ಶ್ಯಾಂಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ: ರಾಘವೇಶ್ವರ ಶ್ರೀ, ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಆರೋಪ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಶ್ಯಾಮಪ್ರಸಾದ ಶಾಸ್ತ್ರೀ ಆತ್ಮಹತ್ಯೆಗೀಡಾಗಲು ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ರಾಘವೇಶ್ವರ ಶ್ರೀಗಳ ವಿರುದ್ಧ ಹಲವು ಪ್ರಕರಣಗಳು ಮುನ್ನಲೆಗೆ ಬಂದ ಸಂದರ್ಭದಲ್ಲೇ … Continued

ವಿಚಾರವಾದದ ಹೆಸರಿನಲ್ಲಿ ನಂಬಿಕೆಯ ವಿಜ್ಞಾನವನ್ನು ಹಾಳು ಮಾಡಿಕೊಳ್ಳುತ್ತಿದ್ದೇವೆ: ರಾಘವೇಶ್ವರ ಶ್ರೀಗಳು

ಗೋಕರ್ಣ: ದೃಢವಾದ ನಂಬಿಕೆಯಲ್ಲಿ ಅಡಗಿದ ವಿಜ್ಞಾನ ಆಧುನಿಕ ವಿಜ್ಞಾನಕ್ಕೆ ಗೊತ್ತಿಲ್ಲ. ಇದನ್ನು ಆಧುನಿಕ ವಿಜ್ಞಾನ ಅರ್ಥ ಮಾಡಿಕೊಳ್ಳಬೇಕಾದರೆ ಅದು ನೂರಾರು ಮೈಲಿ ದೂರ ಸಾಗಬೇಕು. ವಿಚಾರವಾದದ ಹೆಸರಿನಲ್ಲಿ ನಂಬಿಕೆಯ ವಿಜ್ಞಾನವನ್ನು ನಾವು ಹಾಳು ಮಾಡಿಕೊಳ್ಳುತ್ತಿದ್ದೇವೆ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಅಶೋಕೆಯಲ್ಲಿ ಕೈಗೊಂಡಿರುವ ಗುರುಕುಲ ಚಾತುರ್ಮಾಸ್ಯದ ಆರನೇ ದಿನದ ಕಾರ್ಯಕ್ರಮದಲ್ಲಿ ನಂಬಿಕೆ … Continued

ಮೂರೂರು ಪ್ರಗತಿ ವಿದ್ಯಾಲಯದಲ್ಲಿ ‘ಸಾಗರಸೇತು’ ರಾಮಕಥೆ ಮಂಗಲ-ಸಜ್ಜನರ ಸಿಟ್ಟು ಲೋಕಕ್ಕೆ ಅಪಾಯಕಾರಿ; ರಾಘವೇಶ್ವರ ಶ್ರೀ

ಕುಮಟಾ: ಸಜ್ಜನರ ಸಮಾಧಾನ, ಕ್ಷಮೆ, ಸರಳತೆಯನ್ನು ಎಂದೂ ಅವರ ಅಸಾಮರ್ಥ್ಯ ದೌರ್ಲಲ್ಯ ಎಂದು ಭಾವಿಸಬಾರದು; ಏಕೆಂದರೆ ಅವರ ಸಿಟ್ಟು ಲೋಕದ ಪಾಲಿಗೆ ಅಷ್ಟೇ ಕಂಟಕ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ನುಡಿದರು. ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ಸಾಗರ ಸೇತು’ ರಾಮಕಥಾ ಸರಣಿಯ ಮಂಗಲ ಪ್ರವಚನ ಅನುಗ್ರಹಿಸಿದ ಅವರು, … Continued

ನಮ್ಮ ಹೃದಯವೇ ರಾಮಮಂದಿರ ಎಂದು ಅರಿತುಕೊಳ್ಳುವುದೇ ಬದುಕಿನ ಧರ್ಮ ; ರಾಘವೇಶ್ವರ ಶ್ರೀ

ಕುಮಟಾ: ಪ್ರತಿಯೊಬ್ಬರ ಅಂತರಾಳದಲ್ಲಿ ಆತ್ಮರೂಪದ ರಾಮನಿದ್ದಾನೆ. ನಮ್ಮ ಹೃದಯವೇ ರಾಮಮಂದಿರ ಎಂಬ ಸತ್ಯವನ್ನು ಅರಿತುಕೊಳ್ಳುವುದೇ ಬದುಕಿನ ಧರ್ಮ ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ನಾಲ್ಕನೇ ದಿನದ ಪ್ರವಚನ ನೀಡಿದ ಅವರು, … Continued

ಆಸೆ ಇದು ರಜೋಗುಣ-ಭಯ, ಚಿಂತೆ, ದ್ವೇಷ, ಕ್ರೋಧ ಎಲ್ಲವೂ ಆಸೆಯ ಸುತ್ತಲೇ ಜನ್ಮ ತಳೆಯುತ್ತವೆ: : ರಾಘವೇಶ್ವರ ಶ್ರೀ

ಕುಮಟಾ: ಆಸೆಯ ಪಾಶದಿಂದ ಮುಕ್ತಿ ಪಡೆದರೆ ಮಾತ್ರ ಮನಃಶಾಂತಿ ಸಾಧ್ಯ. ಆಸೆಯ ಪಾಶದಿಂದ ಏನು ಅನಾಹುತವಾಗುತ್ತದೆ ಎನ್ನುವುದಕ್ಕೆ ರಾವಣನೇ ನಿದರ್ಶನ ಎಂದು ರಾಂಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ‘ರಾಮಸೇತು’ ರಾಮಕಥಾ ಸರಣಿಯ ಮೂರನೇ ದಿನದ ಪ್ರವಚನದಲ್ಲಿ … Continued

ರಾಮ- ಸೀತೆಯರ ಪ್ರೀತಿ ಅಲೌಕಿಕ, ಧರ್ಮಸಮ್ಮತ : ರಾಘವೇಶ್ವರ ಸ್ವಾಮೀಜಿ

ಕುಮಟಾ: ರಾಮ- ಸೀತೆಯರ ಪ್ರೀತಿಯನ್ನು ಕ್ಷುದ್ರ ದೃಷ್ಟಿಯಿಂದ ನೋಡದೇ ಅದನ್ನು ಮೂಲ ಪ್ರಕೃತಿ ಮತ್ತು ಪರಮ ಪುರುಷನ ಪ್ರೀತಿಯಾಗಿ ಲೌಕಿಕ ದೃಷ್ಟಿಯಿಂದ ನೋಡಬೇಕು ಎಂದು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮೂರೂರು ಪ್ರಗತಿ ವಿದ್ಯಾಲಯದ ರಾಮಲೀಲಾ ಮೈದಾನದಲ್ಲಿ ಐದು ದಿನಗಳ ನಡೆಯುತ್ತಿರುವ ‘ರಾಮಸೇತು’ ರಾಮಕಥಾ ಸರಣಿಯ … Continued