ಮೋದಿ ನಂತರ ಪ್ರಧಾನಿ ಅಭ್ಯರ್ಥಿಯಾಗಲು ಬಿಜೆಪಿಯಲ್ಲಿ ಯಾರು ಸೂಕ್ತ ? ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆ ಹೇಳಿದ್ದೇನು..?

ನವದೆಹಲಿ: ನರೇಂದ್ರ ಮೋದಿ ನಂತರ ಪ್ರಧಾನಿ ಹುದ್ದೆಗೆ ಬಿಜೆಪಿಯಲ್ಲಿ ಸೂಕ್ತ ವ್ಯಕ್ತಿ ಯಾರು? ಮೋದಿ ಅವರ ಬಳಿಕ ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಜೆಪಿ ಯಾರನ್ನು ಆಯ್ಕೆ ಮಾಡಬಹುದು? ಇಂಡಿಯಾ ಟುಡೆ ‘ಮೂಡ್ ಆಫ್ ದಿ ನೇಷನ್’ ಸಮೀಕ್ಷೆಯ ಆಗಸ್ಟ್ ಆವೃತ್ತಿಯಲ್ಲಿ ಮೋದಿ ಅವರ ಉತ್ತರಾಧಿಕಾರಿ ಸ್ಥಾನಕ್ಕೆ ಸೂಕ್ತ ವ್ಯಕ್ತಿ ಯಾರು ಎಂಬ ಬಗ್ಗೆ ಜನರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. … Continued

ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ ಹೊಗಳಿದ್ದಕ್ಕೆ ಪತ್ನಿಯ ಮೈ ಸುಟ್ಟು ತ್ರಿವಳಿ ತಲಾಖ್ ನೀಡಿದ ಗಂಡ..!

ಅಯೋಧ್ಯೆ : ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರನ್ನು ಹೊಗಳಿದ್ದಕ್ಕೆ ಮುಸ್ಲಿಂ ಮಹಿಳೆಯೊಬ್ಬರು ಪತಿಯಿಂದ ಭೀಕರ ಶಿಕ್ಷೆಗೆ ಗುರಿಯಾಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬೆಳಕಿಗೆ ಬಂದಿದೆ. ಮಾಹಿತಿ ಪ್ರಕಾರ ಪತಿ ಮೊದಲು ಪತ್ನಿಗೆ ಬೆಂಕಿ ಹಚ್ಚಿದ ಗಂಡ ನಂತರ ತ್ರಿವಳಿ ತಲಾಖ್ ನೀಡಿ ವಿಚ್ಛೇದನ ನೀಡಿದ್ದಾನೆ. ಬಹ್ರೈಚ್ ಮೂಲದ … Continued

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ : 70ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರಿಂದ ಪ್ರಧಾನಿ ಮೋದಿಗೆ ಪತ್ರ

ನವದೆಹಲಿ: ಕೋಲ್ಕತ್ತಾದ ಅತ್ಯಾಚಾರ-ಕೊಲೆ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿರುವ 70 ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರು, ಆರೋಗ್ಯ ಸಿಬ್ಬಂದಿ ವಿರುದ್ಧದ ಹಿಂಸಾಚಾರ ತಡೆಗೆ ವಿಶೇಷ ಕಾನೂನನ್ನು ತ್ವರಿತವಾಗಿ ಜಾರಿಗೊಳಿಸಬೇಕು ಮತ್ತು ವೈದ್ಯಕೀಯ ಸೌಲಭ್ಯಗಳಲ್ಲಿ ಸುಧಾರಿತ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಅಶೋಕ್ ವೈದ್, … Continued

ಪ್ರಧಾನಿ ಮೋದಿಗೆ ಕರೆ ಮಾಡಿದ ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯಸ್ಥ ; ಹಿಂದೂಗಳ ರಕ್ಷಣೆಯ ಭರವಸೆ

ನವದೆಹಲಿ : ಬಾಂಗ್ಲಾದೇಶವು ಹಿಂದೂಗಳು ಮತ್ತು ದೇಶದಲ್ಲಿ ವಾಸಿಸುವ ಎಲ್ಲ ಅಲ್ಪಸಂಖ್ಯಾತರ ಭದ್ರತೆ ಮತ್ತು ಸುರಕ್ಷತೆ ನೀಡುವ ಭರವಸೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರು ತಮಗೆ ಶುಕ್ರವಾರ ಕರೆ ಮಾಡಿ ಭರವಸೆ ನೀಡಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. … Continued

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ | ರಾಜಕೀಯ ವಿವಾದಕ್ಕೆ ಕಾರಣವಾದ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ 5ನೇ ಸಾಲಿನಲ್ಲಿ ಆಸನ ವ್ಯವಸ್ಥೆ

ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ “ಐದನೇ ಸಾಲಿನಲ್ಲಿ ಆಸನ ವ್ಯವಸ್ಥೆ” ಮಾಡಿರುವುದು ರಾಜಕೀಯ ವಿವಾದಕ್ಕ ಕಾರಣವಾಗಿದೆ. ಹಾಗೂ ಪ್ರಜಾಪ್ರಭುತ್ವ ಸಂಪ್ರದಾಯಗಳಿಗೆ ಸರ್ಕಾರ ಗೌರವ ಕೊಡುತ್ತಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ. ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಐದನೇ … Continued

ಇದು ಸಾಮಾನ್ಯ ಅನಾಹುತವಲ್ಲ… : ವಯನಾಡು ಭೂಕುಸಿತ ಪೀಡಿತ ಪ್ರದೇಶಗಳಿಗೆ ಪ್ರಧಾನಿ ಮೋದಿ ಭೇಟಿ

ವಯನಾಡು: ವಿನಾಶಕಾರಿ ಭೂಕುಸಿತದಿಂದ ತತ್ತರಿಸಿರುವ ಕೇರಳದ ವಯನಾಡಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವೈಮಾನಿಕ ಸಮೀಕ್ಷೆ ಕೈಗೊಂಡಿದ್ದಾರೆ. 400 ಕ್ಕೂ ಹೆಚ್ಚು ಜನರು ಸಾವಿಗೀಡಾಗಿ ನೂರಾರು ಜನ ಗಾಯಗೊಂಡಿರುವ ಕೇರಳದ ವಯನಾಡು ಜಿಲ್ಲೆಯ ಮುಂಡಕೈ-ಚೂರಲ್‌ಮಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಾರತೀಯ ವಾಯುಪಡೆಯ ಹೆಲಿಕಾಪ್ಟರ್‌ನಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಕಲ್ಪೆಟ್ಟಾದ ಎಸ್.ಕೆ.ಎಂ.ಜೆ. ಶಾಲಾ … Continued

ಪ್ರಧಾನಿ ಮೋದಿ ಭೇಟಿಯಾದ ದೇವೇಗೌಡ, ಹೆಚ್‌ಡಿಕೆ; ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

ನವದೆಹಲಿ: ದೆಹಲಿಯಲ್ಲಿ ಸಂಸತ್ತಿನ ಅಧಿವೇಶನ ನಡೆಯುತ್ತಿರುವಾಗಲೇ ಗುರುವಾರ ಮಾಜಿ ಪ್ರಧಾನಿ ದೇವೇಗೌಡ ಅವರು ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ವ್ಹೀಲ್‌ ಚೇರ್‌ನಲ್ಲಿ ತೆರಳಿದ ದೇವೇಗೌಡರು ಪ್ರಧಾನಿ ಮೋದಿ ಅವರನ್ನು ಭೇಟಿಯಾದರು. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಜೊತೆ ತೆರಳಿದ ದೇವೇಗೌಡರು ಮೋದಿ ಜತೆ ಮಾತುಕತೆ ನಡೆಸಿದ್ದಾರೆ. ದೆಹಲಿಯ ಲೋಕಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಯವರ ನಿವಾಸದಲ್ಲಿ ಭೇಟಿಯಾಗಿ, ಹಲವು ಮಹತ್ವದ … Continued

ಕೇಂದ್ರ ಬಜೆಟ್ 2024 | ಕೌಶಲ್ಯ ಹೆಚ್ಚಳಕ್ಕೆ ಮಹತ್ವದ ಹೆಜ್ಜೆ ; 500 ಉನ್ನತ ಕಂಪನಿಗಳಲ್ಲಿ 1 ಕೋಟಿ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್ ಅವಕಾಶ

ನವದೆಹಲಿ: ಮಂಗಳವಾರ (ಜುಲೈ 23)ರಂದು ಬಜೆಟ್ 2024 ಮಂಡಿಸಿ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ದೇಶದಲ್ಲಿ ಶಿಕ್ಷಣ, ಉದ್ಯೋಗ ಮತ್ತು ಕೌಶಲ್ಯವನ್ನು ಹೆಚ್ಚಿಸುವ ಗುರಿ ಹೊಂದಿರುವ ಮಹತ್ವದ ಘೋಷಣೆ ಮಾಡಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ 1 ಕೋಟಿ ವಿದ್ಯಾರ್ಥಿಗಳಿಗೆ 500 ಉನ್ನತ ಕಂಪನಿಗಳಲ್ಲಿ ಇಂಟರ್ನ್‌ಶಿಪ್ ಅವಕಾಶಗಳನ್ನು ನೀಡಲಾಗುವುದು ಎಂದು ಅವರು ಘೋಷಿಸಿದರು. ಪ್ರತಿ … Continued

ಆರ್‌ ಎಸ್‌ ಎಸ್‌ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ಇದ್ದ ನಿಷೇಧ ವಾಪಸ್ : ಕಾಂಗ್ರೆಸ್ ಖಂಡನೆ

ನವದೆಹಲಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘ (RSS)ದ ಚಟುವಟಿಕೆಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಲು ದಶಕಗಳ ಹಿಂದೆ ಜಾರಿಗೊಳಿಸಲಾಗಿದ್ದ ನಿಷೇಧವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಾಪಸ್ ಪಡೆದಿದೆ. ಈ ಕುರಿತು ಕಳೆದ ವಾರವೇ ಆದೇಶ ಹೊರಡಿಸಿದ್ದು, ಆರ್‍ಎಸ್‍ಎಸ್ ಚಟುವಟಿಕೆಗಳಲ್ಲಿ ಸರ್ಕಾರಿ ಅಧಿಕಾರಿಗಳು ಭಾಗಿಯಾಗಲು ಇದ್ದ ನಿಷೇಧ ಹಿಂಪಡೆಯಲಾಗಿದೆ ಎಂದು ಸರ್ಕಾರದ ಉನ್ನತ … Continued

ಕೆಲವರು ʼಸೂಪರ್‌ ಮ್ಯಾನ್‌ʼ ನಂತರ ‘ಭಗವಾನ’, ‘ವಿಶ್ವರೂಪಿ’ ಆಗಲು ಬಯಸ್ತಾರೆ ; ಮೋಹನ ಭಾಗವತ-ಇದು ಮೋದಿ ಮೇಲೆ ಪರೋಕ್ಷ ದಾಳಿ ಎಂದ ಕಾಂಗ್ರೆಸ್

ಗುಮ್ಲಾ : “ಸೂಪರ್‌ಮ್ಯಾನ್” ಆಗಲು ಗುರಿ ಹೊಂದಿದ್ದಾರೆ, ನಂತರ “ದೇವತೆ” (ದೇವರು) “ಭಗವಾನ ” ಮತ್ತು “ವಿಶ್ವರೂಪ” (ಸರ್ವವ್ಯಾಪಿ) ಆಗಲು ಸಹ ಬಯಸುತ್ತಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಮುಖ್ಯಸ್ಥ ಮೋಹನ ಭಾಗವತ ಹೇಳಿದ್ದಾರೆ. ಜಾರ್ಖಂಡ್‌ನ ಗುಮ್ಲಾದಲ್ಲಿ ಆರ್‌ಎಸ್‌ಎಸ್ ಸದಸ್ಯ ಅಶೋಕ ಭಗತ್ ನಡೆಸುತ್ತಿರುವ ಲಾಭರಹಿತ ಸಂಸ್ಥೆ ವಿಕಾಸ ಭಾರತಿ ಗುರುವಾರ (ಜುಲೈ 18) … Continued