ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನೂತನ ಅಧ್ಯಕ್ಷರಾಗಿ ಈಶ್ವರ ಖಂಡ್ರೆ ಅವಿರೋಧ ಆಯ್ಕೆ

ಬೆಂಗಳೂರು : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ಅಧ್ಯಕ್ಷರಾಗಿ ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ ಖಂಡ್ರೆ ಆಯ್ಕೆಯಾಗಿದ್ದಾರೆ ಎಂದು ಮಹಾಸಭೆಯ ರಾಜ್ಯಾಧ್ಯಕ್ಷ ಶಂಕರ ಬಿದರಿ ತಿಳಿಸಿದ್ದಾರೆ. ಶಮಾನೂರು ಶಿವಶಂಕರಪ್ಪ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ ಈಶ್ವರ ಖಂಡ್ರೆ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು … Continued

ಬಿಜೆಪಿ ಅಧ್ಯಕ್ಷರಾಗಿ ನಿತಿನ್ ನಬಿನ್ ಅವಿರೋಧ ಆಯ್ಕೆ ; ಆಗಲಿದ್ದಾರೆ ಬಿಜೆಪಿ ಅತ್ಯಂತ ಕಿರಿಯ ರಾಷ್ಟ್ರೀಯ ಅಧ್ಯಕ್ಷ

ನವದೆಹಲಿ: ಭಾರತೀಯ ಜನತಾ ಪಾರ್ಟಿ(BJP)ಯ ಸಾಂಘಿಕ ನಾಯಕತ್ವದಲ್ಲಿ ದೊಡ್ಡ ಬದಲಾವಣೆಯ ಗಾಳಿ ಬೀಸುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅವರನ್ನು  ಸರ್ವಾನುಮತದ ನಿರ್ಣಯದಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಅವರ ಪರವಾಗಿ 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿವೆ ಮತ್ತು ಆ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಲ್ಲ ಎಂದು ಪಕ್ಷ ದೃಢಪಡಿಸಿದೆ. ಆರೋಗ್ಯ ಸಚಿವ … Continued

ಬಿಸಿಸಿಐ ನೂತನ ಅಧ್ಯಕ್ಷರಾಗಿ ದೆಹಲಿಯ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ

 ಮುಂಬೈ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ವಾರ್ಷಿಕ ಸಾಮಾನ್ಯ ಸಭೆಯ ನಂತರ ಮಿಥುನ್ ಮನ್ಹಾಸ್ ಅವರನ್ನು ಬಿಸಿಸಿಐ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಯಾವುದೇ ಪ್ರತಿಸ್ಪರ್ಧಿ ಇಲ್ಲದ ಕಾರಣ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ, ಸೌರವ್ ಗಂಗೂಲಿ ಮತ್ತು ರೋಜರ್ ಬಿನ್ನಿಯ ನಂತರ ನಿರಂತರವಾಗಿ ಬಿಸಿಸಿಐ ಅಧ್ಯಕ್ಷರಾಗಿ ನೇಮಕಗೊಂಡ ಮೂರನೇ ಕ್ರಿಕೆಟಿಗರಾಗಿದ್ದಾರೆ. ರೋಜರ್ ಬಿನ್ನಿಯ … Continued

ವೀಡಿಯೊ…| “ನಿಮಗೆ ಕನ್ನಡ ಬರುತ್ತದೆಯೇ” ; ರಾಷ್ಟ್ರಪತಿಗಳನ್ನುಕೇಳಿದ ಸಿದ್ಧರಾಮಯ್ಯ: ಅವರು ಕೊಟ್ಟ ಉತ್ತರ ಏನು ಗೊತ್ತೆ ?-ವೀಕ್ಷಿಸಿ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಮೈಸೂರಿಗೆ ಸೋಮವಾರ ಭೇಟಿ ನೀಡಿದಾಗ ಅವರು ಮತ್ತು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಹಾಸ್ಯಮಯವಾಗಿ ವಿಚಾರ ವಿನಿಮಯವಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರಪತಿಯವರನ್ನು “ನಿಮಗೆ ಕನ್ನಡ ಬರುತ್ತಾ?” ಎಂದು ಕೇಳಿದರು. ರಾಷ್ಟ್ರಪತಿಗಳು ನಗುತ್ತಾ, ಗೊತ್ತಿಲ್ಲ ಎಂದು ಹೇಳಿದರು.  ಹಾಗೂ ಖಂಡಿತವಾಗಿಯೂ ತಾವು ಭಾಷೆ ಕಲಿಯುವುದಾಗಿ ಹೇಳಿದರು. ಅಖಿಲ ಭಾರತ ವಾಕ್ … Continued

ರಾಷ್ಟ್ರಪತಿ ಮುರ್ಮು ಜನ್ಮದಿನ | ಅವರ ಮುಂದೆಯೇ ಹಾಡು ಹಾಡಿದ ದೃಷ್ಟಿ ವಿಕಲಚೇತನ ವಿದ್ಯಾರ್ಥಿಗಳು ; ರಾಷ್ಟ್ರಪತಿಗಳ ಕಣ್ಣಲ್ಲಿ ನೀರು-ವೀಕ್ಷಿಸಿ

ಡೆಹ್ರಾಡೂನ್: ಪ್ರಸ್ತುತ ಉತ್ತರಾಖಂಡಕ್ಕೆ ಮೂರು ದಿನಗಳ ಭೇಟಿಯಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ 67 ನೇ ಜನ್ಮದಿನಾಚರಣೆಗೆ ಡೆಹ್ರಾಡೂನ್‌ನಲ್ಲಿರುವ ರಾಷ್ಟ್ರೀಯ ದೃಷ್ಟಿ ವಿಕಲಚೇತನರ ಸಬಲೀಕರಣ ಸಂಸ್ಥೆಯ (NIEPVD) ವಿದ್ಯಾರ್ಥಿಗಳು ವಿಶೇಷ ಜನ್ಮದಿನದ ಹಾಡನ್ನು ಪ್ರದರ್ಶಿಸಿದಾಗ ಅವರು ಭಾವುಕರಾದರು. ವಿದ್ಯಾರ್ಥಿಗಳ ಹೃದಯಸ್ಪರ್ಶಿ ಪ್ರದರ್ಶನ ನೋಡುತ್ತ ತಮ್ಮ ಭಾವನೆಗಳನ್ನು ತಡೆದುಕೊಳ್ಳಲು ಕಷ್ಟಪಡುತ್ತಿದ್ದ ರಾಷ್ಟ್ರಪತಿಯವರ ಈ ಭಾವನಾತ್ಮಕ ಗೌರವವು ಅವರ … Continued

‘ಮಸೂದೆಗೆ ಅಂಕಿತ ಹಾಕಲು ರಾಷ್ಟ್ರಪತಿ, ರಾಜ್ಯಪಾಲರಿಗೆ ಸುಪ್ರೀಂ ಕೋರ್ಟ್ ಗಡುವು ವಿಧಿಸಬಹುದೇ ? ಸುಪ್ರೀಂ ಕೋರ್ಟಿಗೆ ರಾಷ್ಟ್ರಪತಿ ಮುರ್ಮು 14 ಪ್ರಶ್ನೆ

ನವದೆಹಲಿ: ರಾಜ್ಯ ಶಾಸಕಾಂಗ ಅಂಗೀಕರಿಸಿದ ಮಸೂದೆಗಳಿಗೆ ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳು ಅಂಕಿತ ಹಾಕಲು ಗಡುವು ವಿಧಿಸಿ ಸುಪ್ರೀಂ ಕೋರ್ಟ್‌ ಇತ್ತೀಚಿಗೆ ನೀಡಿದ್ದ ತೀರ್ಪಿನ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನದ 143 (1)ನೇ ವಿಧಿಯಡಿ ಸುಪ್ರೀಂ ಕೋರ್ಟ್‌ಗೆ ಪತ್ರ ಬರೆದಿದ್ದು, ಅದರಲ್ಲಿ 14 ಪ್ರಶ್ನೆಗಳನ್ನು ಕೇಳಿದ್ದಾರೆ. ಪತ್ರಕ್ಕೆ ಉತ್ತರ ನೀಡಲು ಸುಪ್ರೀಂ ಕೋರ್ಟ್‌ ಸಾಂವಿಧಾನಿಕ … Continued

ಸಂಸತ್ತಿನಲ್ಲಿ ಅಂಗೀಕಾರಗೊಂಡ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಮುರ್ಮು ಅಂಕಿತ

ನವದೆಹಲಿ: ಎರಡು ದಿನಗಳ ಮ್ಯಾರಥಾನ್ ಚರ್ಚೆಯ ನಂತರ ಈ ವಾರ ಸಂಸತ್ತಿನ ಉಭಯ ಸದನಗಳಿಂದ ಅಂಗೀಕರಿಸಲ್ಪಟ್ಟ ವಕ್ಫ್ (ತಿದ್ದುಪಡಿ) ಮಸೂದೆಯು ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅಂಕಿತ ಹಾಕಿದ್ದಾರೆ. ಇದು ಈಗ ಕಾಯ್ದೆಯಾಗಲಿದೆ. ವಕ್ಫ್ ಮಂಡಳಿ ಮತ್ತು ಆಸ್ತಿಗಳ ಕಾರ್ಯನಿರ್ವಹಣೆಯಲ್ಲಿ ಬದಲಾವಣೆ ತರಲು ಪ್ರಯತ್ನಿಸುವ ವಕ್ಫ್ (ತಿದ್ದುಪಡಿ) ಮಸೂದೆಯ ಬಗ್ಗೆ 13 ಗಂಟೆಗಳ ಚರ್ಚೆಯ ನಂತರ … Continued

ಮಾರ್ಚ್ ಮಧ್ಯದ ವೇಳೆಗೆ ಬಿಜೆಪಿಯ ನೂತನ ಅಧ್ಯಕ್ಷರ ಆಯ್ಕೆ ; ಈ ಬಾರಿ ಮಹಿಳೆಗೆ ಸಾರಥ್ಯ…?

ನವದೆಹಲಿ : 13 ರಾಜ್ಯಗಳಲ್ಲಿ ಸಾಂಸ್ಥಿಕ ಚುನಾವಣೆಗಳು ಮುಗಿದ ನಂತರ ಮಾರ್ಚ್ ಮಧ್ಯದ ವೇಳೆಗೆ 15 ಅಥವಾ 16 ರಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ಹೊಸ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡುವ ನಿರೀಕ್ಷೆಯಿದೆ. ಜೆಪಿ ನಡ್ಡಾ ಅವರ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆಯು ಒಮ್ಮತದಿಂದ ನಡೆಯಲಿದೆ ಎಂದು ಪಕ್ಷದ ಮೂಲಗಳು ಸೂಚಿಸುತ್ತವೆ. ದಕ್ಷಿಣ ಭಾರತದಲ್ಲಿ … Continued

“ಒಂದೊಮ್ಮೆ ಪ್ರಣವ್ ಮುಖರ್ಜಿ ಪ್ರಧಾನಿಯಾಗಿದ್ದರೆ…”: ಕಾಂಗ್ರೆಸ್ 2014ರ ಹೀನಾಯ ಸೋಲಿನ ಬಗ್ಗೆ ಹಿರಿಯ ನಾಯಕ ಮಣಿಶಂಕರ ಅಯ್ಯರ್

ನವದೆಹಲಿ : ಯುಪಿಎ-2 ಸರ್ಕಾರದ ಅವಧಿಯಲ್ಲಿ ಪ್ರಣಬ್‌ ಮುಖರ್ಜಿ ಅವರನ್ನು ಪ್ರಧಾನಿ ಮತ್ತು ಡಾ. ಮನಮೋಹನ್‌ ಸಿಂಗ್‌ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದರೆ, 2014ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶವೇ ಬೇರೆಯಾಗುತ್ತಿತ್ತು ಮತ್ತು ಕಾಂಗ್ರೆಸ್‌ ಅಷ್ಟು ಹೀನಾಯ ಸೋಲನ್ನು ಅನುಭವಿಸುತ್ತಿರಲಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಹೇಳಿದ್ದಾರೆ. ಮಾಜಿ ಕೇಂದ್ರ ಸಚಿವರಾದ ಮಣಿಶಂಕರ ಅಯ್ಯರ್ ಅವರು, … Continued

ನಿಪ್ಪಾಣಿ ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ

ಬೆಳಗಾವಿ : ನಿಪ್ಪಾಣಿ ನಗರಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಜಯಭೇರಿ ಬಾರಿಸಿದೆ. ಬಿಜೆಪಿ ಸದಸ್ಯೆ ಸೋನಲ್ ರಾಜೇಶ ಕೊಠಿಯಾ ಅಧ್ಯಕ್ಷರಾಗಿ ಮತ್ತು ಸಂತೋಷ ಸಾಂಗಾವಕರ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸೋನಲ್ ರಾಜೇಶ ಕೊಠಿಯಾ ಅವರು 17 ಮತ ಪಡೆದು ರಾಷ್ಟ್ರೀಯವಾದಿ ಶರದ್‌ ಪವಾರ್ ಗುಂಪಿನ ಅಭ್ಯರ್ಥಿ ಅನಿತಾ ಪಠಾಡೆ ಅವರನ್ನು … Continued