ನೀರವ್ ಮೋದಿಯ 250 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಜಾರಿ ನಿರ್ದೇಶನಾಲಯ

ನವದೆಹಲಿ: ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್ ಮೋದಿಗೆ ಸಂಬಂಧಿಸಿದ ಕಂಪನಿಗಳ 253.62 ಕೋಟಿ ರೂ.ಗಳ ಮೌಲ್ಯದ ರತ್ನಗಳು, ಆಭರಣಗಳು ಮತ್ತು ಬ್ಯಾಂಕ್ ಠೇವಣಿಗಳನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ ಶುಕ್ರವಾರ ತಿಳಿಸಿದೆ. ಈ ಎಲ್ಲ ಚರಾಸ್ತಿಗಳು ಹಾಂಗ್‌ಕಾಂಗ್‌ನಲ್ಲಿವೆ ಎಂದು ಇಡಿ ಹೇಳಿಕೆಯಲ್ಲಿ ತಿಳಿಸಿದೆ. ಹಾಂಗ್‌ಕಾಂಗ್‌ನಲ್ಲಿರುವ ನೀರವ್ ಮೋದಿ … Continued

ಊದಿದ ಕಣ್ಣು, ಕೈಗಳಿಗೆ ಗಾಯ; ಡೊಮಿನಿಕಾ ಜೈಲಿನಲ್ಲಿರುವ ಮೆಹುಲ್ ಚೋಕ್ಸಿ ಮೊದಲ ಫೋಟೋ ಬಿಡುಗಡೆ

ನವ ದೆಹಲಿ: ಭಾರತದಿಂದ ತಲೆಮರೆಸಿಕೊಂಡಿದ್ದ ಪಿಎನ್​ಬಿ ಹಗರಣದ ಆರೋಪಿ, ವಜ್ರದ ಉದ್ಯಮಿ ಮೆಹುಲ್ ಚೋಕ್ಸಿ ಅವರನ್ನು ಕಳೆದ ಸೋಮವಾರ ರಾತ್ರಿ ಡೊಮಿನಿಕಾ ದ್ವೀಪದಲ್ಲಿ ಬಂಧಿಸಲಾಗಿತ್ತು. ಈಗ ಡೊಮಿನಿಕಾದಲ್ಲಿ ಮೆಹುಲ್ ಚೋಕ್ಸಿ ಜೈಲಿನಲ್ಲಿರುವ ಫೋಟೋವೊಂದು ಹೊರಬಿದ್ದಿದ್ದು, ಅವರಿಗೆ ಜೈಲಿನಲ್ಲಿ ಥಳಿಸಿ, ಹಿಂಸೆ ನೀಡಲಾಗಿದೆ ಎಂದು ಚೋಕ್ಸಿ ಪರ ವಕೀಲರು ಆರೋಪಿಸಿದ್ದಾರೆ. ಮೆಹುಲ್ ಚೋಕ್ಸಿ ಅವರ ಫೋಟೋದಲ್ಲಿ ಅವರ … Continued