ನಾವು ವಿಐಪಿಗಳು, ಕ್ಯೂನಲ್ಲಿ ನಿಲ್ಲಲು ಸಾಧ್ಯವಿಲ್ಲ”: ಪ್ರತಿ ಶಾಸಕರಿಗೂ 5 ಟಿಕೆಟ್ ನೀಡಿ ; ಶಾಸಕ ಕಾಶಪ್ಪನವರ ಒತ್ತಾಯ

ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯು (ಕೆಎಸ್‌ಸಿಎ) ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಪಂದ್ಯಗಳಿಗಾಗಿ ಪ್ರತಿ ಶಾಸಕರಿಗೆ ತಲಾ ಐದು ಟಿಕೆಟ್‌ಗಳನ್ನು ನೀಡಬೇಕು ಎಂದು ಕಾಂಗ್ರೆಸ್ ಶಾಸಕರೊಬ್ಬರು ಒತ್ತಾಯಿಸಿದ್ದಾರೆ. ಶಾಸಕರು ವಿಐಪಿಗಳಾಗಿದ್ದು, ಅವರು “ಸರತಿ ಸಾಲಿನಲ್ಲಿ ನಿಲ್ಲಲು ಸಾಧ್ಯವಿಲ್ಲ” ಎಂದು ಅವರು ಪ್ರತಿಪಾದಿಸಿದ್ದಾರೆ. ಇದಲ್ಲದೆ, ಶಾಸಕರಿಗೆ ಪ್ರತ್ಯೇಕ ಆಸನ ವ್ಯವಸ್ಥೆ ಮಾಡಬೇಕು ಎಂದು ಹುನಗುಂದ ಶಾಸಕ … Continued

ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯಾದ ಅಧಿಕಾರಿಗೂ ಬಡ್ತಿ…! ರಾಜ್ಯ ಸರ್ಕಾರದ ಎಡವಟ್ಟು ಬಹಿರಂಗಗೊಳಿಸಿದ ಆರ್‌. ಅಶೋಕ

ಬೆಂಗಳೂರು: ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯಾದ ಕೆಎಎಸ್‌ ಅಧಿಕಾರಿಗೂ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ವಿಪಕ್ಷದ ನಾಯಕ ಆರ್‌ ಅಶೋಕ ದಾಖಲೆ ಬಹಿರಂಗ ಪಡೆಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಶೋಕ ಅವರು, ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ … Continued

ವೀಡಿಯೊ…| ಕಾಂಗ್ರೆಸ್‌ ಪಕ್ಷದ ಮತಗಳ್ಳತನ ಬಯಲು ಮಾಡಿದ ಸಿದ್ದರಾಮಯ್ಯ ; ಇದಕ್ಕೇನಂತೀರಿ ಎಂದು ಬಿಜೆಪಿ ವಾಗ್ದಾಳಿ

ಬೆಂಗಳೂರು :ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಪಕ್ಷದ ಟಿಕೆಟ್‌ನಲ್ಲಿ ಸ್ಪರ್ಧಿಸಿದಾಗ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಚುನಾವಣೆಯಲ್ಲಿ ವಂಚನೆಯಿಂದಾಗಿ ಸೋತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಹೇಳಿಕೊಂಡಿದ್ದಾರೆ. ಇದು ಬಿಹಾರದಲ್ಲಿ “ಮತ ಅಧಿಕಾರ ಯಾತ್ರೆ” ಆಯೋಜಿಸಿರುವ ಕಾಂಗ್ರೆಸ್‌ ಮೇಲೆ ವಾಗ್ದಾಳಿ ನಡೆಸಲು ಬಿಜೆಪಿಗೆ ಅವಕಾಶ ನೀಡಿದೆ. 1991ರಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಜನತಾದಳದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸಿದ್ದರಾಮಯ್ಯ (Siddaramaiah) … Continued

ನಾಗಮಂಗಲ‌ ಗಲಭೆ : ಆರ್ ಅಶೋಕ, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ ಐ ಆರ್‌

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಎಫ್​​ಐಆರ್​​ ದಾಖಲಾಗಿದೆ. ನಾಗಮಂಗಲ‌ ಕೋಮುಗಲಭೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೊಂಡ ಆರೋಪದ ಮೇಲೆ ನಾಗಮಂಗಲ ಟೌನ್ ಠಾಣೆಯಲ್ಲಿ ಎಫ್​​ಐಆರ್ ದಾಖಲಾಗಿದೆ. ನಾಗಮಂಗಲ ಘಟನೆಗೆ ಸಂಬಂಧಿಸದೇ ಇದ್ದ ವೀಡಿಯೊ ಹಾಗೂ … Continued

ಹುಬ್ಬಳ್ಳಿ: ಬಿಜೆಪಿ ಪ್ರತಿಭಟನೆ, ಠಾಣೆಗೆ ನುಗ್ಗಲು ಯತ್ನ: ಆರ್.ಅಶೋಕ ಸೇರಿ ಹಲವರು ವಶಕ್ಕೆ

ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟಗಾರರ ಬಂಧನ ಖಂಡಿಸಿ ರಾಜ್ಯಾದ್ಯಂತ ಬಿಜೆಪಿ ಹಮ್ಮಿಕೊಂಡಿರುವ ಪ್ರತಿಭಟನೆಯು ಹುಬ್ಬಳ್ಳಿಯಲ್ಲಿ ತೀವ್ರಗೊಂಡಿದೆ. ಹಿಂದೂ ಕಾರ್ಯಕರ್ತನ ಬಂಧನ ಖಂಡಿಸಿ ವಿಪಕ್ಷ ನಾಯಕ ಆರ್‌.ಅಶೋಕ ನೇತೃತ್ವದಲ್ಲಿ ನಡೆದ ಪ್ರತಿಭಟನೆ ವೇಳೆ ಬಿಜೆಪಿ ಕಾರ್ಯಕರ್ತರು ಪೋಲಿಸ್ ಠಾಣೆಗೆ ನುಗ್ಗಲು ಯತ್ನಿಸಿದಾಗ ತಡೆದ ಪೊಲೀಸರು, ನಾಯಕ ಆರ್. ಅಶೋಕ್ ಸೇರಿದಂತೆ 90 ಜನರನ್ನು ವಶಕ್ಕೆ ಪಡೆದರು. ಹಿಂದೂ ಕಾರ್ಯಕರ್ತ … Continued

ಜಾತಿ ಗಣತಿ ವರದಿಗೆ ಡಿಸಿಎಂ ಶಿವಕುಮಾರ ವಿರೋಧ; ವರದಿ ತಿರಸ್ಕರಿಸಬೇಕೆಂದು ಸಿಎಂಗೆ ಒತ್ತಾಯಿಸುವ ಮನವಿಗೆ ಸಹಿ : ಸ್ವೀಕರಿಸುವ ನಿರ್ಧಾರ ಅಚಲ ಎಂದ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕದ ಒಕ್ಕಲಿಗ ಸಮುದಾಯದ ರಾಜಕೀಯ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು, ತಮ್ಮ ಮೊದಲ ಅಧಿಕಾರಾವಧಿಯಲ್ಲಿ ನಡೆಸಿದ 2015 ರ ಜಾತಿ ಸಮೀಕ್ಷೆಯ ವರದಿಯನ್ನು ತಿರಸ್ಕರಿಸುವಂತೆ ಒತ್ತಾಯಿಸಿದ್ದಾರೆ. ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ನಡೆಸಲಾಗಿಲ್ಲ ಎಂದು ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ ಒಕ್ಕಲಿಗ ನಾಯಕರು ಸಹಿ ಹಾಕಿರುವ ಪತ್ರದಲ್ಲಿ ಹೇಳಲಾಗಿದೆ. … Continued

ವಿಧಾನಸಭೆಯ ವಿಪಕ್ಷ ನಾಯಕರಾಗಿ ಆರ್‌.ಅಶೋಕ ಆಯ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕನಾಗಿ ಬೆಂಗಳೂರಿನ ಪದ್ಮನಾಭ ನಗರ ಕ್ಷೇತ್ರದ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ ಅವರನ್ನು ಆಯ್ಕೆ ಮಾಡಲಾಗಿದೆ. ಬೆಂಗಳೂರಿನ ಐಟಿಸಿ ಹೋಟೆಲ್​ನಲ್ಲಿ ಶುಕ್ರವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ (BJP Meeting) ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ … Continued

ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಂಶ 2.0 ಜಾರಿ, ಇನ್ಮುಂದೆ 10 ನಿಮಿಷದಲ್ಲಿ ಆಸ್ತಿ ನೋಂದಣಿ : ಸಚಿವ ಆರ್ ಅಶೋಕ

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಂಶ 2.0 ಜಾರಿಗೆ ತಂದಿದ್ದು, ಹತ್ತು ನಿಮಿಷಗಳಲ್ಲಿ ಆಸ್ತಿ ನೋಂದಣಿ ಕಾರ್ಯ ಮುಗಿಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಕಾವೇರಿ 2.0 ತಂತ್ರಾಂಶದ ಕುರಿತು ಮಾತನಾಡಿದ ಅವರು, ಈ ತಂತ್ರಾಂಶ ನಾಗರೀಕ ಸ್ನೇಹಿಯಾಗಿದೆ. ಇದರಿಂದ ಮಧ್ಯವರ್ತಿಗಳ ಹಾವಳಿಗೆ ಬ್ರೇಕ್ಬೀಳಲಿದೆ. ವರ್ಷದೊಳಗೆ ಅರ್ಜಿ ಹಾಕುವುದನ್ನು ತಪ್ಪಿಸಿ, ಆನ್ ಲೈನ್ನಲ್ಲಿ … Continued

ಕೃಷಿ ಭೂಮಿ ವಾರದಲ್ಲಿ ಪರಿವರ್ತನೆ : ಸುಗ್ರೀವಾಜ್ಞೆಗೆ ಸರ್ಕಾರದ ತೀರ್ಮಾನ

ಬೆಂಗಳೂರು: ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗೆ ಬಳಸಿಕೊಳ್ಳಲು ಅವಕಾಶ ಕಲ್ಪಿಸುವ ಭೂಪರಿವರ್ತನೆ ತಿದ್ದುಪಡಿ ಮಸೂದೆಯನ್ನು ಸುಗ್ರೀವಾಜ್ಞೆಯ ಮೂಲಕ ಜಾರಿಗೊಳಿಸಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ ಹೇಳಿದ್ದಾರೆ. ಮಾಧ್ಯಮದವರ ಜೊತೆ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ಮಸೂದೆಗೆ ಅಂಗೀಕಾರ ಪಡೆಯಲು ಸಾಧ್ಯವಾಗಿಲ್ಲ. ಆದ್ದರಿಂದ ಸುಗ್ರೀವಾಜ್ಞೆ ಹೊರಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿರುವ ಲಕ್ಷಾಂತರ ಕಂದಾಯ … Continued

ಮಳೆ ಹಾನಿ ಅಧ್ಯಯನಕ್ಕೆ ಕೇಂದ್ರದಿಂದ 3 ತಂಡಗಳು ; ಸೆಪ್ಟೆಂಬರ್‌ 7ರಿಂದ ಬಾಧಿತ ಜಿಲ್ಲೆಗಳಿಗೆ ಭೇಟಿ

ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆಯಿಂದ ಆಗಿರುವ ಹಾನಿ ಬಗ್ಗೆ ಅಧ್ಯಯನ ನಡೆಸಲು ಕೇಂದ್ರದ ಹಿರಿಯ ಅಧಿಕಾರಿಗಳ ಮೂರು ತಂಡಗಳು ಬರಲಿದ್ದು, ಸೆಪ್ಟೆಂಬರ್‌ 7 ರಿಂದ 9ರ ವರೆಗೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲಿವೆ. ಮಾಧ್ಯಮದವರ ಜೊತೆ ಮಾತನಾಡಿದ ಕಂದಾಯ ಸಚಿವ ಆರ್‌.ಅಶೋಕ, ಜುಲೈ ಮತ್ತು ಆಗಸ್ಟ್‌ನಲ್ಲಿ ಮಳೆ ಮತ್ತು ಪ್ರವಾಹದಿಂದ ಆಗಿರುವ ಬೆಳೆ ನಷ್ಟ ಮತ್ತು … Continued