ಲಡಾಖಿಗೆ ರಾಜ್ಯ ಸ್ಥಾನಮಾನಕ್ಕೆ ಒತ್ತಾಯ ; ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ನಾಲ್ವರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಲಡಾಖ್‌ಗೆ ರಾಜ್ಯಸ್ಥಾನ ಮಾನ ಕೋರಿ ಲೇಹ್ ಅಪೆಕ್ಸ್ ಬಾಡಿ (LAB) ನಡೆಸುತ್ತಿದ್ದ ಪ್ರತಿಭಟನೆ ಬುಧವಾರ ಹಿಂಸಾತ್ಮಕ ರೂಪಕ್ಕೆ ತಿರುಗಿತು. ಪ್ರತಿಭಟನಾಕಾರರು ನಗರದಲ್ಲಿ ಪೊಲೀಸರೊಂದಿಗೆ ಘರ್ಷಣೆ ನಡೆಸಿ, ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿದರು. ಕೇಂದ್ರ ಸರ್ಕಾರ ಮತ್ತು ಸ್ಥಳೀಯ ಆಡಳಿತವು ತಮ್ಮ ಬೇಡಿಕೆಗಳನ್ನು ಒಪ್ಪಿಕೊಳ್ಳಲು ವಿಫಲವಾಗಿದೆ ಎಂದು ಆರೋಪಿಸಿ ಪ್ರತಿಭಟನಾಕಾರರು ನಡೆಸಿದ ಪ್ರತಿಭಟನೆ ಘರ್ಷಣೆಗೆ ತಿರುಗಿತು. ಪ್ರತಿಭಟನಾಕಾರರು … Continued

ವೀಡಿಯೊ…| ನೇಪಾಳದಲ್ಲಿ ಜನರ ಆಕ್ರೋಶಕ್ಕೆ ಹೆದರಿ ಸೇನಾ ಹೆಲಿಕಾಪ್ಟರ್‌ ಹಗ್ಗಕ್ಕೆ ಜೋತು ಬಿದ್ದು ಸಚಿವರು-ಕುಟುಂಬಸ್ಥರ ಪಲಾಯನ…!

ಹಿಂಸಾಚಾರ ಪೀಡಿತ ನೇಪಾಳದಿಂದ ಹೊರಹೊಮ್ಮಿದ ಕೆಲವು ವೀಡಿಯೊ ದೃಶ್ಯಗಳಲ್ಲಿ, ಮಂತ್ರಿಗಳು ಮತ್ತು ಅವರ ಕುಟುಂಬ ಸದಸ್ಯರು ಪ್ರತಿಭಟನಾಕಾರರಿಂದ ತಪ್ಪಿಸಿಕೊಂಡ ಪಲಾಯನ ಮಾಡಲು ಸೇನಾ ಹೆಲಿಕಾಪ್ಟರ್‌ನ ರಕ್ಷಣಾ ಜೋಲಿ ಹಿಡಿದುಕೊಂಡು ನೇತಾಡಿರುವುದು ಕಂಡುಬಂದಿದೆ. ಸಾಮಾಜಿಕ ಮಾಧ್ಯಮ ವೇದಿಕೆಗಳ ಮೇಲಿನ ಅಲ್ಪಾವಧಿಯ ನಿಷೇಧವು ಕಠ್ಮಂಡುವಿನಲ್ಲಿ ಹಿಂಸಾತ್ಮಕ ಪ್ರತಿಭಟನೆಗಳಿಗೆ ಕಾರಣವಾಗಿದ್ದು, ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ ನೀಡಿ ಸುರಕ್ಷಿತ … Continued

ನೇಪಾಳದ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ನೇಮಿಸಿದ ಜನರಲ್-ಝಡ್ ಪ್ರತಿಭಟನಾಕಾರರು

ಕಠ್ಮಂಡು: ಕಠ್ಮಂಡು: ನೇಪಾಳದಲ್ಲಿ ಮಂಗಳವಾರ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಅವರ ಸರ್ಕಾರವನ್ನು ಪದಚ್ಯುತಗೊಳಿಸಿದ ಜನರಲ್-ಝಡ್ ಪ್ರತಿಭಟನಾಕಾರರ ನೇತೃತ್ವದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ, ದೇಶದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರನ್ನು ನೇಪಾಳದ ಮಧ್ಯಂತರ ಸರ್ಕಾರದ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ ಎಂದು ವರದಿಯಾಗಿದೆ. ಸುಶೀಲಾ ಕರ್ಕಿ ಅವರು ಬಾಲೆನ್ ಶಾ ಗಿಂತ ಹೆಚ್ಚಿನ … Continued

ಪ್ರತಿಭಟನೆ ವೇಳೆ 19 ಮಂದಿ ಸಾವು : ನೇಪಾಳ ಗೃಹ ಸಚಿವ ರಮೇಶ ಲೇಖಕ್ ರಾಜೀನಾಮೆ

ಕಠ್ಮಂಡು : ಸೋಮವಾರ ನಡೆದ ಹಿಂಸಾತ್ಮಕ ಜನರಲ್-ಝಡ್ ಪ್ರತಿಭಟನೆಗಳಲ್ಲಿ 19 ಜನರ ಜನರು ಸಾವಿಗೀಡಾದ ಘಟನೆಗೆ ನೈತಿಕ ಹೊಣೆ ಹೊತ್ತು ನೇಪಾಳದ ಗೃಹ ಸಚಿವ ರಮೇಶ ಲೇಖಕ್ ರಾಜೀನಾಮೆ ನೀಡಿದ್ದಾರೆ. ಸೋಮವಾರ ಸಂಜೆ ನಡೆದ ಸಂಪುಟ ಸಭೆಯಲ್ಲಿ ಅವರು ಪ್ರಧಾನಿ ಕೆ.ಪಿ. ಶರ್ಮಾ ಓಲಿ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ ಎಂದು ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ. … Continued

ಬೆಳಗಾವಿ | ಮಸೀದಿಯಲ್ಲಿದ್ದ ಕುರಾನ್ ಕದ್ದೊಯ್ದು ಸುಟ್ಟು ಹಾಕಿದ ಕಿಡಿಗೇಡಿಗಳು ; ಪ್ರತಿಭಟನೆ

ಬೆಳಗಾವಿ : ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಗ್ರಂಥ ಕುರಾನ್ (Quran) ಪುಸ್ತಕ ಸುಟ್ಟು ಹಾಕಿರುವ ಘಟನೆ ಬೆಳಕಿಗೆ ಬಂದಿದ್ದು, ಆಕ್ರೋಶ ಭುಗಿಲೆದ್ದಿದೆ. ಸಂತಿಬಸ್ತವಾಡ ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿದ್ದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ … Continued

ನೀಟ್ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ತೆಗೆಸಿದ ಅಧಿಕಾರಿಗಳು

ಕಲಬುರಗಿ: ಇತ್ತೀಚೆಗೆ ಕರ್ನಾಟಕದಲ್ಲಿ ನಡೆದ ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ (Sacred Thread) ತೆಗೆಸಿದ ಪ್ರಕರಣ ರಾಜ್ಯದಲಲಿ ಹಸಿರಾಗಿರುವಾಗಲೇ ನೀಟ್ ಪರೀಕ್ಷೆಯಲ್ಲೂ (NEET Exam) ಅಧಿಕಾರಿಗಳು ವಿದ್ಯಾರ್ಥಿಯೊಬ್ಬರ ಜನಿವಾರ ತೆಗೆಸಿದ್ದಾರೆ. ಕಲಬುರಗಿಯ ಸೇಂಟ್ ಮೇರಿ ಶಾಲೆಯಲ್ಲಿ ನಡೆದ ನೀಟ್​ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿ ಶ್ರೀಪಾದ್ ಪಾಟೀಲ ಅವರ ಜನಿವಾರವನ್ನು ಅಧಿಕಾರಿಗಳು ತೆಗೆಸಿ, ಪರೀಕ್ಷೆ … Continued

ವೀಡಿಯೊ…| ಹೆಚ್ಚುವರಿ ಎಸ್‌ಪಿ ಮೇಲೆ ವೇದಿಕೆಯಲ್ಲೇ ಹೊಡೆಯಲು ಮುಂದಾದ್ರಾ ಸಿದ್ದರಾಮಯ್ಯ ; ಪೊಲೀಸರ ಮೇಲೆ ಗರಂ ಆಗಿದ್ಯಾಕೆ ಸಿಎಂ..?

ಬೆಳಗಾವಿ: ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗರಂ ಆದ ಪ್ರಸಂಗ ನಡೆದಿದೆ.. ವೇದಿಕೆ ಮೇಲೆಯೇ ಧಾರವಾಡದ ಹೆಚ್ಚುವರಿ ಎಸ್‌ಪಿ ನಾರಾಯಣ ಭರಮನಿ ಅವರತ್ತ ಮುಖ್ಯಮಂತ್ರಿ ಕೈ ಎತ್ತಿದ ವೀಡಿಯೊ ಈಗ ಎಲ್ಲೆಡೆ ವೈರಲ್ ಆಗತೊಡಗಿದೆ. ಬೆಲೆ ಏರಿಕೆ ವಿರೋಧಿಸಿ ಇಂದು ಕಾಂಗ್ರೆಸ್‌ ಪ್ರತಿಭಟನಾ ಸಭಾ ಆಯೋಜಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವಾಗ ಬಿಜೆಪಿಯ ಮಹಿಳಾ … Continued

ಪಶ್ಚಿಮ ಬಂಗಾಳದಲ್ಲಿ ವಕ್ಫ್ ಮಸೂದೆ ವಿರೋಧಿ ಪ್ರತಿಭಟನೆ ವೇಳೆ 3 ಸಾವು ; ಕೇಂದ್ರ ಪಡೆಗಳ ನಿಯೋಜನೆಗೆ ಕೋರ್ಟ್‌ ಆದೇಶ

ಕೋಲ್ಕತ್ತಾ : ವಕ್ಫ್ (ತಿದ್ದುಪಡಿ) ಕಾಯ್ದೆ 2025 ರ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳಿಗೆ ಸಂಬಂಧಿಸಿದ ಹಿಂಸಾತ್ಮಕ ಘಟನೆಗಳಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಶುಕ್ರವಾರ ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 118 ಜನರನ್ನು ಬಂಧಿಸಲಾಗಿದೆ. ಮೃತರಲ್ಲಿ ಇಬ್ಬರು ಘರ್ಷಣೆಯಲ್ಲಿ ಸಾವಿಗೀಡಾಗಿದ್ದರೆ, ಒಬ್ಬರು ಗುಂಡಿನ … Continued

ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ; ವಾಟಾಳ ನಾಗರಾಜ ಸೇರಿ ಕನ್ನಡಪರ ಹೋರಾಟಗಾರರು ವಶಕ್ಕೆ

ಬೆಂಗಳೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಮರಾಠಿಗರ ಹಲ್ಲೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರೆ ನೀಡಿರುವ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಜಿಲ್ಲೆಗಳಲ್ಲೂ ಕನ್ನಡಪರ ಹೋರಾಟಗಾರರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವು ಕಡೆ ನೀರಸ ಪ್ರತಿಕ್ರಿಯೆ ಕಂಡು ಬಂದಿತು.ಹೆಚ್ಚಿನ ಜಿಲ್ಲೆಗಳಲ್ಲಿ ದೈನಂದಿನ ಜೀವನ ಸಹಜ ಸ್ಥಿತಿಯಲ್ಲೇ ಇತ್ತು ಬಹುತೇಕ ಜಿಲ್ಲೆಗಳಲ್ಲಿ ಬಸ್‌ ಸೇರಿದಂತೆ … Continued

ದೂರು-ಪ್ರತಿದೂರು: ಸಂಸತ್ತಿ ಹೊರಗೆ ‘ಹಲ್ಲೆ’ ವಿವಾದ ತೀವ್ರ ; ಪೊಲೀಸ್‌ ಠಾಣೆ ಕದ ತಟ್ಟಿದ ಬಿಜೆಪಿ, ಕಾಂಗ್ರೆಸ್…

ನವದೆಹಲಿ: ಸಂಸತ್ತಿನ ಹೊರಗೆ ಆಪಾದಿತ ಘರ್ಷಣೆಯ ನಂತರಬಿಜೆಪಿ ಹಾಗೂ ಕಾಂಗ್ರೆಸ್‌ ಪಕ್ಷಗಳು ಪರಸ್ಪರರ ಮೇಲೆ ಹಲ್ಲೆ ಮತ್ತು ದುರ್ನಡತೆಯ ಆರೋಪದ ಮೇಲೆ ಪೊಲೀಸ್ ದೂರುಗಳನ್ನು ದಾಖಲಿಸಿವೆ. ಮಂಗಳವಾರ ಸಂಸತ್ತಿನಲ್ಲಿ ಅಮಿತ್ ಶಾ ತಮ್ಮ ಭಾಷಣದಲ್ಲಿ ಡಾ.ಅಂಬೇಡ್ಕರ ಕುರಿತಾದ ಹೇಳಿಕೆಯು ಅವರಿಗೆ ಅವಮಾನ ಮಾಡಿದೆ ಎಂದು ಆರೋಪಿಸಿ ವಿಪಕ್ಷಗಳ ಪ್ರತಿಭಟನೆ ಭುಗಿಲೆದ್ದಿತು. ಅವರ ಹೇಳಿಕೆಗಳು ಕಾಂಗ್ರೆಸ್ ಸೇರಿದಂತೆ … Continued