ವರದಕ್ಷಿಣೆಗಾಗಿ ಪತ್ನಿಯನ್ನು ಸುಟ್ಟುಹಾಕಿದ ಆರೋಪಿ ಪತಿ ಪೊಲೀಸ್‌ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗುಂಡೇಟು

ನವದೆಹಲಿ: ಗ್ರೇಟರ್ ನೋಯ್ಡಾದಲ್ಲಿ ವರದಕ್ಷಿಣೆಗಾಗಿ ಪತ್ನಿಗೆ ಬೆಂಕಿ ಹಚ್ಚಿ ಕೊಂದ ಆರೋಪಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ ನಂತರ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ನಡೆದ ಎನ್‌ಕೌಂಟರ್‌ನಲ್ಲಿ ಆತನ ಕಾಲಿಗೆ ಗುಂಡು ಹಾರಿಸಲಾಯಿತು ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರೋಪಿ ಪತಿಯನ್ನು ವಿಪಿನ್ ಭಾಟಿ ಎಂದು ಗುರುತಿಸಲಾಗಿದ್ದು, ಗುರುವಾರ 36 ಲಕ್ಷ ರೂಪಾಯಿ ವರದಕ್ಷಿಣೆಗಾಗಿ 28 ​​ವರ್ಷದ … Continued

ಧರ್ಮಸ್ಥಳ ಪ್ರಕರಣ : ಯೂ ಟ್ಯೂಬರ್ ಸಮೀರಗೆ ಕೋರ್ಟಿನಿಂದ ನಿರೀಕ್ಷಣಾ ಜಾಮೀನು

ಮಂಗಳೂರು : ಧರ್ಮಸ್ಥಳ ಪ್ರಕರಣದ ಬಗ್ಗೆ ಎಐ ವೀಡಿಯೊ ಮಾಡಿ ಜನರಲ್ಲಿ ಕೋಮು ವೈಷಮ್ಯ ಮೂಡಿಸಲು ಪ್ರಯತ್ನಿಸಿದ ಆರೋಪದ ಮೇರೆಗೆ ಧರ್ಮಸ್ಥಳ ಪೊಲೀಸರು ದಾಖಲಿಸಿದ್ದ ಸುಮಟೋ ಕೇಸ್ ಗೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿದ್ದ ಯೂಟ್ಯೂಬರ್ ಸಮೀರ್ ಎಂಡಿಗೆ ಕೋರ್ಟ್ ಜಾಮೀನು ನೀಡಿದೆ. ಯೂಟ್ಯೂಬರ್‌ ಸಮೀರ್‌ ಎಂ.ಡಿ.ಗೆ ಮಂಗಳೂರು ಜಿಲ್ಲಾ ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು … Continued

ಧರ್ಮಸ್ಥಳ: ನಾಲ್ವರು ಯೂ ಟ್ಯೂಬರ್‌ ಗಳ ಮೇಲೆ ಹಲ್ಲೆ

ಮಂಗಳೂರು : ವೀಡಿಯೊ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎಂದು ವರದಿಯಾಗಿದೆ. ನಂತರ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್‌ ನಡೆಸಿದ್ದಾರೆ. ಸಂದರ್ಶನ ನಡೆಸುತ್ತಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆದಿದೆ. ಈ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಯೂ ಟ್ಯೂಬರ್‌ಗಳಾದ ಅಜಯ, … Continued

ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ; 40ಕ್ಕೂ ಹೆಚ್ಚು ಕಿಡಿಗೇಡಿಗಳ ಐಪಿ ಅಡ್ರೆಸ್ ಪತ್ತೆ ಹಚ್ಚಿದ ಪೊಲೀಸರು

ಬೆಂಗಳೂರು: ನಟಿ ರಮ್ಯಾ (Actress Ramya) ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲವಾಗಿ ಮೆಸೇಜ್ ಮಾಡಿ ನಿಂದಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು 40ಕ್ಕೂ ಹೆಚ್ಚು ಜನರ ಐಪಿ ಅಡ್ರೆಸ್‌ಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ತಿಳಿದುಬಂದಿದೆ. ಈವರೆಗೆ ನಾಲ್ವರನ್ನು ಬಂಧಿಸಿದ್ದಾರೆ. ನಟಿ ರಮ್ಯಾಗೆ ಅಶ್ಲೀಲ ಮೆಸೇಜ್ ಮಾಡಿ ನಿಂದನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರು ಪ್ರಕರಣದ ತನಿಖೆಯನ್ನು … Continued

ದಾಂಡೇಲಿ : ಮಾಡಿಕೊಂಡ ಸಾಲ ತೀರಿಸಲು 20 ದಿನದ ಮಗು ಮಾರಾಟ ಮಾಡಿದ ದಂಪತಿ‌…!

ಕಾರವಾರ : ಮಾಡಿಕೊಂಡ ಸಾಲ ತೀರಿಸಲು ದಂಪತಿ‌ ತಮ್ಮ 20 ದಿನದ ಮಗುವನ್ನು ಮಾರಾಟ ಮಾಡಿರುವ ಘಟನೆ ಉತ್ತರ ಕ‌ನ್ನಡ ಜಿಲ್ಲೆಯ ದಾಂಡೇಲಿ (Dandeli) ತಾಲೂಕಿನ ಹಳೇ ದಾಂಡೇಲಿಯಲ್ಲಿ ನಡೆದಿದೆ. ಹಳೇ ದಾಂಡೇಲಿಯ ದೇಶಪಾಂಡೆ ನಗರದ ನಿವಾಸಿಯಾದ ಮಾಹೀನ್ ಎಂಬ ಮಹಿಳೆ ಜೂನ್ 17 ರಂದು ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದರು. … Continued

ವಿಜಯಪುರ | ಮನಗೂಳಿ ಕೆನರಾ ಬ್ಯಾಂಕಿನಲ್ಲಿ ಭಾರಿ ಕಳ್ಳತನ ; 59 ಕೆಜಿ ಚಿನ್ನಾಭರಣ ದೋಚಿದ ಕಳ್ಳರು…

ವಿಜಯಪುರ:   ಜಿಲ್ಲೆಯ ಮನಗೂಳಿ ಕೆನರಾ ಬ್ಯಾಂಕಿನಿಂದ ಕಳ್ಳರು 59 ಕೆಜಿ ಚಿನ್ನವನ್ನು ದೋಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ. ಬ್ಯಾಂಕಿನಿಂದ ಸಾಲ ಪಡೆದ ಜನರು ಚಿನ್ನವನ್ನು ಠೇವಣಿ ಇಟ್ಟಿದ್ದರು ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬಿ ನಿಂಬರ್ಗಿ ಸುದ್ದಿಗಾರರಿಗೆ ತಿಳಿಸಿದ್ದಾರೆ. 59 ಕೆಜಿ ಚಿನ್ನ ಕಳುವಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ತೀರ್ಮಾನಕ್ಕೆ … Continued

ಪೊಲೀಸರು ಮೂವರನ್ನು ರಸ್ತೆಯಲ್ಲಿ ಕೂಡ್ರಿಸಿ ಲಾಠಿಯಿಂದ ಥಳಿಸುತ್ತಿರುವ ವೀಡಿಯೊ ವೈರಲ್ ; ಪೊಲೀಸ್‌ ಅಮಾನತು

ಆಂಧ್ರಪ್ರದೇಶದ (Andhra Pradesh) ಗುಂಟೂರು ಜಿಲ್ಲೆಯ ಐತಾನಗರದಲ್ಲಿ ಕಾನ್‌ಸ್ಟೆಬಲ್ ಚಿರಂಜೀವಿ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ಪೊಲೀಸರು ಮೂವರಿಗೆ ನಡು ರಸ್ತೆಯಲ್ಲಿ ಸಾರ್ವಜನಿಕವಾಗಿ ಲಾಠಿಯಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಪೊಲೀಸರು ಸಾರ್ವಜನಿಕವಾಗಿ ಆರೋಪಿಗಳಿಗೆ ಲಾಠಿಯಿಂದ ಹೊಡೆದು ಶಿಕ್ಷೆ ನೀಡಿರುವ ವೀಡಿಯೊ ವೈರಲ್‌ ಆದ ನಂತರ ಇದು ವಿವಾದಕ್ಕೆ ಕಾರಣವಾಗಿದ್ದು, ಅದಕ್ಕೆ … Continued

ಬೆಂಗಳೂರು | ಪುನರ್ವಸತಿ ಕೇಂದ್ರದಲ್ಲಿ ರೋಗಿಗೆ ದೊಣ್ಣೆಯಿಂದ ಅಮಾನುಷವಾಗಿ ಹಲ್ಲೆ : ವೀಡಿಯೊ ವೈರಲ್‌

ಬೆಂಗಳೂರು : ಬೆಂಗಳೂರಿನ ಬಳಿಯ ಪುನರ್ವಸತಿ ಕೇಂದ್ರವೊಂದರಲ್ಲಿ ರೋಗಿಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದ್ದು, ಅದರ ಆಘಾತಕಾರಿ ವೀಡಿಯೊವೊಂದು ಹೊರಹೊಮ್ಮಿದೆ. ಸಿಸಿಟಿವಿ ದೃಶ್ಯಗಳಲ್ಲಿ ನಾಲ್ವರು ಇತರರ ಸಮ್ಮುಖದಲ್ಲಿ ವ್ಯಕ್ತಿಯೊಬ್ಬ ಕೋಣೆಯೊಳಗೆ ಕೋಲಿನಿಂದ ರೋಗಿಯನ್ನು ಹೊಡೆಯುತ್ತಿರುವುದನ್ನು ತೋರಿಸಲಾಗಿದೆ. ರೋಗಿಯನ್ನು ಇಬ್ಬರು ಎಳೆದೊಯ್ದಿರುವುದು ಸಹ ಕಂಡುಬಂದಿದೆ. ಬೆಂಗಳೂರಿನಿಂದ ಸುಮಾರು 30 ಕಿಲೋಮೀಟರ್ ದೂರದಲ್ಲಿರುವ ನೆಲಮಂಗಲದಲ್ಲಿರುವ ಖಾಸಗಿ … Continued

ಅಪರೂಪದ 11 ಹಲ್ಲಿಗಳ ಕಳ್ಳಸಾಗಾಣಿಕೆಗೆ ಯತ್ನಿಸಿ ಸಿಕ್ಕಿಬಿದ್ದ ಗ್ಯಾಂಗ್‌ ; ಒಂದು ಹಲ್ಲಿಗೆ 60 ಲಕ್ಷ ರೂ.ಗಳಂತೆ ಮಾರಾಟಕ್ಕೆ ಯತ್ನ..!

ಗುವಾಹತಿ : ಅಸ್ಸಾಂನ ದಿಬ್ರುಗಢದಲ್ಲಿ ಪೊಲೀಸರು ಶುಕ್ರವಾರ 11 ಅಪರೂಪದ ಟೋಕೆ ಗೆಕ್ಕೊ ಹಲ್ಲಿಗಳನ್ನು ವಶಪಡಿಸಿಕೊಂಡಿದ್ದು, ಮೂವರು ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿಯಲ್ಲಿ ಟೋಕೆ ಗೆಕ್ಕೊಗಳನ್ನು ಹೆಚ್ಚು ಅಳಿವಿನಂಚಿನಲ್ಲಿವ ಜೀವಿಗಳೆಂದು ಪಟ್ಟಿ ಮಾಡಲಾಗಿರುವುದರಿಂದ ಅವುಗಳ ರಫ್ತು ನಿಷೇಧಿಸಲಾಗಿದೆ. ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ, ಗರಿಷ್ಠ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ … Continued

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ; ದರೋಡೆಕೋರನ ಕಾಲಿಗೆ ಗುಂಡೇಟು

ಗದಗ: ಪೊಲೀಸರ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ದರೋಡೆಕೋರನ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ​​ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ ಮತ್ತು ಡೋಣಿ ಗ್ರಾಮದಲ್ಲಿ ನಡೆದಿದೆ. ಆರೋಪಿ ಜಯಸಿಂಹ ಮೊಡಕೆರ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಆರೋಪಿ ಜಯಸಿಂಹ ಮೊಡಕೆರನನ್ನು ಕರೆತರುವಾಗ ಈ ಘಟನೆ ನಡೆದಿದೆ. ಎಂದು ಹೇಳಲಾಗಿದ್ದು, … Continued