ಮಾರ್ಚ್‌ 31ರೊಳಗೆ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಬದಲಾವಣೆ ಮಾಡಿ : ಬಿಜೆಪಿ ಹೈಕಮಾಂಡಿಗೆ ಮಠಾಧೀಶರ ಗಡುವು

ಹುಬ್ಬಳ್ಳಿ: ಕೇಂದ್ರ ಸಚಿವ ಹಾಗೂ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರ ವಿರುದ್ದ ತಿರುಗಿ ಬಿದ್ದಿರುವ 40ಕ್ಕೂ ಅಧಿಕ ಮಠಾಧೀಶರು ಮಾರ್ಚ್‌ 31ರ ಒಳಗೆ ಧಾರವಾಡ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬದಲಿಸಿ ಎಲ್ಲ ಸಮುದಾಯದವರೂ ಒಪ್ಪುವ ಸೂಕ್ತ ಅಭ್ಯರ್ಥಿಗೆ ಟಿಕೆಟ್‌ ನೀಡಬೇಕು ಎಂದು ಬಿಜೆಪಿಯ ಹೈಕಮಾಂಡ್‍ಗೆ ಗಡುವು ನೀಡಿದ್ದಾರೆ. ಹುಬ್ಬಳ್ಳಿಯ ಮೂರುಸಾವಿರಮಠದಲ್ಲಿ … Continued

ಹುಬ್ಬಳ್ಳಿ ವಿಮಾನ ನಿಲ್ದಾಣದ ಟರ್ಮಿನಲ್ ವಿಸ್ತರಣೆಗೆ 273 ಕೋಟಿ ರೂ.ನೀಡಲು ಕೇಂದ್ರ ಅನುಮೋದನೆ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿ ಏರ್​​ಪೋರ್ಟ್ (Hubballi Airport)​ ಮೇಲ್ದರ್ಜೆಗೆ ಏರಿಸಲು ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, 273 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ಸೂಚಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಒಮ್ಮೆಲೇ 1,400 ಪ್ರಯಾಣಿಕರನ್ನು ನಿಭಾಯಿಸುವ ಯೋಜನೆ ಜನವರಿಯಲ್ಲಿ ಆರಂಭವಾಗುವ ಸಾಧ್ಯತೆ ಇದ್ದು, ಎರಡು ವರ್ಷಗಳಲ್ಲಿ ಈ ಯೋಜನೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ … Continued

ಜುಲೈನಲ್ಲಿ ಧಾರವಾಡ-ಬೆಂಗಳೂರು ನಡುವೆ `ವಂದೇ ಭಾರತ ರೈಲು’ ಸಂಚಾರ ಆರಂಭ : ಸಚಿವ ಪ್ರಹ್ಲಾದ ಜೋಶಿ

ಧಾರವಾಡ : ಜುಲೈ ತಿಂಗಳಲ್ಲಿ ಧಾರವಾಡ-ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ ಆರಂಭವಾಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಈ ಕುರಿತು ಟ್ವೀಟರಿನಲ್ಲಿ ಮಾಹಿತಿ ನೀಡಿರುವ ಅವರು, ಜುಲೈನಲ್ಲಿ ಧಾರವಾಡ – ಬೆಂಗಳೂರು ವಂದೇ ಭಾರತ ರೈಲಿಗೆ ಚಾಲನೆ ನೀಡಲಾಗುವುದು. ಬಹು ನಿರೀಕ್ಷೆಯ ಧಾರವಾಡ – ಬೆಂಗಳೂರು ನಡುವಿನ ವಂದೇ ಭಾರತ … Continued

ಕರ್ನಾಟಕ ವಿಧಾನಸಭಾ ಚುನಾವಣೆ 2023 : ಏಪ್ರಿಲ್ 6 ಅಥವಾ 7 ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ-ಪ್ರಹ್ಲಾದ ಜೋಶಿ

ಬೆಳಗಾವಿ : ರಾಜ್ಯ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷವು ಏಪ್ರಿಲ್ 6 ಅಥವಾ 7 ರಂದು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶುಕ್ರವಾರ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಟಿಕೆಟ್ ನೀಡುವ ಮೊದಲು ಪಕ್ಷವು ವಿಭಿನ್ನ ಜನರ ಅಭಿಪ್ರಾಯಗಳನ್ನು ತೆಗೆದುಕೊಳ್ಳುವ ಪ್ರಕ್ರಿಯೆಯಲ್ಲಿದೆ. ಬಹುತೇಕ ಏಪ್ರಿಲ್ 6 … Continued

ಇನ್ನು ಹುಬ್ಬಳ್ಳಿಯಿಂದ ಪುಣೆಗೆ ಪ್ರತಿದಿನ ವಿಮಾನ ಸಂಚಾರ ಆರಂಭ

ಹುಬ್ಬಳ್ಳಿ: ಪುಣೆಗೆ ಹುಬ್ಬಳ್ಳಿಯಿಂದ ಪ್ರತಿ ದಿನ ವಿಮಾನ ಸೇವೆ ಪ್ರಾರಂಭವಾಗಲಿದ್ದು, ಇದರಿಂದ ವಾಣಿಜ್ಯ ನಗರಿಯ ವಿಮಾನಯಾನ ಸಂಪರ್ಕ ಮತ್ತಷ್ಟು ಬಲಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಇಂಡಿಗೋ ವಿಮಾನಯಾನ ಸಂಸ್ಥೆ ಮಾರ್ಚ್ 13 ರಿಂದ ಹುಬ್ಬಳ್ಳಿಯಿಂದ ಪುಣೆಗೆ ಪ್ರತಿ ದಿನ ವಿಮಾನಯಾನ ಸೇವೆ ಪ್ರಾರಂಭಿಸಲಿದೆ ಎಂದು ಅವರು ತಿಳಿಸಿದ್ದಾರೆ. ಪ್ರತಿ ದಿನ 6E … Continued

ಹುಬ್ಬಳ್ಳಿ-ಧಾರವಾಡಕ್ಕೆ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (ಎನ್‌ಎಫ್‌ಎಸ್‌ಯು) ಸ್ಥಾಪನೆಗೆ ಭಾರತ ಸರ್ಕಾರದ ಗೃಹ ಸಚಿವಾಲಯವು ತಾತ್ವಿಕ ಅನುಮೋದನೆ ನೀಡಿದೆ. ಈ ಕುರಿತು ಟ್ವಿಟರ್‌ನಲ್ಲಿ ಸುದ್ದಿ ಹಂಚಿಕೊಂಡಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು, ಹುಬ್ಬಳ್ಳಿ_ಧಾರವಾಡ ಅವಳಿ ನಗರಕ್ಕೆ ರಾಷ್ಟ್ರೀಯ ಪ್ರಾಮುಖ್ಯತೆಯ ಮತ್ತೊಂದು ಸಂಸ್ಥೆಯನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ. ನ್ಯಾಷನಲ್ ಫಾರೆನ್ಸಿಕ್ ಸೈನ್ಸ್ … Continued

ಫೆಬ್ರವರಿ 4ರಿಂದ ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಸೇವೆ ಆರಂಭ

ಹುಬ್ಬಳ್ಳಿ : ಫೆಬ್ರವರಿ 4ರಿಂದ ಹುಬ್ಬಳ್ಳಿಯಿಂದ ಪುಣೆಗೆ ನೇರ ವಿಮಾನ ಸೇವೆ ಆರಂಭವಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇಂದು, ಬುಧವಾರ ಇಂಡಿಗೋ ಅಧಿಕಾರಿಗಳೊಂದಿಗೆ ಈ ಸೇವೆ ಆರಂಭಿಸುವ ಕುರಿತು ಚರ್ಚೆ ನಡೆಸಿದ ನಂತರ ಈ ನಿರ್ಣಯ ಕೈಗೊಳ್ಳಲಾಗಿದೆ. ವಾರಕ್ಕೆ ಎರಡು ಬಾರಿ ಈ ಸೇವೆ ಲಭ್ಯವಿರಲಿದ್ದು, ಪ್ರತಿ ಶನಿವಾರ ಹಾಗೂ ಭಾನುವಾರ ಈ … Continued

ಮುಂದಿನ ತಿಂಗಳಿಂದ ಹುಬ್ಬಳ್ಳಿಯಿಂದ ದೆಹಲಿಗೆ ಪ್ರತಿದಿನ ವಿಮಾನ ಹಾರಾಟ

ಹುಬ್ಬಳ್ಳಿ: ಹುಬ್ಬಳ್ಳಿ – ದೆಹಲಿ ನಡುವೆ ಪ್ರತಿದಿನ ವಿಮಾನಯಾನ ನವೆಂಬರ್ 14ರಿಂದ ಆರಂಭವಾಗಲಿದೆ. ಕೇಂದ್ರ ಸಚಿವ ಶ್ರೀ ಪ್ರಲ್ಹಾದ ಜೋಶಿ ಅವರು ಇಂಡಿಗೋ ಏರ್‌ಲೈನ್ಸ್ ಅಧಿಕಾರಿಗಳೊಂದಿಗೆ ನಡೆಸಿದ ಮಾತುಕತೆ ನಂತರ ಈ ಬೆಳವಣಿಗೆ ನಡೆದಿದೆ. ಇಂಡಿಗೋ ಏರ್‌ಲೈನ್ಸ್‌ ಅಧಿಕಾರಿಗಳು ಪ್ರತಿದಿನ ದೆಹಲಿ-ಹುಬ್ಬಳ್ಳಿ ಹಾಗೂ ಹುಬ್ಬಳ್ಳಿ-ದೆಹಲಿ ನಡುವೆ ವಿಮಾನಯಾನ ಆರಂಭಿಸಲಿದ್ದಾರೆ. ದೆಹಲಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಈ … Continued

ಗ್ರಾಮಗಳ ವಿದ್ಯುತ್ ಸಂಪರ್ಕಗಳ ವಿಚಾರ : ಸತ್ಯ ಮರೆಮಾಚಿದ ಕೇಂದ್ರ ಸಚಿವರು -ವಸಂತ ಲದವಾ

ಹುಬ್ಬಳ್ಳಿ: ಹಿಂದಿನ ಈಗ ಕಾಂಗ್ರೆಸ ಸರ್ಕಾರದ ಸಾಧನೆಗಳನ್ನು ಮರೆಮಾಚಿ ಎಲ್ಲವನ್ನೂ ತಾವೇ ಮಾಡಿದಂತೆ ತೋರಿಸುವ ಕೇಂದ್ರ ಸಚಿವರ ಹೇಳಿಕೆಗೆ ಕಾಂಗ್ರೆಸ ವಕ್ತಾರ ವಸಂತ ಲದವಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್‌ ಸರ್ಕಾರ ಕೇವಲ ೨೦೦೬-೦೭ರಲ್ಲಿ ದೇಶದ ೨೮,೭೦೬ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಅಮೋಘ ಸಾಧನೆಯನ್ನು ಯಾವುದೇ ಪ್ರಚಾರವಿಲ್ಲದೆ … Continued

ಧ್ವನಿವರ್ಧಕ ವಿಚಾರದಲ್ಲಿ ಯಾರೂ ಕಾನೂನು ಕೈಗೆತ್ತಿಕೊಳ್ಳುವುದು ಬೇಡ: ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಧ್ವನಿವರ್ಧಕಗಳ ಶಬ್ದಮಿತಿ ಬಗ್ಗೆ ರಾಜ್ಯ ಸರ್ಕಾರವೇ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತದೆ. ಯಾರೂ ಕಾನೂನು ಕೈಗೆತ್ತಿಕೊಳ್ಳುವ ಕೆಲಸಮಾಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಮಸೀದಿಗಳಲ್ಲಿ ಧ್ವನಿವರ್ಧಕ ತೆರವಿಗೆ ಶ್ರೀರಾಮ ಸೇನೆ ನೀಡಿದ ಗಡುವು ಕುರಿತು ಭಾನುವಾರ ಹುಬ್ಬಳ್ಳಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರದ ಕೆಲಸವನ್ನು ಸರ್ಕಾರ ಮಾಡುತ್ತದೆ. ಯಾರೂ ಕಾನೂನು … Continued