ಪೋಕ್ಸೋ ಪ್ರಕರಣ: ಯಡಿಯೂರಪ್ಪಗೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಅವರನ್ನು ಬಂಧಿಸಬಾರದು ಹಾಗೂ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎನ್ನುವ ತನ್ನ ಈ ಹಿಂದಿನ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ವಿಸ್ತರಿಸಿದೆ. ಪ್ರಕರಣದ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು … Continued

ಪೋಕ್ಸೊ ಪ್ರಕರಣ: ಯಡಿಯೂರಪ್ಪಗೆ ಕೋರ್ಟ್‌ ಹಾಜರಿಗೆ ವಿನಾಯಿತಿ ನೀಡಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಗೆ ವಿಚಾರಣಾ ನ್ಯಾಯಾಲಯವು ಜುಲೈ 15ಕ್ಕೆ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ. ಜುಲೈ 6ರಂದು ವಿಚಾರಣಾಧೀನ ನ್ಯಾಯಾಲಯವು ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಖುದ್ದು ಹಾಜರಾಗಬೇಕು ಎಂದು ಆದೇಶಿಸಿತ್ತು. ಬೆಂಗಳೂರಿನ ಸದಾಶಿವನಗರ … Continued

ಪೋಕ್ಸೋ ಪ್ರಕರಣ: ಎಫ್‌ಐಆರ್ ರದ್ದು ಕೋರಿರುವ ಯಡಿಯೂರಪ್ಪ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದು ಹಾಗೂ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ನಂತರ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿತು. ಈ ಪ್ರಕರಣದಲ್ಲಿ ಯಡಿಯೂರಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಮತ್ತು ಪ್ರಕರಣ ರದ್ದು ಕೋರಿ … Continued

ಪೋಕ್ಸೊ ಪ್ರಕರಣ : ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಆರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿಯು ಗುರುವಾರ ವಿಶೇಷ ಪೋಕ್ಸೊ ನ್ಯಾಯಾಲಯಕ್ಕೆ ಸುಮಾರು 700 ಪುಟಗಳ ಆರೋಪ ಪಟ್ಟಿ ಸಲ್ಲಿಕೆ ಮಾಡಿದೆ. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು, ಮೂವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ಗಳಿಗೆ ಸಂಬಂಧಿಸಿದಂತೆ ಮಾತ್ರ ಆರೋಪ ಪಟ್ಟಿ ಸಲ್ಲಿಕೆ … Continued

ಪೋಕ್ಸೋ ಪ್ರಕರಣ: ಸಿಐಡಿ ಮುಂದೆ ವಿಚಾರಣೆಗೆ ಹಾಜರಾದ ಯಡಿಯೂರಪ್ಪ

ಬೆಂಗಳೂರು :ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಸೋಮವಾರ ಸಿಐಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಪ್ರಕರಣ ದಾಖಲಾಗಿ ಮೂರು ತಿಂಗಳಾಗಿದ್ದು, ಅವರು ಎರಡನೇ ಬಾರಿಗೆ ವಿಚಾರಣೆ ಎದುರಿಸುತ್ತಿದ್ದಾರೆ. ಸಿಐಡಿ ಎಡಿಜಿಪಿ ಬಿ.ಕೆ.ಸಿಂಗ್, ಡಿವೈಎಸ್‌ಪಿ ತನಿಖಾಧಿಕಾರಿಯಿಂದ ಯಡಿಯೂರಪ್ಪ ವಿಚಾರಣೆ ನಡೆದಿದೆ. ಸಿಐಡಿ ಅಧಿಕಾರಿಗಳು ಈ ಮೊದಲೇ ಯಡಿಯೂರಪ್ಪ ಅವರ … Continued

ಪೋಕ್ಸೋ ಪ್ರಕರಣ ; ಮಾಜಿ ಸಿಎಂ ಯಡಿಯೂರಪ್ಪ ವಿರುದ್ದ ಜಾಮೀನು ರಹಿತ ವಾರಂಟ್ ಹೊರಡಿಸಲು ಆದೇಶ; ಬಂಧನ ಸಾಧ್ಯತೆ

 ಬೆಂಗಳೂರು: ಪೋಕ್ಸೋ ಪ್ರಕರಣದ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಲು ಆದೇಶಿಸಿದೆ. ನ್ಯಾಯಾಲಯದ ಆದೇಶದಿಂದ ಮಾಜಿ ಮುಖ್ಯಮಂತ್ರಿಗೆ ಬಂಧನ ಭೀತಿ ಎದುರಾಗಿದೆ. ಪ್ರಕರಣದ ವಿಚಾರಣೆಗೆ ಯಡಿಯೂರಪ್ಪ ಹಾಜರಾಗದ ಕಾರಣ ಬಂಧನ ವಾರೆಂಟ್ ಹೊರಡಿಸುವಂತೆ ಕೋರಿ ಸಿಐಡಿ ಸಲ್ಲಿಸಿದ್ದ ಮನವಿ ಆಲಿಸಿದ ಬೆಂಗಳೂರು ನಗರದ 1ನೇ ತ್ವರಿತಗತಿಯ ನ್ಯಾಯಾಲಯ … Continued

ತಮ್ಮ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಮಾಡಲು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಯಡಿಯೂರಪ್ಪ

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ತನಿಖೆ ನಡೆಸಲು ಸಿಐಡಿ ಪೊಲೀಸರು ಯಡಿಯೂರಪ್ಪ ಅವರಿಗೆ ನೋಟಿಸ್ ಜಾರಿಗೊಳಿಸಿರುವ ಬೆನ್ನಿಗೇ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಗೊಳಿಸುವಂತೆ ಅವರು ಕೋರಿದ್ದು, . ತಾನು ಯಾವುದೇ … Continued

ಯಡಿಯೂರಪ್ಪ ವಿರುದ್ಧ ಪೋಕ್ಸೋ ದಾಖಲಿಸಿದ್ದ ಮಹಿಳೆ ಸಾವು

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ಬಿ. ಎಸ್. ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ್ಯದ ದೂರು ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. 17 ವರ್ಷದ ತಮ್ಮ ಪುತ್ರಿ ಮೇಲೆ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಮಹಿಳೆ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ದೂರು ನೀಡಿದ್ದರು. ದೂರು ಆಧರಿಸಿ ಮಾರ್ಚ್‌ 14ರಂದು ಯಡಿಯೂರಪ್ಪ … Continued

ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ಹುಬ್ಬಳ್ಳಿ: ಬಾಲಕಿ ಮೇಲೆ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಆರೋಪದ ಮೇಲೆ ಪೊಲೀಸ್ ವಶದಲ್ಲಿದ್ದ ಆರೋಪಿಯೊಬ್ಬ ಶುಕ್ರವಾರ ತಡರಾತ್ರಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹೊಡೆದಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿ ಪರಾರಿಯಾಗಿದ್ದ ಆರೋಪಿ ಸದ್ದಾಂ ಹುಸೇನ್ ಎಂಬಾತನ ಕಾಲಿಗೆ … Continued

ಚಿತ್ರದುರ್ಗ ನ್ಯಾಯಾಲಯಕ್ಕೆ ಶರಣಾದ ಶಿವಮೂರ್ತಿ ಮುರುಘಾ ಶರಣರು

ಚಿತ್ರದುರ್ಗ : ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರು ಸೋಮವಾರ ಚಿತ್ರದುರ್ಗದ ನ್ಯಾಯಾಲಯದ ಮುಂದೆ ಶರಣಾಗಿದ್ದಾರೆ. ಸೋಮವಾರ ಅಪರಾಹ್ನದ ವೇಳೆಗೆ ಪೋಕ್ಸೊ ವಿಶೇಷ ನ್ಯಾಯಾಲಯದ ಉಸ್ತುವಾರಿಯಾಗಿರುವ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಮುಂದೆ ಮುರುಘಾ ಶರಣರು ಹಾಜರಾದರು. ಈ ವಿಚಾರವನ್ನು ದಾಖಲಿಸಿಕೊಂಡ ನ್ಯಾಯಾಧೀಶರು ಆರೋಪಿ ಸ್ವಾಮೀಜಿಯನ್ನು … Continued