ರಾಹುಲ್ ಪೌರತ್ವ ವಿವಾದ : ಡಿ.19ರೊಳಗೆ ನಿರ್ಧಾರ ಕೈಗೊಳ್ಳುವಂತೆ ಕೇಂದ್ರಕ್ಕೆ ಸೂಚಿಸಿದ ಅಲಾಹಾಬಾದ್ ಹೈಕೋರ್ಟ್

ಲಕ್ನೋ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವ ಪ್ರಶ್ನಿಸಿ ನಾಗರಿಕರೊಬ್ಬರು ಬರೆದಿರುವ ಪತ್ರದ ಕುರಿತು ಶೀಘ್ರ ನಿರ್ಧಾರ ತೆಗೆದುಕೊಳ್ಳುವಂತೆ ಅಲಾಹಾಬಾದ್ ಹೈಕೋರ್ಟ್ ಕೇಂದ್ರ ಗೃಹ ಸಚಿವಾಲಯಕ್ಕೆ ಸೂಚಿಸಿದೆ. ಡಿಸೆಂಬರ್ 19ರಂದು ಪತ್ರದ ಕುರಿತು ತೆಗೆದುಕೊಳ್ಳಲಾದ ನಿರ್ಧಾರದ ಬಗ್ಗೆ ಸರ್ಕಾರವು ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ನ್ಯಾಯಮೂರ್ತಿ ಅತ್ತೌ ರೆಹಮಾನ್ ಮಸೂದಿ ಮತ್ತು ನ್ಯಾಯಮೂರ್ತಿ … Continued

ವಯನಾಡು ಉಪಚುನಾವಣೆ: ರಾಹುಲ್‌ ಗಾಂಧಿಗಿಂತ ಹೆಚ್ಚಿನ ಅಂತರದಲ್ಲಿ ಜಯಗಳಿಸಿದ ಸಹೋದರಿ ಪ್ರಿಯಾಂಕಾ ಗಾಂಧಿ…!

ತಿರುವನಂತಪುರಂ: ಇಡೀ ದೇಶದ ಗಮನ ಸೆಳೆದಿದ್ದ ವಯನಾಡು (Wayanad) ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ (Priyanka Gandhi) 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯ ದಾಖಲಿಸಿದ್ದಾರೆ. ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಈ ಕ್ಷೇತ್ರದಲ್ಲಿ ಸಹೋದರಿ ಪ್ರಿಯಾಂಕಾ ಗಾಂಧಿ ಸಹೋದರ ರಾಹುಲ್‌ ಗಾಂಧಿ … Continued

ಖರ್ಗೆ, ರಾಹುಲ್ ಗಾಂಧಿಗೆ 100 ಕೋಟಿ ರೂ. ಮಾನನಷ್ಟ ನೋಟಿಸ್ ಕಳುಹಿಸಿದ ಬಿಜೆಪಿ ನಾಯಕ ವಿನೋದ ತಾವ್ಡೆ

ನವದೆಹಲಿ: ಮುಂಬೈ: ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ ತಾವ್ಡೆ ಅವರು ಶುಕ್ರವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಮೂವರು ಹಿರಿಯ ಕಾಂಗ್ರೆಸ್ ನಾಯಕರಿಗೆ 100 ಕೋಟಿ ರೂಪಾಯಿ ಮಾನನಷ್ಟ ನೋಟಿಸ್ ಕಳುಹಿಸಿದ್ದಾರೆ. . ಬುಧವಾರದ ಚುನಾವಣೆಗೆ ಮುನ್ನ ವೋಟಿಗಾಗಿ … Continued

ಸಾವರ್ಕರ್ ಕುರಿತ ಮಾನಹಾನಿ ಹೇಳಿಕೆ ಪ್ರಕರಣ: : ಖುದ್ದು ಹಾಜರಾಗಲು ರಾಹುಲ್ ಗಾಂಧಿಗೆ ಪುಣೆ ನ್ಯಾಯಾಲಯ ಸೂಚನೆ

ಪುಣೆ : ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ (ವೀರ್‌ ಸಾವರ್ಕರ್‌) ಅವರ ಮೊಮ್ಮಗ ಸಾತ್ಯಕಿ ಸಾವರ್ಕರ್ ಹೂಡಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರಿಗೆ ಡಿಸೆಂಬರ್‌ 2ರಂದು ಖುದ್ದು ಹಾಜರಾಗುವಂತೆ ಪುಣೆ ನ್ಯಾಯಾಲಯ ಸೋಮವಾರ ಸಮನ್ಸ್‌ ನೀಡಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಅಮೋಲ್ ಶಿಂಧೆ ಅವರು ಈ ಆದೇಶ … Continued

ರಾಹುಲ್ ಗಾಂಧಿ, ಅಮಿತ್ ಶಾ ಭಾಷಣದ ಬಗ್ಗೆ ದೂರು; ಕಾಂಗ್ರೆಸ್, ಬಿಜೆಪಿ ಅಧ್ಯಕ್ಷರಿಂದ ವಿವರಣೆ ಕೇಳಿದ ಚುನಾವಣಾ ಆಯೋಗ

ನವದೆಹಲಿ: ತಮ್ಮ ಸ್ಟಾರ್ ಪ್ರಚಾರಕರಾದ ಅಮಿತ್ ಶಾ ಮತ್ತು ರಾಹುಲ್ ಗಾಂಧಿ ಮಾಡಿದ ಕಾಮೆಂಟ್‌ಗಳಿಗೆ ಬಿಜೆಪಿ ಮತ್ತು ಕಾಂಗ್ರೆಸ್‌ನ ಪಕ್ಷದ ಅಧ್ಯಕ್ಷರಿಂದ ಚುನಾವಣಾ ಆಯೋಗವು ಶನಿವಾರ ವಿವರಣೆ ಕೇಳಿದೆ. ಈ ಹೇಳಿಕೆಗಳು ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತವೆ ಎಂದು ಆರೋಪಿಸಲಾಗಿದೆ. ಬಿಜೆಪಿಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ಕಾಂಗ್ರೆಸ್‌ ಮಲ್ಲಿಕಾರ್ಜುನ ಖರ್ಗೆ ಅವರು ಮಹಾರಾಷ್ಟ್ರ ಮತ್ತು … Continued

ಬಿಜೆಪಿ ಶಾಸಕ ಯತ್ನಾಳ ವಿರುದ್ಧ ದೂರು ದಾಖಲು

ವಿಜಯಪುರ : ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಅವಹೇಳನಕಾರಿ ಪದಬಳಸಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹಾಗೂ ಇತರರ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಅಕ್ಟೋಬರ್ ೧೫ರಂದು ನಡೆದ ‘ವಕ್ಫ್ ಹಠಾವೋ ದೇಶ ಬಚಾವೋ’ … Continued

ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆ ; ಕಾಂಗ್ರೆಸ್ ನಿಂದ ಪ್ರಿಯಾಂಕಾ ಗಾಂಧಿ ಹೆಸರು ಘೋಷಣೆ

ನವದೆಹಲಿ: ಚುನಾವಣಾ ಆಯೋಗವು (EC) ವಯನಾಡು ಮತ್ತು ನಾಂದೇಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯನ್ನು ಮಂಗಳವಾರ ಘೋಷಿಸಿದೆ. ಕೇರಳದ ವಯನಾಡು ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ವಯನಾಡು ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಲಿದ್ದಾರೆ. ಈ ಬಗ್ಗೆ ಮಂಗಳವಾರ (ಅಕ್ಟೋಬರ್ 15) ಎಐಸಿಸಿ ಅಧಿಕೃತವಾಗಿ ಘೋಷಿಸಿದೆ. … Continued

ಸಾವರ್ಕರ್ ಮಾನನಷ್ಟ ಪ್ರಕರಣ: ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್

ಪುಣೆ : ವಿನಾಯಕ ದಾಮೋದರ್ ಸಾವರ್ಕರ್ (ವೀರ್‌ ಸಾವರ್ಕರ್‌) ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರು ಸಲ್ಲಿಸಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಅಕ್ಟೋಬರ್ 23 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಪುಣೆ ನ್ಯಾಯಾಲಯವು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. . ಕಳೆದ ವರ್ಷ ಯುನೈಟೆಡ್ ಕಿಂಗ್‌ಡಮ್‌ಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ … Continued

ರಾಹುಲ್ ಗಾಂಧಿ ಪೌರತ್ವ : ಗೃಹ ಸಚಿವಾಲಯದ ಪ್ರತಿಕ್ರಿಯೆ ಕೇಳಿದ ಅಲಹಾಬಾದ್ ಹೈಕೋರ್ಟ್

ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬ್ರಿಟಿಷ್ ಪೌರತ್ವ ಪಡೆದಿದ್ದಾರೆ ಎಂದು ಪ್ರತಿಪಾದಿಸಿದ್ದ ಮನವಿಯ ಕುರಿತಾಗಿ ಗೃಹ ಸಚಿವಾಲಯದಿಂದ ವಿವರಗಳನ್ನು ಪಡೆಯುವಂತೆ ಅಲಹಾಬಾದ್ ಹೈಕೋರ್ಟ್ ಬುಧವಾರ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಹೆಚ್ಚುವರಿ ಸಾಲಿಸಿಟರ್ ಜನರಲ್ (ಎಎಸ್‌ಜಿ) ಸೂರ್ಯಭಾನ್ ಪಾಂಡೆ ಅವರಿಗೆ ಈ ಸಂಬಂಧ ಗೃಹ ಸಚಿವಾಲಯದಿಂದ ವಿವರಗಳನ್ನು ಪಡೆಯುವಂತೆ ನ್ಯಾಯಮೂರ್ತಿಗಳಾದ ರಾಜನ್ ರಾಯ್ ಮತ್ತು … Continued

ರಾಹುಲ್ ಗಾಂಧಿ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲು

ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇತ್ತೀಚೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಿಖ್ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವುದು ಹಾಗೂ ಮೀಸಲಾತಿ ಕುರಿತು ಹೇಳಿಕೆ ನೀಡಿದ್ದಕ್ಕಾಗಿ ಕರ್ನಾಟಕ ಬಿಜೆಪಿ ಶನಿವಾರ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಸಿಖ್‌ ಸಮುದಾಯದ ಬಗ್ಗೆ ದೂಷಣೆ ಹಾಗೂ ಎಸ್‌ಸಿ, ಎಸ್‌ಟಿ ಮತ್ತು … Continued