ಪಶ್ಚಿಮ ಬಂಗಾಳಕ್ಕೆ ಕೊರೊನಾ ಲಸಿಕೆ ನೀಡುವಂತೆ ಪ್ರಧಾನಿಗೆ ಸಿಎಂ ಮಮತಾ ಮನವಿ

ವಿಧಾನಸಭೆ ಚುನಾವಣೆಗೆ ಮುಂಚೆ ಪಶ್ಚಿಮ ಬಂಗಾಳದಲ್ಲಿ ಕೊರೊನಾ ಲಸಿಕೆ ಒದಗಿಸಬೇಕೆಂದು ಸಿಎಂ ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಎಪ್ರಿಲ್‌-ಮೇ ತಿಂಗಳಿನಲ್ಲಿ ನಡೆಯುವ ಚುನಾವಣೆಯಲ್ಲಿ ಜನರು ಲಸಿಕೆಯಿಲ್ಲದೇ ಮತದಾನ ಕೇಂದ್ರಗಳಿಗೆ ಹೋಗಬೇಕಾಗುತ್ತದೆ. ಜನರ ಆರೋಗ್ಯ ಮತ್ತು ಯೋಗಕ್ಷೇಮದ ಹಿತದೃಷ್ಟಿಯಿಂದ ತಕ್ಷಣವೇ ಜನರಿಗೆ ಲಸಿಕೆ ಒದಗಿಸಬೇಕೆಂದು ಮನವಿ ಮಾಡಿದ್ದಾರೆ. ಆರೋಗ್ಯ ಕಾರ್ಯಕರ್ತರು ಮತ್ತು ಇತರ … Continued

ಪ್ರಧಾನಿಯಿಂದ ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಇನ್‌ಸ್ಟಿಟ್ಯೂಟ್‌ ಆಫ್ ಮೆಡಿಕಲ್ ಸೈನ್ಸಸ್- ರಿಸರ್ಚ್ ನಾಳೆ ಉದ್ಘಾಟನೆ

ನವದೆಹಲಿ: ಸದ್ಯದಲ್ಲಿಯೇ ವಿಧಾನಸಭಾ ಚುನಾವಣೆ ಘೋಷಣೆಯಾಗುವ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳಕ್ಕೆ ಕೊಡುಗೆಗಳ ಮೇಲೆ ಕೊಡುಗೆ ನೀಡುತ್ತಿರುವ ಕೇಂದ್ರ ಸರ್ಕಾರದ ಪ್ರಮುಖ ಪಕ್ಷವಾದ ಚುನಾವಣೆ ಗೆಲ್ಲಲು ಸಾಕಷ್ಟು ಪ್ರಯತ್ನ ನಡೆಸಿದೆ. ಈ ನಡುವೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಇನ್ಸ್‍ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಮತ್ತು ರಿಸರ್ಚ್ ಹೆಸರಿನ ಐಐಟಿಯನ್ನು … Continued

ಕೃಷಿ ಕಾಯ್ದೆಯಲ್ಲಿ ತೊಡಕಿದ್ದರೆ ಬದಲಾವಣೆಗೆ ಸಿದ್ಧ: ರೈತರಿಗೆ ಪ್ರಧಾನಿ ಅಭಯ

ನವದೆಹಲಿ: ಇತ್ತೀಚೆಗೆ ಜಾರಿಗೆ ಬಂದ ಕೃಷಿ ಕಾನೂನುಗಳು ಬಲವಂತವಾಗಿಲ್ಲ ಮತ್ತು ಆಯ್ಕೆಗಳನ್ನು ಮಾತ್ರ ನೀಡುತ್ತವೆ. ಒಂದೊಮ್ಮೆ ರೈತರು ಮನವರಿಕೆಯಾಗುವ ಸಮರ್ಥ ಸಲಹೆಯೊಂದಿಗೆ ಬಂದರೆ ಕಾನೂನಿನಲ್ಲಿ ಬದಲಾವಣೆ ಮಾಡಲು ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಬುಧವಾರ ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ, ಕೃಷಿ ಮಾರುಕಟ್ಟೆಗಳ ಹಳೆಯ ವ್ಯವಸ್ಥೆ ಮತ್ತು ಎಂಎಸ್‌ಪಿ ಮುಂದುವರಿಯುತ್ತದೆ ಎಂದು ಪುನರುಚ್ಚರಿಸಿದ ಅವರು, … Continued

ಯೋಜನೆಗಳೊಂದಿಗೆ ಪ್ರಧಾನಿ ಪಶ್ಚಿಮ ಬಂಗಾಳಕ್ಕೆ ಬರ್ತಾರೆ: ನಡ್ಡಾ

ಪ್ರಧಾನಿ ನರೇಂದ್ರ ಮೋದಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿದ ಸಂದರ್ಭಗಳಲ್ಲಿ ಹಲವು ಯೋಜನೆಗಳನ್ನು ನೀಡಿದ್ದಾರೆ ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯಕ್ಕೆ ಪ್ರಧಾನಿ ಭೇಟಿಯನ್ನು ಆಕ್ಷೇಪಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು. ದ್ವಿತಿಯ ಹಂತದ ಪರಿವರ್ತನ ಯಾತ್ರೆಗೆ ಚಾಲನೆ ನೀಡಿದ ನಡ್ಡಾ, ಮಮತಾ ಪ್ರಧಾನಿ ಹಾಗೂ ಗೃಹಸಚಿವರ ರಾಜ್ಯದ ಭೇಟಿಯ ಬಗ್ಗೆ ಆಕ್ಷೇಪ … Continued

ಮಾತುಕತೆಗೆ ಸರ್ಕಾರವೇ ದಿನಾಂಕ ನಿಗದಿ ಮಾಡಲಿ: ಪಿಎಂ ಹೇಳಿಕೆಗೆ ರೈತ ಸಂಘಟನೆಗಳ ಉತ್ತರ

ಹೊಸ ಕೃಷಿ ಕಾನೂನುಗಳ ರದ್ದತಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿರುವ ರೈತ ಹೋರಾಟಗಾರರು ಮುಂದಿನ ಸುತ್ತಿನ ಮಾತುಕತೆಗೆ ನಾವು ಸಿದ್ಧರಾಗಿದ್ದಾರೆ. ಅದಕ್ಕೆ ಸರ್ಕಾರ ದಿನಾಂಕ ನಿಗದಿ ಪಡಿಸಲಿ ಎಂದು  ಸಂಯುಕ್ತ ಕಿಸಾನ್‌ ಮೋರ್ಚಾದ ಹಿರಿಯ ಸದಸ್ಯ ಶಿವಕುಮಾರ ಕಕ್ಕಾ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ರೈತರ ಹೋರಾಟವನ್ನು ಕೊನೆಗೊಳಿಸಿ, ಮಾತುಕತೆಗೆ ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.  ಹಿಂದೆ ಮಾತುಕತೆಗೆ … Continued

ಕೇಂದ್ರಕ್ಕೆ ರೈತರ ಪಟ್ಟಿ ಕಳುಹಿಸಲಾಗಿದೆ:ಮಮತಾ ಸ್ಪಷ್ಟನೆ

ಕೋಲ್ಕತ್ತ: ಪ್ರಧಾನಮಂತ್ರಿ ಕಿಸಾನ ಸಮ್ಮಾನ್‌ ಯೋಜನೆಗೆ ಪಶ್ಚಿಮ ಬಂಗಾಳ ೨.೫ ಲಕ್ಷ ರೈತರ ಪಟ್ಟಿಯನ್ನು ಕೇಂದ್ರಕ್ಕೆ ಕಳುಹಿಸಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಸರಕಾರದ ಯೋಜನೆಗಳನ್ನು ಜಾರಿಗೊಳಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಮರುದಿನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೀಡಿರುವ ಹೇಳಿಕೆ ಮಹತ್ವ ಪಡೆದುಕೊಂಡಿದೆ. … Continued

ಹೊರಗಿನ ಕೆಲವರಿಂದ ದೇಶದ ಘನತೆಗೆ ಧಕ್ಕೆ: ಮೋದಿ

ಸೋನಿತ್‌ಪುರ (ಆಸ್ಸಾಮ್):‌ ದೇಶದ ಹೊರಗಿರುವ ಕೆಲವರು ದೇಶದ ಘನತೆಗೆ ಕಳಂಕತರುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ರಸ್ತೆ ಅಭಿವೃದ್ಧಿ ಯೋಜನೆ ಅಸೋಮ್‌ ಮಾಲಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕೆಲ ವ್ಯಕ್ತಿಗಳು ನಮ್ಮ ದೇಶದ ಘನತೆಯನ್ನು ಹಾಳು ಮಾಡುವ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ. ರಾಷ್ಟ್ರದ ಸಂಸ್ಕೃತಿಗೆ ಚ್ಯುತಿ ತರುತ್ತಿರುವ ಕುರಿತು ಕೆಲ … Continued