ಇಂದಿನಿಂದ ರಾಹುಲ್​ ಗಾಂಧಿ ಎರಡು ದಿನಗಳ ರಾಜ್ಯ ಪ್ರವಾಸ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಕ್ಕೆ ಇಂದಿನಿಂದ (ಏಪ್ರಿಲ್‌ 16) ರಿಂದ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ. ಇಂದು ಭಾನುವಾರ ಬೆಳಗ್ಗೆ 9:30ಕ್ಕೆ ದೆಹಲಿ ಏರ್​​ಪೋರ್ಟ್​ನಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸುವ ಅವರು, ನಂತರ ಮಧ್ಯಾಹ್ನ 12:25ಕ್ಕೆ ಕೋಲಾರಕ್ಕೆ ಆಗಮಿಸಿ, ಜಿಲ್ಲೆಯ ಹೊರವಲಯದ ಟಮಕ ಬಳಿ ನಡೆಯುವ … Continued

ಸ್ವಾತಂತ್ರ್ಯ ಹೋರಾಟದಲ್ಲಿ ಸಾವರ್ಕರ್ ಅವರ ತ್ಯಾಗವನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ, ಆದರೆ …: ಶರದ್ ಪವಾರ್

ನಾಗ್ಪುರ: ದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ದಿವಂಗತ ವಿ.ಡಿ. ಸಾವರ್ಕರ್ ಅವರ ತ್ಯಾಗವನ್ನು ಯಾರೂ ನಿರ್ಲಕ್ಷಿಸಲು ಸಾಧ್ಯವಿಲ್ಲ. ಹಾಗೂ ಅವರ ಮೇಲಿನ ಭಿನ್ನಾಭಿಪ್ರಾಯಗಳನ್ನು ಇಂದು ರಾಷ್ಟ್ರೀಯ ವಿಷಯವನ್ನಾಗಿ ಮಾಡಲು ಸಾಧ್ಯವಿಲ್ಲ, ಏಕೆಂದರೆ ನಾವು ಅನೇಕ ಮುಖ್ಯ ವಿಷಯಗಳ ಮೇಲೆ ಕೇಂದ್ರೀಕರಿಸಬೇಕಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಶನಿವಾರ ಹೇಳಿದ್ದಾರೆ. ಇದೇ ವೇಳೆ ವಿದೇಶಿ … Continued

ಬಿಜೆಪಿ ವಿರುದ್ಧ ರಣ ಕಹಳೆ ಮೊಳಗಿಸಲು ಏಪ್ರಿಲ್‌ 5ರಂದು ಕೋಲಾರಕ್ಕೆ ರಾಹುಲ್‌ ಗಾಂಧಿ ಆಗಮನ..?

ಬೆಂಗಳೂರು:  ಕೋಲಾರದಲ್ಲಿ ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿ ಲೋಕಸಭಾ ಸದಸ್ಯತ್ವ ಕಳೆದುಕೊಂಡಿದ್ದ ರಾಹುಲ್‌ ಗಾಂಧಿ ಈಗ ಮತ್ತೆ ಕೋಲಾರ ಕ್ಷೇತ್ರಕ್ಕೆ ಏಪ್ರಿಲ್‌ 5ರಂದು ಆಗಮಿಸಿ ಭಾಷಣ ಮಾಡಲಿದ್ದಾರೆ ಎಂದು ವರದಿಯಾಗಿದೆ. 2019ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮುದಾಯ ವಿರುದ್ಧ ಅವಹೇಳಕಾರಿಯಾಗಿ ಮಾತನಾಡಿದ್ದಾರೆಂಬ ಆರೋಪದ ಮೇಲೆ ರಾಹುಲ್‌ ಗಾಂಧಿಗೆ ಸೂರತ್‌ … Continued

ಕಾಂಗ್ರೆಸ್ 4ನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆ ; ಪದವೀಧರರಿಗೆ ಪ್ರತಿ ತಿಂಗಳು 3,000 ರೂ. ನಿರುದ್ಯೋಗ ಭತ್ಯೆ ಘೋಷಿಸಿದ ರಾಹುಲ್‌ ಗಾಂಧಿ

ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷಗಳವರೆಗೆ ಮಾಸಿಕ 3,000 ರೂ. ಮತ್ತು ಡಿಪ್ಲೋಮಾ ಕೋರ್ಸ್‌ ಮುಗಿಸಿದವರಿಗೆ ತಿಂಗಳಿಗೆ 1,500 ರೂ. ನೀಡಲಾಗುವುದು ಎಂದು ರಾಹುಲ್ ಗಾಂಧಿ ಘೋಷಿಸಿದ್ದಾರೆ. ಸೋಮವಾರ ಬೆಳಗಾವಿಯಲ್ಲಿ ನಡೆದ ಯುವಕ್ರಾಂತಿ ಸಮಾವೇಶದಲ್ಲಿ ಅವರು ನಿರುದ್ಯೋಗಿ ಯುವಕರಿಗಾಗಿ ʼಯುವ ನಿಧಿʼ ಎಂಬ ಪಕ್ಷದ … Continued

ಕೆಜಿಎಫ್‌ 2 ಹಾಡು ಬಳಕೆ : ಕಾಂಗ್ರೆಸ್‌ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲು ; ರಾಹುಲ್‌ ಮತ್ತಿತರರಿಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ಕೃತಿ ಸ್ವಾಮ್ಯ ಉಲ್ಲಂಘಿಸಿ ಕಾಂಗ್ರೆಸ್‌ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಬಳಸಿರುವ ಕೆಜಿಎಫ್‌-2 ಸಿನಿಮಾದ ಮುದ್ರಿತ ಸಂಗೀತವನ್ನು ತೆಗೆದುಹಾಕಲು ನಿರ್ದೇಶಿಸಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶವನ್ನು ಪಾಲಿಸಿಲ್ಲ ಎಂದು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹಾಗೂ ಪಕ್ಷದ ಮುಖಂಡರಿಗೆ ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ. ಕಾಂಗ್ರೆಸ್‌ … Continued

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಬಾಲಿವುಡ್‌ ನಟಿ ಪೂಜಾ ಭಟ್ | ವೀಕ್ಷಿಸಿ

ಹೈದರಾಬಾದ್‌: ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ತೆಲಂಗಾಣದಲ್ಲಿ ನಡೆಯುತ್ತಿದ್ದು, ರಾಹುಲ್ ಗಾಂಧಿ ಹೈದರಾಬಾದ್ ನಗರದಿಂದ ಇಂದಿನ ಪಾದಯಾತ್ರೆ ಆರಂಭಿಸಿದ್ದಾರೆ. ಇಂದಿನ ಭಾರತ ಜೋಡೋ ಪಾದಯಾತ್ರೆಗೆ ಬಾಲಿವುಡ್‌ ನಟಿ ಪೂಜಾ ಭಟ್ ಕೂಡ ಸೇರಿಕೊಂಡಿದ್ದಾರೆ. ಕಾಂಗ್ರೆಸ್ ಕೂಡ ಟ್ವೀಟ್ ಮಾಡಿ ಪೂಜಾ ಭಟ್ ಯಾತ್ರೆಯಲ್ಲಿ ರಾಹುಲ್‌ ಜೊತೆ ಜೆಜ್ಜೆ ಹಾಕುತ್ತಿರುವ ಚಿತ್ರಗಳನ್ನು ಹಂಚಿಕೊಂಡಿದೆ. ಪ್ರತಿದಿನ ಹೊಸ ಇತಿಹಾಸ … Continued

ಭಾರತ ಜೋಡೋ ಯಾತ್ರೆ’: ರಸ್ತೆಯಲ್ಲೇ ಪುಷ್- ಅಪ್ ಮಾಡಿದ ರಾಹುಲ್ ಗಾಂಧಿ, ಡಿಕೆಶಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಅವರು ವಿವಿಧ ಚಟುವಟಿಕೆಗಳಲ್ಲಿ ತೊಡಗಿರುವ ವಿಡಿಯೋಗಳು, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರಾಹುಲ್ ಗಾಂಧಿ ರಸ್ತೆಯಲ್ಲಿ ಪುಷ್-ಅಪ್‌ ಮಾಡಿರುವ ಫೋಟೋ ವೈರಲ್ ಆಗಿದೆ. ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ಸೇರಿದಂತೆ ಅನೇಕರು ಪುಷ್-ಅಪ್‌ … Continued

ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಪಾಲ್ಗೊಂಡ ಹತ್ಯೆಯಾದ ಹೋರಾಟಗಾರ್ತಿ ಗೌರಿ ಲಂಕೇಶ್ ತಾಯಿ, ಸಹೋದರಿ

ಬೆಂಗಳೂರು: ಹತ್ಯೆಗೀಡಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಮತ್ತು ತಾಯಿ ಇಂದಿರಾ ಅವರು ಶುಕ್ರವಾರ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಮೆರವಣಿಗೆಯಲ್ಲಿ ಪಾಲ್ಗೊಂಡರು. ಭಾರತ್ ಜೋಡೋ ಯಾತ್ರೆಯು ಲಂಕೇಶ್ ಅವರಂತಹವರ ಧ್ವನಿಯಾಗಿದೆ ಮತ್ತು ಅದನ್ನು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಅವರು ಹೇಳಿದರು. ಗೌರಿ … Continued

ರಾಹುಲ್​ ಗಾಂಧಿ ಮನವಿಗೆ ಸಿಎಂ ಬೊಮ್ಮಾಯಿ ಸ್ಪಂದನೆ: ಗಾಯಗೊಂಡಿದ್ದ ಆನೆ ಮರಿಗೆ ಸೂಕ್ತ ಚಿಕಿತ್ಸೆ

ಮೈಸೂರು: ಗಾಯಗೊಂಡ ಆನೆ ಮರಿಗೆ ಚಿಕಿತ್ಸೆ ನೀಡುವಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬರೆದಿದ್ದ ಮನವಿ ಪತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣವೇ ಸ್ಪಂದಿಸಿದ್ದು, ಅರಣ್ಯಾಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ  ಆನೆ ಮರಿಗೆ ಚಿಕಿತ್ಸೆ ನೀಡಲಾಗಿದೆ. ನಾಗರಹೊಳೆ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಅಕ್ಟೋಬರ್‌ 5ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಫಾರಿ ವೇಳೆ … Continued

ಪ್ರಜಾಪ್ರಭುತ್ವದ ಸಂಸ್ಥೆಗಳು ವಿಪಕ್ಷಗಳಿಗೆ ಬಂದ್, ಪಾದಯಾತ್ರೆ ಬಿಟ್ಟು ಬೇರೆ ಮಾರ್ಗವೇ ಇರಲಿಲ್ಲ: ಗುಂಡ್ಲುಪೇಟೆ ಸಮಾವೇಶದಲ್ಲಿ ರಾಹುಲ್‌ ಗಾಂಧಿ

ಚಾಮರಾಜನಗರ: ಪ್ರಜಾಪ್ರಭುತ್ವದ ಹಲವು ಸಂಸ್ಥೆಗಳನ್ನು ವಿಪಕ್ಷಗಳಿಗೆ ಬಂದ್ ಮಾಡಲಾಗಿದೆ. ಎಲ್ಲವೂ ಸರ್ಕಾರ ಹಿಡಿತದಲ್ಲಿಟ್ಟುಕೊಂಡು ತನಗೆ ಬೇಕಾದಂತೆ ಕುಣಿಸುತ್ತಿದೆ. ಸಂಸತ್ತಿನಲ್ಲಿ ನಮಗೆ ಮಾತನಾಡಲು ಬಿಡುತ್ತಿಲ್ಲ ಹೀಗಾಗಿ ಯಾತ್ರೆಯೊಂದೇ ಮಾರ್ಗವಾಗಿದೆ. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದರು. ಇಂದು, ಶುಕ್ರವಾರ ತಮಿಳುನಾಡು ಮೂಲಕ ಕರ್ನಾಟಕವನ್ನು ಪ್ರವೇಶಿಸಿದ ನಂತರ ಗುಂಡ್ಲುಪೇಟೆಯಲ್ಲಿ ನಡೆದ ಕಾಂಗ್ರೆಸ್‌ನ ಭಾರತ ಜೋಡೋ ಪಾದಯಾತ್ರೆ … Continued