ಇಸ್ರೋದಿಂದ ಮತ್ತೊಂದು ಮಹತ್ವದ ಸಾಧನೆ : ಆದಿತ್ಯ L1 ಯಶಸ್ವಿ, ಲ್ಯಾಂಗ್ರೇಜಿಯನ್‌ ಪಾಯಿಂಟ್ 1ರಲ್ಲಿ ಆದಿತ್ಯ-ಎಲ್1 ಇರಿಸಿದ ಇಸ್ರೋ…!

ನವದೆಹಲಿ: ಭಾರತ ತನ್ನ ಬಾಹ್ಯಾಕಾಶ ಸಾಧನೆಗಳಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತಕ್ಕೆ ಮತ್ತೊಂದು ಐತಿಹಾಸಿಕ ಕ್ಷಣ.., ಸೂರ್ಯನನ್ನು ಅಧ್ಯಯನ ಮಾಡುವ ದೇಶದ ಮೊದಲ ಮಿಷನ್ ಆದಿತ್ಯ-ಎಲ್1 ತನ್ನ ಅಂತಿಮ ಗಮ್ಯಸ್ಥಾನವನ್ನು ತಲುಪಿದೆ. ಈ ಬಗ್ಗೆ ಇಸ್ರೋ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಇಸ್ರೋ ಆದಿತ್ಯ L1 ಮಿಷನ್ 15 ಲಕ್ಷ ಕಿಲೋಮೀಟರ್‌ಗಳು ಮತ್ತು … Continued

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ನಾಮಕರಣ

ಅಯೋಧ್ಯೆ : ಅಯೋಧ್ಯೆಯ ಹೊಸ ವಿಮಾನ ನಿಲ್ದಾಣಕ್ಕೆ ʼಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಾ ಧಾಮʼ ಎಂದು ಹೆಸರಿಡಲಾಗಿದೆ. ಜನವರಿ 22 ರಂದು ನಡೆಯಲಿರುವ ರಾಮ ಮಂದಿರದ ಉದ್ಘಾಟನೆಗೆ ಮುನ್ನ ಅಯೋಧ್ಯೆ ವಿಮಾನ ನಿಲ್ದಾಣ ಮತ್ತು ರೈಲು ನಿಲ್ದಾಣದ ಹೆಸರನ್ನು ಬದಲಾಯಿಸಲಾಗಿದೆ. ಈ ಹಿಂದೆ ಅಯೋಧ್ಯಾ ವಿಮಾನ ನಿಲ್ದಾಣಕ್ಕೆ “ಅಯೋಧ್ಯಾ ಧಾಮ ಜಂಕ್ಷನ್‌ʼ ಎಂದು … Continued

‘ನಮ್ಮ ಸ್ನೇಹಿತನನ್ನು ನೋಡಲು ಸಂತೋಷವಾಗುತ್ತದೆ’ : ಪ್ರಧಾನಿ ಮೋದಿಯನ್ನು ರಷ್ಯಾಕ್ಕೆ ಆಹ್ವಾನಿಸಿದ ಅಧ್ಯಕ್ಷ ಪುತಿನ್

ಮಾಸ್ಕೊ : ವಿದೇಶಾಂಗ ಸಚಿವ ಎಸ್. ಜೈಶಂಕರ ಅವರು ಕ್ರೆಮ್ಲಿನ್‌ನಲ್ಲಿ ರಷ್ಯಾದ ನಾಯಕರನ್ನು ಭೇಟಿ ಮಾಡಿದ ನಂತರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ಮುಂದಿನ ವರ್ಷ ರಷ್ಯಾಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬುಧವಾರ ಆಹ್ವಾನಿಸಿದ್ದಾರೆ. “ನಮ್ಮ ಸ್ನೇಹಿತ ಪ್ರಧಾನಿ ಮೋದಿ ಅವರನ್ನು ರಷ್ಯಾದಲ್ಲಿ ನೋಡಲು ನಾವು ಸಂತೋಷಪಡುತ್ತೇವೆ” ಎಂದು ಪುತಿನ್ … Continued

ಭಗವಾನ್‌ ರಾಮ ಆಹ್ವಾನಿಸಿದವರು ಮಾತ್ರ ಬರ್ತಾರೆ”: ರಾಮಮಂದಿರ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ ಸಿಪಿಐ(ಎಂ) ಸೀತಾರಾಮ ಯೆಚೂರಿ ಬಗ್ಗೆ ಬಿಜೆಪಿ

ನವದೆಹಲಿ: ಜನವರಿ 22 ರಂದು ನಡೆಯಲಿರುವ ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ಹಾಜರಾಗುವುದಿಲ್ಲ ಎಂದು ಸಿಪಿಐ(ಎಂ) ಮಂಗಳವಾರ ಖಚಿತಪಡಿಸಿದ ನಂತರ ವಿವಾದ ಭುಗಿಲೆದ್ದಿದೆ. ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ, “ಎಲ್ಲರಿಗೂ ಆಹ್ವಾನ ಕಳುಹಿಸಲಾಗಿದೆ (ಆದರೆ) ಭಗವಾನ್ ರಾಮ ಕರೆದವರು ಮಾತ್ರ ಬರುತ್ತಾರೆ” ಎಂದು ಹೇಳಿದ್ದಾರೆ. ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ … Continued

ಮೋದಿ, ಶಾ ಜೇಬುಗಳ್ಳರು ಹೇಳಿಕೆ : ರಾಹುಲ್‌ ಗಾಂಧಿಗೆ ಈಗ ಮತ್ತೊಂದು ಸಂಕಷ್ಟ

ನವದೆಹಲಿ: ನವೆಂಬರ್ 22ರಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಉದ್ಯಮಿ ಗೌತಮ್ ಅದಾನಿ ಅವರನ್ನು ‘ಜೇಬುಗಳ್ಳರು’ ಎಂದು ಕರೆದಿದ್ದಕ್ಕಾಗಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ. ಹೇಳಿಕೆಯು “ಉತ್ತಮ ಅಭಿರುಚಿಯಲ್ಲಿಲ್ಲ” … Continued

ಪ್ರಧಾನಿ ಮೋದಿ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ : ರಾಜ್ಯಕ್ಕೆ ಬರ ಪರಿಹಾರ ಹಣ ತುರ್ತು ಬಿಡುಗಡೆಗೆ ಮನವಿ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ (ಡಿಸೆಂಬರ್‌ 19) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಬರಪರಿಹಾರದ ಹಣವನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದ್ದರು. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಬರ ಪರಿಸ್ಥಿತಿಯ ಕುರಿತು … Continued

ವೀಡಿಯೊ…| ವಾರಾಣಸಿಯಲ್ಲಿ ರೋಡ್‌ಶೋನಲ್ಲಿ ಆಂಬುಲೆನ್ಸ್‌ಗೆ ದಾರಿ ಮಾಡಿಕೊಡಲು ತಮ್ಮ ಬೆಂಗಾವಲು ಪಡೆ ನಿಲ್ಲಿಸಿದ ಪ್ರಧಾನಿ ಮೋದಿ

ವಾರಾಣಸಿಯಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆ ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡಲು ಅವರ ಬೆಂಗಾವಲು ಪಡೆ ಸ್ವಲ್ಪ ಹೊತ್ತು ನಿಂತಿದೆ. ಪ್ರಧಾನಿಯವರ ವಾಹನದ ಮೇಲಿದ್ದ ಭದ್ರತಾ ಸಿಬ್ಬಂದಿಯೊಂದಿಗೆ ಬೆಂಗಾವಲು ಪಡೆಯು ಬ್ಯಾರಿಕೇಡ್ ರಸ್ತೆಯ ಬದಿಯಲ್ಲಿ ನಿಲ್ಲಿಸಿ ಆಂಬ್ಯುಲೆನ್ಸ್ ಗೆ ವೇಗವಾಗಿ ಚಲಿಸಲು ದಾರಿಮಾಡಿಕೊಟ್ಟಿರುವುದನ್ನು ವೀಡಿಯೊ ತೋರಿಸಿದೆ. ಪ್ರಧಾನಿ ಮೋದಿ ಅವರು ತಮ್ಮ … Continued

ಮಾರ್ನಿಂಗ್ ಕನ್ಸಲ್ಟ್ ಸಮೀಕ್ಷೆಯಲ್ಲಿ ವಿಶ್ವದ ಅತ್ಯಂತ ಜನಪ್ರಿಯ ನಾಯಕರ ಪಟ್ಟಿಯಲ್ಲಿ ಪ್ರಧಾನಿ ಮೋದಿ ನಂ.1 : ಅನುಮೋದನೆ ರೇಟಿಂಗ್‌ ಎಷ್ಟು ಗೊತ್ತಾ…?

ಅಮೆರಿಕ ಮೂಲದ ಸಲಹಾ ಸಂಸ್ಥೆ ‘ಮಾರ್ನಿಂಗ್ ಕನ್ಸಲ್ಟ್’ ನಡೆಸಿದ ಸಮೀಕ್ಷೆಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು 76% ರಷ್ಟು ಅನುಮೋದನೆ ರೇಟಿಂಗ್‌ ಪಡೆದ ನಂತರ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ. ಭಾರತದ ಪ್ರಧಾನ ಮಂತ್ರಿಯ ಅನುಮೋದನೆಯ ರೇಟಿಂಗ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ವಿಶ್ವದ ಜನಪ್ರಿಯ ನಾಯಕನಿಗಿಂತ 10% ಕ್ಕಿಂತ ಹೆಚ್ಚು ಅಂಕಗಳಿಂದ ಮುಂದಿದ್ದಾರೆ. … Continued

ಯತ್ನಾಳರ ನಿಜವಾದ ಗುರಿ ಪ್ರಧಾನಿ ಮೋದಿ; ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರು: ಮೌಲ್ವಿ ತನ್ವೀರ್ ಹಾಶ್ಮಿ ಅವರ ಜೊತೆಗಿನ ನನ್ನ ಫೋಟೋ ಹಿಡ್ಕೊಂಡು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನನ್ನ ವಿರುದ್ದ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ನರೇಂದ್ರ ಮೋದಿ ಎನ್ನುವುದು ನಿಧಾನವಾಗಿ ಬಯಲಾಗತೊಡಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ಸಿದ್ದರಾಮಯ್ಯ ಅವರು ಮೌಲ್ವಿ ಹಾಶ್ಮಿ … Continued

ವೀಡಿಯೊ..| “ಮೋದಿಗೆ ಯಾರಾದ್ರೂ ಬೆದರಿಕೆ ಹಾಕಬಹುದೆಂದು ಊಹಿಸಲು ಸಾಧ್ಯವಿಲ್ಲ…”: ಪ್ರಧಾನಿ ಮೋದಿ ಕಠಿಣ ನಿರ್ಧಾರಗಳು ನನಗೆ ʼಅಚ್ಚರಿʼ ತಂದಿದೆ ಎಂದ ರಷ್ಯಾದ ಪುತಿನ್

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುತಿನ್ ಅವರು ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಳ್ಳುತ್ತಿರುವ “ಕಠಿಣ” ನಿರ್ಧಾರವನ್ನು ಶ್ಲಾಘಿಸುತ್ತಿರುವ ವೀಡಿಯೊವೊಂದು ಸಾಮಾಜಿಕ ಮಾಧ್ಯಮ ಬಳಕೆದಾರರ ಕುತೂಹಲ ಕೆರಳಿಸಿದೆ. ಅವರ ಭಾಷಣಕ್ಕೆ ಹಿಂದಿಯಲ್ಲಿ ಧ್ವನಿ ನೀಡಲಾಗಿದ್ದು, ರಷ್ಯಾದ ನಾಯಕ ಭಾರತ ಹಾಗೂ ರಷ್ಯಾ ನಡುವೆ ನಿರಂತರವಾಗಿ ಬೆಳೆಯುತ್ತಿರುವ ಸಂಬಂಧಗಳ ಬಗ್ಗೆ ಸುದೀರ್ಘವಾಗಿ ಮಾತನಾಡುವುದನ್ನು ವೀಡಿಯೊ ತೋರಿಸುತ್ತದೆ. “ರಷ್ಯಾ ಮತ್ತು … Continued