ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಪಿಎಫ್‌ಐ ಸದಸ್ಯರನ್ನು ಬಂಧಿಸಿದ ಎನ್‌ಐಎ

posted in: ರಾಜ್ಯ | 0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಹಲವು ಸ್ಥಳಗಳಲ್ಲಿ ದಾಳಿ ನಡೆಸಿ ಮೂವರನ್ನು ಬಂಧಿಸಿದೆ. ಪ್ರವೀಣ ನೆಟ್ಟಾರು ಹತ್ಯೆಯ ಸಂಚಿನಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಕೆ ಮಹಮ್ಮದ್ ಇಕ್ಬಾಲ್ ಹಾಗೂ ಈತನ ಸಹೋದರ … Continued

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: 32 ಕಡೆ ದಾಳಿ ನಡೆಸಿದ ಎನ್‌ಐಎ

posted in: ರಾಜ್ಯ | 0

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ನಡೆದಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ ‌ನೆಟ್ಟಾರು ಹತ್ಯೆ ಪ್ರಕರಣ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳ ತಂಡ ಪುತ್ತೂರು, ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ. ಎರಡು ತಿಂಗಳ ಹಿಂದೆ ದುಷ್ಕರ್ಮಿಗಳ ಚೂಕು ಇರಿತಕ್ಕೆ ಮೃತಪಟ್ಟಿದ್ದ ಪ್ರವೀಣ ನೆಟ್ಟಾರು ಹತ್ಯೆ ತನಿಖೆಯನ್ನು ಎನ್‌ಐಎ ತಂಡ ನಡೆಸುತ್ತಿದೆ. … Continued

ಪ್ರವೀಣ್ ಹತ್ಯೆ ಪ್ರಕರಣ: ಮೂವರು ಮುಖ್ಯ ಆರೋಪಿಗಳ ಬಂಧನದ ಮಾಹಿತಿ ನೀಡಿದ ಎಡಿಜಿಪಿ ಅಲೋಕಕುಮಾರ್

posted in: ರಾಜ್ಯ | 0

ಮಂಗಳೂರು: ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಡಿಜಿಪಿ ಅಲೋಕಕುಮಾರ್​ ಅವರು, ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿ ಹಲ್ಲೆ ನಡೆಸಿದ ಮೂವರು ಆರೋಪಿಗಳನ್ನು ಇಂದು, ಗುರುವಾರ ಬೆಳಗ್ಗೆ ಮಂಗಳೂರಿನ ತಲಪಾಡಿ ಚೆಕ್ ಪೋಸ್ಟ್ ಬಳಿ ಬಂಧಿಸಲಾಗಿದೆ. ಸುಳ್ಯದ ಶಿಯಾಬ್ … Continued

ಪ್ರವೀಣ ನೆಟ್ಟಾರು​ ​ಹತ್ಯೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳ ಬಂಧನ…?

posted in: ರಾಜ್ಯ | 0

ಮಂಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಪೊಲೀಸರು ಕೇರಳದಲ್ಲಿ ಆರೋಪಿಗಳನ್ನು ಬಂಧಿಸಿರುವ ಬಗ್ಗೆ ಮಾಹಿತಿ ಇದ್ದು, ಗೌಪ್ಯ ಸ್ಥಳದಲ್ಲಿರಿಸಿ ಮೂವರು ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ. ಪ್ರವೀಣ್ ಹತ್ಯೆಗೈದ ಪ್ರಮುಖ ಆರೋಪಿಗಳ ಬಂಧನದ ಬಗ್ಗೆ … Continued

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ : ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿ ಸೀಜ್‌ ಮಾಡಲು ಕ್ರಮ ಕೈಗೊಳ್ತೇವೆ

posted in: ರಾಜ್ಯ | 0

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಮುಖಂಡ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಆಸ್ತಿ ಸೀಜ್ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಡಿಜಿಪಿ ಅಲೋಕಕುಮಾರ್ ತಿಳಿಸಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪರಾರಿಯಾದ ಆರೋಪಿಗಳನ್ನು ಪತ್ತೆಹಚ್ಚಲು ಕೋರ್ಟ್‌ ಮುಖಾಂತರ ವಾರೆಂಟ್‌ ಪಡೆದು ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಲು ಕ್ರಮ ಕೈಗೊಳ್ಳುತ್ತೇವೆ. … Continued

ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ : ಮತ್ತೊಬ್ಬ ಆರೋಪಿ ಬಂಧನ

posted in: ರಾಜ್ಯ | 0

ಮಂಗಳೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಠಾಣೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಈವರೆಗೆ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಸುಳ್ಯದ ಜಟ್ಟಿಪಳ್ಳ ನಿವಾಸಿ ಅಬ್ದುಲ್ ಕಬೀರ್ (33) ಬಂಧಿತ ಆರೋಪಿಯಾಗಿದ್ದಾನೆ. ಪ್ರವೀಣ್ ಹತ್ಯೆಯಲ್ಲಿ ಪ್ರಮುಖ ಆರೋಪಿಗಳಿಗೆ ನೆರವು ನೀಡಿದ … Continued

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು

posted in: ರಾಜ್ಯ | 0

ಬೆಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಎಸ್​ಪಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದು, ಮೊಹ್ಮದ್​ ಶಫೀಕ್​ ಹಾಗೂ ಜಾಕೀರ್ ಸವಣೂರು ಎಂಬವರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಶಂಕೆ ಇದ್ದು, ತನಿಖೆ ನಡೆಯುತ್ತಿದೆ ಎಂದು … Continued