ʼ ಪಾಪಿಗಳು ಹೋಗಿದ್ರು, ಅದಕ್ಕೆ ಸೋತರುʼ : ಭಾರತ ವಿಶ್ವಕಪ್ ಸೋಲಿಗೆ ಪ್ರಧಾನಿ ಮೋದಿ ವಿರುದ್ಧ ಮಮತಾ ಬ್ಯಾನರ್ಜಿ ಪರೋಕ್ಷ ವಾಗ್ದಾಳಿ

ಕೋಲ್ಕತ್ತಾ: ವಿಶ್ವಕಪ್ ಫೈನಲ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲಿನ ಬಗ್ಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಗುರುವಾರ ಬಿಜೆಪಿ ವಿರುದ್ಧ ಹೊಸ ತಗಾದೆ ತೆಗೆದಿದ್ದು, ಫೈನಲ್ ಹೊರತುಪಡಿಸಿ ವಿಶ್ವಕಪ್‌ ನಲ್ಲಿ ಭಾರತ ಕ್ರಿಕೆಟ್ … Continued

ಪ್ರಧಾನಿ ಮೋದಿ ವಿರುದ್ಧ ʼಅಪಶಕುನʼ ಟೀಕೆ : ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ‘ಪನೌತಿ’ (ಅಪಶಕುನ) ಮತ್ತು ʼಜೇಬುಗಳ್ಳʼ ಟೀಕೆಗಳ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ಗುರುವಾರ ನೋಟಿಸ್ ನೀಡಿದೆ. ವಯನಾಡ್ ಸಂಸದ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಚುನಾವಣಾ ಸಂಸ್ಥೆಗೆ ದೂರು ನೀಡಿದ ಒಂದು ದಿನದ ನಂತರ ಚುನಾವಣಾ ಆಯೋಗ ನೋಟಿಸ್‌ ನೀಡಿದೆ. ಚುನಾವಣಾ ಆಯೋಗವು … Continued

ವೀಡಿಯೊ.: ತೆಲಂಗಾಣದಲ್ಲಿ ಪ್ರಧಾನಿ ರ‍್ಯಾಲಿಯಲ್ಲಿ ಲೈಟ್‌ ಟವರ್ ಏರಿದ ಮಹಿಳೆ ; ಭಾಷಣದ ಮಧ್ಯೆ ಗಮನಿಸಿ ʼಮಗಳೇ ಕೆಳಗೆ ಇಳಿʼ ಎಂದು ಪದೇ ಪದೇ ಮನವಿ ಮಾಡಿದ ಮೋದಿ | ವೀಕ್ಷಿಸಿ

ಹೈದರಾಬಾದ್‌ : ಶನಿವಾರ ತೆಲಂಗಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಯಲ್ಲಿ, ಮಹಿಳೆಯೊಬ್ಬರು ಅವರ ಗಮನ ಸೆಳೆಯಲು ಮತ್ತು ತನ್ನ ಸಮಸ್ಯೆಗಳ ಬಗ್ಗೆ ಮಾತನಾಡಲು ಲೈಟ್ ಟವರ್ ಅನ್ನು ಏರಿದ್ದರು. ಭಾಷಣ ಮಾಡುತ್ತಿರುವಾಗ ಟವರ್‌ ಏರಿದ ಮಹಿಳೆಯನ್ನು ಗಮನಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಲೇ ಟವರ್‌ನಿಂದ ಕೆಳಗೆ ಬರುವಂತೆ ಮನವಿ ಮಾಡಿದರು. ವೀಡಿಯೊದಲ್ಲಿ ಮಹಿಳೆ ಎತ್ತರದ … Continued

ಇಸ್ರೇಲ್-ಹಮಾಸ್ ಯುದ್ಧದ ಕುರಿತು ಚರ್ಚಿಸಲು ಇರಾನ್ ಅಧ್ಯಕ್ಷ ರೈಸಿಗೆ ಕರೆ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ಇಸ್ರೇಲ್ ಮತ್ತು ಹಮಾಸ್ ನಡುವಿನ ಉದ್ವಿಗ್ನತೆಯ ನಡುವೆ, ಪ್ರಧಾನಿ ನರೇಂದ್ರ ಮೋದಿ ಸೋಮವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರೊಂದಿಗೆ ಮಾತನಾಡಿದ್ದಾರೆ. ಅವರು ಮಧ್ಯಪ್ರಾಚ್ಯದಲ್ಲಿನ ಕಷ್ಟಕರ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸಂಭಾಷಣೆಯ ಸಮಯದಲ್ಲಿ, ಭಯೋತ್ಪಾದಕ ಘಟನೆಗಳು, ಹಿಂಸಾಚಾರ ಮತ್ತು ನಾಗರಿಕರ ಜೀವಹಾನಿ ಗಂಭೀರ ಕಳವಳಕಾರಿಯಾಗಿದೆ. ಇದು ಶಾಂತಿ ಮತ್ತು ಸ್ಥಿರತೆಯ ಆರಂಭಿಕ … Continued

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಪ್ರಧಾನಿ ಮೋದಿಗೆ ಆಹ್ವಾನ

ನವದೆಹಲಿ: ಜನವರಿ 22, 2024 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನತೀರ್ಥರು ಹಾಗೂ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಹಾಗೂ ಅವರು ಪ್ರಧಾನಿಯವರನ್ನು ಭೇಟಿಯಾಗಿ 2024ರ ಜನವರಿ 22 ರಂದು ಉತ್ತರ … Continued

ಮೈಸೂರಿನಲ್ಲಿಯೂ ಮೆಟ್ರೋ ರೈಲುಗಳು ಓಡಾಡಲಿವೆ : ಪಿಎಂ ಮೋದಿ

ನವದೆಹಲಿ : ಬೆಂಗಳೂರಿನಲ್ಲಿ ಮೆಟ್ರೋ ರೈಲುಗಳ ಸಂಚಾರ ನಡೆಸುತ್ತಿವೆ. ಅದರಂತೆ ಮೈಸೂರಿನಲ್ಲಿಯೂ ಮೆಟ್ರೋ ರೈಲುಗಳು ಸಂಚರಿಸುವ ದಿನಗಳೂ ದೂರವಿಲ್ಲ. ಇದಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮೈಸೂರು ಜನರಿಗೆ ಸಂತಸದ ಸುದ್ದಿ ತಿಳಿಸಿದ್ದಾರೆ. ಶುಕ್ರವಾರ ದೆಹಲಿಯಿಂದ ವರ್ಚುವಲ್ ಮೂಲಕ ಬೆಂಗಳೂರು ನಮ್ಮ ಮೆಟ್ರೋ ನೇರಳೆ ಮಾರ್ಗದ ಕೆಂಗೇರಿ-ಚಲ್ಲಘಟ್ಟ ಮತ್ತು … Continued

ಪ್ಯಾಲೆಸ್ತೀನ್ ಅಧ್ಯಕ್ಷರಿಗೆ ಕರೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ : ಭಾರತದಿಂದ ಮಾನವೀಯ ನೆರವಿನ ಭರವಸೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಪ್ಯಾಲೆಸ್ತೀನ್ ಅಧ್ಯಕ್ಷ ಮಹಮೂದ್ ಅಬ್ಬಾಸ್ ಅವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದಾರೆ. ಹಾಗೂ ಗಾಜಾ ಆಸ್ಪತ್ರೆಯಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿರುವ ನಾಗರಿಕರ ಬಗ್ಗೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ನಡೆಯುತ್ತಿರುವ ಇಸ್ರೇಲ್-ಹಮಾಸ್ ಯುದ್ಧದ ಮಧ್ಯೆ, ಪ್ಯಾಲೆಸ್ತೀನ್ ಜನರಿಗೆ ಭಾರತವು ಮಾನವೀಯ ನೆರವು ಕಳುಹಿಸುವುದನ್ನು ಮುಂದುವರಿಸುತ್ತದೆ ಎಂದು ಪ್ರಧಾನಿ … Continued

ಮಧ್ಯಪ್ರಾಚ್ಯ ನೋಡಿದರೆ… ಭಾರತೀಯರಾಗಿ ನಾವು ಅದೃಷ್ಟವಂತರು’ : ಪ್ರಧಾನಿ ಮೋದಿ, ಅಮಿತ್ ಶಾರನ್ನು ಹೊಗಳಿದ ಅವರಿಬ್ಬರ ಕಟು ಟೀಕಾಕಾರ್ತಿ ಶೆಹ್ಲಾ ರಶೀದ್

ನವದೆಹಲಿ: ಪ್ರಧಾನಿ ಮೋದಿ ಕಟು ಟೀಕಾಕಾರ್ತಿ ಹಾಗೂ ಮಾಜಿ ಜೆಎನ್‌ಯು ವಿದ್ಯಾರ್ಥಿ ನಾಯಕಿ ಶೆಹ್ಲಾ ರಶೀದ್ ಕಾಶ್ಮೀರದಲ್ಲಿ ದೀರ್ಘಾವಧಿಯ ಶಾಂತಿ ಮತ್ತು ಸುರಕ್ಷತೆ ಖಾತ್ರಿಪಡಿಸಿದ್ದಕ್ಕಾಗಿ ಭಾರತೀಯ ಸೇನೆ, ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಶ್ಲಾಘಿಸಿದ್ದಾರೆ. ಶನಿವಾರ ಇಸ್ರೇಲ್-ಹಮಾಸ್ ಸಂಘರ್ಷ ಎಂಟನೇ ದಿನಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಅವರ ಈ ಪ್ರಶಂಸೆ ಬಂದಿದೆ. … Continued

‘ಭಾರತ ಇಸ್ರೇಲ್‌ ಜೊತೆಗೆ ನಿಂತಿದೆ’: ಹಮಾಸ್ ದಾಳಿ ಕುರಿತು ಇಸ್ರೇಲ್ ಪ್ರಧಾನಿಯೊಂದಿಗೆ ಮಾತನಾಡಿದ ಪ್ರಧಾನಿ ಮೋದಿ

ನವದೆಹಲಿ: ನಡೆಯುತ್ತಿರುವ ಇಸ್ರೇಲ್-ಹಮಾಸ್ ಯುದ್ಧದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ತಮ್ಮ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ ಹಾಗೂ ಭಾರತವು “ಎಲ್ಲಾ ರೂಪಗಳಲ್ಲಿ ಭಯೋತ್ಪಾದನೆಯನ್ನು ಖಂಡಿಸುತ್ತದೆ” ಎಂದು ಹೇಳಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ ಅವರು ನೆತನ್ಯಾಹು ಅವರೊಂದಿಗೆ ದೂರವಾಣಿ ಕರೆ ಮಾಡಿದ್ದು, ಅವರು “ಸದ್ಯದ ಪರಿಸ್ಥಿತಿಯ ಕುರಿತು … Continued