ವೀಡಿಯೊ…| ಟ್ರಕ್ ಚಾಲಕರ ಪ್ರತಿಭಟನೆ ವೇಳೆ ಪೊಲೀಸರನ್ನು ಅಟ್ಟಾಡಿಸಿ ಹಲ್ಲೆ ನಡೆಸಿದ ಚಾಲಕರು

ಮುಂಬೈ : ನೂತನ ಹಿಟ್ ಅಂಡ್ ರನ್ ಕಾನೂನನ್ನು ವಿರೋಧಿಸಿ ಮಹಾರಾಷ್ಟ್ರದ ನವಿ ಮುಂಬೈನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಟ್ರಕ್ ಚಾಲಕರು ಸೋಮವಾರ ಪೊಲೀಸರನ್ನು ಅಟ್ಟಾಡಿಸಿ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಜೆಎನ್‌ಪಿಟಿ ರಸ್ತೆಯಲ್ಲಿ ಪ್ರತಿಭಟನಾಕಾರರ ರಸ್ತೆ ತಡೆ ತೆರವುಗೊಳಿಸಲು ಪೊಲೀಸರು ಯತ್ನಿಸುತ್ತಿದ್ದಾಗ ಈ ಘಟನೆ ನಡೆದಿದೆ. ಘಟನೆಯ ವೀಡಿಯೊದಲ್ಲಿ ದೊಣ್ಣೆಗಳನ್ನು ಹಿಡಿದ ವ್ಯಕ್ತಿಗಳ ಗುಂಪು ಪೊಲೀಸರ … Continued

ವೀಡಿಯೊ…| ಹಿಂಸಾಚಾರಕ್ಕೆ ತಿರುಗಿದ ಕರವೇ ಪ್ರತಿಭಟನೆ : ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರು ವಶಕ್ಕೆ

ಬೆಂಗಳೂರು: ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನಾ ರ್ಯಾಲಿ ಬುಧವಾರ ಹಿಂಸಾಚಾರಕ್ಕೆ ತಿರುಗಿದೆ. ಕರವೇ ಅಧ್ಯಕ್ಷ ನಾರಾಯಣ ಗೌಡ ಸೇರಿ ಹಲವು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬುಧವಾರ ಬೆಳಿಗ್ಗೆ 11 ಗಂಟೆಗೆ ಕರವೇ ಕಾರ್ಯಕರ್ತರು ದೇವನಹಳ್ಳಿಯ ಸಾದಹಳ್ಳಿ ಟೋಲ್​ನಿಂದ ಬೆಂಗಳೂರು ಕಬ್ಬನ್ ಪಾರ್ಕ್​ವರೆಗೆ ರ‍್ಯಾಲಿ ಶುರು ಮಾಡಿದ್ದರು. … Continued

ಒಕ್ಕಲಿಗರ ಬಗ್ಗೆ ಪ್ರೊ. ಭಗವಾನ್ ವಿವಾದಾತ್ಮಕ ಹೇಳಿಕೆ : ಭುಗಿಲೆದ್ದ ಪ್ರತಿಭಟನೆ

ಮೈಸೂರು: ವಿವಾದಾತ್ಮಕ ಹೇಳಿಕೆಗಳ ಮೂಲಕ ಸುದ್ದಿಯಾಗುವ ಪ್ರೊ. ಕೆ.ಎಸ್. ಭಗವಾನ್ ಈಗ ಒಕ್ಕಲಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂತರ ತೀವ್ರ ಪ್ರತಿಭಟನೆ ಎದುರಿಸುತ್ತಿದ್ದಾರೆ. ಮೈಸೂರಿನ ಟೌನ್ ಹಾಲ್ ನಲ್ಲಿ ಶುಕ್ರವಾರ (ಅಕ್ಟೋಬರ್‌ 13) ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಒಕ್ಕಲಿಗರು ಸಂಸ್ಕೃತಿ ಹೀನರು ಅಥವಾ ಅವರು ಹೀನ ಸಂಸ್ಕೃತಿಯವರು ಎಂದು ಹೇಳಿರುವುದು ಈಗ ಭಾರೀ … Continued

ಕಾವೇರಿ ಹೋರಾಟ: ಇಂದು ಮಂಡ್ಯ, ಮದ್ದೂರು ಬಂದ್

ಮಂಡ್ಯ : ದಿನದಿಂದ ದಿನ ಕಾವೇರಿ ಹೋರಾಟದ ತೀವ್ರತೆ ಹೆಚ್ಚಾಗುತ್ತಿದ್ದು, ಇಂದು, ಶನಿವಾರ ಮಂಡ್ಯ ಹಾಗೂ ಮದ್ದೂರ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ತಮಿಳುನಾಡಿಗೆ ನೀರು ಬಿಡುವಂತೆ ಸೂಚಿಸಿದ ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಇಂದು ರೈತ, ಕನ್ನಡ ಪರ, ಪ್ರಗತಿ ಪರ ಸಂಘಟನೆಗಳು ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಬಂದ್‍ಗೆ ಕರೆ ನೀಡಿವೆ. … Continued

ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡ ಯತ್ನಾಳ : ಆಸ್ಪತ್ರೆಗೆ ದಾಖಲು

ಬೆಂಗಳೂರು: ವಿಧಾನಸಭೆಯಲ್ಲಿ ಬುಧವಾರ 10 ಬಿಜೆಪಿ ಶಾಸಕರನ್ನು ಅಮಾನನು ಮಾಡಿದ ಬಳಿಕ, ಬಿಜೆಪಿ ಶಾಸಕರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅಸ್ವಸ್ಥರಾಗಿ ಕುಸಿದಿದ್ದಾರೆ. ಸದನದಲ್ಲಿ ಸ್ಪೀಕರ್ ಸ್ಥಾನಕ್ಕೆ ಅಗೌರವ ತೋರಿದ ಹಿನ್ನೆಲೆಯಲ್ಲಿ ಸ್ಪೀಕರ್ ಯುಟಿ ಖಾದರ್, 10 ಬಿಜೆಪಿ ಶಾಸಕರನ್ನು ಅಮಾನತು ಮಾಡಿದರು. ಅಮಾನತಾದ ಬಳಿಕವೂ ಬಿಜೆಪಿ … Continued

ವಿದ್ಯುತ್ ದರ ಏರಿಕೆಗೆ ವಿರೋಧ: ರಾಜ್ಯದ ಹಲವೆಡೆ ವ್ಯಾಪಾರಿಗಳು, ಸಣ್ಣ ಕೈಗಾರಿಕೆಗಳ ಮಾಲೀಕರಿಂದ ಪ್ರತಿಭಟನೆ

ಬೆಂಗಳೂರು: ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ವ್ಯಾಪಾರಿಗಳು ಮತ್ತು ಸಣ್ಣ ಕೈಗಾರಿಕೆಗಳ ಮಾಲೀಕರು ಗುರುವಾರ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನಾ ರ‍್ಯಾಲಿಗಳನ್ನು ನಡೆಸಿದರು. ಹುಬ್ಬಳ್ಳಿಯ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ (ಕೆಸಿಸಿಐ) ಬಂದ್‌ಗೆ ಕರೆ ನೀಡಿತ್ತು. ಹುಬ್ಬಳ್ಳಿ-ಧಾರವಾಡ, ದಾವಣಗೆರೆ, ಬಾಗಲಕೋಟೆ, ಕಲಬುರಗಿ, ವಿಜಯಪುರ, ಬೆಳಗಾವಿ, ಗದಗ, ಬಳ್ಳಾರಿ ಹಾಗೂ ವಿಜಯನಗರ ಮೊದಲಾದ ಜಿಲ್ಲೆಗಳಲ್ಲಿ ಬೆಂಬಲ ವ್ಯಕ್ತವಾಗಿದೆ. ಎಫ್​ಕೆಸಿಸಿಐ … Continued

ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡ : ಸಿಎಂ ಬೊಮ್ಮಾಯಿ ಆರೋಪ

ಚಿಕ್ಕಬಳ್ಳಾಪುರ : ಒಳ ಮೀಸಲಾತಿ ಜಾರಿಗೆ ವಿರೋಧಿಸಿ ಶಿಕಾರಿಪುರದಲ್ಲಿ ನಡೆದ ಪ್ರತಿಭಟನೆ ವೇಳೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮನೆ ಮೇಲೆ ನಡೆದ ಕಲ್ಲು ತೂರಾಟದ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಇಂದು, ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಡಿಯೂರಪ್ಪ ಅವರ ಮನೆ ಮೇಲೆ ನಡೆದ ಕಲ್ಲು ತೂರಾಟದ … Continued

ಒಳಮೀಸಲು ವಿರೋಧಿಸಿ ಪ್ರತಿಭಟನೆ: ಶಿಕಾರಿಪುರದಲ್ಲಿ ಯಡಿಯೂರಪ್ಪ ಮನೆಯ ಮೇಲೆ ಕಲ್ಲು ತೂರಾಟ, ಲಾಠಿ ಚಾರ್ಜ್

ಶಿವಮೊಗ್ಗ: ರಾಜ್ಯ ಬಿಜೆಪಿ ಸರ್ಕಾರದ ಒಳಮೀಸಲಾತಿ ನಿರ್ಧಾರವನ್ನು ಖಂಡಿಸಿ ರಾಜ್ಯಾದ್ಯಂತ ಹೋರಾಟ, ಪ್ರತಿಭಟನೆ ತೀವ್ರವಾಗಿದೆ. ಇಂದು ಸೋಮವಾರ ಶಿಕಾರಿಪುರದಲ್ಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಮನೆಯ ಮುಂದೆ ಪ್ರತಿಭಟನೆ ನಡೆದಿದ್ದು, ಪ್ರತಿಭಟನೆ ವೇಳೆ ಯಡಿಯೂರಪ್ಪ ಅವರ ಮನೆಯ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಶಿಕಾರಿಪುರ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿ ಕಿಟಕಿ … Continued

ಬೆಂಗಳೂರು-ಮೈಸೂರು ದಶಪಥ ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ ಟೋಲ್ ಸಂಗ್ರಹಕ್ಕೆ ವಿರೋಧ : ಪ್ರತಿಭಟನೆ

ರಾಮನಗರ : ಎರಡು ದಿನಗಳ ಹಿಂದಷ್ಟೇ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿರುವ ಬೆಂಗಳೂರು-ಮೈಸೂರು ದಶಪಥ ಎಕ್ಸ್‌ ಪ್ರೆಸ್‌ ಹೆದ್ದಾರಿಯಲ್ಲಿ ಇಂದಿನಿಂದ ಟೋಲ್ ಸಂಗ್ರಹ ಆರಂಭವಾಗಿದೆ. ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಬೆಂಗಳೂರು ದಕ್ಷಿಣ ತಾಲೂಕಿನ ಕಣಮಿಣಿಕೆ ಬಳಿ ಹಾಗೂ ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ … Continued

ಸುರತ್ಕಲ್ ಟೋಲ್‌‌ಗೇಟ್‌‌ ತೆರವಿಗೆ ಒತ್ತಾಯಿಸಿ ಮುತ್ತಿಗೆ : ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ

ಮಂಗಳೂರು:‌ ಸುರತ್ಕಲ್ ಟೋಲ್ ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟಗಾರರ ಸಮಿತಿ ಕರೆ ನೀಡಿದ್ದ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರತಿಭಟನಾಕಾರರು ಟೋಲ್‌ ಗೇಟ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ಪ್ರಮುಖರು ಸೇರಿದಂತೆ ಅನೇಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ವಶಕ್ಕೆ ಪಡೆದಿದ್ದಾರೆ. ಟೋಲ್‌ ಗೇಟ್‌ … Continued