ಸಾಕ್ಷಿಗಳ ವಿಚಾರಣೆ ಪೂರ್ಣ : ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾದ ಶಿವಮೂರ್ತಿ ಶರಣರು

ಚಿತ್ರದುರ್ಗ: ಪೋಕ್ಸೊ ಪ್ರಕರಣದಲ್ಲಿ ಸಂತ್ರಸ್ತೆಯರು ಹಾಗೂ ಪ್ರಮುಖ‌ ಸಾಕ್ಷಿಗಳ ವಿಚಾರಣೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರಮುಖ ಆರೋಪಿ ಮುರುಘಾ ಮಠದ ಶಿವಮೂರ್ತಿ ಶರಣರು ಸೋಮವಾರ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾದರು. ಸುಪ್ರೀಂ ಕೋರ್ಟ್‌ ನಿರ್ದೇಶನದ ಮೇರೆಗೆ, ಇಬ್ಬರು ಸಂತ್ರಸ್ತೆಯರು ಸೇರಿದಂತೆ ಒಟ್ಟು 13 ಪ್ರಮುಖ ಸಾಕ್ಷಿಗಳ ವಿಚಾರಣೆ ಮುಗಿದಿದೆ. ಈ ಹಿನ್ನೆಲೆಯಲ್ಲಿ ಮುರುಘಾ ಶರಣರ ಜಾಮೀನಿಗೆ ಸುಪ್ರೀಂ … Continued

ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ಜೈಲಿಗೆ ಹೇಳಿಕೆ: ಹೈಕೋರ್ಟ್‌ನಲ್ಲಿ ಹಿರಿಯ ವಕೀಲ ನಾಗೇಶ ಆಕ್ಷೇಪ

ಬೆಂಗಳೂರು : “ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಜೈಲಿಗೆ ಹೋಗುತ್ತಾರೆ ಎಂದು ಆಡಳಿತಾರೂಢ ಕಾಂಗ್ರೆಸ್‌ನ ಸಚಿವರು, ಶಾಸಕರು ದಿನ ಬೆಳಗಾದರೆ ಹೇಳಿಕೆ ನೀಡುತ್ತಿದ್ದಾರೆ. ಹಾಗಾದರೆ ಅವರೇ ಬಂದು ವಾದಿಸಲಿ” ಎಂದು ಯಡಿಯೂರಪ್ಪ ಪರ ವಕೀಲರು ಹೈಕೋರ್ಟ್‌ನಲ್ಲಿ ಶುಕ್ರವಾರ ಮೌಖಿಕವಾಗಿ ಹೇಳಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಜಾಮೀನು ಕೋರಿ ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ … Continued

ಥಾಣೆಯಲ್ಲಿ 4 ವರ್ಷದ ಇಬ್ಬರು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಬೃಹತ್ ಪ್ರತಿಭಟನೆ ; ಪೊಲೀಸರಿಂದ ಲಾಠಿ ಚಾರ್ಜ್‌

ಮುಂಬೈ: ಶಾಲೆಯೊಂದರಲ್ಲಿ ನಾಲ್ಕು ವರ್ಷದ ಇಬ್ಬರು ಪುಟ್ಟ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಥಾಣೆಯಲ್ಲಿ ಬೃಹತ್ ಪ್ರತಿಭಟನೆ ನಡೆದಿದ್ದು, ಪೊಲೀಸರು ಲಾಠಿ ಮತ್ತು ಅಶ್ರುವಾಯು ಮೂಲಕ ಜನರ ಗುಂಪನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪೊಲೀಸರ ಲಾಠಿ ಚಾರ್ಜ್‌ ನಂತರ ಆರು ಗಂಟೆಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಜನರಿಂದ ತುಂಬಿ ತುಳುಕುತ್ತಿದ್ದ … Continued

ಪೋಕ್ಸೊ ಪ್ರಕರಣ : ಸಂತ್ರಸ್ತೆ ಮದುವೆಯಾಗಲು ಆರೋಪಿಗೆ ಮಧ್ಯಂತರ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಮಗು ಮತ್ತು ಸಂತ್ರಸ್ತೆಯ ಹಿತ ರಕ್ಷಣೆಗೆ ಮುಂದಾಗಿರುವ ಕರ್ನಾಟಕ ಹೈಕೋರ್ಟ್‌ ಅಪ್ರಾಪ್ತೆ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಆರೋಪಿಗೆ (ವಿಚಾರಣಾಧೀನ ಕೈದಿ) ಸಂತ್ರಸ್ತೆ ವರಿಸಲು ಮಧ್ಯಂತರ ಜಾಮೀನು ಮಂಜೂರು ಮಾಡಿ ಅಪರೂಪದ ಆದೇಶ ಹೊರಡಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. “ಆರೋಪಿಯ ಲೈಂಗಿಕ ಸಂಪರ್ಕದಿಂದ ಸಂತ್ರಸ್ತೆಗೆ ಮಗು … Continued

ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ದೊಡ್ಡ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌ ನೀಡಿದೆ. ಯಡಿಯೂರಪ್ಪ ಅವರ ವಿರುದ್ಧ ಮಕ್ಕಳ ಲೈಂಗಿಕ ಅಪರಾಧಗಳ ಸಂರಕ್ಷಣಾ ಕಾಯ್ದೆ, 2012 (ಪೋಕ್ಸೊ ಕಾಯ್ದೆ) ಅಡಿಯಲ್ಲಿ ದಾಖಲಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಶುಕ್ರವಾರ ಅವರ ಬಂಧನಕ್ಕೆ ತಡೆ ನೀಡಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ … Continued

ಪೋಕ್ಸೊ ಪ್ರಕರಣ: ಸಂತ್ರಸ್ತರು ಪ್ರತಿಕೂಲ ಸಾಕ್ಷಿ ನುಡಿದರೆ ಪಾಟಿ ಸವಾಲಿಗೆ ಗುರಿಪಡಿಸಬಹುದು: ಹೈಕೋರ್ಟ್‌

ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಅಡಿ ದಾಖಲಾದ ಪ್ರಕರಣಗಳಲ್ಲಿ ಸಂತ್ರಸ್ತರು ಪ್ರತಿಕೂಲ ಸಾಕ್ಷಿ ನುಡಿದರೆ ಅವರನ್ನೂ ಪಾಟಿ ಸವಾಲಿಗೆ ಗುರಿಪಡಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ. ಪೋಕ್ಸೊ ಪ್ರಕರಣವೊಂದರಲ್ಲಿ ವ್ಯತಿರಿಕ್ತ ಹೇಳಿಕೆ ನೀಡಿದ್ದ ಸಂತ್ರಸ್ತೆಯನ್ನು ಪಾಟಿ ಸವಾಲಿಗೆ ಗುರಿಪಡಿಸಲು ಅನುಮತಿ ನಿರಾಕರಿಸಿದ್ದ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ … Continued