ನ. 5ರಂದು ಕೇದಾರನಾಥಕ್ಕೆ ಪ್ರಧಾನಿ ಮೋದಿ ಭೇಟಿ; ಆದಿ ಶಂಕರಾಚಾರ್ಯರ ಸಮಾಧಿ ಸ್ಥಳ, 12 ಅಡಿ ಎತ್ತರದ ಪ್ರತಿಮೆ ಅನಾವರಣ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 5ರಂದು ಉತ್ತರಾಖಂಡದ ಕೇದಾರನಾಥದಲ್ಲಿ ಶಂಕರಾಚಾರ್ಯರ ಸಮಾಧಿ ಸ್ಥಳವನ್ನು ಭಕ್ತರ ದರ್ಶನಕ್ಕೆ ಅನಾವರಣಗೊಳಿಸಲಿದ್ದಾರೆ. ಅಲ್ಲದೆ ಕೇದಾರನಾಥದಲ್ಲಿ 12 ಅಡಿ ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಲಿದ್ದಾರೆ. ನವೆಂಬರ್ 5ರಂದು ಬೆಳಿಗ್ಗೆ ಪ್ರಧಾನಮಂತ್ರಿಯವರು ಬೆಳಿಗ್ಗೆ 8:00 ಗಂಟೆಗೆ ಪವಿತ್ರ ದೇಗುಲಕ್ಕೆ ಆಗಮಿಸುತ್ತಾರೆ ಮತ್ತು ಅಲ್ಲಿ ಪ್ರಾರ್ಥನೆ ಸಲ್ಲಿಸುತ್ತಾರೆ. … Continued