ಸಾವರ್ಕರ್ ಮಾನನಷ್ಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್

ಪುಣೆ : ವಿನಾಯಕ ದಾಮೋದರ್ ಸಾವರ್ಕರ್ (ವೀರ್‌ ಸಾವರ್ಕರ್‌) ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅಕ್ಟೋಬರ್ 23 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಪುಣೆ ನ್ಯಾಯಾಲಯವು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. . ಕಳೆದ ವರ್ಷ ಯುನೈಟೆಡ್ ಕಿಂಗ್‌ಡಮ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ … Continued

ರಾಹುಲ್ ಗಾಂಧಿ ಪೌರತ್ವ : ಗೃಹ ಸಚಿವಾಲಯದ ಪ್ರತಿಕ್ರಿಯೆ ಕೇಳಿದ ಅಲಹಾಬಾದ್ ಹೈಕೋರ್ಟ್

ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬ್ರಿಟಿಷ್ ಪೌರತ್ವ ಪಡೆದಿದ್ದಾರೆ ಎಂದು ಪ್ರತಿಪಾದಿಸಿದ್ದ ಮನವಿಯ ಕುರಿತಾಗಿ ಗೃಹ ಸಚಿವಾಲಯದಿಂದ ವಿವರಗಳನ್ನು ಪಡೆಯುವಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಸೂರ್ಯಭಾನ್ ಪಾಂಡೆ ಅವರಿಗೆ ಈ ಸಂಬಂಧ ಗೃಹ ಸಚಿವಾಲಯದಿಂದ ವಿವರಗಳನ್ನು ಪಡೆಯುವಂತೆ ನ್ಯಾಯಮೂರ್ತಿಗಳಾದ ರಾಜನ್ ರಾಯ್ ಮತ್ತು … Continued

ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದು ಹಾಗೂ ಮೀಸಲಾತಿ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಕರ್ನಾಟಕ ಬಿಜೆಪಿ ಶನಿವಾರ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಸಿಖ್‌ ಸಮುದಾಯದ ಬಗ್ಗೆ ದೂಷಣೆ ಹಾಗೂ ಎಸ್‌ಸಿ, ಎಸ್‌ಟಿ ಮತ್ತು … Continued

ಸಿಖ್ಖರ ಭಾವನೆಗಳಿಗೆ ಧಕ್ಕೆ ತಂದ ಆರೋಪ ; ರಾಹುಲ್‌ ಗಾಂಧಿ ವಿರುದ್ಧ 3 ಎಫ್‌ಐಆರ್‌ ದಾಖಲು

ರಾಯ್ಪುರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇತ್ತೀಚಿನ ಅಮೆರಿಕ ಭೇಟಿಯ ವೇಳೆ ನೀಡಿದ ಹೇಳಿಕೆಗಳು  ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದೆ ಎಂದು ಆರೋಪಿಸಿ ಛತ್ತೀಸ್‌ಗಢದಲ್ಲಿ ರಾಹುಲ್‌ ಗಾಂಧಿಯವರ ಮೇಲೆ ಮೂರು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ರಾಜಧಾನಿ ರಾಯ್ಪುರದ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯಲ್ಲಿ ಒಂದು ಮತ್ತು ಬಿಲಾಸ್‌ಪುರ … Continued

ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆ ಬಗ್ಗೆ ಖರ್ಗೆ ಪತ್ರದ ನಂತರ ಮೋದಿ ವಿರುದ್ಧ ಕಾಂಗ್ರೆಸ್‌ ಬಳಸಿದ ʼಅವಹೇಳನಕಾರಿ ಪದʼಗಳ ಬಗ್ಗೆ ಬಿಜೆಪಿ ಪತ್ರ

ನವದೆಹಲಿ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಾಯಕರ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದ ಎರಡು ದಿನಗಳ ನಂತರ ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ನಾಯಕರು ಬಳಸಿರುವ ಅವಹೇಳನಕಾರಿ ಪದಗಳನ್ನು ಪಟ್ಟಿ ಮಾಡಿ ಖರ್ಗೆ ಅವರಿಗೆ … Continued

ವೀಡಿಯೊ..| ರಾಹುಲ್ ಗಾಂಧಿ ನಾಲಿಗೆ ಕತ್ತರಿಸಿದ್ರೆ 11 ಲಕ್ಷ ರೂ. ಬಹುಮಾನ ; ವಿವಾದದ ಕಿಡಿ ಹೊತ್ತಿಸಿದ ಶಿವಸೇನೆ (ಏಕನಾಥ ಶಿಂಧೆ) ಶಾಸಕ

ವಿವಾದಾತ್ಮಕ ಹೇಳಿಕೆಯೊಂದರಲ್ಲಿ, ಶಿವಸೇನಾ (ಏಕನಾಥ ಶಿಂಧೆ ಬಣ) ಶಾಸಕ ಸಂಜಯ ಗಾಯಕ್ವಾಡ್ ಅವರು ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವ ಕುರಿತು ನೀಡಿದ ಹೇಳಿಕೆಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಕತ್ತರಿಸುವವರಿಗೆ 11 ಲಕ್ಷ ರೂಪಾಯಿ ನೀಡುವುದಾಗಿ ಸೋಮವಾರ ಘೋಷಿಸಿದ್ದಾರೆ. ಗಾಯಕ್ವಾಡ ಅವರು ತಮ್ಮ ವಿಲಕ್ಷಣ ಹೇಳಿಕೆಯಲ್ಲಿ, “ ವಿದೇಶದಲ್ಲಿದ್ದಾಗ, ರಾಹುಲ್ ಗಾಂಧಿ ಅವರು ಭಾರತದಲ್ಲಿ … Continued

‘ಸಿಎಂ ಆಕಾಂಕ್ಷಿ’ ನಾಯಕರಿಗೆ ಎಚ್ಚರಿಕೆ ನೀಡಿ : ರಾಹುಲ್ ಗಾಂಧಿಗೆ ಪತ್ರ ಬರೆದ ಕಾಂಗ್ರೆಸ್‌ ಮುಖಂಡರು

ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಸಂಬಂಧ 6ಕ್ಕೂ ಹೆಚ್ಚು ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವುದರ ಜೊತೆಗೆ ಎಚ್ಚರಿಕೆ ನೀಡಬೇಕು ಎಂದು ಕೋರಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್​ ಗಾಂಧಿ ಅವರಿಗೆ ರಾಜ್ಯದ ಕೆಲ ಕಾಂಗ್ರೆಸ್​ ನಾಯಕರು ಪತ್ರ ಬರೆದು ಒತ್ತಾಯಿಸಿದ್ದಾರೆ. ಮಾಜಿ ಸಚಿವರಾದ ಬಿ.ಎಲ್.ಶಂಕರ​, ವಿ.ಎಸ್​.ಉಗ್ರಪ್ಪ, ಎಚ್.ಎಂ.ರೇವಣ್ಣ, ಎಲ್.ಹನುಮಂತಯ್ಯ, ಪ್ರಕಾಶ​ ರಾಥೋಡ್, ಸಿ.ಎಸ್‌. … Continued

ರಾಹುಲ್ ಗಾಂಧಿ ಪೌರತ್ವ ವಿವಾದ : ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ

ನವದೆಹಲಿ: ಕಾಂಗ್ರೆಸ್ ಮುಖಂಡ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ರದ್ದುಗೊಳಿಸಲು ಕೋರಿರುವ ತಮ್ಮ ಮನವಿ ಬಗ್ಗೆ ನಿರ್ಧರಿಸಲು ಗೃಹ ಸಚಿವಾಲಯಕ್ಕೆ ನಿರ್ದೇಶನಗಳನ್ನು ನೀಡಬೇಕೆಂದು ಕೋರಿ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ದೆಹಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ರಾಹುಲ್ ಗಾಂಧಿ ವಿರುದ್ಧ ತಾನು ಸಲ್ಲಿಸಿದ್ದ ದೂರಿನ ಸ್ಥಿತಿಗತಿ ವರದಿಯನ್ನು ಸಲ್ಲಿಸಲು … Continued

ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ | ರಾಜಕೀಯ ವಿವಾದಕ್ಕೆ ಕಾರಣವಾದ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ 5ನೇ ಸಾಲಿನಲ್ಲಿ ಆಸನ ವ್ಯವಸ್ಥೆ

ನವದೆಹಲಿ: ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ “ಐದನೇ ಸಾಲಿನಲ್ಲಿ ಆಸನ ವ್ಯವಸ್ಥೆ” ಮಾಡಿರುವುದು ರಾಜಕೀಯ ವಿವಾದಕ್ಕ ಕಾರಣವಾಗಿದೆ. ಹಾಗೂ ಪ್ರಜಾಪ್ರಭುತ್ವ ಸಂಪ್ರದಾಯಗಳಿಗೆ ಸರ್ಕಾರ ಗೌರವ ಕೊಡುತ್ತಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ. ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ವೇಳೆ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಐದನೇ … Continued

‘ಬ್ರಿಟಿಷ್ ಪ್ರಜೆ’ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ರಕ್ಷಣೆ : ಪ್ರಧಾನಿ ಮೋದಿ, ಅಮಿತ್ ಶಾಗೆ ʼಕಾನೂನು ಕ್ರಮʼದ ಎಚ್ಚರಿಕೆ ನೀಡಿದ ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸುಬ್ರಮಣಿಯನ್ ಸ್ವಾಮಿ ಶನಿವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಕಾನೂನು ಕ್ರಮಕ್ಕೆ ಮುಂದಾಗುವುದಾಗಿ ಎಚ್ಚರಿಕೆ ನೀಡಿದ್ದಾರೆ. ಅವರಿಬ್ಬರು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ರಕ್ಷಿಸುತ್ತಿದ್ದಾರೆ ಎಂದು ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ. … Continued