ವೀಡಿಯೊ ಬಿಡುಗಡೆ ಮಾಡಿದ ಬೆನ್ನಲ್ಲೇ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ…!

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮೇ 31ರಂದು ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನದ ಟಿಕೆಟ್‌ ಬುಕ್‌ ಆಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ವಿಶೇಷ ತನಿಖಾ ತಂಡದ (ಎಸ್‌ಐಟಿ) ಎದುರು ವಿಚಾರಣೆಗೆ ಮೇ 31ರಂದು ಹಾಜರಾಗುವುದಾಗಿ ತಿಳಿಸಲು ಅಜ್ಞಾತ ಸ್ಥಳದಿಂದ ವೀಡಿಯೊ ಬಿಡುಗಡೆ ಮಾಡಿದ್ದ ಪ್ರಜ್ವಲ್‌ ರೇವಣ್ಣ, … Continued

ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ : ವಿದೇಶದಿಂದಲೇ ವೀಡಿಯೊ ಸಂದೇಶ; ಮೇ 31ರಂದು ವಿಚಾಣೆಗೆ ಹಾಜರಾಗ್ತಾರಂತೆ…

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna) ಅವರಿಗೆ ತಕ್ಷಣವೇ ಕರ್ನಾಟಕಕ್ಕೆ ವಾಪಸ್‌ ಆಗಬೇಕು ಹಾಗೂ ಈ ನೆಲದ ಕಾನೂನು ಗೌರವಿಸಬೇಕು ಎಂದು ಅಜ್ಜ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (H D Deve Gowda) ಅವರು ಬಹಿರಂಗ ಪತ್ರ ಬರೆದ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ಭಾರತಕ್ಕೆ ಬರುವುದಾಗಿ ಘೋಷಣೆ … Continued

ನನ್ನ ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ತಕ್ಷಣ ಬಂದು ಶರಣಾಗು: ಪ್ರಜ್ವಲ್‌ ಗೆ ದೇವೇಗೌಡ ತಾಕೀತು

ಬೆಂಗಳೂರು: ಪ್ರಜ್ವಲ್‌ ನೀನು ಎಲ್ಲಿಯೇ ಇದ್ದರೂ ಪೋಲಿಸರ ಮುಂದೆ ಶರಣಾಗಬೇಕು, ವಿಚಾರಣೆಯನ್ನು ಎದುರಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ತಾಕೀತು ಮಾಡಿದ್ದಾರೆ. ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಬರುವಂತೆ ಮಾಡಿದ ಮನವಿಯ ನಂತರ ಈಗ ಮಾಜಿ … Continued

ಪ್ರಜ್ವಲ್‌ ಪೆನ್ ಡ್ರೈವ್ ಪ್ರಕರಣ : ಡಿಕೆ ಶಿವಕುಮಾರ ವಿರುದ್ಧ ಪೋಸ್ಟರ್‌ ಸಮರ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ತೀವ್ರ ರಾಜಕೀಯ ತಿರುವು ಪಡೆದುಕೊಳ್ಳುತ್ತಿದೆ. ಪೆನ್ ಡ್ರೈವ್ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ ವಿರುದ್ಧ ಷಡ್ಯಂತ್ರದ ಆರೋಪ ಕೇಳಿಬಂದ ನಂತರ ನಗರದ ಕೆಲವು ಕಡೆಗಳಲ್ಲಿ ಅವರ ವಿರುದ್ಧ ಪೋಸ್ಟರ್ ಅಂಟಿಸಲಾಗಿದೆ. ನಗರದ ಲೂಲು ಮಾಲ್ ಹಾಗೂ ಕೆಪಿಸಿಸಿ ಕಚೇರಿ ಮುಂದೆ ಆಗಂತುಕರು ಪೋಸ್ಟರ್ ಅಂಟಿಸಿದ್ದಾರೆ. ಪೋಸ್ಟರ್ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ … Continued

ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್ ಪ್ರಕರಣದ ಹಿಂದೆ ಡಿಕೆ ಶಿವಕುಮಾರ ಕೈವಾಡ : ವಕೀಲ ದೇವರಾಜೇಗೌಡ ಗಂಭೀರ ಆರೋಪ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿರುವ ಪೆನ್‍ಡ್ರೈವ್ ಪ್ರಕರಣದ ಹಿಂದೆ ಷಡ್ಯಂತ್ರವಿದ್ದು, ಇದರ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಇದ್ದಾರೆ ಎಂದು ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆನ್ ಡ್ರೈವ್ ಹಂಚಿಕೆ ಮಾಡುವ ಗೇಮ್ ಪ್ಲ್ಯಾನಿಂಗ್ ಸಿದ್ದರಾಮಯ್ಯ ಸರ್ಕಾರದ್ದು ಎಂದು ಹೇಳಿದ್ದಾರೆ. ಮುಖ್ಯಮಂತ್ರಿಗಳು, … Continued

ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

ಬೆಂಗಳೂರು : ವಿದೇಶದಲ್ಲಿರುವ ಲೈಂಗಿಕ ದೌರ್ಜನ್ಯ ವೀಡಿಯೊದ ಪ್ರಕರಣ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಮೇ 7ರಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ನಂತರ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದ ದಿನವೇ, ಅಂದರೆ ಏಪ್ರಿಲ್ 26ರ ಮಧ್ಯರಾತ್ರಿಯೇ ಪ್ರಜ್ವಲ್‌ … Continued

ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಮತ್ತೊಂದು ಸಂಕಷ್ಟ : ಅಪಹರಣ ಪ್ರಕರಣ ದಾಖಲು

ಮೈಸೂರು: ಮೈಸೂರು: ಪ್ರಜ್ವಲ್ ರೇವಣ್ಣ ಅವರ ಆರೋಪಿತ ಲೈಂಗಿಕ ದೌರ್ಜ್ಯನದ ಪ್ರಕರಣಲ್ಲಿ ಸಂಕಷ್ಟ ಎದುರಿಸುತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (H.D Revanna) ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ತನ್ನ ತಾಯಿ ನಾಪತ್ತೆಯಾಗಿದ್ದಾರೆ, ಹಾಗೂ ಅವರನ್ನು ಅಪಹರಿಸಲಾಗಿದೆ ಎಂದು ಆರೋಪಿಸಿ ವ್ಯಕ್ತಿಯೊಬ್ಬರು ರೇವಣ್ಣ ವಿರುದ್ದ ಮೈಸೂರಿನಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಪೆನ್‍ಡ್ರೈವ್ ಪ್ರಕರಣದಲ್ಲಿ ಎ1 … Continued

ಪೆನ್‌ ಡ್ರೈವ್ ಪ್ರಕರಣ : 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಲು ಪ್ರಜ್ವಲ್‌ , ಎಚ್‌ಡಿ ರೇವಣ್ಣಗೆ ಎಸ್‌ಐಟಿ ನೋಟಿಸ್‌ ; ವರದಿ

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣ ಹಾಗೂ ಎಚ್‌.ಡಿ. ರೇವಣ್ಣ ಅವರಿಗೆ ಎಸ್‌ಐಟಿ (ವಿಶೇಷ ತನಿಖಾದಳ) ನೋಟಿಸ್‌ ಜಾರಿ ಮಾಡಿದೆ ಹಾಗೂ ಮಾತ್ರವಲ್ಲದೇ 24 ಗಂಟೆಗಳಲ್ಲಿ ಹಾಜರಾಗಲು ಸೂಚನೆ ನೀಡಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಹಾಸನದ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಗಳಾದ ತಾವುಗಳು ಖುದ್ದು … Continued

ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ತನಿಖೆಗೆ ಎಡಿಜಿಪಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬರುತ್ತಿರುವ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಭಾನುವಾರ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (SIT) ರಚಿಸಿದೆ. ಸರ್ಕಾರ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡು ಎಸ್ ಐಟಿ ತಂಡ ರಚಿಚಿಸಿದೆ. ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ ಎಂದು ಗೃಹ ಸಚಿವ ಡಾ … Continued