ಹಾಸನ: ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ ಎಸ್‌ಐಟಿ

ಹಾಸನ: ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ವಿದೇಶದಿಂದ ಬೆಂಗಳೂರಿಗೆ ಮರಳುವ ದಿನಾಂಕ ಸಮೀಪಿಸುತ್ತಿದ್ದಂತೆಯೇ ಎಸ್ ಐಟಿ ತನಿಖೆ ಚುರುಕುಗೊಳಿಸಿದೆ. ಪಈ ಪ್ರಕರಣದ ತನಿಖೆಗಾಗಿ ರಚಿಸಲಾದ ವಿಶೇಷ ತನಿಖಾ ತಂಡ (ಎಸ್‌ಐಟಿ) ಮತ್ತು ವಿಧಿ ವಿಜ್ಞಾನ ಪ್ರಯೋಗಾಲಯದ (ಎಸ್‌ಎಫ್‌ಎಲ್) ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರ ಅಧಿಕೃತ ಕ್ವಾರ್ಟರ್ಸ್‌ಗೆ ಮಂಗಳವಾರ ರಾತ್ರಿ ಭೇಟಿ … Continued

ವೀಡಿಯೊ ಬಿಡುಗಡೆ ಮಾಡಿದ ಬೆನ್ನಲ್ಲೇ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ…!

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಮೇ 31ರಂದು ಜರ್ಮನಿಯಿಂದ ಭಾರತಕ್ಕೆ ಬರಲು ವಿಮಾನದ ಟಿಕೆಟ್‌ ಬುಕ್‌ ಆಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ವಿಶೇಷ ತನಿಖಾ ತಂಡದ (ಎಸ್‌ಐಟಿ) ಎದುರು ವಿಚಾರಣೆಗೆ ಮೇ 31ರಂದು ಹಾಜರಾಗುವುದಾಗಿ ತಿಳಿಸಲು ಅಜ್ಞಾತ ಸ್ಥಳದಿಂದ ವೀಡಿಯೊ ಬಿಡುಗಡೆ ಮಾಡಿದ್ದ ಪ್ರಜ್ವಲ್‌ ರೇವಣ್ಣ, … Continued

ಪ್ರಜ್ವಲ್ ರೇವಣ್ಣ ವೀಡಿಯೊ ಪ್ರಕರಣ : ಎಸ್‌ಐಟಿಯಿಂದ ಇಬ್ಬರ ಬಂಧನ

ಬೆಂಗಳೂರು : ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವೀಡಿಯೊ ಹರಿಬಿಟ್ಟವರನ್ನು ಎಸ್​ಐಟಿ ಬಂಧಿಸಿದೆ ಎಂದು ವರದಿಯಾಗಿದೆ. ಆರೋಪಿಗಳಾದ ನವೀನ ಗೌಡ, ಚೇತನ ಎಂಬವರನ್ನು ಎಸ್‌ಐಟಿ ಬಂಧಿಸಿದೆ ಎಂದು ವರದಿಯಾಗಿದೆ. ವೀಡಿಯೊ ವೈರಲ್​ ಮಾಡಿದ್ದವರನ್ನು ಬಂಧಿಸದಕ್ಕೆ ಎಚ್​ಡಿ ಕುಮಾರಸ್ವಾಮಿ ಅವರು ಸಾಕಷ್ಟು ಆಕ್ಷೇಪ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ದೂರು ದಾಖಲಾದ … Continued

ಮಹಿಳೆ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯದ ಮೆಟ್ಟಿಲೇರಿದ ಭವಾನಿ ರೇವಣ್ಣ

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣಕ್ಕೆ ಸಂಬಂಧಿಸಿದಂತೆ ಶಾಸಕ ಎಚ್‌.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನಿರೀಕ್ಷಣಾ ಮತ್ತು ಸಾಮಾನ್ಯ ಜಾಮೀನು ಕೋರಿ ಭವಾನಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ವಿಶೇಷ … Continued

ಪ್ರಜ್ವಲ್ ರೇವಣ್ಣ ಪ್ರತ್ಯಕ್ಷ : ವಿದೇಶದಿಂದಲೇ ವೀಡಿಯೊ ಸಂದೇಶ; ಮೇ 31ರಂದು ವಿಚಾಣೆಗೆ ಹಾಜರಾಗ್ತಾರಂತೆ…

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna) ಅವರಿಗೆ ತಕ್ಷಣವೇ ಕರ್ನಾಟಕಕ್ಕೆ ವಾಪಸ್‌ ಆಗಬೇಕು ಹಾಗೂ ಈ ನೆಲದ ಕಾನೂನು ಗೌರವಿಸಬೇಕು ಎಂದು ಅಜ್ಜ, ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ (H D Deve Gowda) ಅವರು ಬಹಿರಂಗ ಪತ್ರ ಬರೆದ ಬೆನ್ನಲ್ಲೇ ಪ್ರಜ್ವಲ್‌ ರೇವಣ್ಣ ಅವರು ಭಾರತಕ್ಕೆ ಬರುವುದಾಗಿ ಘೋಷಣೆ … Continued

ಅಶ್ಲೀಲ ವೀಡಿಯೊ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ನೀಡಿದ ವಿದೇಶಾಂಗ ಸಚಿವಾಲಯ

ನವದೆಹಲಿ: ಪೆನ್‌ಡ್ರೈವ್ ಪ್ರಕರಣದ ಬಳಿಕ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿದೇಶಾಂಗ ಸಚಿವಾಲಯ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ನಿಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಯಾಕೆ ರದ್ದು ಮಾಡಬಾರದು ಎಂಬುದಕ್ಕೆ ಉತ್ತರ ನೀಡುವಂತೆ ಅದು ಸೂಚಿಸಿದೆ. ವಿದೇಶಾಂಗ ಸಚಿವಾಲಯ ಶುಕ್ರವಾರ ಪ್ರಜ್ವಲ್ ರೇವಣ್ಣ​ ಅವರಿಗೆ ಜಾರಿ ಮಾಡಿದ ಶೋಕಾಸ್ ನೋಟಿಸ್ ನಲ್ಲಿ ವಿದೇಶಕ್ಕೆ … Continued

ನನ್ನ ತಾಳ್ಮೆ ಪರೀಕ್ಷಿಸಬೇಡ, ಎಲ್ಲೇ ಇದ್ದರೂ ತಕ್ಷಣ ಬಂದು ಶರಣಾಗು: ಪ್ರಜ್ವಲ್‌ ಗೆ ದೇವೇಗೌಡ ತಾಕೀತು

ಬೆಂಗಳೂರು: ಪ್ರಜ್ವಲ್‌ ನೀನು ಎಲ್ಲಿಯೇ ಇದ್ದರೂ ಪೋಲಿಸರ ಮುಂದೆ ಶರಣಾಗಬೇಕು, ವಿಚಾರಣೆಯನ್ನು ಎದುರಿಸಬೇಕು ಎಂದು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ ತಾಕೀತು ಮಾಡಿದ್ದಾರೆ. ಅಶ್ಲೀಲ ವೀಡಿಯೊ ಪ್ರಕರಣದಲ್ಲಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭಾರತಕ್ಕೆ ವಾಪಸ್ ಬರುವಂತೆ ಮಾಡಿದ ಮನವಿಯ ನಂತರ ಈಗ ಮಾಜಿ … Continued

ಪೆನ್‌ಡ್ರೈವ್ ಕೇಸ್‌ನಲ್ಲಿ ಎಚ್‌.ಡಿ. ಕುಮಾರಸ್ವಾಮಿ ಹೆಸರು ಹೇಳಲು ನನಗೆ 100 ಕೋಟಿ ರೂ. ಆಫರ್ ನೀಡಿದ್ದ ಡಿ.ಕೆ.ಶಿವಕುಮಾರ : ದೇವರಾಜೇ ಗೌಡ ಸ್ಫೋಟಕ ಹೇಳಿಕೆ

ಹಾಸನ : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈಗ ಪ್ರಕರಣವೊಂದರಲ್ಲಿ ಪೊಲೀಸರ ವಶದಲ್ಲಿರುವ ವಕೀಲ ದೇವರಾಜೇ ಗೌಡ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಅಶ್ಲೀಲ ವೀಡಿಯೊಗಳಿರುವ ಪೆನ್‌‌ಡ್ರೈವ್ ಹಂಚಿಕೆಯನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಸೂಚನೆಯಂತೆ ಮಾಡಿದ್ದೇನೆ ಎಂದು ಹೇಳಿದರೆ 100 ಕೋಟಿ ರೂಪಾಯಿ ಕೊಡುವುದಾಗಿ … Continued

ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ : ಸ್ವತಂತ್ರ ಸಂಸ್ಥೆಯಿಂದ ತನಿಖೆಗೆ ಕೋರಿದ್ದ ಅರ್ಜಿ ತುರ್ತು ವಿಚಾರಣೆಗೆ ಹೈಕೋರ್ಟ್‌ ನಕಾರ

ಬೆಂಗಳೂರು : ಹಾಸನ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಬೇಕು ಎಂದು ಕೋರಿದ್ದ ಅರ್ಜಿಯ ತುರ್ತು ವಿಚಾರಣೆಗೆ ಹೈಕೋರ್ಟ್‌ ಮಂಗಳವಾರ ನಿರಾಕರಿಸಿದ್ದು, ಬೇಸಿಗೆ ರಜೆ ಬಳಿಕ ಅರ್ಜಿಯನ್ನು ವಿಚಾರಣೆಗೆ ಪಟ್ಟಿ ಮಾಡಲು ಸೂಚಿಸಿದೆ. ಬೆಂಗಳೂರಿನ ರಾಷ್ಟ್ರ ಸಮಿತಿ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ರಜಾಕಾಲೀನ ಏಕಸದಸ್ಯ ಪೀಠದಲ್ಲಿದ್ದ … Continued

ಪ್ರಜ್ವಲ್ ರೇವಣ್ಣ ಪ್ರಕರಣ : ಮಾಜಿ ಶಾಸಕ ಪ್ರೀತಂಗೌಡ ಆಪ್ತರನ್ನು ವಶಕ್ಕೆ ಪಡೆದ ಎಸ್ಐಟಿ

ಹಾಸನ : ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ಅಧಿಕಾರಿಗಳು(ಎಸ್ಐಟಿ) ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಶಾಸಕ ಪ್ರೀತಂಗೌಡ ಆಪ್ತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಪ್ರೀತಂಗೌಡ ಆಪ್ತರಾದ ಲಿಖಿತ್ ಮತ್ತು ಕಚೇರಿಯ ಸಿಬ್ಬಂದಿ ಚೇತನ ಎಂಬವರನ್ನು ಎಸ್ಐಟಿ ವಶಕ್ಕೆ ಪಡೆದಿದೆ. ಜೊತೆಗೆ ಇತರ ಇಬ್ಬರಿಗಾಗಿ … Continued