ಸಂಸತ್ತಿನ ಭದ್ರತಾ ಉಲ್ಲಂಘನೆ ಪ್ರಕರಣ : ಪ್ರಧಾನಿ ಮೋದಿ ‘ಕಾಣೆಯಾದ ವ್ಯಕ್ತಿ’ ಎಂಬ ಕರಪತ್ರ ಹೊಂದಿದ್ದ ಆರೋಪಿಗಳು ; ಪೊಲೀಸರು

ನವದೆಹಲಿ: ಸಂಸತ್ತಿನ ಭದ್ರತಾ ಉಲ್ಲಂಘನೆ ಮಾಡಿದ ಆರೋಪಿಗಳು ಕರಪತ್ರಗಳನ್ನು ಹೊತ್ತೊಯ್ದಿದ್ದು, ಅದರಲ್ಲಿ ಅವರು ಪ್ರಧಾನಿ ನರೇಂದ್ರ ಮೋದಿಯನ್ನು “ಕಾಣೆಯಾದ” ವ್ಯಕ್ತಿ ಎಂದು ಕರೆದಿದ್ದಾರೆ ಮತ್ತು ಅವರನ್ನು ಪತ್ತೆ ಮಾಡಿದವರಿಗೆ ಸ್ವಿಸ್ ಬ್ಯಾಂಕ್‌ನಿಂದ ಬಹುಮಾನ ಘೋಷಿಸಲಾಗಿದೆ ಎಂದು ಹೇಳಲಾಗಿದೆ ಎಂದು ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ (ಎಪಿಪಿ) ಗುರುವಾರ ದೆಹಲಿ ನ್ಯಾಯಾಲಯಕ್ಕೆ ತಿಳಿಸಿದರು. “ಅವರನ್ನು (ಮೋದಿ) ಘೋಷಿತ ಅಪರಾಧಿಯಂತೆ … Continued

ಲೋಕಸಭೆಗೆ ಗೈರಾಗಿದ್ದ ಡಿಎಂಕೆ ಸಂಸದ ಪಾರ್ಥಿಬನ್ ತಪ್ಪಾಗಿ ಅಮಾನತು: ನಂತರ ಸ್ಪಷ್ಟಪಡಿಸಿದ ಸರ್ಕಾರ

ನವದೆಹಲಿ: ಸದನ ನಡೆಯಲು ಅಡ್ಡಿಪಡಿಸಿದ್ದಕ್ಕಾಗಿ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಗುರುವಾರ ಅಮಾನತುಗೊಂಡ 14 ವಿರೋಧ ಪಕ್ಷದ ಸಂಸದರಲ್ಲಿ ಡಿಎಂಕೆ ನಾಯಕ ಎಸ್.ಆರ್ ಪಾರ್ಥಿಬನ್ ಅವರ ಹೆಸರು ಸೇರಿದೆ. ಪಾರ್ಥಿಬನ್ ಸೇರ್ಪಡೆ ‘ತಪ್ಪಾದ ಗುರುತಿನ’ ಪ್ರಕರಣ ಎಂದು ಸರ್ಕಾರ ನಂತರ ಸ್ಪಷ್ಟಪಡಿಸಿದೆ. ಹಾಗೂ ಅವರ ಅಮಾನತನ್ನು ಹಿಂಪಡೆದಿದೆ. ಒಟ್ಟಾರೆಯಾಗಿ ವಿಪಕ್ಷಗಳ 13 ಸಂಸದರನ್ನು ಲೋಕಸಭೆಯಿಂದ … Continued

ಸಂಸತ್ ಭದ್ರತಾ ಲೋಪ: ಇ-ರಿಕ್ಷಾ ಚಾಲಕನಿಂದ ಇಂಜಿನಿಯರ್ ವರೆಗೆ ಆರು ಆರೋಪಿಗಳು ಯಾರು…?

ನವದೆಹಲಿ: ಸಂಸತ್ತಿನಲ್ಲಿ ಬುಧವಾರ ನಡೆದ ಅಭೂತಪೂರ್ವ ಭದ್ರತಾ ಉಲ್ಲಂಘನೆಯ ಆರೋಪಿಗಳು ವಿವಿಧ ಶೈಕ್ಷಣಿಕ ಹಿನ್ನೆಲೆಗಳು, ಸಮಾಜದ ವಿವಿಧ ಸ್ತರಗಳಿಂದ ಬಂದವರು ಮತ್ತು ದೇಶದ ವಿವಿಧ ಪ್ರದೇಶಗಳಿಗೆ ಸೇರಿದವರಾಗಿದ್ದಾರೆ. ಮೇಲ್ನೋಟಕ್ಕೆ ಆರೋಪಿಗಳಾದ ಸಾಗರ ಶರ್ಮಾ, ನೀಲಂ ಆಜಾದ್, ಮನೋರಂಜನ ಡಿ, ಅಮೋಲ್ ಶಿಂಧೆ, ವಿಕ್ಕಿ ಶರ್ಮಾ ಮತ್ತು ಲಲಿತ್ ಝಾ ನಡುವೆ ಯಾವುದೇ ಸಾಮಾನ್ಯ ಉದ್ದೇಶಗಳಿಲ್ಲ ಎಂದು … Continued

ಸಂಸತ್‌ ಭದ್ರತಾ ಲೋಪ ಪ್ರಕರಣ: ಎಂಟು ಸಿಬ್ಬಂದಿ ಅಮಾನತು ಮಾಡಿದ ಲೋಕಸಭೆ ಸಚಿವಾಲಯ

ನವದೆಹಲಿ: ಸಂಸತ್ತಿನಲ್ಲಿ ಬುಧವಾರ ಸಂಭವಿಸಿದ ಭಾರಿ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಲೋಕಸಭೆ ಸಚಿವಾಲಯ ಎಂಟು ಭದ್ರತಾ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ, ಇಬ್ಬರು ವ್ಯಕ್ತಿಗಳು ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಸದನಕ್ಕೆ ಹಾರಿ ಹಳದಿ ಹೊಗೆಯ ಡಬ್ಬಿಗಳನ್ನು ಎಸೆದಿದ್ದರು. ಭದ್ರತಾ ಸಿಬ್ಬಂದಿಯ ಅಮಾನತು ಭದ್ರತಾ ಉಲ್ಲಂಘನೆಯ ಹಿನ್ನೆಲೆಯಲ್ಲಿ ಸಚಿವಾಲಯವು ತೆಗೆದುಕೊಂಡ ಮೊದಲ ಮಹತ್ವದ ಕ್ರಮವನ್ನು ಸೂಚಿಸುತ್ತದೆ. ಭದ್ರತೆಯಲ್ಲಿನ ಅಭೂತಪೂರ್ವ ಲೋಪವು … Continued

ಸಂಸತ್‌ನಲ್ಲಿ ಭದ್ರತಾ ಲೋಪ: ಯುಎಪಿಎ ಅಡಿ ಪ್ರಕರಣ ದಾಖಲಿಸಿದ ದೆಹಲಿ ಪೊಲೀಸರು

ನವದೆಹಲಿ: ಸಂಸತ್‌ ಮೇಲಿನ ದಾಳಿಯ 22ನೇ ವರ್ಷದ ಕಹಿ ನೆನಪಿನ ದಿನವೇ ಲೋಕಸಭೆಯಲ್ಲಿ ಭಾರಿ ಭದ್ರತಾ ಲೋಪದ ನಡೆದಿದ್ದು, ಘಟನೆ ಸಂಬಂಧ ದೆಹಲಿ ಪೊಲೀಸ್ ವಿಶೇಷ ವಿಭಾಗ ಕಾನೂನುಬಾಹಿರ ಚಟುವಟಿಕೆಗಳ ‌ತಡೆಗಟ್ಟುವಿಕೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಘಟನೆಯಲ್ಲಿ ಒಟ್ಟು ಆರು ಮಂದಿ ಭಾಗಿಯಾಗಿದ್ದು, ಅವರೆಲ್ಲರೂ ಸಾಮಾಜಿಕ ಮಾಧ್ಯಮಗಳಲ್ಲಿ … Continued

ಸಂಸತ್ ಭದ್ರತಾ ಲೋಪದ ಘಟನೆ : ಲೋಕಸಭೆಯಲ್ಲಿ ಒಳನುಗ್ಗಿದ ಪ್ರಕರಣದಲ್ಲಿ ಆರು ಮಂದಿ ಭಾಗಿ, 5 ಮಂದಿ ಬಂಧನ, ಮತ್ತೊಬ್ಬನಿಗಾಗಿ ಶೋಧ

ನವದೆಹಲಿ : ಲೋಕಸಭೆಯ ಸಭಾಂಗಣದ ಒಳಗೆ ಭದ್ರತೆಯನ್ನು ಉಲ್ಲಂಘಿಸಿದ ಇಬ್ಬರು ಮತ್ತು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ ನಾಲ್ವರು ಸಾಮಾಜಿಕ ಮಾಧ್ಯಮಗಳ ಮೂಲಕ ಪರಸ್ಪರ ಗೊತ್ತಿರುವವರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ ಎಂದು ವರದಿಯೊಂದು ಹೇಳಿದೆ. ಪ್ರಮುಖ ಭದ್ರತಾ ಲೋಪದಲ್ಲಿ, ಲೋಕಸಭೆಯ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ ಇಬ್ಬರು ಸದನದ ಅಧಿವೇಶನ ನಡೆಯುತ್ತಿರುವಾಗ ಲೋಕಸಭೆಯ ಕೊಠಡಿಗೆ ಹಾರಿದ್ದಾರೆ. ಅವರು … Continued

ಸಂಸತ್​ ಸದನದಲ್ಲಿ ಭಾರಿ ಭದ್ರತಾ ಲೋಪ: 4 ಮಂದಿ ಬಂಧನ, 2 ಘಟನೆ, ಮೈಸೂರಿನ ನಂಟು

ನವದೆಹಲಿ: ಬುಧವಾರ ಲೋಕಸಭೆಯಲ್ಲಿ ಪ್ರಮುಖ ಭದ್ರತಾ ಲೋಪ ಸಂಭವಿಸಿದ್ದು, ಭದ್ರತೆ ಉಲ್ಲಂಘನೆ ಮಾಡಿ ಕಲಾಪದ ವೇಳೆ ಸಂಸತ್ ಭವನಕ್ಕೆ ನುಗ್ಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಪ್ತಚರ ಅಧಿಕಾರಿಗಳು ನಾಲ್ಕು ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ. ಎರಡು ಪ್ರತ್ಯೇಕ ಘಟನೆಯಲ್ಲಿ ನಾಲ್ವರು ಅಪರಿಚಿತರು ಸದನದ ಒಳಗೆ ಮತ್ತು ಹೊರಗೆ ಭಯದ ವಾತಾವರಣ ಸೃಷ್ಟಿ ಮಾಡಿದ್ದಾರೆ. … Continued

ಸಂಸತ್ತಿನ ಮೇಲೆ ನಡೆದ ದಾಳಿಯ 22ನೇ ವಾರ್ಷಿಕ ದಿನವೇ ಲೋಕಸಭೆಯಲ್ಲಿ ಭದ್ರತಾ ಲೋಪ : ವೀಕ್ಷಕರ ಗ್ಯಾಲರಿಯಿಂದ ಲೋಕಸಭೆಗೆ ನುಗ್ಗಿದ ಇಬ್ಬರು ವ್ಯಕ್ತಿಗಳು

ನವದೆಹಲಿ: ಸಂಸತ್ತಿನ ದಾಳಿಯ 22ನೇ  ವಾರ್ಷಿಕ ದಿನ  ಬುಧವಾರ ಲೋಕಸಭೆಯಲ್ಲಿ ನಡೆದ ಪ್ರಮುಖ ಭದ್ರತಾ ಲೋಪದಲ್ಲಿ ಇಬ್ಬರು ಸಂದರ್ಶಕರ ಗ್ಯಾಲರಿಯಿಂದ ಲೋಕಸಭೆ ಸದನಕ್ಕೆ ಜಿಗಿದು ಸದನದ ಸುತ್ತಲೂ ಓಡಲು ಪ್ರಾರಂಭಿಸಿದ ಘಟನೆ ನಡೆದಿದೆ. ಬುಧವಾರ ಮಧ್ಯಾಹ್ನ ಇಬ್ಬರು ವ್ಯಕ್ತಿಗಳು ಸದನದ ಕೊಠಡಿಗೆ ಜಿಗಿದ ನಂತರ ಲೋಕಸಭೆಯಲ್ಲಿ ಗದ್ದಲ ಉಂಟಾಯಿತು. ಪ್ರಾಥಮಿಕ ಮಾಹಿತಿ ಪ್ರಕಾರ ಇಬ್ಬರು ಗ್ಯಾಸ್ … Continued

” ಅಫಿಡವಿಟ್ ಗೆ ನಾನೇ ಸಹಿ ಮಾಡಿದ್ದು ” : ಮಹುವಾ ಮೊಯಿತ್ರಾ ಆರೋಪ ನಿರಾಕರಿಸಿದ ಉದ್ಯಮಿ ದರ್ಶನ್ ಹಿರಾನಂದಾನಿ

ನವದೆಹಲಿ: ಉದ್ಯಮಿ ದರ್ಶನ್ ಹಿರಾನಂದಾನಿ ಅವರು ತಮ್ಮ ಸ್ಫೋಟಕ ಅಫಿಡವಿಟ್ ಕುರಿತು ಸೋಮವಾರ ಮೌನ ಮುರಿದಿದ್ದಾರೆ ಹಾಗೂ ತಾವು ಅದನ್ನು ಯಾವುದೇ ಒತ್ತಡದಲ್ಲಿ ಅದನ್ನು ಸಲ್ಲಿಸಿಲ್ಲ ಎಂದು ಹೇಳಿದ್ದಾರೆ. ಪ್ರಸ್ತುತ ” ಪ್ರಶ್ನೆ ಕೇಳಿದ್ದಕ್ಕಾಗಿ ಹಣ” ಪಡೆದ ಆರೋಪಗಳ ವಿರುದ್ಧ ಹೋರಾಡುತ್ತಿರುವ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ದರ್ಶನ್‌ ಹಿರಾನಂದಾನಿ ಒತ್ತಡದಲ್ಲಿ ಸಹಿ … Continued

ಸಂಸತ್ತಿನಲ್ಲಿ ಮುಸ್ಲಿಂ ಸಂಸದರನ್ನು ನಿಂದಿಸಿದ ಬಿಜೆಪಿ ನಾಯಕನಿಗೆ ಪಕ್ಷದಿಂದ ನೋಟಿಸ್

ನವದೆಹಲಿ: ಬಿಜೆಪಿ ಸಂಸದ ರಮೇಶ ಬಿಧುರಿ ಅವರು ಸಂಸತ್ತಿನಲ್ಲಿ ಕೋಮುವಾದಿ ಹೇಳಿಕೆಗಳು ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಈ ಬಗ್ಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ “ಕಠಿಣ ಕ್ರಮ”ದ ಎಚ್ಚರಿಕೆ ನೀಡಿದ್ದಾರೆ. ಅವರ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಕಡತಗಳಿಂದ ತೆಗೆದು ಹಾಕಲಾಗಿದೆ. ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಸಂಸದ ಕುನ್ವರ್ ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ … Continued