ರಾಜ್ಯದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ ; ಬೆಂಗಳೂರು ಸಿಸಿಬಿ ಇನ್ಸ್‌ಪೆಕ್ಟರ್‌ ಬಿಡದಿ ಬಳಿ ನೇಣಿಗೆ ಶರಣು

ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ ಸಾವು ಪ್ರಕರಣದ ಬಹಳ ಸುದ್ದಿಯಾಗಿ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ ಬೆನ್ನಲ್ಲೇ ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವ ವರದಿಯಾಗಿದೆ. ಬೆಂಗಳೂರು ಸಿಸಿಬಿ ಪೊಲೀಸ್ ಇನ್ಸ್​​ಪೆಕ್ಟರ್​ ತಿಮ್ಮೇಗೌಡ ಎಂಬವರ ಶವ  ರಾಮನಗರ ಜಿಲ್ಲೆಯ ಬಿಡದಿ ಸಮೀಪದ ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮರಕ್ಕೆ … Continued

ಕ್ರಿಕೆಟ್ ಆಡುತ್ತಿದ್ದ ಪೊಲೀಸ್ ಅಧಿಕಾರಿ ಮೇಲೆ ಉಗ್ರರಿಂದ ಗುಂಡಿನ ದಾಳಿ

ಶ್ರೀನಗರ : ಶ್ರೀನಗರದ ಡೌನ್ಟೌನ್ನಲ್ಲಿ ಭಾನುವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ಸ್ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿ ಅವರು ಭಾನುವಾರ ಈದ್ಗಾ ಮೈದಾನದಲ್ಲಿ ಸ್ಥಳೀಯ ಹುಡುಗರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು … Continued