಿಕೊಟ್ಟಿದ್ದಾರೆ. ಆಯೋಗದಿಂದ ಶಿಫಾರಸು ಬಂದ ಕೂಡಲೇ ಕ್ರಮ ಕೈಗೊಳ್ಳಲಾಗುವುದು … Continued