ಜನವರಿ 12 ರಂದು ಪ್ರಧಾನಿ ಮೋದಿ ಹುಬ್ಬಳ್ಳಿಗೆ, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗಿ: ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರಧಾನಿ ಮೋದಿಯವರು ಜನವರಿ 12 ರ ಮಧ್ಯಾಹ್ನದಂದು ಹುಬ್ಬಳ್ಳಿಗೆ ಆಗಮಿಸುತ್ತಿದ್ದು, ರಾಷ್ಟ್ರೀಯ ಯುವಜನೋತ್ಸವದಲ್ಲಿ ಭಾಗವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು, ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಏಳು ದಿನಗಳ ಕಾಲ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ದೇಶದ 28 ರಾಜ್ಯಗಳಿಂದ ಹಾಗೂ 8 ಕೇಂದ್ರೀಯ ಪ್ರಾಂತ್ಯದಿಂದ ಯುವಜನರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಿದ್ದಾರೆ. … Continued

ಪ್ರಧಾನಿ ಮೋದಿ, 200 ಸಾಧುಗಳು, ಮೂರು ವೇದಿಕೆ: ಇದು ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಪ್ರಮಾಣ ವಚನ ಸಮಾರಂಭದ ವಿಶೇಷತೆ

ಗಾಂಧಿನಗರ: ಗುಜರಾತ್‌ನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಭರ್ಜರಿ ಜಯಗಳಿಸಿದ ನಂತರ, ಪ್ರಸ್ತುತ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ರಾಜ್ಯದಲ್ಲಿ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಇಂದು ಸೋಮವಾರ ಗಾಂಧಿನಗರದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.  ಗುಜರಾತ್‌ ಹಾಗೂ ದೇಶದ ವಿವಿಧ ಭಾಗಗಳ 200 ಸಾಧುಗಳನ್ನು ವಿಶೇಷವಾಗಿ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ಈ ಹಿಂದೆ ವಿಜಯ್ ರೂಪಾನಿ ಅವರ ಸ್ಥಾನಕ್ಕೆ ಭೂಪೇಂದ್ರ … Continued

5 ವರ್ಷದಲ್ಲಿ ಮೋದಿ ವಿದೇಶಿ ಪ್ರವಾಸಕ್ಕಾದ ಖರ್ಚೆಷ್ಟು? ರಾಜ್ಯಸಭೆಗೆ ಮಾಹಿತಿ ನೀಡಿದ ಸರ್ಕಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಿ ಭೇಟಿಗಳು ಭಾರತಕ್ಕೆ ಪಾಲುದಾರ ರಾಷ್ಟ್ರಗಳೊಂದಿಗೆ ಸಂಬಂಧವನ್ನು ಬಲಪಡಿಸಲು, ಭಾರತದ ದೃಷ್ಟಿಕೋನವನ್ನು ಮುಂದಿಡಲು ಮತ್ತು ಜಾಗತಿಕ ವಿಷಯಗಳ ಕುರಿತು ಜಾಗತಿಕ ಕಾರ್ಯಸೂಚಿಯನ್ನು ರೂಪಿಸಲು ಭಾರತಕ್ಕೆ ಅನುವು ಮಾಡಿಕೊಟ್ಟಿದೆ ಎಂದು ಸರ್ಕಾರ ಗುರುವಾರ ರಾಜ್ಯಸಭೆಗೆ ತಿಳಿಸಿದೆ. ರಾಜ್ಯಸಭೆಗೆ ಉತ್ತರಿಸಿದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರು, “ಪ್ರಧಾನಿಗಳ … Continued

ಉಜ್ಜಯಿನಿಯಲ್ಲಿ ಮಹಾಕಾಲ್ ಲೋಕ ಕಾರಿಡಾರ್‌ನ 1ನೇ ಹಂತ ಉದ್ಘಾಟಿಸಿದ ಪ್ರಧಾನಿ ಮೋದಿ: ಈ ಕಾರಿಡಾರ್‌ ಯಾಕೆ ವಿಶೇಷ…?

* ಮಹಾಕಾಳೇಶ್ವರ ದೇವಾಲಯವು ದೇಶದ 12 ‘ಜ್ಯೋತಿರ್ಲಿಂಗ’ಗಳಲ್ಲಿ ಒಂದಾಗಿದೆ ಮತ್ತು ವರ್ಷವಿಡೀ ಭಕ್ತರು ಆಗಮಿಸುತ್ತಾರೆ. * ಮಹಾಕಾಲ್ ಲೋಕ ಕಾರಿಡಾರ್ 900 ಮೀಟರ್‌ಗಿಂತಲೂ ಹೆಚ್ಚು ಉದ್ದವಾಗಿದೆ * 856 ಕೋಟಿ ವೆಚ್ಚದ ಮಹಾಕಾಳೇಶ್ವರ ದೇವಸ್ಥಾನದ ಕಾರಿಡಾರ್ ಅಭಿವೃದ್ಧಿ ಯೋಜನೆಯ ಭಾಗವಾಗಿ ಈ ಮಹಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ * ಮಹಾಕಾಲ ಲೋಕ’ದ ಮೊದಲ ಹಂತದಲ್ಲಿ 316 ಕೋಟಿ … Continued

ಇಂಡಿಯಾ ಗೇಟ್‌ನಲ್ಲಿ ಸುಭಾಷ ಚಂದ್ರ ಬೋಸ್‌ರ 28 ಅಡಿ ಎತ್ತರದ ಪ್ರತಿಮೆ ಉದ್ಘಾಟಿಸಿದ ಪ್ರಧಾನಿ, ನೇತಾಜಿ ಆದರ್ಶ ಭಾರತ ಅನುಸರಿಸಿದ್ದರೆ ಇಂದು ದೇಶದ ಕೀರ್ತಿ ಇನ್ನೂ ಎತ್ತರಕ್ಕೆ ಬೆಳೆಯುತ್ತಿತ್ತು ಎಂದ ಮೋದಿ

ನವದೆಹಲಿ: ಗುರುವಾರ ದೆಹಲಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಅನಾವರಣಗೊಳಿಸಿದರು. 280 ಮೆಟ್ರಿಕ್ ಟನ್ ತೂಕದ ಏಕಶಿಲೆಯ ಗ್ರಾನೈಟ್ ಬ್ಲಾಕ್‌ನಿಂದ ಕೆತ್ತಿದ ಇಂಡಿಯಾ ಗೇಟ್‌ನಲ್ಲಿ ಬೋಸ್ ಅವರ 28 ಅಡಿ ಪ್ರತಿಮೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ರಾಜಪಥ ಅವೆನ್ಯೂವನ್ನು ಮರುನಾಮಕರಣ ಮಾಡುವ ಉದ್ದೇಶದಿಂದ ಪ್ರಧಾನ ಮಂತ್ರಿ ಕರ್ತವ್ಯ ಪಥವನ್ನು … Continued

ಮಂಗಳೂರಿನ ಜನರ ಪ್ರೀತಿ, ಅಕ್ಕರೆಗೆ ವಿನಮ್ರನಾಗಿರುವೆ : ಕನ್ನಡದಲ್ಲೇ ಪ್ರಧಾನಿ ಮೋದಿ ಟ್ವೀಟ್

ನವದೆಹಲಿ: ನಿನ್ನೆ ಶುಕ್ರವಾರ ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ ನಂತರ ಬೃಹತ್‌ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ಶುಕ್ರವಾರ ಮಂಗಳೂರಿನ ಗೋಲ್ಡ್ ಫಿಂಚ್ ಹೋಟೆಲ್ ಮೈದಾನದಲ್ಲಿ 3೮೦೦ ಸಾವಿರ ಕೋಟಿ ರೂ.ಗಳಷ್ಟು ಮೊತ್ತದ ವಿವಿಧ ಯೋಜನೆಗಳ ಉದ್ಘಾಟನೆ, ಶಿಲಾನ್ಯಾಸ ನಡೆಸಿ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ಕರಾವಳಿಯ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸುಲಭವಾಗಿ … Continued

ಜಾಗತಿಕ ಕದನ ವಿರಾಮಕ್ಕಾಗಿ ಪ್ರಧಾನಿ ಮೋದಿ ಸೇರಿದಂತೆ 3 ನಾಯಕರ ನೇತೃತ್ವದಲ್ಲಿ ಆಯೋಗದ ರಚನೆ ಪ್ರಸ್ತಾಪಿಸಿದ ಮೆಕ್ಸಿಕನ್ ಅಧ್ಯಕ್ಷ

ನವದೆಹಲಿ: ಮೆಕ್ಸಿಕೋ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರು ವಿಶ್ವಸಂಸ್ಥೆಗೆ ಲಿಖಿತ ಪ್ರಸ್ತಾವನೆಯನ್ನು ಸಲ್ಲಿಸಲು ಯೋಜಿಸಿದ್ದು, ವಿಶ್ವವನ್ನು ಶಾಂತಿಯನ್ನು ಉತ್ತೇಜಿಸಲು ಐದು ವರ್ಷಗಳ ಅವಧಿಗೆ ಒಪ್ಪಂದ ಮಾಡಿಕೊಳ್ಳುವಂತೆ ಪ್ರೇರೇಪಿಸುವ ಆಯೋಗ ರಚಿಸುವ ಮಾತನ್ನಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಮೂವರು ವಿಶ್ವ ನಾಯಕರ ಹೆಸರು ಸೂಚಿಸಿದ್ದಾರೆ ಎಂದು ಎಂಎಸ್ಎನ್ ನ್ಯೂಸ್ ವರದಿ ಮಾಡಿದೆ. ನಾನು … Continued

ಬೆಂಗಳೂರು ಐಐಎಸ್‌ಸಿಯಲ್ಲಿ ಮೆದುಳು ಸಂಶೋಧನಾ ಕೇಂದ್ರ ಉದ್ಘಾಟಿಸಿದ ಪ್ರಧಾನಿ ಮೋದಿ

ಬೆಂಗಳೂರು: ವಿಶ್ವ ಯೋಗ ದಿನಾಚರಣೆ ಹಿನ್ನೆಲೆ ಕರ್ನಾಟಕಕ್ಕೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ 280 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಬ್ರೇನ್​ ರಿಸರ್ಚ್ ಸೆಂಟರ್​ ಉದ್ಘಾಟಿದರು. ಅಲ್ಲದೆ ಬಾಗ್ಚಿ ಪಾರ್ಥಸಾರಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಿದರು. ಮೆದುಳು ಸಂಶೋಧನಾ ಕೇಂದ್ರ ದೇಶದ ಅತಿದೊಡ್ಡ ಸಂಶೋಧನಾ ಕೇಂದ್ರವಾಗಿದ್ದು, ವಯಸ್ಸಿಗೆ ಸಂಬಂಧಿಸಿ … Continued

ಪ್ರಧಾನಿ ಮೋದಿ ಹಾದು ಹೋಗುವ ರಸ್ತೆಗಳಲ್ಲಿರುವ ಕಾಲೇಜುಗಳಿಗೆ ರಜೆ : ಡಿಕೆಶಿ ಆಕ್ಷೇಪ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಣಿಸುವ ರಸ್ತೆಗಳಲ್ಲಿರುವ ಕಾಲೇಜುಗಳಿಗೆ ರಜೆ ನೀಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುವ ರಸ್ತೆಗಳಲ್ಲಿರುವ ಕಾಲೇಜುಗಳಿಗೆ ಯಾಕೆ ರಜೆ ಕೊಡಬೇಕು, ವಿದ್ಯಾರ್ಥಿಗಳು ಗಲಾಟೆ ಮಾಡ್ತಾರಾ ಎಂದು ಪ್ರಶ್ನಿಸಿದ ಅವರು, ವಿದ್ಯಾರ್ಥಿಗಳನ್ನು ಏಕೆ ಅನುಮಾನದಿಂದ ನೋಡುತ್ತೀರಿ. ನಮ್ಮ ವಿದ್ಯಾರ್ಥಿಗಳೇನೂ ಭಯೋತ್ಪಾದಕರಾ ಎಂದು ಪ್ರಶ್ನಿಸಿದ್ದಾರೆ. … Continued

ಕೊರೊನಾ ಇನ್ನೂ ಮುಗಿದಿಲ್ಲ, ಅದು ಮರುಕಳಿಸಬಹುದು: ಎಚ್ಚರಿಸಿದ ಪ್ರಧಾನಿ ಮೋದಿ

ನವದೆಹಲಿ: ಕೋವಿಡ್ ಇನ್ನೂ ಹೋಗಿಲ್ಲ. ಅದು ನಿರಂತರವಾಗಿ ತನ್ನ ರೂಪಗಳನ್ನು ಬದಲಾಯಿಸುತ್ತಿದೆ ಮತ್ತು ಮರುಕಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಜನತೆಗೆ ಎಚ್ಚರಿಸಿದ್ದಾರೆ. ಗುಜರಾತಿನ ಜುನಾಘಡದಲ್ಲಿರುವ ಉಮಿಯಾ ಮಾತಾ ದೇವಾಲಯದವ 14ನೇ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ವರ್ಚುವಲ್ ಭಾಷಣ‌ ಮಾಡಿದ ಅವರು, ದೇಶವ್ಯಾಪಿ ಲಸಿಕೆ ಯಶಸ್ವಿಯಾಗಿದೆ ಎಂದು ಒತ್ತಿ ಹೇಳಿದರು. ಕೊರೊನಾ ಮುಗಿದಿದೆ ಎಂದು ಭಾವಿಸಬೇಡಿ. … Continued