ಕಾಂಗ್ರೆಸ್‌ ಸೇರಿದ ಆಂಧ್ರ ಸಿಎಂ ಜಗನ್ಮೋಹನ ರೆಡ್ಡಿ ಸಹೋದರಿ

ನವದೆಹಲಿ: ವೈ.ಎಸ್. ಆರ್. ತೆಲಂಗಾಣ ಪಕ್ಷದ ಸಂಸ್ಥಾಪಕಿ ಹಾಗೂ ಆಂಧ್ರ ಮುಖ್ಯಮಂತ್ರಿ ವೈ.ಎಸ್‌. ಜಗನ್ಮೋಹನ ರೆಡ್ಡಿ ಅವರ ಸಹೋದರಿ ವೈ.ಎಸ್. ಶರ್ಮಿಳಾ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಅವರು ಬುಧವಾರ ತಡರಾತ್ರಿ ನವದೆಹಲಿಗೆ ಆಗಮಿಸಿದ್ದರು. ಸೇರ್ಪಡೆ ಸಮಾರಂಭದಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ವರಿಷ್ಠ ನಾಯಕ ರಾಹುಲ್ ಗಾಂಧಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಅವರು ತಮ್ಮ … Continued

ಜನವರಿ 14ರಿಂದ ಮಣಿಪುರದಿಂದ ಮುಂಬೈ ವರೆಗೆ ‘ಭಾರತ ನ್ಯಾಯ ಯಾತ್ರೆ’ ನಡೆಸಲಿರುವ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆಯ ಎರಡನೇ ಆವೃತ್ತಿಯನ್ನು ಜನವರಿ 14 ರಿಂದ ಪ್ರಾರಂಭಿಸಲಿದ್ದಾರೆ. ಇದಕ್ಕೆ ‘ಭಾರತ ನ್ಯಾಯ ಯಾತ್ರೆ’ ಎಂದು ಮರುನಾಮಕರಣ ಮಾಡಲಾಗಿದ್ದು, ಈ ಜಾಥಾವು ಈಶಾನ್ಯದಲ್ಲಿ ಮಣಿಪುರದಿಂದ ಆರಂಭಗೊಂಡು ದೇಶದ ಪೂರ್ವದಿಂದ ಪಶ್ಚಿಮದೆಡೆಗೆ ಸಾಗಿ ಮಹಾರಾಷ್ಟ್ರದ ಮುಂಬೈನಲ್ಲಿ ಮುಕ್ತಾಯವಾಗಲಿದೆ ಎಂದು ಹೇಳಲಾಗಿದೆ. ರಾಹುಲ್ ಗಾಂಧಿಯವರ ಭಾರತ ನ್ಯಾಯ … Continued

ನೀವೇಕೆ ಹೊಂದಾಣಿಕೆ ಮಾಡಿಕೊಳ್ಳಲಿಲ್ಲ….: ವಿವಿಧ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೋತ ನಂತರ ರಾಜ್ಯ ನಾಯಕರನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ನವದೆಹಲಿ : ರಾಷ್ಟ್ರೀಯ ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಮೂರು ಪ್ರಮುಖ ರಾಜ್ಯಗಳಲ್ಲಿ ಕಾಂಗ್ರೆಸ್‌ ಸೋಲು ಗುರುವಾರ ನಡೆದ ಪಕ್ಷದ ಉನ್ನತ ನಾಯಕತ್ವದ ಸಭೆಯಲ್ಲಿ ಭಾರಿ ಮಹತ್ವ ಪಡೆದಿದ್ದು ಬಿಜೆಪಿ ವಿರುದ್ಧದ ಹೋರಾಟದಲ್ಲಿ ಪ್ರಾದೇಶಿಕ ಪಕ್ಷಗಳಿಗೆ ಅವಕಾಶ ಕಲ್ಪಿಸುವ ಅಗತ್ಯವನ್ನು ರಾಹುಲ್ ಗಾಂಧಿ ಅವರು ಒತ್ತಿ ಹೇಳಿದ್ದಾರೆ. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಕ್ಷದ … Continued

ಮೋದಿ, ಶಾ ಜೇಬುಗಳ್ಳರು ಹೇಳಿಕೆ : ರಾಹುಲ್‌ ಗಾಂಧಿಗೆ ಈಗ ಮತ್ತೊಂದು ಸಂಕಷ್ಟ

ನವದೆಹಲಿ: ನವೆಂಬರ್ 22ರಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಉದ್ಯಮಿ ಗೌತಮ್ ಅದಾನಿ ಅವರನ್ನು ‘ಜೇಬುಗಳ್ಳರು’ ಎಂದು ಕರೆದಿದ್ದಕ್ಕಾಗಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೆಹಲಿ ಹೈಕೋರ್ಟ್ ಗುರುವಾರ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ. ಹೇಳಿಕೆಯು “ಉತ್ತಮ ಅಭಿರುಚಿಯಲ್ಲಿಲ್ಲ” … Continued

ವೀಡಿಯೊ…| ಉಪರಾಷ್ಟ್ರಪತಿಯವರ ʼಅನುಕರಣೆʼ ಮಾಡಿ ಅಣಕಿಸಿದ ಟಿಎಂಸಿ ಸಂಸದ: ವೀಡಿಯೊ ಚಿತ್ರೀಕರಿಸಿದ ರಾಹುಲ್ ಗಾಂಧಿ

ನವದೆಹಲಿ : ರಾಜ್ಯಸಭೆ ಹಾಗೂ ಲೋಕಸಭೆಯಿಂದ ಅಮಾನತುಗೊಂಡ ಸಂಸದರು ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸುತ್ತಿರುವ ವೇಳೆ, ಟಿಎಂಸಿ ಸಂಸದರಾದ ಕಲ್ಯಾಣ ಬ್ಯಾನರ್ಜಿ ಅವರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆ ಚೇರ್ಮನ್‌ ಜಗದೀಪ ಧನಕರ್ ಅವರನ್ನು ಅಣಕಿಸಿದ್ದಾರೆ. ಇದನ್ನು ಕಾಂಗ್ರೆಸ್ ನಾಯಕ ಅದರ ಚಿತ್ರೀಕರಿಸಿದ್ದಾರೆ. ಈ ವರ್ತನೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಉಪರಾಷ್ಟ್ರಪತಿ ಧನಕರ್‌ ಅವರು ಇದು … Continued

ಅಮಿತ್ ಶಾ ಪ್ರಕರಣ : ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕೆಲವು ಟೀಕೆಗಳನ್ನು ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಶನಿವಾರ ಸಂಸದ-ಶಾಸಕರ ನ್ಯಾಯಾಲಯವು ಜನವರಿ 6 ರಂದು ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ವಕೀಲರು ತಿಳಿಸಿದ್ದಾರೆ. ಶನಿವಾರ ಹಾಜರಾಗುವಂತೆ ನ್ಯಾಯಾಲಯ ಈ ಹಿಂದೆ ಗಾಂಧಿಗೆ ಸೂಚಿಸಿದ್ದರೂ ಅವರು ಹಾಜರಾಗಿರಲಿಲ್ಲ. ರಾಹುಲ್ ಗಾಂಧಿ ಅವರು … Continued

ʼಎಎಂ’ ಮತ್ತು ‘ಪಿಎಂ’ ನಡುವೆ ವ್ಯತ್ಯಾಸ ತಿಳಿಯದಿದ್ದರೆ ಅವರು ಪಿಎಂಒ ಹೇಗೆ ನಡೆಸ್ತಾರೆ…?: ರಾಹುಲ್ ಗಾಂಧಿ ಕಚೇರಿ ಬಗ್ಗೆ ಹೇಳಿದ್ದ ಪ್ರಣಬ್ ಮುಖರ್ಜಿ….

ನವದೆಹಲಿ : ದಿವಂಗತ ಮಾಜಿ ರಾಷ್ಟ್ರಪತಿ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಪ್ರಣವ್ ಮುಖರ್ಜಿ ಅವರ ಪುತ್ರಿ ಶರ್ಮಿಷ್ಠಾ ಮುಖರ್ಜಿ ತಮ್ಮ ತಂದೆಯ ಕುರಿತು ಪುಸ್ತಕ‌ ಬರೆದಿದ್ದು,ಅದರಲ್ಲಿ ಪ್ರಣವ್‌ ಮುಖರ್ಜಿ ಅವರಿಗೆ, ರಾಹುಲ್ ಗಾಂಧಿ ಮೇಲೆ ಅಸಮಾಧಾನವಿತ್ತು ಎಂಬುದನ್ನು ಉಲ್ಲೇಖಿಸಿರುವುದು ಈಗ  ಸಂಚಲನ ಸೃಷ್ಟಿಸಿದೆ. ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಅವರಂತಹ ಅಪರಾಧಿ ನಾಯಕರನ್ನು ರಕ್ಷಿಸಲು … Continued

ಫಲಿತಾಂಶ ಒಪ್ಪಿಕೊಳ್ತೇವೆ, ಸೈದ್ಧಾಂತಿಕ ಹೋರಾಟ ಮುಂದುವರಿಯಲಿದೆ: ರಾಹುಲ್ ಗಾಂಧಿ

ನವದೆಹಲಿ : ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ಈ ಮೂರು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಆದ ಆಘಾತಕಾರಿ ಸೋಲಿನ ನಂತರ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದು, ತನ್ನ “ಸಿದ್ಧಾಂತದ ಹೋರಾಟವು ಮುಂದುವರಿಯುತ್ತದೆ” ಎಂದು ಹೇಳಿದ್ದಾರೆ. ಹಾಗೂ “ಜನತೆ ನೀಡಿದ ತೀರ್ಪನ್ನು ವಿನಮ್ರತೆಯಿಂದ ಒಪ್ಪಿಕೊಳ್ಳುವುದಾಗಿ ಹೇಳಿದ್ದಾರೆ. ಎಕ್ಸ್‌ನಲ್ಲಿ … Continued

ಅಮಿತ್ ಶಾ ವಿರುದ್ಧ “ಆಕ್ಷೇಪಾರ್ಹ” ಹೇಳಿಕೆ: ರಾಹುಲ್ ಗಾಂಧಿಗೆ ನ್ಯಾಯಾಲಯದಿಂದ ಸಮನ್ಸ್

ಲಕ್ನೋ : ಐದು ವರ್ಷಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯವು ಡಿಸೆಂಬರ್ 16 ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿದೆ. ಈ ಆದೇಶವನ್ನು ನೀಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಯೋಗೇಶಕುಮಾರ ಯಾದವ್ ಅವರು … Continued

ಪ್ರಧಾನಿ ಮೋದಿ ವಿರುದ್ಧ ʼಅಪಶಕುನʼ ಟೀಕೆ : ರಾಹುಲ್‌ ಗಾಂಧಿಗೆ ಚುನಾವಣಾ ಆಯೋಗದಿಂದ ನೋಟಿಸ್ ಜಾರಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ‘ಪನೌತಿ’ (ಅಪಶಕುನ) ಮತ್ತು ʼಜೇಬುಗಳ್ಳʼ ಟೀಕೆಗಳ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಚುನಾವಣಾ ಆಯೋಗ ಗುರುವಾರ ನೋಟಿಸ್ ನೀಡಿದೆ. ವಯನಾಡ್ ಸಂಸದ ರಾಹುಲ್‌ ಗಾಂಧಿ ವಿರುದ್ಧ ಬಿಜೆಪಿ ಚುನಾವಣಾ ಸಂಸ್ಥೆಗೆ ದೂರು ನೀಡಿದ ಒಂದು ದಿನದ ನಂತರ ಚುನಾವಣಾ ಆಯೋಗ ನೋಟಿಸ್‌ ನೀಡಿದೆ. ಚುನಾವಣಾ ಆಯೋಗವು … Continued