ಪ್ರಧಾನಿ ಮೋದಿ ಸರ್ಕಾರ 3.0 : ಪ್ರಮಾಣ ವಚನ ಸ್ವೀಕರಿಸಿದ ಸಚಿವರ ಪಟ್ಟಿ

ನವದೆಹಲಿ: ಬಿಜೆಪಿ ನಾಯಕ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ಭಾರತದ ಪ್ರಧಾನಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸ್ವತಂತ್ರ ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರನ್ನು ಹೊರತುಪಡಿಸಿ ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿದ್ದಾರೆ. ಪ್ರಧಾನಿ ಮೋದಿ ಜೊತೆಗೆ ಒಟ್ಟು 72 ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಇದರಲ್ಲಿ … Continued

ಸತತ ಮೂರನೇ ಸಲ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ : ಸಮಾರಂಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಉಪಸ್ಥಿತಿ

ನವದೆಹಲಿ: ಇಂದು ಭಾನುವಾರ ಸಂಜೆ 7:15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯಲಿರುವ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹಾಜರಾಗಲಿದ್ದಾರೆ. ಖರ್ಗೆ ಅವರು ರಾಜ್ಯಸಭೆಯ ವಿಪಕ್ಷದ ನಾಯಕರಾಗಿ (ಎಲ್‌ಒಪಿ) ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಇಂಡಿಯಾ ಮೈತ್ರಿಕೂಟದ ಇತರ ಅಂಗಪಕ್ಷಗಳೊಂದಿಗೆ ಮಾತುಕತೆ ನಡೆಸಿದ ನಂತರ … Continued

ಈ ಸಲದ ಚುನಾವಣೆಯಲ್ಲಿ ಬಿಜೆಪಿ ಗೆದ್ದಷ್ಟು ಸ್ಥಾನಗಳನ್ನು ಮೂರು ಚುನಾವಣೆ ಸೇರಿಸಿದ್ರೂ ಕಾಂಗ್ರೆಸ್ಸಿಗೆ ಗೆಲ್ಲಲು ಸಾಧ್ಯವಾಗಿಲ್ಲ : ಮೋದಿ ಲೇವಡಿ

ನವದೆಹಲಿ: 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದ ಸ್ಥಾನಗಳಷ್ಟನ್ನು ಕಾಂಗ್ರೆಸ್‌ ಮೂರು ಚುನಾವಣೆಗಳನ್ನು ಸೇರಿಸಿದರೂ ಅದಕ್ಕೆ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ಮತ್ತೊಮ್ಮೆ 100 ಸ್ಥಾನಗಳ ಗಡಿ ದಾಟಲು ವಿಫಲವಾಗಿದ್ದು, ಕಳೆದ ಮೂರು ಚುನಾವಣೆಗಳಲ್ಲಿ ಗೆದ್ದಿದ್ದನ್ನು ಸೇರಿಸಿದರೂ ಅದು ಬಿಜೆಪಿ ಒಂದು ಚುನಾವಣೆಯಲ್ಲಿ ಗೆದ್ದಷ್ಟು ಸ್ಥಾನಗಳಷ್ಟು ಆಗುವುದಿಲ್ಲ ಎಂದು … Continued

ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮಾಲ್ದೀವ್ಸ್‌ ಅಧ್ಯಕ್ಷರಿಗೂ ಆಹ್ವಾನ

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಸಮಾರಂಭಕ್ಕೆ ಮಾಲ್ದೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರಿಗೂ ಆಮಂತ್ರಣ ನೀಡಲಾಗಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ವು ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆದ ನಂತರ ಮೋದಿಯನ್ನು ಅಭಿನಂದಿಸಿದ ಒಂದು ದಿನದ ನಂತರ ಮುಯಿಜ್ಜು ಅವರನ್ನು ಆಹ್ವಾನಿಸಲಾಯಿತು. ಇದೇ … Continued

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ : ಸಮಾರಂಭದಲ್ಲಿ ಬಾಂಗ್ಲಾ ಪ್ರಧಾನಿ, ಶ್ರೀಲಂಕಾ ಅಧ್ಯಕ್ಷರು ಭಾಗಿ

ನವದೆಹಲಿ: ಸತತ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವ ವಿದೇಶಿ ನಾಯಕರಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಸೇರಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಬಿಜೆಪಿ ನೇತೃತ್ವದ ಎನ್‌ಡಿಎ ಲೋಕಸಭೆ ಚುನಾವಣೆಯಲ್ಲಿ 293 ಸ್ಥಾನಗಳನ್ನು ಗೆಲ್ಲುವ ಸತತ ಮೂರನೇ ಅವಧಿಗೆ … Continued

ಎನ್​ ಡಿ ಎ ನಾಯಕರಾಗಿ ಪ್ರಧಾನಿ ಮೋದಿ ಸರ್ವಾನುಮತದಿಂದ ಆಯ್ಕೆ : ನಾಯ್ಡು, ನಿತೀಶ ಸೇರಿ ಎನ್‌ಡಿಎ ಪಕ್ಷಗಳ ನಾಯಕರಿಂದ ಲಿಖಿತ ಬೆಂಬಲ ಪತ್ರ

ನವದೆಹಲಿ: ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟದ ನಾಯಕರಾಗಿ ನರೇಂದ್ರ ಮೋದಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಪ್ರಮುಖ ಪಕ್ಷಗಳಾದ ಟಿಡಿಪಿ, ಜೆಡಿಯು ಸೇರಿದಂತೆ ಮಿತ್ರಪಕ್ಷಗಳು ಅವರ ನಾಯಕತ್ವಕ್ಕೆ ತಮ್ಮ ಲಿಖಿತ ಬೆಂಬಲದ ಪತ್ರ ನೀಡಿವೆ. ಹೊಸ ಸರ್ಕಾರ ರಚನೆಗೆ ಜೂನ್​ 7ರಂದು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಹಕ್ಕು ಮಂಡಿಸಲಿದೆ. ಶನಿವಾರ (ಜೂನ್​ 8ರಂದು) ಹೊಸ ಸರ್ಕಾರ ರಚನೆಯಾಗಿ ನರೇಂದ್ರ … Continued

ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿದ ಮೋದಿ ; ಜೂನ್ 8 ರಂದು 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸಾಧ್ಯತೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಮೂಲಕ ಜವಾಹರಲಾಲ ನೆಹರು ನಂತರ ದೇಶದ ಮೂರನೇ ಅವಧಿಗೆ ಪ್ರಧಾನಿಯಾಗುವ ಏಕೈಕ ನಾಯಕರಾಗಿದ್ದಾರೆ. ಲೋಕಸಭೆ ಫಲಿತಾಂಶ ಪ್ರಕಟವಾದ ನಂತರ ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, 17ನೇ … Continued

ನಿತೀಶಕುಮಾರ ಎನ್‌ಡಿಎಗೆ ಬೆಂಬಲ ನೀಡ್ತಾರಾ? ಜೆಡಿಯು ಹೇಳಿದ್ದೇನು..?

ನವದೆಹಲಿ: ಲೋಕಸಭೆ ಚುನಾವಣೆ 2024ರ ಮತ ಎಣಿಕೆಯಲ್ಲಿ ಎನ್‌ಡಿಎ 300 ಸ್ಥಾನಗಳನ್ನು ಗೆಲ್ಲುವ ಸಮೀಪದಲ್ಲಿದೆ. ಇಂಡಿಯಾ ಮೈತ್ರಿಕೂಟವು 230ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದರ ಬೆನ್ನಲ್ಲೇ ಬಿಹಾರದ ಮುಖ್ಯಮಂತ್ರಿ ನಿತೀಶಕುಮಾರ ಅವರೊಂದಿಗೆ ಇಂಡಿಯಾ ಮೈತ್ರಿಕೂಟದ ನಾಯಕ ಶರದ್ ಪವಾರ ಅವರು ಸಂಪರ್ಕದಲ್ಲಿದ್ದಾರೆ ಎಂಬ ವರದಿಗಳ ಹೊರಬಿದ್ದಿವೆ. ಕೇಂದ್ರದಲ್ಲಿ ಸರ್ಕಾರ ರಚಿಸಲು ನಿತೀಶಕುಮಾರ ಅವರ ಜೆಡಿಯು … Continued

ವಾರಾಣಸಿಯಲ್ಲಿ ಹ್ಯಾಟ್ರಿಕ್‌ ಗೆಲುವು ಸಾಧಿಸಿದ ಪ್ರಧಾನಿ ಮೋದಿ… ಆದರೆ ಗೆಲುವಿನ ಅಂತರದಲ್ಲಿ ಗಣನೀಯ ಕುಸಿತ…!

ವಾರಾಣಸಿ : ಪ್ರಧಾನಿ ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ವಾರಾಣಸಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಆದರೆ, ಅವರ ಗೆಲುವಿನ ಅಂತರ ಗಣನೀಯವಾಗಿ ಕಡಿಮೆಯಾಗಿದೆ. ಚುನಾವಣಾ ಆಯೋಗದ ಅಂಕಿಅಂಶಗಳ ಪ್ರಕಾರ, 2024 ರ ಲೋಕಸಭಾ ಚುನಾವಣೆಯಲ್ಲಿ ವಾರಾಣಸಿ ಲೋಕಸಭಾ ಸ್ಥಾನವನ್ನು 1,52,513 ಅಂತರದಿಂದ ಪ್ರಧಾನಿ ಮೋದಿ ಗೆದ್ದಿದ್ದಾರೆ. ಪ್ರಧಾನಿ ಮೋದಿ ತಮ್ಮ ಸಮೀಪದ ಪ್ರತಿಸ್ಪರ್ಧಿ … Continued

ಕನ್ಯಾಕುಮಾರಿಯಲ್ಲಿ 45 ತಾಸುಗಳ ಧ್ಯಾನದ ನಂತರ ಪ್ರಧಾನಿ ಮೋದಿಯಿಂದ ʼಹೊಸ ಸಂಕಲ್ಪʼ : ಭಾರತದ ಜನರಿಗೆ ಪತ್ರ ; ಪತ್ರದ ಪೂರ್ಣ ಪಠ್ಯ ಇಲ್ಲಿದೆ…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನ ಕನ್ಯಾಕುಮಾರಿಯಲ್ಲಿರುವ ವಿವೇಕಾನಂದ ಬಂಡೆ ಸ್ಮಾರಕ (Vivekananda Rock Memorial)ದಲ್ಲಿ 45 ಗಂಟೆಗಳ ಧ್ಯಾನವನ್ನು ಶನಿವಾರ ಮುಕ್ತಾಯಗೊಳಿಸಿದ್ದಾರೆ. ಪ್ರಧಾನಿ ಮೋದಿಯವರ ಧ್ಯಾನವು ಮೇ 30 ರಂದು ಪ್ರಾರಂಭವಾಯಿತು ಮತ್ತು ಜೂನ್ 1 ರವರೆಗೆ ಸುಮಾರು 45 ಗಂಟೆಗಳ ಕಾಲ ಮುಂದುವರೆಯಿತು. ಧ್ಯಾನದ ಮುಕ್ತಾಯದ ನಂತರ, ಪ್ರಧಾನಿಯವರು ತಮ್ಮ ಆಧ್ಯಾತ್ಮಿಕ … Continued