ಖ್ಯಾತ ಸರೋದ್ ವಾದಕ ಪಂಡಿತ ರಾಜೀವ ತಾರಾನಾಥ ನಿಧನ

ಮೈಸೂರು : ಖ್ಯಾತ ಸರೋದ್ ವಾದಕ ಪಂಡಿತ ರಾಜೀವ ತಾರಾನಾಥ (93) ಅವರು ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು ಮಂಗಳವಾರ (ಜೂನ್ 11) ನಿಧನರಾಗಿದ್ದಾರೆ. ಕುವೆಂ‍ಪು ನಗರದ ಪಂಚಮಂತ್ರ ರಸ್ತೆಯಲ್ಲಿರುವ ನಿವಾಸದಲ್ಲಿ, ತಿಂಗಳ ಹಿಂದೆ ಕುಸಿದು ಬಿದ್ದು ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಯಲ್ಲಿ ಅವರಿಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ಚೇತರಿಸಕೊಳ್ಳುತ್ತಿದ್ದರು. … Continued