ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರ, ಶಾಸಕ ದದ್ದಲ್ ಮನೆ ಮೇಲೆ ಇ.ಡಿ. ದಾಳಿ

ಬಳ್ಳಾರಿ/ ರಾಯಚೂರು : ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಅವರ ಬಳ್ಳಾರಿ ನಿವಾಸದ ಮೇಲೆ ಬುಧವಾರ ಬೆಳ್ಳಂಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ‌ನ ಹಗರಣ ಹೊರಬಿದ್ದ ಹಿನ್ನೆಲೆಯಲ್ಲಿ ನಾಗೇಂದ್ರ ಅವರು ಇತ್ತೀಚೆಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಕ್ರಮಕ್ಕೆ ಸಂಬಂಧಿಸಿದಂತೆ ಯುನಿಯನ್ ಬ್ಯಾಂಕ್ … Continued

ದಾಳಿ ಮಾಡಿದ್ದ ಚಿರತೆಯನ್ನೇ ಕೊಂದು ಹಾಕಿದ ಗ್ರಾಮಸ್ಥರು

ರಾಯಚೂರು :ಜಿಲ್ಲೆಯ ದೇವದುರ್ಗ ತಾಲೂಕಿನ ಕರಡಿಗುಡ್ಡ ಪಕ್ಕದಲ್ಲಿ ಕಂಬದಾಳ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಮೂವರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಸುತ್ತಲಿನ ಗ್ರಾಮಸ್ಥರು ಕೊಂದು ಹಾಕಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಬೆಳಿಗ್ಗೆ ಊರ ಹೊರಗಿನ ಗುಡ್ಡದಲ್ಲಿ ಚಿರತೆ ದಾಳಿ ಮಾಡಿತ್ತು. ಇದರಲ್ಲಿ ರಮೇಶ, ಮಲ್ಲಣ್ಣ, ರಂಗನಾಥ ಎಂಬವರಿಗೆ ಗಾಯಗಳಾಗಿದ್ದು, ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ … Continued

ಚಿರತೆ ಹೆದರಿಸಲು ಹೋದವರ ಮೇಲೆಯೇ ದಾಳಿ ಮಾಡಿದ ಚಿರತೆ ; ಮೂವರಿಗೆ ಗಾಯ

ರಾಯಚೂರು : ಜಿಲ್ಲೆಯ ದೇವದುರ್ಗ ತಾಲೂಕಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ಭಾನುವಾರ ಮೂವರ ಮೇಲೆ ಚಿರತೆ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಮೂವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿಯೊಬ್ಬರು ಭಾನುವಾರ ಬೆಳಿಗ್ಗೆ ಬಹಿರ್ದೆಸೆಗೆ ಹೋದಾಗ ಅವರಿಗೆ ಚಿರತೆ ಕಂಡಿದ್ದು, ಹೆದರಿ ಓಡಿ ಬಂದ ಅವರು ಗ್ರಾಮಸ್ಥರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ. ಹೊರ ಹೋಗುವ ‌ಮಕ್ಕಳ ಮೇಲೆ … Continued

ರಾಯಚೂರು : ಬಸ್‌-ಬೈಕ್‌ ಡಿಕ್ಕಿ ; ಮೂವರು ಸಾವು

ರಾಯಚೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ಬುಧವಾರ ರಾತ್ರಿ ತಾಲೂಕಿನ ಮಿಟ್ಟಿ ವಲ್ಕಾಪುರ ಬಳಿ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ನಗರದ ಇಂದಿರಾ ನಗರದ ನಿವಾಸಿಗಳಾದ ರಾಘವೇಂದ್ರ (28), ಪರಶುರಾಮ (30), ಗೋವಿಂದ (28) ಎಂದು ಗುರುತಿಸಲಾಗಿದೆ. ಮೂವರು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದಾಗ ಮಂತ್ರಾಲಯದಿಂದ ರಾಯಚೂರಿಗೆ … Continued

ಟಿಪ್ಪು ಸುಲ್ತಾನ್‌ ನಾಮಫಲಕಕ್ಕೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು: ಪ್ರತಿಭಟನೆ

ರಾಯಚೂರು : ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿದ ಘಟನೆ ರಾಯಚೂರು ಜಿಲ್ಲೆಯ ಸಿರವಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಇದರಿಂದಾಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸಿರವಾರ ಪಟ್ಟಣದ ಮಟನ್ ಮಾರ್ಕೆಟ್ ಬಳಿಯ ಟಿಪ್ಪು ಸರ್ಕಲ್​ನಲ್ಲಿನ ಭಾವಚಿತ್ರಕ್ಕೆ ಮಂಗಳವಾರ ರಾತ್ರಿ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಪರಾರಿಯಾಗಿದ್ದಾರೆ. ಇದನ್ನು ಬೆಳಗ್ಗೆ ನೋಡಿದ ಸಮುದಾಯದ … Continued

ಸಿಂಧನೂರು : ಭೀಕರ ಅಪಘಾತ, ಸ್ಥಳದಲ್ಲೇ ನಾಲ್ವರು ಸಾವು

ರಾಯಚೂರು : ಟಾಟಾ ಏಸ್ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಸಿಂಧನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ಬೆಳಗಿನ ಜಾವ ಸಂಭವಿಸಿದೆ. ಮೃತರನ್ನು ಇಸ್ಮಾಯಿಲ್(25), ಚನ್ನಬಸವ (26), ರವಿ(21) ಮತ್ತು ಅಂಬರೀಷ(20) ಎಂದು ಗುರುತಿಸಲಾಗಿದೆ. ಟಾಟಾ ಏಸ್ ವಾಹನದಲ್ಲಿ ಐದು ಮಂದಿ ಸಿಂಧನೂರಿನಿಂದ ಮಸ್ಕಿ ತಾಲೂಕಿನ … Continued

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿ ಸ್ಟೇಟಸ್: ಆರ್‌ ಎಸ್‌ ಎಸ್‌ ಕಾರ್ಯಕರ್ತನ ಬಂಧನ

ರಾಯಚೂರು : ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳಕಾರಿಯಾಗಿ ವಾಟ್ಸಾಪ್‌ ಸ್ಟೇಟಸ್‌ ಹಾಕಿದ ಆರೋಪದ ಮೇಲೆ ಆರ್‌ಎಸ್‌ಎಸ್‌ ಕಾರ್ಯಕರ್ತ ರಾಜು ಎಂಬಾತನ ವಿರುದ್ಧ ರಾಯಚೂರು ಜಿಲ್ಲೆಯ ಲಿಂಗಸುಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಲಿಂಗಸುಗೂರು ಪಟ್ಟಣದ ನಿವಾಸಿ ರಾಜು ಎಂಬಾತ ತನ್ನ ವಾಟ್ಸಾಪ್‌ ಸ್ಟೇಟಸ್‌ನಲ್ಲಿ ‘ಮುಸ್ಲಿಂ ಮಹಿಳೆಯರು ಮಕ್ಕಳನ್ನು ಹೆರುವ ಫ್ಯಾಕ್ಟರಿಗಳು’ … Continued

ತಾಯಿ, ಇಬ್ಬರು ಮಕ್ಕಳು ಸಜೀವ ದಹನ: ಶಾರ್ಟ್‌ ಸರ್ಕಿಟ್‌ನಿಂದ ಎಸಿ ಸ್ಫೋಟಗೊಂಡ ಶಂಕೆ

ರಾಯಚೂರು: ಶಾರ್ಟ್‌ ಸರ್ಕಿಟ್‌ನಿಂದ ಮನೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಿಂದಾಗಿ ಮನೆಯೊಳಗಿದ್ದ ತಾಯಿ ಹಾಗೂ ಇಬ್ಬರು ಮಕ್ಕಳು ದಹನವಾಗಿರುವ ದುರಂತ ಘಟನೆ ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಶಕ್ತಿನಗರದ ಕೆಪಿಸಿ ಕ್ವಾಟ್ರಸ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ವರದಿಯಾಗಿದ್ದು ಮೃತರನ್ನು ಮಂಡ್ಯ ಮೂಲದ ರಂಜಿತಾ(33), ಮಕ್ಕಳಾದ ಮೃದಲ (13), ತಾರುಣ್ಯ(5) ಎಂದು ಗುರುತಿಸಲಾಗಿದೆ. ಶಾರ್ಟ್‌ … Continued

ರಾಯಚೂರು: ಪತ್ನಿಯ ಶೀಲ ಶಂಕಿಸಿ ಪುಟ್ಟ ಮಕ್ಕಳನ್ನು ಕೊಂದ ತಂದೆ

ರಾಯಚೂರು: ಪತ್ನಿಯ ಅನೈತಿಕ ಸಂಬಂಧ ಶಂಕಿಸಿ ತನ್ನಿಬ್ಬರು ಪುಟ್ಟ ಮಕ್ಕಳನ್ನು ತಂದೆಯೇ ಕತ್ತು ಹಿಸುಕಿ ಕೊಲೆಗೈದ ಘಟನೆ ಜಿಲ್ಲೆಯ ದೇವದುರ್ಗ ಪುರಸಭೆ ವ್ಯಾಪ್ತಿಯ ಜಕ್ಲೇರದೊಡ್ಡಿಯಲ್ಲಿ ಶನಿವಾರ ತಡರಾತ್ರಿ ನಡೆದ ವರದಿಯಾಗಿದೆ. ವರದಿ ಪ್ರಕಾರ, ನಿಂಗಯ್ಯ ಎಂಬಾತ ಮಕ್ಕಳಾದ ಶಿವರಾಜ (5), ರಾಘವೇಂದ್ರ(3) ಎಂಬ ಪುಟ್ಟ ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಪತ್ನಿ ಬೇರೆ ವ್ಯಕ್ತಿ … Continued

ಫೆಬ್ರವರಿ 10ರೊಳಗೆ ಕೆಆರ್​ಪಿಪಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : ಜನಾರ್ದನ ರೆಡ್ಡಿ

ರಾಯಚೂರು : ಹೊಸ ರಾಜಕೀಯ ಪಕ್ಷ ಘೋಷಿಸಿರುವ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಮುಂದಿನ ವಿಧಾನ ಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ತಮ್ಮ ಪಕ್ಷವಾದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRPP) ಅಭ್ಯರ್ಥಿಗಳ ಪಟ್ಟಿಯನ್ನು ಫೆಬ್ರವರಿ 10ರೊಳಗೆ ಪ್ರಕಟಿಸಲಾಗುವುದುೆಂದು ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕಲ್ಯಾಣ ಕರ್ನಾಟಕದ ಒಟ್ಟು 30 ಕ್ಷೇತ್ರಗಳಲ್ಲಿ ಈಗಾಗಲೇ … Continued