ನೆಹರು ಹಿಂದಿಕ್ಕಿ ಭಾರತದಲ್ಲಿ ಅತಿ ದೀರ್ಘಾವಧಿ ಅಧಿಕಾರ ನಡೆಸಿದ ‘ಚುನಾಯಿತ ಪ್ರಧಾನಿ’ ಎಂಬ ಮೈಲಿಗಲ್ಲು ಸ್ಥಾಪಿಸಿದ ಪ್ರಧಾನಿ ಮೋದಿ

 ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು (10 ಜೂನ್ 2026)  ಭಾರತದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ಸೇವೆ ಸಲ್ಲಿಸಿದ ‘ಚುನಾಯಿತ ಪ್ರಧಾನಿ’ ಎಂಬ ಅಭೂತಪೂರ್ವ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಇದರೊಂದಿಗೆ ಅವರು ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಹೆಸರಿನಲ್ಲಿದ್ದ ಸುದೀರ್ಘಾವಧಿಯ ದಾಖಲೆಯನ್ನು ಮುರಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು … Continued

ಅತಿ ಸುದೀರ್ಘ ಕಾಲ ಸರ್ಕಾರ ಮುನ್ನಡೆಸಿದ ಭಾರತದ ಮೊದಲ ನಾಯಕರಾದ ಪ್ರಧಾನಿ ಮೋದಿ…!

ನವದೆಹಲಿ: ಭಾರತೀಯ ರಾಜಕೀಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಚುನಾಯಿತ ಸರ್ಕಾರವೊಂದರ ಮುಖ್ಯಸ್ಥರಾಗಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಐತಿಹಾಸಿಕ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಸಿಕ್ಕಿಂ ಮುಖ್ಯಮಂತ್ರಿಯಾಗಿ 8,930 ದಿನಗಳ ಕಾಲ ಅಧಿಕಾರದಲ್ಲಿದ್ದ ಪವನಕುಮಾರ ಚಾಮ್ಲಿಂಗ್ ಅವರ ದಾಖಲೆಯನ್ನು ಹಿಂದಿಕ್ಕಿದ್ದಾರೆ. ಗುಜರಾತ್ ಮುಖ್ಯಮಂತ್ರಿಯಾಗಿ ಮತ್ತು ದೇಶದ ಪ್ರಧಾನಮಂತ್ರಿಯಾಗಿ ಅವರ ಒಟ್ಟು … Continued

ಇಂದಿರಾ ಗಾಂಧಿ ದಾಖಲೆ ಮುರಿದ ನರೇಂದ್ರ ಮೋದಿ ; ಅತಿ ಹೆಚ್ಚು ಕಾಲ ಕಾರ್ಯನಿರ್ವಹಿಸಿದ ಪ್ರಧಾನಿಗಳ ಪಟ್ಟಿಯಲ್ಲಿ ಈಗ 2ನೇ ಸ್ಥಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಿ ಹುದ್ದೆಯಲ್ಲಿ ಶುಕ್ರವಾರ(ಜುಲೈ 25)ಕ್ಕೆ ನಿರಂತರವಾಗಿ 4,078 ದಿನಗಳನ್ನು ಪೂರೈಸುವ ಮೂಲಕ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಸತತ 4,077 ದಿನಗಳ ಕಾಲ ಪ್ರಧಾನಿಯಾಗಿ ಕಾರ್ಯನಿರ್ವಹಿಸಿದ್ದ ದಾಖಲೆಯನ್ನು ಮುರಿದಿದ್ದಾರೆ. ದಿವಂಗತ ಇಂದಿರಾ ಗಾಂಧಿ ಅವರು ಜನವರಿ 24, 1966 ರಿಂದ ಮಾರ್ಚ್ 24, 1977 ರವರೆಗೆ ಸತತ … Continued

ವೀಡಿಯೊ..| ಮೋದಿ ಪ್ರಧಾನಿ ಆಗುವವರೆಗೆ ಚಪ್ಪಲಿ ಧರಿಸಲ್ಲ ಎಂದು ಪಣತೊಟ್ಟಿದ್ದ ಅಭಿಮಾನಿಗೆ ಶೂ ತೊಡಿಸಿದ ಪ್ರಧಾನಿ ಮೋದಿ…!

ನವದೆಹಲಿ : ನರೇಂದ್ರ ಮೋದಿ ಪ್ರಧಾನಿಯಾಗುವವರೆಗೆ ತಮ್ಮ ಪಾದಗಳಿಗೆ ಪಾದರಕ್ಷೆಗಳನ್ನು ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದ ಹರ್ಯಾಣದ ಕೈಥಾಲ್ ನಗರದ ರಾಮಪಾಲ ಕಶ್ಯಪ ಅವರನ್ನು ಭೇಟಿ ಮಾಡಿದ ಪ್ರಧಾನಿ ಮೋದಿಯವರು ತಾವೇ ತಮ್ಮ ಕೈಯ್ಯಾರೆ ಶೂಗಳನ್ನು ತೊಡಿಸಿದ ಅಪರೂಪದ ವಿದ್ಯಮಾನ ನಡೆದಿದೆ. ಪ್ರಧಾನಿ ಮೋದಿ ಸೋಮವಾರ ಹರಿಯಾಣದ ಯಮುನಾನಗರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಅಭಿಮಾನಿಯನ್ನು … Continued

ಜಸ್ಟಿನ್ ಟ್ರುಡೊ ಬದಲಿಗೆ ಕೆನಡಾದ ಪ್ರಧಾನಿ ಹುದ್ದೆಗೆ ಮಾರ್ಕ್ ಕಾರ್ನಿ ಆಯ್ಕೆ ಮಾಡಿದ ಲಿಬರಲ್ ಪಕ್ಷ

ಒಟ್ಟಾವಾ (ಕೆನಡಾ) : ಕೆನಡಾದ ಲಿಬರಲ್ ಪಕ್ಷವು ಭಾನುವಾರ ದೇಶದ ಮುಂದಿನ ಪ್ರಧಾನ ಮಂತ್ರಿಯಾಗಿ ಮಾರ್ಕ್ ಕಾರ್ನಿ ಅವರನ್ನು ಆಯ್ಕೆ ಮಾಡಿದೆ. ಅಂತಿಮ ಲೆಕ್ಕಾಚಾರದ ಪ್ರಕಾರ ಲಿಬರಲ್ ಪಕ್ಷದ ನಾಯಕತ್ವದ ಮತದಲ್ಲಿ 59 ವರ್ಷದ ಕಾರ್ನಿ ಅವರು 85.9 ಪ್ರತಿಶತ ಮತಗಳನ್ನು ಗೆದ್ದಿದ್ದಾರೆ, . ಕಾರ್ನಿ ಮುಂದಿನ ದಿನಗಳಲ್ಲಿ ಪ್ರಧಾನಿ ಹುದ್ದೆ ತ್ಯಜಿಸಲಿರುವ ಪಕ್ಷದ ನಾಯಕ … Continued

ಕೆನಡಾದ ಪ್ರಧಾನಿ ಹುದ್ದೆಯ ರೇಸ್‌ ನಲ್ಲಿ ಕರ್ನಾಟಕ ಮೂಲದ ಚಂದ್ರ ಆರ್ಯ

ನವದೆಹಲಿ: ಕರ್ನಾಟಕ ಮೂಲದ ಕೆನಡಾ ಸಂಸದ ಚಂದ್ರ ಆರ್ಯ ಅವರು ಕೆನಡಾದ ಮುಂದಿನ ಪ್ರಧಾನಿಯಾಗುವ ನಿಟ್ಟಿನಲ್ಲಿ ಅಧಿಕೃತವಾಗಿ ರೇಸ್ ಪ್ರವೇಶಿಸಿದ್ದಾರೆ. ನೇಪಿಯನ್ ಪ್ರತಿನಿಧಿಸುವ ಲಿಬರಲ್ ಸಂಸದ, ಚಂದ್ರ ಆರ್ಯ ಅವರು ಕೆನಡಾವನ್ನು “ಸಾರ್ವಭೌಮ ಗಣರಾಜ್ಯ” ಮಾಡಲು, ನಿವೃತ್ತಿ ವಯಸ್ಸನ್ನು ಹೆಚ್ಚಿಸುವ, ಪೌರತ್ವ ಆಧಾರಿತ ತೆರಿಗೆ ವ್ಯವಸ್ಥೆಯನ್ನು ಜಾರಿಗೆ ತರುವ ಮತ್ತು ಪ್ಯಾಲೆಸ್ಟೈನ್ ರಾಜ್ಯವನ್ನು ಅಧಿಕೃತವಾಗಿ ಗುರುತಿಸುವ … Continued

“ಒಂದೊಮ್ಮೆ ಪ್ರಣವ್ ಮುಖರ್ಜಿ ಪ್ರಧಾನಿಯಾಗಿದ್ದರೆ…”: ಕಾಂಗ್ರೆಸ್ 2014ರ ಹೀನಾಯ ಸೋಲಿನ ಬಗ್ಗೆ ಹಿರಿಯ ನಾಯಕ ಮಣಿಶಂಕರ ಅಯ್ಯರ್

ನವದೆಹಲಿ : ಯುಪಿಎ-2 ಸರ್ಕಾರದ ಅವಧಿಯಲ್ಲಿ ಪ್ರಣಬ್‌ ಮುಖರ್ಜಿ ಅವರನ್ನು ಪ್ರಧಾನಿ ಮತ್ತು ಡಾ. ಮನಮೋಹನ್‌ ಸಿಂಗ್‌ ಅವರನ್ನು ರಾಷ್ಟ್ರಪತಿಯನ್ನಾಗಿ ಮಾಡಿದ್ದರೆ, 2014ರ ಸಾರ್ವತ್ರಿಕ ಚುನಾವಣೆಯ ಫಲಿತಾಂಶವೇ ಬೇರೆಯಾಗುತ್ತಿತ್ತು ಮತ್ತು ಕಾಂಗ್ರೆಸ್‌ ಅಷ್ಟು ಹೀನಾಯ ಸೋಲನ್ನು ಅನುಭವಿಸುತ್ತಿರಲಿಲ್ಲ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ ಅಯ್ಯರ್ ಹೇಳಿದ್ದಾರೆ. ಮಾಜಿ ಕೇಂದ್ರ ಸಚಿವರಾದ ಮಣಿಶಂಕರ ಅಯ್ಯರ್ ಅವರು, … Continued

ವೀಡಿಯೊ…| ಬ್ರೆಜಿಲ್‌ ಗೆ ಆಗಮಿಸಿದ ಪ್ರಧಾನಿ ಮೋದಿಗೆ ವೇದಘೋಷಗಳ ಮೂಲಕ ಸ್ವಾಗತಿಸಿದ ಬ್ರೇಜಿಲ್ಲಿನ ವೇದ ವಿದ್ವಾಂಸರು…!

ರಿಯೊ ಡಿ ಜನೈರೊ : ಐದು ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಜಿ 20 ನಾಯಕರ ಶೃಂಗಸಭೆಯಲ್ಲಿ (G20 Leaders’ Summit) ಪಾಲ್ಗೊಳ್ಳಲು ಬ್ರೆಜಿಲ್‌(Brazil)ಗೆ ಆಗಮಿಸಿದ್ದಾರೆ. ರಿಯೊ ಡಿ ಜನೈರೊಗೆ ಭಾರತೀಯ ಕಾಲಮಾನ ಪ್ರಕಾರ ಮಂಗಳವಾರ ಬೆಳಗ್ಗೆ ಆಗಮಿಸಿದ ಪ್ರಧಾನಿ ಮೋದಿಗೆ ಬ್ರೆಜಿಲ್‌ ನಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ. ಬ್ರೆಜಿಲ್‌ನಲ್ಲಿರುವ … Continued

ಬಾಂಗ್ಲಾದೇಶದ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆ ; ಆಡಳಿತ ನಿಯಂತ್ರಣಕ್ಕೆ ತೆಗೆದುಕೊಂಡ ಸೇನೆ

ಅವಾಮಿ ಲೀಗ್‌ ಪಕ್ಷದ ಬೆಂಬಲಿಗರು ಮತ್ತು ಪ್ರತಿಭಟನಾಕಾರರ ನಡುವಿನ ಹಿಂಸಾತ್ಮಕ ಘರ್ಷಣೆಗಳ ನಡುವೆ ಬಾಂಗ್ಲಾದೇಶದ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ಅವರು ರಾಜೀನಾಮೆ ನೀಡಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಬಾಂಗ್ಲಾದೇಶದ ಸೇನೆಯು ಆಡಳಿತದ ಮೇಲೆ ನಿಯಂತ್ರಣ ತೆಗೆದುಕೊಂಡಿದ್ದು, ಸೇನಾ ಮುಖ್ಯಸ್ಥ ಜನರಲ್ ವಾಕರ್-ಉಜ್-ಝಮಾನ್ ಅವರು ಸೇನೆಯು ಮಧ್ಯಂತರ ಸರ್ಕಾರವನ್ನು ರಚಿಸಲಿದೆ ಎಂದು … Continued

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ : ಸಮಾರಂಭದಲ್ಲಿ ಬಾಂಗ್ಲಾ ಪ್ರಧಾನಿ, ಶ್ರೀಲಂಕಾ ಅಧ್ಯಕ್ಷರು ಭಾಗಿ

ನವದೆಹಲಿ: ಸತತ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸುವ ವಿದೇಶಿ ನಾಯಕರಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಮತ್ತು ಶ್ರೀಲಂಕಾ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ಸೇರಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿವೆ. ಬಿಜೆಪಿ ನೇತೃತ್ವದ ಎನ್‌ಡಿಎ ಲೋಕಸಭೆ ಚುನಾವಣೆಯಲ್ಲಿ 293 ಸ್ಥಾನಗಳನ್ನು ಗೆಲ್ಲುವ ಸತತ ಮೂರನೇ ಅವಧಿಗೆ … Continued