ತನಿಖೆ ನಂತರ ಪಿಎಸ್‌ಐ ಹುದ್ದೆ ಅಕ್ರಮ ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್‌ ರಚನೆ: ಗೃಹ ಸಚಿವ ಆರಗ ಜ್ಞಾನೇಂದ್ರ

ಶಿವಮೊಗ್ಗ: ಪಿಎಸ್​ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ಪೂರ್ಣಗೊಂಡ ನಂತರ ವಿಚಾರಣೆಗೆ ವಿಶೇಷ ತ್ವರಿತ ನ್ಯಾಯಾಲಯ ರಚನೆ ಮಾಡುವ ಚಿಂತನೆ ಇದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ತನಿಖೆ ಪಾರದರ್ಶಕವಾಗಿ ನಡೆಯುತ್ತಿದ್ದು, ತನಿಖೆ ಪೂರ್ಣಗೊಂಡರೆ ಆರೋಪಿಗಳ ಬಣ್ಣ ಬಯಲಿಗೆ ಬರಲಿದೆ. ಅಕ್ರಮದಲ್ಲಿ ಸಿಕ್ಕಿಬಿದ್ದವರು ಬಹಳ ವರ್ಷಗಳಿಂದ … Continued

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ: ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಮೇ 24ರ ವರೆಗೆ ಕಾಲಾವಕಾಶ ನೀಡಿದ ಕೆಎಟಿ

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳ (ಪಿಎಸ್‌ಐ) ನೇಮಕಾತಿಗೆ ಸಂಬಂಧಿಸಿದ ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ಮರುಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಇಪ್ಪತ್ತೆಂಟು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು (ಕೆಎಸ್‌ಎಟಿ) ಬುಧವಾರ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಮೇ 24ರ ವರೆಗೆ ಕಾಲಾವಕಾಶ … Continued

ಪಿಎಸ್ಐ ನೇಮಕ ಪರೀಕ್ಷೆ ಹಗರಣದಲ್ಲಿ ಬಂಧನಕ್ಕೊಳಗಾದ ಆರೋಪಿಯ ಅಣ್ಣ ಆತ್ಮಹತ್ಯೆ

ಹಾಸನ: ಪಿಎಸ್‌ಐ ನೇಮಕ ಪರೀಕ್ಷೆ ಹಗರಣದಲ್ಲಿ ಬಂಧನಕ್ಕೊಳಗಾದ ಆರೋಪಿಯ ಅಣ್ಣ ಇಂದು, ಬುಧವಾರ ಆತ್ಮಹತ್ಯೆಗೆ ಶರಣಾದ ಘಟನೆ ಹೊಳೆನರಸೀಪುರ ತಾಲೂಕಿನ ಗುಂಜೇವು ಗ್ರಾಮದಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗುಂಜೇವು ಗ್ರಾಮದ ಮನುಕುಮಾರ ಅವರ ಅಣ್ಣ, ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕಿನಲ್ಲಿ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದ ವಾಸು(48) ಆತ್ಮಹತ್ಯೆಗೆ ಶರಣಾದವರು ಎಂದು ಹೇಳಲಾಗಿದೆ. ಪಿಎಸ್‌ಐ … Continued

ಪಿಎಸ್‌ಐ ನೇಮಕ ಪರೀಕ್ಷೆ ಹಗರಣ: ಇಬ್ಬರು ಪೊಲೀಸ್‌ ಅಧಿಕಾರಿಗಳನ್ನು ವಶಕ್ಕೆ ಪಡೆದ ಸಿಐಡಿ ಅಧಿಕಾರಿಗಳು

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಹಗರಣದಲ್ಲಿ ಈಗ ಪೊಲೀಸರ ಬಂಧನವೂ ಆಗುತ್ತಿದ್ದು, ಈ ಪ್ರಕರಣದ ಸಂಬಂಧ ರಾಯಚೂರು ಜಿಲ್ಲೆ ಲಿಂಗಸೂಗೂರು ಡಿವೈ‌ಎಸ್‌ಪಿ ಮಲ್ಲಿಕಾರ್ಜುನ ಸಾಲಿ ಹಾಗೂ ಕಲಬುರಗಿ ಬೆರಳಚ್ಚು ವಿಭಾಗದ ಸಿಪಿಐ ಆನಂದ ಮೇತ್ರೆ ಬಂಧನವಾಗಿದೆ. ನಿನ್ನೆಯಿಂದ ಸುದೀರ್ಘವಾಗಿ ತೀವ್ರ ವಿಚಾರಣೆ ನಡೆಸಿದ ಸಿಐಡಿ ತಂಡ ಇಂದು, ಗುರುವಾರ ಇಬ್ಬರೂ ಅಧಿಕಾರಿಗಳನ್ನು ವೈದ್ಯಕೀಯ ತಪಾಸಣೆಗೆ … Continued

ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ: ಶಾಸಕ ಪ್ರಿಯಾಂಕ್‌ ಖರ್ಗೆಗೆ ಮತ್ತೊಂದು ನೋಟಿಸ್‌ ನೀಡಿದ ಸಿಐಡಿ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಪ್ರಿಯಾಂಕ್‌ ಖರ್ಗೆಗೆ ಸಿಐಡಿ ಮತ್ತೊಂದು ನೋಟಿಸ್‌ ನೀಡಿದೆ. ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಬಿಡುಗಡೆ ಮಾಡಿದ ಆಡಿಯೋ ಕ್ಲಿಪ್ಪಿಂಗ್‌ ಹಾಗೂ ಇತರೆ ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ಸಿಐಡಿ ನೋಟಿಸ್‌ನಲ್ಲಿ ತಿಳಿಸಿದೆ. ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಪ್ರಿಯಾಂಕ್‌ ಖರ್ಗೆ ಆಡಿಯೋ ಕ್ಲಿಪ್‌ ಒಂದನ್ನು … Continued

ಪಿಎಸ್‌ಐ ನೇಮಕಾತಿ ಪರೀಕ್ಷೆ ಹಗರಣದಲ್ಲಿ ನನ್ನ ವಿರುದ್ಧದ ಆರೋಪ ನಿರಾಧಾರ, ಇದರ ಹಿಂದೆ ಷಡ್ಯಂತ್ರ: ಡಾ.ಅಶ್ವತ್ಥ ನಾರಾಯಣ

ಬೆಂಗಳೂರು: ಪಿಎಸ್‌ಐ ಪರೀಕ್ಷೆ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನನ್ನ ವಿರುದ್ಧ ಕಾಂಗ್ರೆಸ್ ಮುಖಂಡರು ಮಾಡಿರುವ ಆರೋಪ ಆಧಾರ ರಹಿತ ಎಂದು ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು “ ನನ್ನ ರಾಜಕೀಯ ಬೆಳವಣಿಗೆಯಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರಿಗೆ ಭಯವಾಗತ್ತಿದೆ. ನನ್ನ ಹೆಸರಿಗೆ ಮಸಿ … Continued

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಸಿಐಡಿಗೆ ಶರಣಾದ ಮತ್ತೊಬ್ಬ ಪ್ರಮುಖ ಆರೋಪಿ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯ ಮುಖ್ಯಾಧ್ಯಾಪಕ

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಹಗರಣದ ಮತ್ತೊಬ್ಬ ಪ್ರಮುಖ ಆರೋಪಿ ಜ್ಞಾನಜ್ಯೋತಿ ಶಿಕ್ಷಣ ಸಂಸ್ಥೆಯ ಮುಖ್ಯಾಧ್ಯಾಪಕ ಕಾಶಿನಾಥ ಸಿಐಡಿಗೆ ಶರಣಾಗಿದ್ದಾನೆ. ಪಿಎಸ್ಐ ಅಭ್ಯರ್ಥಿಗಳ ಒಎಂಆರ್ ಶೀಟ್​​ ತಿದ್ದಲು ಸಹಕಾರ ನೀಡಿರುವ ಗಂಭೀರ ಆರೋಪ ಎದುರಿಸುತ್ತಿರುವ ಈತ ಕಳೆದ 21 ದಿನಗಳಿಂದ ಪೊಲೀಸರ ಕೈಗೆ ಸಿಗದೆ ತೆಲೆಮರೆಸಿಕೊಂಡಿದ್ದ. ಇದೀಗ ಸ್ವತಃ ತಾವೇ ಕಲಬುರಗಿಯ ಸಿಐಡಿ ಕಚೇರಿಗೆ … Continued

ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ: ಪ್ರಮುಖ ಆರೋಪಿ ನೀರಾವರಿ ಇಲಾಖೆ ಅಧಿಕಾರಿ ಸಿಐಡಿಗೆ ಶರಣಾಗತಿ…!

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ 20 ದಿ‌ನಗಳಿಂದ ತಲೆಮರೆಸಿಕೊಂಡಿದ್ದ ಮತ್ತೋರ್ವ ಪ್ರಮುಖ ಆರೋಪಿ, ನೀರಾವರಿ ಇಲಾಖೆಯ ಸಹಾಯಕ ಇಂಜಿನಿಯರ್ ಮಂಜುನಾಥ್ ಮೇಳಕುಂದಾ ಭಾನುವಾರ ಸಿಐಡಿ ಕಚೇರಿಗೆ ಆಗಮಿಸಿ ಶರಣಾಗಿದ್ದಾರೆ. ನಗರದ ಐವಾನ್ ಶಾಹಿ‌ ಅತಿಥಿಗೃಹದಲ್ಲಿರುವ ಸಿಐಡಿ ಕಚೇರಿಗೆ ಆಟೋದಲ್ಲಿ ಕೊರಳಿಗೆ ಒಂದು ಬ್ಯಾಗ್ ಹಾಕಿಕೊಂಡು ಮಂಜುನಾಥ ಬಂದಿದ್ದಾರೆ. ಈ ವೇಳೆ ಪಿಎಸ್ಐ ಪರೀಕ್ಷೆ … Continued

ಪಿಎಸ್‌ಐ ನೇಮಕಾತಿ ಅಕ್ರಮ: ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳ ಬಂಧನ

ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ 12 ಅಭ್ಯರ್ಥಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಿಐಡಿ ಡಿಎಸ್​ಪಿ ನೀಡಿದ ದೂರಿನನ್ವಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 8ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಕೋರಮಂಗಲದ ನಿವಾಸಕ್ಕೆ ಹಾಜರುಪಡಿಸಿ, 10 ದಿನ ವಶಕ್ಕೆ ಪಡೆದಿದ್ದಾರೆ. ಬಂಧಿತರು 2020-21ನೇ ಸಾಲಿನಲ್ಲಿ ಬೆಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ. ತನಿಖೆಯ ವೇಳೆ … Continued

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ : ಮೊಬೈಲ್ ಒಡೆದು ಸಾಕ್ಷ್ಯನಾಶಕ್ಕೆ ದಿವ್ಯಾ ಹಾಗರಗಿ ಯತ್ನ..?

ಕಲಬುರಗಿ: ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮದ ಪ್ರಮುಖ ಆರೋಪಿಯಾಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ವಿಚಾರಣೆಯನ್ನು ಸಿಐಡಿ ತಂಡ ಇಂದೂ ಮುಂದುವರಿಸಿದೆ. ಆದರೆ ಸಿಐಡಿ ಕೈಗೆ ಯಾವುದೇ ದಾಖಲೆ ಸಿಗದಂತೆ ಮಾಡಲು ತನ್ನ ಮೊಬೈಲ್ ಅನ್ನು ಮಹಾರಾಷ್ಟ್ರದಲ್ಲಿಯೇ ಮೊಬೈಲ್‌ ಒಡೆದು ಹಾಕಿದ್ದಾರೆ ಎಂದು ಹೇಳಲಾಗಿದೆ. ಎರಡು ದಿನಗಳ ಹಿಂದೆ ಸಿಐಡಿ ಅಧಿಕಾರಿಗಳು ಪುಣೆಯಲ್ಲಿ ದಿವ್ಯಾಳನ್ನು … Continued