ಸಾವರ್ಕರ್ ಮಾನನಷ್ಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್

ಪುಣೆ : ವಿನಾಯಕ ದಾಮೋದರ್ ಸಾವರ್ಕರ್ (ವೀರ್‌ ಸಾವರ್ಕರ್‌) ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅಕ್ಟೋಬರ್ 23 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಪುಣೆ ನ್ಯಾಯಾಲಯವು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. . ಕಳೆದ ವರ್ಷ ಯುನೈಟೆಡ್ ಕಿಂಗ್‌ಡಮ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ … Continued

ವೀಡಿಯೊ…| ಪುಣೆ ಸಮೀಪ ಹೆಲಿಕಾಪ್ಟರ್ ಪತನ : ಇಬ್ಬರು ಪೈಲಟ್‌ ಸೇರಿ ಮೂವರು ಸಾವು

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ಬುಧವಾರ ಬೆಳಗ್ಗೆ ಹೆಲಿಕಾಪ್ಟರ್ ಪತನಗೊಂಡಿದೆ. ಘಟನೆಯಲ್ಲಿ ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಲಿಕಾಪ್ಟರ್ ಪುಣೆಯ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್ ಹೆಲಿಪ್ಯಾಡ್‌ನಿಂದ ಟೇಕಾಫ್ ಆದ ಕೂಡಲೇ ನಗರದ ವಸತಿ ಉಪನಗರವಾದ ಬವ್‌ಧಾನ್‌ ಗುಡ್ಡಗಾಡು ಪ್ರದೇಶದ ಬಳಿ ಇಂದು, ಬುಧವಾರ ಬೆಳಿಗ್ಗೆ 6:45 ರ ಸುಮಾರಿಗೆ ಪತನಗೊಂಡಿದೆ ಎಂದು ವರದಿಯಾಗಿದೆ. ಹೆಲಿಕಾಪ್ಟರ್‌ … Continued

ವೀಡಿಯೊ…| ದಿಢೀರ್ ಬಾಯ್ತೆರೆದ ರಸ್ತೆ : ಸೆಕೆಂಡೆಗಳಲ್ಲೇ ದೊಡ್ಡ ಟ್ಯಾಂಕರ್ ಅನ್ನೇ ಇಡಿಯಾಗಿ ನುಂಗಿದ ಗುಂಡಿ…!

ಇದಕ್ಕಿದ್ದಂತೆ ಬಾಯ್ತೆರೆದ ರಸ್ತೆಯು ಮುನ್ಸಿಪಲ್ ಕಾರ್ಪೊರೇಷನ್ (ಪಿಎಂಸಿ) ಸೆಪ್ಟಿಕ್ ಟ್ಯಾಂಕ್ ವಾಹನವನ್ನು ಇಡಿಯಾಗಿ ಆಪೋಶನ ತೆಗೆದುಕೊಂಡ ಘಟನೆ ಶುಕ್ರವಾರ ಪುಣೆಯ ಲಕ್ಷ್ಮೀ ರಸ್ತೆಯ ಸಮಾಧಾನ ಚೌಕದ ಬಳಿ ನಡೆದಿದೆ. ಚಾಲಕ ತನ್ನನ್ನು ರಕ್ಷಿಸಿಕೊಳ್ಳಲು ತಕ್ಷಣವೇ ವಾಹನದಿಂದ ಜಿಗಿದು ಪಾರಾಗಿದ್ದಾನೆ. ಘಟನೆ ವರದಿಯಾದ ನಂತರ ಅಗ್ನಿಶಾಮಕ ದಳದ 20 ಜವಾನರು ಮತ್ತು ಪೊಲೀಸ್ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಗಾಗಿ … Continued

ಸೆ.16ರಂದು ಹುಬ್ಬಳ್ಳಿ-ಪುಣೆ ನಡುವೆ ವಂದೇ ಭಾರತ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಹುಬ್ಬಳ್ಳಿ : ಹುಬ್ಬಳ್ಳಿ- ಪುಣೆ ನಡುವೆ ಸಂಚರಿಸಲಿರುವ ವಂದೇ ಭಾರತ್‌ ಸೇರಿ 6 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ಸೋಮವಾರ (ಸೆ.16) ಚಾಲನೆ ನೀಡಲಿದ್ದಾರೆ. ಹುಬ್ಬಳ್ಳಿ- ಪುಣೆ ನಡುವೆ ಸಂಚರಿಸಲಿರುವ ವಂದೇ ಭಾರತ್‌ ರೈಲು ಕರ್ನಾಟಕದಲ್ಲಿ ಸಂಚರಿಸಲಿರುವ 9ನೇ ವಂದೇ ಭಾರತ್‌ ರೈಲಾಗಲಿದೆ. ಸೆ.16ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸಪ್ರೆಸ್ … Continued

ವೀಡಿಯೊ…| ಊಟ ಇಲ್ಲ ಅಂದಿದ್ದಕ್ಕೆ ಕೋಪಗೊಂಡು ಹೊಟೇಲಿಗೆ ಟ್ರಕ್ ಡಿಕ್ಕಿ ಹೊಡೆಸಿದ ಪಾನಮತ್ತ ಚಾಲಕ…!

ಆಘಾತಕಾರಿ ಘಟನೆಯೊಂದರಲ್ಲಿ ಪುಣೆ ಜಿಲ್ಲೆಯ ಇಂದಾಪುರ ತಾಲೂಕಿನಲ್ಲಿ ಪಾನಮತ್ತ ಚಾಲಕನೊಬ್ಬ ತನಗೆ ಊಟ ನಿರಾಕರಿಸಿದ ಕಾರಣಕ್ಕೆ ತನ್ನ ಟ್ರಕ್ ಅನ್ನು ಹೊಟೇಲಿಗೆ ಡಿಕ್ಕಿ ಹೊಡೆಸಿದ್ದಾನೆ. ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಿಕ್ಕಿರುವ ಮಾಹಿತಿಯ ಪ್ರಕಾರ, ಪುಣೆ-ಸೋಲಾಪುರ ಹೆದ್ದಾರಿಯಲ್ಲಿರುವ ರಸ್ತೆ ಬದಿಯ ಹೊಟೇಲ್‌ ಗೋಕುಲದಲ್ಲಿ ಈ ಘಟನೆ ನಡೆದಿದೆ. ಹಿಂಗಂಗಾವ್‌ನ ಹೋಟೆಲ್ ಗೋಕುಲ ಬಳಿ … Continued

ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್‌ ನೇಮಕಾತಿ ರದ್ದು : ಯುಪಿಎಸ್‌ ಸಿಯಿಂದ ಕ್ರಮ

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (ಯುಪಿಎಸ್‌ಸಿ) ಬುಧವಾರ ವಿವಾದಿತ ಐಎಎಸ್ ಟ್ರೈನಿ ಪೂಜಾ ಖೇಡ್ಕರ್ ಅವರ ನೇಮಕಾತಿಯನ್ನು ರದ್ದುಗೊಳಿಸಿದೆ ಮತ್ತು ಮುಂದಿನ ಪರೀಕ್ಷೆಗಳನ್ನು ತೆಗೆದುಕೊಳ್ಳದಂತೆ ಅವರನ್ನು ನಿಷೇಧಿಸಿದೆ. ‘ಲಭ್ಯವಿರುವ ಎಲ್ಲ ದಾಖಲಾತಿಗಳನ್ನು ಎಚ್ಚರಿಕೆಯಿಂದ ಪರಿಶೀಲಿಸಿದ್ದು, ಅವರು ನಾಗರಿಕ ಸೇವಾ ಪರೀಕ್ಷಾ (ಸಿಎಸ್‌ಇ-2022) ನಿಯಮಗಳನ್ನು ಉಲ್ಲಂಘಿಸಿರುವುದು ಗೊತ್ತಾಗಿದೆ’ ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ‘2023ರ ಬ್ಯಾಚ್‌ನ … Continued

ಪೋಶೆ ಕಾರು ಅಪಘಾತ ಪ್ರಕರಣ : ಅಪ್ರಾಪ್ತನನ್ನು ತಕ್ಷಣವೇ ಬಿಡುಗಡೆ ಮಾಡಲು ಬಾಂಬೆ ಹೈಕೋರ್ಟ್ ಆದೇಶ

ಮುಂಬೈ: ಪುಣೆಯ ಪೋಶೆ ಕಾರು ಅಪಘಾತ ಪ್ರಕರಣದಲ್ಲಿ ಆರೋಪಿಯಾಗಿರುವ 17 ವರ್ಷದ ಬಾಲಕನನ್ನು ನಿರೀಕ್ಷಣಾ ಮಂದಿರದಿಂದ ಕೂಡಲೇ ಬಿಡುಗಡೆ ಮಾಡುವಂತೆ ಬಾಂಬೆ ಹೈಕೋರ್ಟ್ ಮಂಗಳವಾರ (ಜೂನ್‌ 25) ಆದೇಶಿಸಿದೆ. ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಹಾಗೂ ಮಂಜೂಷಾ ದೇಶಪಾಂಡೆ ಅವರಿದ್ದ ವಿಭಾಗೀಯ ಪೀಠವು, ಬಾಲ ನ್ಯಾಯ ಮಂಡಳಿ (ಜೆಜೆಬಿ) ಹೊರಡಿಸಿದ … Continued

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ : ಅಪ್ರಾಪ್ತನ ರಕ್ತದ ಮಾದರಿ ಬದಲಾಯಿಸಲು ಪಡೆದಿದ್ದ 3 ಲಕ್ಷ ರೂ. ವಶಕ್ಕೆ ಪಡೆದ ಪೊಲೀಸರು ; ಇಬ್ಬರು ವೈದ್ಯರ ಬಂಧನ

ಮೇ 19 ರಂದು ನಗರದ ಕಲ್ಯಾಣಿ ನಗರದಲ್ಲಿ ಕಾರು ಅಪಘಾತಕ್ಕೀಡಾಗಿ ಮೋಟಾರುಬೈಕಿನಲ್ಲಿದ್ದ ಇಬ್ಬರು ಸಾಫ್ಟ್‌ವೇರ್ ಇಂಜಿನಿಯರ್‌ಗಳು ಸಾವಿಗೀಡಾದ ಪ್ರಕರಣದಲ್ಲಿ ಕಾರು ಚಾಲನೆ ಮಾಡಿದ್ದ ಅಪ್ರಾಪ್ತನ ರಕ್ತದ ಮಾದರಿಯನ್ನೇ ಬದಲಾಯಿಸಲು ವೈದ್ಯರಿಗೆ ಲಂಚ ನೀಡಿದ್ದ 3 ಲಕ್ಷ ರೂ.ಗಳನ್ನು ಪುಣೆ ಪೊಲೀಸರ ಅಪರಾಧ ವಿಭಾಗವು ಸೋಮವಾರ ವಶಪಡಿಸಿಕೊಂಡಿದೆ. ಭಾನುವಾರ, 17 ವರ್ಷದ ಬಾಲಕನ ರಕ್ತದ ವರದಿಯನ್ನು ಬದಲಾಯಿಸಿದ … Continued

ಪುಣೆ ಪೋರ್ಷೆ ಕಾರು ಅಪಘಾತ ಪ್ರಕರಣ : ಅಪ್ರಾಪ್ತ ಆರೋಪಿಯ ಜಾಮೀನು ರದ್ದುಗೊಳಿಸಿದ ಬಾಲಾಪರಾಧಿ ನ್ಯಾಯಾಲಯ

ಪುಣೆ: ಇಲ್ಲಿ ಭಾನುವಾರ ಮದ್ಯದ ಅಮಲಿನಲ್ಲಿ 17 ವರ್ಷದ ಅಪ್ರಾಪ್ತ ವೇಗವಾಗಿ ಚಲಾಯಿಸುತ್ತಿದ್ದ ಐಷಾರಾಮಿ ಪೋರ್ಷೆ ಕಾರು (Porsche Car Accident) ಬೈಕ್​ಗೆ ಡಿಕ್ಕಿ ಹೊಡೆದು ಇಬ್ಬರು ಸಾಫ್ಟ್​ವೇರ್ ಇಂಜಿನಿಯರ್​ಗಳು ಸಾವಿಗೀಡಾದ ಪ್ರಕರಣದಲ್ಲಿ ಅಪ್ರಾಪ್ತ ಬಾಲಕನಿಗೆ ಜಾಮೀನು ನೀಡಿದ ಮೂರು ದಿನಗಳ ನಂತರ ಬಾಲ ನ್ಯಾಯಮಂಡಳಿಯು ಅದನ್ನು ರದ್ದುಗೊಳಿಸಿದೆ. ಹಾಗೂ ತನ್ನ ಆದೇಶವನ್ನು ಮಾರ್ಪಡಿಸಿ ಜೂನ್ … Continued

ಬಾಲಕ ಚಲಾಯಿಸುತ್ತಿದ್ದ ಐಷಾರಾಮಿ ʼಪೋಷೆʼ ಕಾರು ಅಪಘಾತದಲ್ಲಿ ಇಬ್ಬರು ಸಾವು : ತಂದೆಯ ಬಂಧನ

ಪುಣೆ: ಇಬ್ಬರು ವ್ಯಕ್ತಿಗಳನ್ನು ಬಲಿತೆಗೆದುಕೊಂಡ ಮಾರಣಾಂತಿಕ ಕಾರು ಅಪಘಾತದಲ್ಲಿ ಭಾಗಿಯಾಗಿದ್ದ 17 ವರ್ಷದ ಬಾಲಕನ ತಂದೆಯನ್ನು ಪುಣೆ ಪೊಲೀಸರು ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ಬಂಧಿಸಿದ್ದಾರೆ. ಹೆಚ್ಚುವರಿಯಾಗಿ, ಅಪ್ರಾಪ್ತರಿಗೆ ಮದ್ಯ ನೀಡಿದ ಒಂದೆರಡು ಬಾರ್‌ಗಳ ಮಾಲೀಕರನ್ನೂ ಬಂಧಿಸಲಾಗಿದೆ. ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಈ ದುರ್ಘಟನೆ ನಡೆದಿದೆ. ಪೊಲೀಸ್ ವರದಿಗಳ ಪ್ರಕಾರ, 17 ವರ್ಷ ವಯಸ್ಸಿನ ಅಪ್ರಾಪ್ತ … Continued